ಮಂಗಳೂರು: ದ.ಕ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ವರ್ಕ್ ಶಾಪ್‌ಗೆ ನೀರು ನುಗ್ಗಿ ಅಪಾರ ಹಾನಿಯಾದ ಘಟನೆ ಮಂಗಳೂರು ನಗರ ಹೊರವಲಯದ ಕುಲಶೇಖರದ ಬಜ್ಜೋಡಿ ಎಂಬಲ್ಲಿ ನಡೆದಿದೆ.
ಭಾರೀ ಮಳೆ ಹಿನ್ನಲೆ ವರ್ಕ್ ಶಾಪ್ ಗೆ ನುಗ್ಗಿದ ಮಳೆ ನೀರಿನಿಂದಾಗಿ ಅನೇಕ ಸೊತ್ತುಗಳು ಹಾನಿಗೊಳಗಾಗಿ ಫಜೀತಿ ಉಂಟಾಗಿದೆ.
ಅಂಗಡಿಯ ಒಳಗೆ ಸೇರಿಕೊಂಡಿರುವ ನೀರನ್ನು ತೆಗೆಯಲು ಹೈರಾಣಾಗಿದ್ದಾರೆ.
ಭಾರೀ ಮಳೆ ಹಿನ್ನೆಲೆ ಜಿಲ್ಲೆಯಾದ್ಯಂತ ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದಾರೆ.