ಕಾರಿನಲ್ಲಿ ಪ್ರಯಾಣಿಸುವಾಗ ಸೀಟ್ ಬೆಲ್ಟ್ ಹಾಕಿದ್ರೆ ಅದೆಷ್ಟು ಸೇಫ್ ಅನ್ನೋದಿಕ್ಕೆ ಶನಿವಾರ ಬೆಂಗಳೂರು ಮೈಸೂರು ನಡುವೆ ನಡೆದ ಅಪಘಾತ ಸಾಕ್ಷಿಯಾಗಿದೆ. ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಮುಂಜಾನೆ ಭೀಕರ ಅಪಘಾತ ಸಂಭವಿಸಿದ್ದು, ಕಾರು ಚಾಲಕ ಯಾವುದೇ ಗಾಯವಿಲ್ಲದೆ ಪಾರಾಗಿದ್ದಾರೆ. ಅಪಘಾತದಲ್ಲಿ ಕಾರು ರಸ್ತೆಯಲ್ಲಿ ಎಂಟು ಸುತ್ತು ಹೊಡೆದು ಡಿವೈಡರ್‌ಗೆ ಡಿಕ್ಕಿ ಹೊಡೆದು ನಿಂತಿದೆ.
ಈ ವೇಳೆ ಕಾರು ಉರುಳಿದ ತೀವೃತೆಗೆ ಕಾರು ಸಂಪೂರ್ಣ ಸ್ಕ್ರಾಪ್ ಆಗಿದ್ದು, ಅದರ ಪಾರ್ಟ್ಸ್‌ಗಳು ಚೆಲ್ಲಾಪಿಲ್ಲಿಯಾಗಿದೆ. ಆದರೆ, ಕಾರಿನ ಚಾಲಕ ಸೀಟ್ ಬೆಲ್ಟ್ ಹಾಕಿದ್ದ ಅನ್ನೋ ಒಂದೇ ಕಾರಣದಿಂದ ಒಂದಿಷ್ಟೂ ಗಾಯವಾಗದೆ ಬಚಾವ್ ಆಗಿದ್ದಾರೆ. ಬೆಂಗಳೂರಿನ ಆರ್.ಟಿ.ನಗರದ ಚಿನ್ನದ ವ್ಯಾಪಾರಿ 46 ವರ್ಷದ ವಿನೋದ್ ಅವರು ಕನಕಗಿರಿ ಮಠಕ್ಕೆ ಬಂದು ಬೆಂಗಳೂರಿಗೆ ವಾಪಾಸಾಗುತ್ತಿದ್ದರು. ಈ ವೇಳೆ ಮಂಡ್ಯ ಸಮೀಪದ ಮದ್ದೂರು ಬಳಿ ಕಾರಿನ ಟೈರ್ ಸ್ಫೋಟಗೊಂಡಿತ್ತು. ಎಕ್ಸ್‌ಪ್ರೆಸ್ ಹೈವೆ ಆಗಿರುವ ಕಾರಣ ಕಾರಿನ ವೇಗ ಗಂಟೆಗೆ ನೂರರ ಗಡಿ ದಾಟಿತ್ತು. ಹೀಗಾಗಿ ಟೈರ್ ಸ್ಪೋಟದ ಬಳಿಕ ಕಾರು ಸುಮಾರು 8 ರಿಂದ 9 ಬಾರಿ ರಸ್ತೆಯಲ್ಲಿ ಉರುಳಿಕೊಂಡು ಹೋಗಿದೆ.
