LATEST NEWS
ವಯನಾಡ್ ಭೂಕುಸಿತ: ಪರಿಹಾರ ಧನ ಏಕೆ ವಿತರಿಸಿಲ್ಲ; ಕೇಂದ್ರಕ್ಕೆ ಕೇರಳ ಹೈಕೋರ್ಟ್ ಪ್ರಶ್ನೆ
Published
2 months agoon
By
NEWS DESK2ವಯನಾಡ್ ಭೂಕುಸಿತ ದುರಂತಕ್ಕೆ ಸಂಬಂಧಿಸಿದಂತೆ ಕೇರಳಕ್ಕೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ ಮತ್ತು ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ಹಣ ವಿತರಿಸಲು ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿರುವ ಬಗ್ಗೆ ಕೇರಳ ಹೈಕೋರ್ಟ್ ಶುಕ್ರವಾರ ಕಳವಳ ವ್ಯಕ್ತಪಡಿಸಿದೆ.
ಕರ್ನಾಟಕ ಮತ್ತು ತಮಿಳುನಾಡಿನಂತಹ ನೆರೆಯ ರಾಜ್ಯಗಳಿಗೆ ವಿಪತ್ತು ಪರಿಹಾರ ನಿಧಿಯಿಂದ ಪರಿಹಾರ ಧನ ಒದಗಿಸಲಾಗಿದೆ ಎಂಬ ವಿಚಾರವನ್ನು ನ್ಯಾಯಮೂರ್ತಿ ಎ ಕೆ ಜಯಶಂಕರನ್ ನಂಬಿಯಾರ್ ಮತ್ತು ನ್ಯಾಯಮೂರ್ತಿ ಶ್ಯಾಮ್ ಕುಮಾರ್ ವಿ ಎಂ ಅವರಿದ್ದ ವಿಭಾಗೀಯ ಪೀಠ ಗಮನಿಸಿತು. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಪರಿಹಾರ ನಿಧಿ ವಿತರಿಸುವುದನ್ನು ಪರಿಗಣಿಸಬೇಕು ಎಂದು ಅದು ಸೂಚಿಸಿತು.
ಭೂಕುಸಿತದಿಂದ ತೀವ್ರ ಹಾನಿ ಮತ್ತು ನಷ್ಟ ಅನುಭವಿಸಿದ್ದರೂ ಕೇರಳಕ್ಕೆ ಇನ್ನೂ ಯಾವುದೇ ಪರಿಹಾರ ಧನ ಒದಗಿಸಿಲ್ಲ ಎಂದು ಅಮಿಕಸ್ ಕ್ಯೂರಿ (ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಸಹಾಯ ಮಾಡುವ ವಕೀಲ) ರಂಜಿತ್ ಥಂಪನ್ ಗಮನ ಸೆಳೆದ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ವಿಚಾರ ತಿಳಿಸಿತು.
ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್, ಅಮಿಕಸ್ ನೀಡಿದ ಸಲಹೆಗಳಿಗೆ ಪ್ರತಿಕ್ರಿಯಿಸಲು ಸಮಯಾವಕಾಶ ಕೋರಿದರು. ಹೀಗಾಗಿ ಅಕ್ಟೋಬರ್ 18ರೊಳಗೆ ವಿವರವಾದ ಪ್ರತಿಕ್ರಿಯೆ ನೀಡುವಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್ಡಿಎಂಎ) ಮತ್ತು ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ.
ವಯನಾಡ್ ಭೂಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವಿಪತ್ತು ನಿರ್ವಹಣೆ ಮತ್ತುನಿಯಂತ್ರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲಿಸಿಕೊಂಡಿತ್ತು.
