ತುಮಕೂರು: ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತನ್ನ ಮನೆ ಸಂಪೂರ್ಣ ಜಲಾವೃತವಾಗಿದ್ದು, ಸ್ವಲ್ಪ ಗಮನಹರಿಸಿ ಎಂದು ನಟ ಜಗ್ಗೇಶ್ ವ್ಯವಸ್ಥೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರಹಾಕಿದ್ದಾರೆ.
ರಾಜ್ಯಾದ್ಯಂತ ಮತ್ತೆ ಮಳೆಯ ಆರ್ಭಟ ಶುರುವಾದ ಹಿನ್ನೆಲೆ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರ ಮಾಯಸಂದ್ರ ಮನೆ ಜಲಾವೃತಗೊಂಡಿದೆ.
ಈ ಕುರಿತು ಜಗ್ಗೇಶ್ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿರುವ ಅವರು ‘ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಮಾಯಸಂದ್ರದ ನನ್ನ ಮನೆ ಸಂಪೂರ್ಣ ಜಲಾವೃತಗೊಂಡಿದೆ. ಬಹುತೇಕರು ನೀರು ಹರಿವ ಸರ್ಕಾರದ ಜಾಗದಲ್ಲಿ ಮನೆಕಟ್ಟಿ ನೀರು ಹರಿಯುವ ಹೊಂಡಗಳ ಮುಚ್ಚಿದ್ದಾರೆ.
ಮಾಯಸಂದ್ರ ತಳದಲ್ಲಿ ಇರುವ ಸುಮಾರು 20 ಆಸ್ತಿಗಳಿಗೆ ನಿರಂತರ ನೀರು ನುಗ್ಗುತ್ತದೆ ದಯಮಾಡಿ ನೀರಾವರಿ ನಿಗಮ ಗಮನ ಹರಿಸಿ ಎಂದು ನಟ ಜಗ್ಗೇಶ್ ವಿನಂತಿಸಿಕೊಂಡಿದ್ದಾರೆ.
ಟ್ವೀಟ್ ಮಾಡುವ ಮೂಲಕ ಸಿಎಂ ಬೊಮ್ಮಾಯಿ ಅವರಿಗೂ ಜಗ್ಗೇಶ್ ಮನವಿ ಮಾಡಿದ್ದಾರೆ.