ಸಿನಿಮೀಯ ರೀತಿಯಲ್ಲಿ ನಡೆದ ಈ ಅಪಘಾತ ಕಂಡ ಜನರು ತಕ್ಷಣ ಕಾರಿನ ಚಾಲಕನ ರಕ್ಷಣೆಗೆ ಧಾವಿಸಿದ್ದಾರೆ. ಚಾಲಕ ಬದುಕುಳಿದಿರುವುದೇ ಸಂದೇಹ ಅಂತ ಅಂದುಕೊಂಡು ಕಾರಿನ ಬಳಿ ಬಂದ ಜನರಿಗೆ ಅಚ್ಚರಿ ಎಂಬಂತೆ ಚಾಲಕ ಒಂದಿಷ್ಟೂ ಗಾಯವಿಲ್ಲದೆ ಕಾರಿನಿಂದ ಹೊರ ಬಂದಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸಂಚಾರಿ ಪೊಲೀಸರು ಕೂಡಾ ಪ್ರಯಾಣಿಕರಿಗೆ ಸೀಟ್ ಬೆಲ್ಟ್ ಧರಿಸಿದ್ರೆ ಎಷ್ಟು ಸೇಫ್ ಅನ್ನೋ ಬಗ್ಗೆ ಸ್ಥಳದಲ್ಲೇ ವಿವರಿಸಿದ್ದಾರೆ.
ಬೆಂಗಳೂರು: ದೀಪಾವಳಿ ದಿನದಂದು ಸ್ನೇಹಿತರ ಪಟಾಕಿ ಸಿಡಿಸುವ ಹುಚ್ಚಾಟಕ್ಕೆ ಯುವಕ ಬ*ಲಿಯಾದ ಘಟನೆ ಬೆಳಕಿಗೆ ಬಂದಿದೆ. ಕೋಣನಕುಂಟೆಯ ವೀವರ್ಸ್ ಕಾಲೋನಿಯಲ್ಲಿ ಈ ದುರ್ಘಟನೆ ನಡೆದಿದೆ.
ಪಟಾಕಿ ಅಪಾಯಕಾರಿ ಎಂಬುದು ಎಲ್ಲರಿಗೂ ಗೊತ್ತು. ಆದರೆ ಸ್ನೇಹಿತರು ಹುಡುಗಾಟ ಮಾಡಲು ಹೋಗಿ ಸ್ನೇಹಿತನನ್ನೇ ಕಳೆದುಕೊಂಡಿದ್ದಾರೆ. ಶಬರೀಶ್ ಎಂಬ ಯುವಕ ಸ್ನೇಹಿತರೊಂದಿಗೆ ಹುಚ್ಚಾಟ ಮಾಡಲು ಹೋಗಿ ಬ*ಲಿಯಾಗಿದ್ದಾನೆ.
ದೀಪಾವಳಿ ದಿನದಂದು ಶಬರೀಶ್ ಹಾಗೂ ಸ್ನೇಹಿತರು ಪಟಾಕಿ ಹೊಡೆಯುತ್ತಿದ್ದರು. ಈ ವೇಳೆ ಪಟಾಕಿ ಇಟ್ಟು ಅದರ ಮೇಲೆ ಡಬ್ಬ ಇಟ್ಟು ಕೂರಲು ಚಾಲೆಂಜ್ ಹಾಕಿದ್ದರು. ಮದ್ಯಪಾನ ಮಾಡಿದ್ದ ಶಬರೀಶ್ ಅದೇ ರೀತಿ ಮಾಡಿದ್ದಾನೆ. ಪಟಾಕಿ ಸಿಡಿದ ರಭಸಕ್ಕೆ ತೀವ್ರವಾಗಿ ಗಾಯಗೊಂಡಿದ್ದಾನೆ.
ಗಾಯಾಳು ಶಬರೀಶನನ್ನು ಆಸ್ಪತ್ರೆಗೆ ದಾಖಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಶಬರೀಶ್ ಸಾ*ವನ್ನಪ್ಪಿದ್ದಾನೆ. ಸದ್ಯ ಈ ಘಟನೆ ಸಂಬಂಧ ಕೋಣನಕುಂಟೆ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ.