LATEST NEWS
ಬಾವಿಯ ಪೊಟರೆಯಲ್ಲಿ ಅವಿತು ಕುಳಿತುಕೊಂಡಿದ್ದ ಚಿರತೆ ಸೆರೆ
Published
18 minutes agoon
25/11/2024By
NEWS DESK4ಉಡುಪಿ : ಉಡುಪಿ ಜಿಲ್ಲೆಯ ಅರಣ್ಯದ ಅಂಚಿನ ಪ್ರದೇಶಗಳಲ್ಲಿ ಚಿರತೆಯ ಕಾಟ ಜೋರಾಗಿದೆ. ಆಹಾರ ಅರಸಿ ಬರುವ ಚಿರತೆಗಳು ಗ್ರಾಮಸ್ಥರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿವೆ.
ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಎರ್ಮಂಜಪಲ್ಲ ಬಳಿಯ ಬಾಗಿ ಎನ್ನುವವರ ಮನೆಯ ಬಾವಿಗೆ ರಾತ್ರಿ ಚಿರತೆಯೊಂದು ಬಿದ್ದಿತ್ತು. ಬಾವಿಯ ಪೊಟರೆಯಲ್ಲಿ ಅವಿತು ಕುಳಿತುಕೊಂಡಿದ್ದ ಚಿರತೆಯನ್ನು ಮೇಲಕ್ಕೆ ಬರುವಂತೆ ಮಾಡಲು, ಅರಣ್ಯ ಇಲಾಖೆ ಹರ ಸಾಹಸ ಪಡುವಂತಾಯ್ತು.
ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಬೋನಿನ ಮೂಲಕ ಚಿರತೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ಸು ಕಂಡಿದ್ದಾರೆ. ಅರಣ್ಯ ಇಲಾಖೆಯ ಕಾರ್ಯ ದಕ್ಷತೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
LATEST NEWS
ಕದ್ದ ಚಿನ್ನಾಭಾರಣಗಳನ್ನು ಮನೆಯ ಜಗಲಿಯ ಮೇಲೆ ಇಟ್ಟು ಹೋದ ಕಳ್ಳರು !
Published
36 minutes agoon
25/11/2024By
NEWS DESK3ಮಂಗಳೂರು/ಮಂಡ್ಯ: ರಾಜ್ಯದಲ್ಲಿ ಕಳ್ಳತನ ಎನ್ನುವುದು ಸಾಮಾನ್ಯವಾಗಿದೆ. ಕಳ್ಳರು ಕದ್ದ ಚಿನ್ನಾಭಾರಣಗಳನ್ನು ಎಲ್ಲಿಯಾದರೂ ಮಾರಿ ಬಿಡುತ್ತಾರೆ. ಆದರೆ ಕಳ್ಳರಲ್ಲೂ ಪ್ರಾಮಾಣಿಕತೆ ಇದೆ ಎಂದು ಮಂಡ್ಯದಲ್ಲಿ ಸಾಕ್ಷಿಯಾಗಿದೆ.
ಈ ಘಟನೆ ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಿದ್ದೇಗೌಡ ಎಂಬುವವರ ಕುಟುಂಬ ಮನೆದೇವರ ಪೂಜೆಗೆಂದು ಹೋಗಿದ್ದರು. ಈ ವೇಳೆ ಮನೆಯ ಹೆಂಚುಗಳನ್ನು ತೆಗೆದು ಒಳನುಗ್ಗಿದ್ದ ಕಳ್ಳರು ಬೀರುವನ್ನು ಒಡೆದು ಕಳ್ಳತನ ಮಾಡಿದ್ದರು. ಈ ವೇಳೆ 50 ಗ್ರಾಂ ಚಿನ್ನದ ಸರ, 10 ಗ್ರಾಂ ಚೈನ್, 15 ಗ್ರಾಂನ ಮೂರು ಜೊತೆ ಓಲೆಗಳು ಸೇರಿ ಒಟ್ಟು 75 ಗ್ರಾಂನಷ್ಟು ಚಿನ್ನಾಭರಣ ಕದ್ದಿದ್ದರು.
