Connect with us

LATEST NEWS

ನಾಳೆ ಲಸಿಕೆಗಾಗಿ ಆಸ್ಪತ್ರೆಗೆ ಬರಬೇಡಿ…ಸದ್ಯಕ್ಕೆ ಲಸಿಕೆ ಇಲ್ಲ – ಆರೋಗ್ಯ ಸಚಿವ ಡಾ. ಸುಧಾಕರ್

Published

on

ಬೆಂಗಳೂರು ಎಪ್ರಿಲ್ 30: ಪ್ರಧಾನಿ ನರೇಂದ್ರ ಮೋದಿಯವರ ಲಸಿಕಾ ಉತ್ಸವಕ್ಕೆ ಆರಂಭದಲ್ಲೇ ವಿಘ್ನ ಉಂಟಾಗಿದ್ದು, ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕಾ ಕಾರ್ಯಕ್ರಮಕ್ಕೆ ಲಸಿಕೆಗಳ ಬರ ಎದುರಾಗಿದೆ.

ಕರ್ನಾಟಕದಲ್ಲಿ ನಾಳೆಯಿಂದ 18 ವರ್ಷ ಮೇಲ್ಪಟ್ಟವರು ಲಸಿಕೆ ಹಾಕಿಸಿಕೊಳ್ಳಲು ಆಸ್ಪತ್ರೆ ಬಳಿ ಬರಬಾರದು. ಮುಂದಿನ ದಿನಾಂಕವನ್ನ ಅಧಿಕೃತವಾಗಿ ತಿಳಿಸುತ್ತೇವೆ ಎಂದು ಸಚಿವ ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ.


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ತೀರ್ಮಾನಿಸಲಾಗಿತ್ತು. ಅದರ ಅನ್ವಯ 3- 3.5 ಕೋಟಿ ಜನ ಕರ್ನಾಟಕದಲ್ಲಿ ಇದ್ದಾರೆ ಎಂದು ಅಂದಾಜಿಸಲಾಗಿದೆ. 1 ಕೋಟಿ ಕೋವಿ ಶೀಲ್ಡ್ ಗೆ 400 ಕೋಟಿ ಕೊಟ್ಟು ಆರ್ಡರ್ ಮಾಡಿದ್ದೇವೆ. ಕಂಪೆನಿಗಳು ಯಾವಾಗ ಕೊಡುತ್ತೆ ಅಂತ ಇದುವರೆಗೆ ನಮಗೆ ಮಾಹಿತಿ ಬಂದಿಲ್ಲ. ನಾಳೆಯಿಂದ 18 ವರ್ಷ ಮೇಲ್ಪಟ್ಟವರು ಲಸಿಕೆ ಹಾಕಿಸಿಕೊಳ್ಳಲು ಆಸ್ಪತ್ರೆ ಬಳಿ ಬರಬಾರದು ಅಂತ ಮನವಿ ಮಾಡುತ್ತೇನೆ. ಮುಂದಿನ ದಿನಾಂಕವನ್ನ ಅಧಿಕೃತವಾಗಿ ತಿಳಿಸುತ್ತೇವೆ. ಕಂಪೆನಿಯವರು ಅಧಿಕೃತ ಮಾಹಿತಿ ಹಂಚಿಕೊಂಡ ನಂತರ ಲಸಿಕೆ ಯಾವ ವಾರದಿಂದ ಸಿಗುತ್ತೆ ಅಂತ ಹೇಳಬಹುದು ಎಂದರು.

Click to comment

Leave a Reply

Your email address will not be published. Required fields are marked *

DAKSHINA KANNADA

ಚೈತ್ರಾ ಹೆಬ್ಬಾರ್ ನಾಪತ್ತೆ ಹಿಂದೆ ಅನ್ಯಕೋಮಿನ ಯುವಕನ ಕೈವಾಡ ಶಂಕೆ- ಆರೋಪಿಯ ಬಂಧಿಸಲು ಹಿಂದೂ‌ ಸಂಘಟನೆ ಒತ್ತಾಯ

Published

on

ಪುತ್ತೂರು: ಮಾಡೂರು ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ ಪ್ರಕರಣದ ಹಿಂದೆ ಡ್ರಗ್ಸ್ ಮಾಫಿಯಾ, ಲವ್ ಜಿಹಾದ್ ಶಂಕೆಯನ್ನು ವ್ಯಕ್ತಪಡಿಸಿದ ಹಿಂದೂ‌ ಸಂಘಟನೆ ಮುಖಂಡರು, ಇದೀಗ ಬಂಟ್ವಾಳದ ಅನ್ಯಕೋಮಿನ ಯುವಕನ ಕೈವಾಡ ಆಕೆ ನಾಪತ್ತೆ ಪ್ರಕರಣದ ಹಿಂದೆ ಇದ್ದು, ಆರೋಪಿಯನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.