ಮಂಗಳೂರು/ ಬೆಂಗಳೂರು: ಇತ್ತೀಚೆಗೆ ಕ್ರೈಂ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲೂ ಕೆಲವೊಂದು ಪ್ರಕರಣಗಳು ವಿಚಿತ್ರವಾಗಿರುತ್ತವೆ. ಇಲ್ಲೊಬ್ಬಾಕೆ ಪ್ರಿಯತಮನ ಮೊಬೈಲ್‌ನಲ್ಲಿದ್ದ ತನ್ನ ಫೋಟೋ ಹಾಗೂ ವೀಡಿಯೊಗಳನ್ನು ಡಿಲೀಟ್ ಮಾಡಿಸಲೆಂದು ರಾಬರಿ ಮಾಡಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸಿನಿಮೀಯ ರೀತಿ ಪ್ರಿಯತಮೆಯೇ ಪ್ರಿಯಕರನ ಮೇಲೆ ರಾಬರಿ ಮಾಡಿಸಿ ಸಿಕ್ಕಿಬಿದ್ದಿದ್ದಾಳೆ.
ಬೆಳ್ಳಂದೂರು ಪೊಲೀಸರು ಟೆಕ್ಕಿ ಶ್ರುತಿ ಸೇರಿ ಮೂವರನ್ನು ಬಂಧಿಸಿದ್ದಾರೆ.
ಆ್ಯಕ್ಸಿಡೆಂಟ್ – ಡ್ರಾಮಾ :
ಕಳೆದ ಸೆಪ್ಟೆಂಬರ್ 20 ರಂದು ಪ್ರಿಯಕರ ವಂಶಿಕೃಷ್ಣರೆಡ್ಡಿ ಎಂಬಾತ ಶ್ರುತಿ ಭೇಟಿಗೆ ತೆರಳಿದ್ದ. ಭೇಟಿಯಾಗಿ ಹೊರಬರುತ್ತಿದ್ದಂತೆ ಸ್ವಿಫ್ಟ್ ಕಾರಿನಲ್ಲಿ ಬಂದ ಅಪರಿಚಿತರು ವಂಶಿಕೃಷ್ಣರೆಡ್ಡಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದರು. ಈ ವೇಳೆ ಜಗಳ ತೆಗೆದ ಅಪರಿಚಿತರು ಆತನ ಬಳಿಯಿದ್ದ ಮೊಬೈಲ್ ಕಸಿದಿದ್ದರು. ಅಲ್ಲದೇ, ವಂಶಿ ಜತೆಯಲ್ಲಿಯೇ ಇದ್ದ ಶ್ರುತಿಯ ಮೊಬೈಲ್ ಅನ್ನು ಕಸಿದುಕೊಂಡಿದ್ದರು. ಬಳಿಕ ದೂರು ಕೊಡುವುದು ಬೇಡ ಮೊಬೈಲ್ ಹೋದರೆ ಹೋಯಿತು ಎಂದು ಬಾಯ್‌ಫ್ರೆಂಡ್ ವಂಶಿ ಮುಂದೆ ಶ್ರುತಿ ನಾಟಕವಾಡಿದ್ದಾಳೆ.
ಆದರೆ, ಇಷ್ಟಕ್ಕೆ ಸುಮ್ಮನಾಗದ ವಂಶಿಕೃಷ್ಣ ಬೆಳ್ಳಂದೂರು ಠಾಣೆಗೆ ತೆರಳಿ ಕಾರಿನ ನಂಬರ್ ಸಮೇತ ದೂರು ನೀಡಿದ್ದರು.
ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ.