ಇದನ್ನೂ ಓದಿ: ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ರಕ್ಷಿಸಿದ ರೈಲ್ವೇ ಸಿಬ್ಬಂದಿ
ಈ ಸಂಬಂಧ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ದೂರು ಕೂಡ ನೀಡಿದ್ದರು. ಕಳ್ಳರಿಗೆ ಪೊಲೀಸರ ಭಯವೋ ಅಥವಾ ಮನೆದೇವರ ಆಶೀರ್ವಾದವೋ ಗೊತ್ತಿಲ್ಲ, ಪೊಲೀಸರಿಗೆ ದೂರು ನೀಡಿದ ಎರಡು ದಿನಗಳ ನಂತರ ಕಳ್ಳರು ಮನೆಯ ಮುಂಭಾಗದ ಜಗಲಿಯ ಮೇಲೆ ಚಿನ್ನಾಭರಣಗಳನ್ನು ಇಟ್ಟು ಹೋಗಿದ್ದಾರೆ.
ಚಿನ್ನಾಭರಣ ವಾಪಸ್ಸು ಸಿಕ್ಕ ಖುಷಿಯಲ್ಲಿ ಸಿದ್ದೇಗೌಡರ ಕುಟುಂಬ ನಿರಾಳವಾಗಿದೆ.
LATEST NEWS
WATCH : ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ರಕ್ಷಿಸಿದ ರೈಲ್ವೇ ಸಿಬ್ಬಂದಿ
Published
1 hour agoon
25/11/2024By
NEWS DESK4ಮಂಗಳೂರು/ಕಾನ್ಪುರ : ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರು ರೈಲು ಹತ್ತುವ ವೇಳೆ ಅಥವಾ ಇಳಿಯುವ ವೇಳೆ ಆಯತಪ್ಪಿ ಬಿದ್ದ ಘಟನೆಗಳು ಸಂಭವಿಸಿವೆ. ಕೆಲವೊಮ್ಮೆ ಅದೃಷ್ಟವಶಾತ್, ಪಾರಾಗಿರುವುದಿದೆ. ರೈಲ್ವೇ ಸಿಬ್ಬಂದಿ ರಕ್ಷಿಸಿರುವ ಘಟನೆಗಳೂ ಇವೆ. ಇಂತಹ ಹಲವು ವೀಡಿಯೋಗಳು ವೈರಲ್ ಆಗಿವೆ. ಇದೀಗ ಮತ್ತೊಂದು ಅಂತಹುದೇ ವೀಡಿಯೋ ವೈರಲ್ ಆಗಿದೆ.
ರೈಲು ಬಂದು ನಿಂತಿತ್ತು. ಮಹಿಳೆ ರೈಲು ಹತ್ತಿದ್ದರು. ಆದರೆ, ಮಕ್ಕಳು ಪ್ಲಾಟ್ ಫಾರ್ಮ್ ನಲ್ಲಿಯೇ ಉಳಿದಿದ್ದರು. ಮಕ್ಕಳು ಅಲ್ಲೇ ಇರುವುದನ್ನು ನೋಡಿ ಮಹಿಳೆ ಮಕ್ಕಳನ್ನು ಕರೆದಿದ್ದಾರೆ. ಅವರು ಬರದೇ ಇದ್ದಾಗ ರೈಲಿನಿಂದ ಕೆಳಗೆ ಹಾರಲು ಯತ್ನಿಸಿದ್ದಾರೆ. ಈ ವೇಳೆ ಆಯತಪ್ಪಿ ರೈಲು ಹಾಗೂ ಪ್ಲಾರ್ಟ್ ಫಾರ್ಮ್ ನಡುವೆ ಸಿಲುಕಿಕೊಂಡಿದ್ದಾರೆ. ತಕ್ಷಣ ರೈಲ್ಬೇ ಪೊಲೀಸರು ಆಕೆಯನ್ನು ರಕ್ಷಿಸಿ ಸಂಭಾವ್ಯ ಅನಾಹುತವನ್ನು ತಪ್ಪಿಸಿದ್ದಾರೆ.
