Connect with us

BELTHANGADY

“ಧರ್ಮಸ್ಥಳ ಮತ್ತು ನಮ್ಮ ಪೂರ್ವಜರಿಗೆ ಸಂದ ಗೌರವವಿದು”: ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಡಾ ಡಿ. ವೀರೇಂದ್ರ ಹೆಗ್ಗಡೆಗೆ ಶ್ರೀ ಕ್ಷೇತ್ರದಲ್ಲಿ ಭವ್ಯ ಸ್ವಾಗತ

Published

on

ಬೆಳ್ತಂಗಡಿ: ರಾಜ್ಯಸಭೆ ಅಂದರೆ ಹಿರಿಯರ ಸಭೆ. ಇದರ ಸದಸ್ಯನಾಗುವ ಅವಕಾಶ ಸಿಕ್ಕಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮತ್ತು ನಮ್ಮ ಪೂರ್ವಜರಿಗೆ ಸಂದ ದೊಡ್ಡ ಗೌರವ. ಅಮೂಲ್ಯ ದೇಶ ಸೇವೆಗೆ ನನ್ನ ಆಯುಷ್ಯಪೂರ್ಣ ಮೀಸಲಿರಿಸುವೆ ಎಂದು ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.


ರಾಜ್ಯಸಭೆಗೆ ನಾಮನಿರ್ದೇಶನ ಗೊಂಡ ಬಳಿಕ ಪ್ರಥಮವಾಗಿ ಧರ್ಮಸ್ಥಳಕ್ಕೆ ಆಗಮಿಸಿದ‌ ಅವರನ್ನು ತಾಲೂಕಿನ ಜನತೆಯ ಪರವಾಗಿ ಶಾಸಕ ಹರೀಶ್‌ ಪೂಂಜ ನೇತೃತ್ವದಲ್ಲಿ ಚಾರ್ಮಾಡಿಯಲ್ಲಿ ಭವ್ಯ ಸ್ವಾಗತ ಕೋರಲಾಯಿತು. ನಂತರ ವಾಹನ ಜಾಥಾ ಮೂಲಕ ಹೆಗ್ಗಡೆ ಅವರನ್ನು ಧರ್ಮಸ್ಥಳದ ನಿವಾಸ(ಬೀಡು) ಕ್ಕೆ ಕರೆತರಲಾಯಿತು.


ಬೀಡಿನಲ್ಲಿ ಹೇಮಾವತಿ ವಿ ಹೆಗ್ಗಡೆಯವರು ಆರತಿ ಬೆಳಗಿ, ಕುಂಕುಮ ಹಚ್ಚಿ ಗೌರವಪೂರ್ವಕವಾಗಿ ಬರಮಾಡಿಕೊಂಡರು. ಇದೇ ವೇಳೆ  ಡಿ.ಹರ್ಷೇಂದ್ರ ಕುಮಾರ್‌ ಹೂಗುಚ್ಛ ನೀಡಿ ಅಭಿನಂದಿಸಿದರು.


ನಂತರ ನಡೆದ ಸರಳ ಸಮಾರಂಭದಲ್ಲಿ ಮಾತನಾಡಿದ ವೀರೇಂದ್ರ ಹೆಗ್ಗಡೆ, ಪ್ರಧಾನಿ ಮೋದಿಯವರು ಧರ್ಮಸ್ಥಳದ ಎಲ್ಲ ಸೇವಾ ಕಾರ್ಯಗಳನ್ನು ಸೂಕ್ಷ್ಮವಾಗಿ ಗಮನಿಸಿ ದೂರವಾಣಿ ಮೂಲಕ ಮಾತನಾಡಿ ನ‌ನಗೆ ಈ ಅವಕಾಶ ನೀಡಿದ್ದಾರೆ. ಅತ್ಯಂತ ಒತ್ತಡದ ಜವಾಬ್ದಾರಿಯಲ್ಲಿರುವ ಪ್ರಧಾನಿಯವರು ಧರ್ಮಸ್ಥಳದ ಹೆಗ್ಗಡೆ ಅವರ ಸೇವೆಯನ್ನು ಗುರುತಿಸಿದ್ದಾರೆ ಎನ್ನುವುದಾದರೆ, ನನ್ನ ಹೊಣೆ ಅದಕ್ಕಿಂತ ದೊಡ್ಡದಲ್ಲ ಅಂದುಕೊಂಡಿದ್ದೇನೆ.