ಇತ್ತೀಚೆಗೆ ಪ್ರಿಯತಮ ವಂಶಿಕೃಷ್ಣನಿಂದ ದೂರವಾಗಲು ಶ್ರುತಿ ಯತ್ನಿಸಿದ್ದಳು. ಆದರೆ, ವಂಶಿಕೃಷ್ಣನ ಮೊಬೈಲ್‌ನಲ್ಲಿ ಶ್ರುತಿಯ ಫೋಟೋಗಳಿದ್ದವು. ನೇರವಾಗಿ ಹೇಳಿದರೆ ಎಲ್ಲಿ ವಂಶಿಕೃಷ್ಣ ವಿರೋಧ ವ್ಯಕ್ತಪಡಿಸುತ್ತಾನೋ ಎಂಬ ಭಯದಿಂದ ಶ್ರುತಿ ಮೊಬೈಲ್ ರಾಬರಿ ಮಾಡುವ ಯೋಜನೆ ರೂಪಿಸಿದ್ದಾರೆ. ಸದ್ಯ ಆರೋಪಿ ಟೆಕ್ಕಿ ಶ್ರುತಿಯನ್ನು ಬಂಧಿಸಿರುವ ಪೊಲೀಸರು ಜೈಲಿಗಟ್ಟಿದ್ದು, ಈ ಬಗ್ಗೆ ಬೆಳ್ಳಂದೂರು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಮಂಗಳೂರು/ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಆತಿಥ್ಯ ಪ್ರಕರಣ ನಡೆದ ಬಳಿಕ ಎಚ್ಚೆತ್ತುಕೊಂಡಿರುವ ಪೊಲೀಸರು ಸೆಂಟ್ರಲ್ ಜೈಲ್ಗೆ ಮೊಬೈಲ್ ರವಾನೆ ಮಾಡುತ್ತಿದ್ದ ಖೈದಿಯೊಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಕೋಲಾರದ ಕೆಜಿಎಫ್ ನ ವಿಜಯ್ನನ್ನು ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಹಾಕಲಾಗಿದೆ. ಆಗ್ನೇಯ ವಿಭಾಗದ ಪೊಲೀಸರು ಆತನನ್ನು ಸೆರೆ ಹಿಡಿದಿದ್ದರು.
ಜೈಲಿನೊಳಗೆ ವಿಜಯ್ ಸಿಬ್ಬಂದಿಯೊಬ್ಬರ ನೆರವು ಪಡೆದು ಸ್ಮಾರ್ಟ್ ಫೋನ್ಗಳನ್ನು ಹೊರಗಿನಿಂದ ಖರೀದಿಸಿಕೊಂಡು ಅವುಗಳನ್ನು ಜೈಲಿನಲ್ಲಿರುವ ಇತರ ಖೈದಿಗಳಿಗೆ ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ವಿಜಯ್ ಮೊಬೈಲ್ ಪೂರೈಸುವುದಕ್ಕೆ ಸಾಕ್ಷ್ಯಗಳು ಸಿಕ್ಕ ಬೆನ್ನಲ್ಲೇ ಆತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಕಸ್ಟಡಿಯಲ್ಲಿದ್ದ ವಿಲ್ಸನ್ ಗಾರ್ಡನ್ ನಾಗ ಅಲಿಯಾಸ್ ನಾಗರಾಜ್ ಹಾಗೂ ವೇಲು ಅವರ ವಿಚಾರಣೆಯೂ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ವಿಜಯ್ ಜೈಲು ಅಧಿಕಾರಿಗಳ ಸಹಾಯದಿಂದಲೇ ಮೊಬೈಲ್ ಗಳನ್ನು ಮಾರಾಟ ಮಾಡುತ್ತಿದ್ದ. ರೌಡಿ ಶೀಟರ್ಗಳು ಸಾವಿರಾರು ಹಣ ಕೊಟ್ಟು ಈತನಿಂದ ಮೊಬೈಲ್ ಖರೀದಿಸುತ್ತಿದ್ದರು ಎಂಬ ವಿಚಾರದ ಕುರಿತು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಸೆ. 15 ರಂದು ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ 26 ಮೊಬೈಲ್ ಪತ್ತೆಯಾಗಿದ್ದವು. ಇನ್ನಷ್ಟು ತನಿಖೆ ನಡೆಸಿದಾಗ ವಿಜಯ್ ಮೊಬೈಲ್ ಪೂರೈಸುತ್ತಿದ್ದ ಎಂಬುವುದು ಖಚಿತವಾಗಿದೆ ಎಂದು ವರದಿಯಾಗಿದೆ