ಸದ್ಯ ಘಟನೆಯ ವೀಡಿಯೋ ವೈರಲ್ ಆಗಿದ್ದು, ಇದು ಕಾನ್ಪುರ ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಮಹಿಳೆಯನ್ನು ಜಿಆರ್‌ಪಿ ಸಬ್‌ಇನ್ಸ್‌ಪೆಕ್ಟರ್ ಶಿವ ಸಾಗರ್ ಶುಕ್ಲಾ ಮತ್ತು ಕಾನ್‌ಸ್ಟೇಬಲ್ ಅನೂಪ್ ಕುಮಾರ್ ಪ್ರಜಾಪತಿ ರಕ್ಷಿಸಿದ್ದಾರೆ.
ಇದನ್ನೂ ಓದಿ : ಚಾರ್ಜರ್ ಕೇಬಲ್ ಗೆ ಗಮ್ ಟೇಪ್ ಸುತ್ತಿ ಚಾರ್ಜ್ ಮಾಡುವವರು ಇದನ್ನು ಓದಲೇ ಬೇಕು !
11 ಸೆಕೆಂಡುಗಳಈ ವೀಡಿಯೋದಲ್ಲಿ ಇಬ್ಬರು ರೈಲ್ವೆ ಸಿಬ್ಬಂದಿ ರೈಲಿನಿಂದ ಜಿಗಿದ ಮಹಿಳೆಯನ್ನು ರಕ್ಷಿಸುತ್ತಿರುವುದನ್ನು ಕಾಣಬಹುದಾಗಿದೆ. ಆಕೆ ಬಿದ್ದ ಕೆಲವೇ ಕ್ಷಣಗಳಲ್ಲಿ ಜಿಆರ್‌ಪಿ ಸಿಬ್ಬಂದಿ ಆಕೆಯನ್ನು ಹಿಡಿದು ರಕ್ಷಿಸಿದ್ದು, ವ್ಯಾಪಕ ಮೆಚ್ಚುಗೆ ಗಳಿಸಿದೆ.
LATEST NEWS
ಮಸ್ಕತ್ ನಲ್ಲಿ ಬಿರುವ ಜವನೆರ್ ಸಂಯೋಜನೆಯ ಕ್ರೀಡಾಕೂಟ
ಚಾರ್ಜರ್ ಕೇಬಲ್ ಗೆ ಗಮ್ ಟೇಪ್ ಸುತ್ತಿ ಚಾರ್ಜ್ ಮಾಡುವವರು ಇದನ್ನು ಓದಲೇ ಬೇಕು !
ಕಾಮೆಂಟ್ ಮೂಲಕ ಹಿಂದೂ ಧರ್ಮದ ದೇವರುಗಳ ಬಗ್ಗೆ ಅವಹೇಳನ: ದೂರು ದಾಖಲು
ಬಿಗ್ ಬಾಸ್ ನಿಂದ ಧರ್ಮ ಎಲಿಮಿನೆಟ್ ಆಗಿದ್ದು ಯಾಕೆ ಗೊತ್ತಾ ?
ಸ್ನೇಹಿತನಿಗೆ ಥಳಿಸಿ ಅ*ಪ್ರಾಪ್ತೆ ಮೇಲೆ ಅ*ತ್ಯಾಚಾ*ರ ಎಸಗಿದ ಟ್ರಕ್ ಚಾಲಕ
ನಿನ್ನೆಯ ಹರಾಜಿನಲ್ಲಿ ಆರ್ ಸಿಬಿ ಖರೀದಿಸಿದ ಆಟಗಾರರು ಇವರೇ !
Trending
- LATEST NEWS5 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- Baindooru3 days ago
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
- LIFE STYLE AND FASHION4 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- LATEST NEWS7 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!