ಪ್ರಸ್ತುತ ರಾಜ್ಯದಲ್ಲಿರುವ ಧರ್ಮಸ್ಥಳದ ಎಲ್ಲ ಸೇವಾ ಕಾರ್ಯ ಗಳನ್ನು ರಾಷ್ಟ್ರಮಟ್ಟದಲ್ಲಿ ವಿಸ್ತರಿಸುವ ಆಲೋಚನೆಯಿದೆ. ನನಗೆ ಎಲ್ಲ ರಾಜಕೀಯ ಪಕ್ಷದವರೂ ಪ‌ಕ್ಷಾತೀತವಾಗಿ ಅಭಿನಂದಿಸಿದ್ದಾರೆ. ನಿಮ್ಮೊಂದಿಗೆ ನಾವಿದ್ದೇವೆ ಎಂದು ಹೇಳಿದ್ದಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ನಾನು ನಿಮ್ಮವನಾಗಿಯೇ ಇರುತ್ತೇನೆ ಎಂದರು.


ಶಾಸಕ ಹರೀಶ್‌ ಪೂಂಜ ಸ್ವಾಗತಿಸಿ, ಇದು ರಾಜ್ಯದ ಜನತೆಗೆ ಅತ್ಯಂತ ಸಂತಸ ದಿನ, ರಾಜ್ಯಸಭೆಗೆ ಡಾ. ಹೆಗ್ಗಡೆಯವರನ್ನು ಆಯ್ಕೆ ಮಾಡುವ ಮೂಲಕ ಗ್ರಾಮೀಣಾಭಿವೃದ್ಧಿ ಕಲ್ಪನೆಗೆ ಶಕ್ತಿ ತುಂಬುವ ಕೆಲಸವಾಗಿದೆ ಎಂದರು.


ರಾಜ್ಯ ಕಿಯೋನಿಕ್ಸ್‌ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ವಿಧಾನಪರಿಷತ್‌ ಸದಸ್ಯ ಕೆ. ಪ್ರತಾಪಸಿಂಹ ನಾಯಕ್‌, ಕಸಾಪ ಜಿಲ್ಲಾಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್‌, ಎಸ್‌ಡಿಎಂ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್‌., ಗ್ರಾ.ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್‌.ಎಚ್‌.ಮಂಜುನಾಥ, ಸಿರಿ ಸಂಸ್ಥೆ ಆಡಳಿತ ನಿರ್ದೇಶಕ ಜನಾರ್ದನ ಕೆ.ಎನ್‌., ಪ್ರದೀಪ್‌ ಕುಮಾರ್‌ ಕಲ್ಕೂರ ಮತ್ತಿತರರು ಉಪಸ್ಥಿತರಿದ್ದರು.

ಭಕ್ತರಿಂದ ತುಂಬಿ ತುಳುಕುತ್ತಿರುವ ಮಂಜುನಾಥ ಕ್ಷೇತ್ರ

ಇಂದು ಧರ್ಮಸ್ಥಳ ಕ್ಷೇತ್ರ ಭಕ್ತರಿಂದ ತುಂಬಿ ತುಳುಕುತ್ತಿದೆ. ಹಲವು ಗಣ್ಯರು ಡಾ.ಡಿ ವಿರೇಂದ್ರ ಹೆಗ್ಗಡೆಗೆ ಅಭಿನಂದನೆ ಸಲ್ಲಿಸಲು ಕ್ಷೇತ್ರಕ್ಕೆ ಬರುತ್ತಿದ್ದಾರೆ. ಈಗಾಗಲೇ ಮಾಜಿ ಸಚಿವ ಅಭಯಚಂದ್ರ ಜೈನ್‌ ಸೇರಿ ಹಲವು ಗಣ್ಯಾತಿ ಗಣ್ಯರು ಕ್ಷೇತ್ರಕ್ಕೆ ಆಗಮಿಸಿದ್ದಾರೆ. ಜೊತೆಗೆ ಕ್ಷೇತ್ರದರ್ಶನ ಪಡೆಯಲು ಭಕ್ತರಿದ್ದು, ಧರ್ಮಸ್ಥಳದಾದ್ಯಂತ ಸಂಭ್ರಮದ ಕಳೆ ಕಟ್ಟಿದೆ.

