HomeLATEST NEWSವಾಷಿಂಗ್ಟನ್: ಟೆಕ್ಸಾಸ್ ನಲ್ಲಿ ನಡೆದ ಗುಂಡಿನ ದಾಳಿಗೆ ಭಾರತೀಯ ಮಹಿಳೆ ಬಲಿ

ವಾಷಿಂಗ್ಟನ್: ಟೆಕ್ಸಾಸ್ ನಲ್ಲಿ ನಡೆದ ಗುಂಡಿನ ದಾಳಿಗೆ ಭಾರತೀಯ ಮಹಿಳೆ ಬಲಿ

ಅಮೆರಿಕದ ಟೆಕ್ಸಾಸ್ ನ ಶಾಪಿಂಗ್ ಮಾಲ್ ನಲ್ಲಿ ಶನಿವಾರ ಗುಂಡಿನ ದಾಳಿ ನಡೆದಿತ್ತು. ಈ ದಾಳಿಯಲ್ಲಿ 9 ಮಂದಿ ಮೃತ ಪಟ್ಟಿದ್ದಾರೆ. ಅದರಲ್ಲಿ ಒಬ್ಬರು ಭಾರತೀಯ ಮಹಿಳೆಯು ಆಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಾಷಿಂಗ್ಟನ್: ಅಮೆರಿಕದ ಟೆಕ್ಸಾಸ್ ನ ಶಾಪಿಂಗ್ ಮಾಲ್ ನಲ್ಲಿ ಶನಿವಾರ ಗುಂಡಿನ ದಾಳಿ ನಡೆದಿತ್ತು. ಈ ದಾಳಿಯಲ್ಲಿ 9 ಮಂದಿ ಮೃತ ಪಟ್ಟಿದ್ದಾರೆ. ಅದರಲ್ಲಿ ಒಬ್ಬರು ಭಾರತೀಯ ಮಹಿಳೆಯು ಆಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಟೆಕ್ಸಾಸ್ ನ ಶಾಪಿಂಗ್ ಮಾಲ್ ನಲ್ಲಿ ನಡೆದಿದ್ದ ಗುಂಡಿನ ದಾಳಿಯಲ್ಲಿ ಮೃತಪಟ್ಟ 9 ಮಂದಿಯಲ್ಲಿ ಭಾರತೀಯ ಮಹಿಳೆಯೂ ಸೇರಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ಮಾಹಿತಿ ನೀಡಿದ್ದಾರೆ.

ಹೈದರಾಬಾದ್ ನ 27 ವರ್ಷದ ಐಶ್ವರ್ಯ ಥಾಟಿಕೊಂಡ ಈ ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದರೆ.

ಅವರ ಭಾರತೀಯ ಸ್ನೇಹಿತ ಗಾಯಗೊಂಡಿದ್ದಾರೆ.

ಟೆಕ್ಸಾಸ್ ನ ‘ಪರ್ಫೆಕ್ಟ್ ಜನರಲ್ ಕಾಂಟ್ರಾಕ್ಟರ್ಸ್ ಎಲ್ಎಲ್ಸಿ’ ಎಂಬ ಸಂಸ್ಥೆಯಲ್ಲಿ ಪ್ರೊಜೆಕ್ಟ್ ಇಂಜಿನಿಯರ್ ಆಗಿ ಐಶ್ವರ್ಯ ಕೆಲಸ ಮಾಡುತ್ತಿದ್ದರು ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.

ಶನಿವಾರ ಗುಂಡಿನ ದಾಳಿ ನಡೆಯುವುದಕ್ಕೆ ಕೆಲ ನಿಮಿಷಗಳ ಮುನ್ನ ಐಶ್ವರ್ಯ ಭಾರತದಲ್ಲಿರುವ ತನ್ನ ಹೆತ್ತವರೊಂದಿಗೆ ಫೋನ್ ನಲ್ಲಿ ಮಾತಾಡಿದ್ದರು.

ಗುಂಡಿನ ದಾಳಿಯ ಮಾಹಿತಿ ತಿಳಿದ ಹೆತ್ತವರು ಮತ್ತೆ ಮಗಳಿಗೆ ಫೋನ್ ಕರೆ ಮಾಡಿದಾಗ ಉತ್ತರಿಸಿಲ್ಲ ಎಂದು ವರದಿ ಹೇಳಿದೆ.

Latest articles

ಬಂಟ್ವಾಳ ವಿಟ್ಲದಲ್ಲಿ ರಸ್ತೆಗೆ ಅಡ್ಡ ಬಂದ ದನ : ಆಟೋ ರಿಕ್ಷಾ ಪಲ್ಟಿ-50 ಲೀಟರ್ ಹಾಲು ನಷ್ಟ..!

ಸಾರಡ್ಕ - ಪುಣಚ ರಸ್ತೆಯ ತೋರಣಕಟ್ಟೆಯ ಸೊಸೈಟಿಯ ಸಮೀಪ ಮಂಗಳವಾರ ದನ ರಸ್ತೆಯಲ್ಲಿ ಅಡ್ಡ ಬಂದ ಹಿನ್ನಲೆಯಲ್ಲಿ ಹಾಲು...

ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಎಫೆಕ್ಟ್- ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ..!

ಜೂನ್ ಎರಡನೇ ವಾರಕ್ಕೆ ಕಾಲಿಟ್ಟರೂ ಮುಂಗಾರು ಮಳೆಯ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಹವಾಮಾನ ಇಲಾಖೆಯ ಪ್ರಕಾರ ಈ ಬಾರಿ...

ಮಂಗಳೂರು: ಮಹಿಳಾ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿ ಮಂಗಳೂರಿನಲ್ಲಿ ಪ್ರತಿಭಟನೆ-ಬೃಜ್‌ ಭೂಷಣ್‌ ಬಂಧನಕ್ಕೆ ಆಗ್ರಹ

ಮಹಿಳಾ ಕುಸ್ತಿ ಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅರೋಪ ಹೊತ್ತ ಎಸಗಿದ ಉತ್ತರ ಪ್ರದೇಶದ ಬಿಜೆಪಿ ಸಂಸದ...

ಮಂಗಳೂರು: ಬೀದಿಬದಿ ವ್ಯಾಪಾರಿಗಳ ಮೇಲಿನ ಕಿರುಕುಳ, ಕೇಸುಗಳಿಗೆ ಖಂಡನೆ – ಸುಳ್ಳು ಮೊಕದ್ದಮೆ ವಾಪಾಸ್ ಪಡೆಯಲು ಒತ್ತಾಯಿಸಿ ಪ್ರತಿಭಟನೆ

ಜನಪರ ಹೋರಾಟಗಾರ, ಬೀದಿ ವ್ಯಾಪಾರಿಗಳ ಮುಂದಾಳು ಬಿ ಕೆ ಇಮ್ತಿಯಾಝ್‌ ಮತ್ತು ಮುಖಂಡರ ಮೇಲಿನ ಸುಳ್ಳು ಮೊಕದ್ದಮೆಗಳನ್ನು ವಾಪಾಸ್...