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

BELTHANGADY

ಬೆಳ್ತಂಗಡಿ: ಕೆರೆಗೆ ಬಿದ್ದು ಕಾಡುಕೋಣ ಸಾ*ವು.. ಸಾರ್ವಜನಿಕರಿಂದ ಅಂತ್ಯಸಂಸ್ಕಾರ

Published

on

ಬೆಳ್ತಂಗಡಿ: ಇಲ್ಲಿನ ಬೆಳಾಲು ಗ್ರಾಮಕ್ಕೆ ಸಂಬಂಧಪಟ್ಟಂತೆ ಕೊಯ್ಯೂರು ರಸ್ತೆಯ ಬದ್ಯಾರು ಎಂಬಲ್ಲಿ ಹೆಚ್ ಪದ್ಮ‌ಗೌಡ ಎಂಬವರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ*ದೇಹ ಪತ್ತೆಯಾಗಿದೆ.

bison

ಮುಂದೆ ನೋಡಿ..; ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!

ಈ ಕೆರೆಗೆ ಸುತ್ತ ಕಾಂಕ್ರೀಟ್ ರಿಂಗ್ ಅಳವಡಿಸಿದ್ದು ನೀರು ಕುಡಿಯಲು ಬಂದ ಕಾಡುಕೋಣ ಮೂರ್ನಾಲ್ಕು ದಿನಗಳ ಹಿಂದೆಯೇ ಬಿದ್ದು ಸಾವನ್ನಪ್ಪಿರುವ ಸಾಧ್ಯತೆ ಇದೆ. ಹೆಚ್ಚೂ ಕಮ್ಮಿ 10 ಕ್ವಿಂಟಾಲ್ ತೂಕ ಹೊಂದಿರಬಹುದೆಂದು ಅಂದಾಜಿಸಲಾಗಿದ್ದು, ಕೊಳೆತು ವಾಸನೆ ಬೀರುತ್ತಿತ್ತು. ಶೌರ್ಯ ವಿಪತ್ತು ತಂಡಕ್ಕೆ ಬಂದ ಮಾಹಿತಿಯಂತೆ ಉಜಿರೆ- ಬೆಳಾಲು ಘಟಕದ ಸಂಯೋಜಕ ಸುಲೈಮಾನ್ ಬೆಳಾಲು, ಮುಳುಗು ಪರಿಣತ ಹರೀಶ ಕೂಡುಗೆ, ಮುಹಮ್ಮದ್ ಶರೀಫ್ ಬೆಳಾಲು, ಅವಿನಾಶ್ ಭಿಡೆ ಅರಸಿಮನಕ್ಕಿ, ರವೀಂದ್ರ ಉಜಿರೆ, ಸುರೇಂದ್ರ ಉಜಿರೆ, ಅನಿಲ್ ಚಾರ್ಮಾಡಿ, ಶೌರ್ಯ ಘಟಕದ ಮಾಸ್ಟರ್ ಪ್ರಕಾಶ್ ಧರ್ಮಸ್ಥಳ, ನಳಿನ್ ಕುಮಾರ್ ಧರ್ಮಸ್ಥಳ ಮೊದಲಾದವರು ಸಾರ್ವಜನಿಕರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ ಕಾಡುಕೋಣದ ಕಳೇಬರವನ್ನು ಮೇಲೆತ್ತಿದ್ದಾರೆ. ಬಳಿಕ ಪಶುವೈದ್ಯಾಧಿಕಾರಿ ಮರಣೋತ್ತರ ಪರೀಕ್ಷೆ ಪ್ರಕ್ರೀಯೆ ನಡೆಸಿದ್ದು, ತೋಟದಲ್ಲೇ ಹೊಂಡ ತೋಡಿ ಅಂತ್ಯಸಂಸ್ಕಾರ ನಡೆಸಲಾಗಿದೆ.

Continue Reading

LATEST NEWS

Trending