ಪುತ್ತೂರಿನ ಕೂರ್ನಡ್ಕದಲ್ಲಿ ವಾಸವಿದ್ದ ಶಾರೂಕ್ ಶೇಖ್ ಮೂಲತಃ ಬಂಟ್ವಾಳದ ನೇರಳಕಟ್ಟೆಯ ನಿವಾಸಿಯಾಗಿದ್ದಾನೆ. ಚೈತ್ರಾ ತಂಗಿದ್ದ ಪಿಜಿಗೆ ಬರುತ್ತಿದ್ದ ಶಂಕಿತ ಬರುತ್ತಿದ್ದ. ಚೈತ್ರಾ ಪೋಷಕರಿಗೆ ಮಾಡೂರು ಬಜರಂಗದಳ ಮುಖಂಡರು ಮಾಹಿತಿಯನ್ನೂ ನೀಡಿದ್ದರು. ಇದೀಗ ಮಾಹಿತಿ ನೀಡಿದ ಬಳಿಕ ನಾಪತ್ತೆಯಾದ ಚೈತ್ರಾ ಹೆಬ್ಬಾರ್‌ ಹಿಂದೆ ಈ ಆರೋಪಿ ಇರುವುದು ದೃಢಪಡುತ್ತಿರುವುದರಿಂದ ಎರಡು ದಿನದಲ್ಲಿ ಚೈತ್ರಾಳನ್ನು ಪೊಲೀಸರು ಕರೆ ತರಬೇಕು. ಇಲ್ಲದೇ ಇದ್ದಲ್ಲಿ ಉಳ್ಳಾಲ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ಪ್ರಾಂತ ಸಂಚಾಲಕ ಮುರಳಿ ಕೃಷ್ಣ ಹಸಂತಡ್ಕ ಎಚ್ಚರಿಕೆ ನೀಡಿದ್ದಾರೆ.

Continue Reading

DAKSHINA KANNADA

Ullala: ನಾಪತ್ತೆಯಾಗಿದ್ದ ಚೈತ್ರಾ ಹೆಬ್ಬಾರ್ ಸ್ಕೂಟರ್ ಪತ್ತೆ..!

Published

on

ಮಂಗಳೂರು: ಉಳ್ಳಾಲದ ಮಾಡೂರಿನ ಪಿಜಿಯಿಂದ ಫೆ.17 ರಂದು ನಾಪತ್ತೆಯಾಗಿದ್ದ ಚೈತ್ರಾ ಹೆಬ್ಬಾರ್ ಚಲಾಯಿಸಿದ ಸ್ಕೂಟರ್ ಸುರತ್ಕಲ್ ಬಳಿ ಪತ್ತೆಯಾಗಿದೆ.

ಮಾಡೂರಿನ ಪಿಜಿ ಯಿಂದ ಫೆ.17 ರಂದು ಮುಂಜಾನೆ 9 ಗಂಟೆಗೆ ಚೈತ್ರಾ ಇದೇ ಸ್ಕೂಟರ್‌ನಲ್ಲಿ ತೆರಳಿದ್ದರು. ಬಳಿಕ ನಾಪತ್ತೆಯಾಗಿದ್ದ ಚೈತ್ರಾ ಸುಳಿವು ಸಿಗದೆ ಹಿನ್ನೆಲಯಲ್ಲಿ ಚೈತ್ರಾ ದೊಡ್ಡಪ್ಪ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದರು. ಹಿಂದೂ ಸಂಘಟನೆಗಳೂ ಇದೊಂದು ಲವ್‌ ಜಿಹಾದ್ ಪ್ರಕರಣವೆಂದು ಆರೋಪಿಸಿ ಹೋರಾಟದ ಎಚ್ಚರಿಕೆ ನೀಡಿತ್ತು. ಇದಾದ ಬಳಿಕ ತನಿಕೆ ಚುರುಕುಗೊಳಿಸಿ ಪೊಲೀಸರಿಗೆ ಇದೀಗ ಚೈತ್ರಾಳ ಸ್ಕೂಟರ್ ಪತ್ತೆಯಾಗಿದೆ. ಚೈತ್ರ ಪಿಜಿಯಿಂದ ಹೊರಟ ಬಳಿಕ ಪಂಪ್‌ವೆಲ್ ಬಳಿ ಮೊಬೈಲ್ ಆಫ್ ಮಾಡಿಕೊಂಡಿದ್ದು ಬಳಿಕ ಸುರತ್ಕಲ್‌ಗೆ ಬಂದು ಅಲ್ಲಿ ಎಟಿಎಂನಲ್ಲಿ ಹಣ ಡ್ರಾ ಮಾಡಿದ್ದರು, ಬ್ಯಾಂಕ್ ಖಾತೆಯನ್ನು ಬ್ಲಾಕ್ ಮಾಡಿಸಿರುವ ಪೊಲೀಸರು ಶಂಕಿತ ಯುವಕನ ಬಗ್ಗೆಯೂ ಮಾಹಿತಿ ಕಲೆ ಹಾಕಿದೆ. ಆದರೆ ಆತನ ಮೊಬೈಲ್ ಕೂಡಾ ಸ್ವಿಚ್‌ ಆಫ್ ಆಗಿರುವ ಕಾರಣ ಚೈತ್ರಾ ಆತನ ಜೊತೆಯಲ್ಲಿ ಹೋಗಿರುವ ಬಲವಾದ ಅನುಮಾನ ಮೂಡಿದೆ. ಕೇರಳ ಅಥವಾ ಬೆಂಗಳೂರಿಗೆ ಹೋಗಿರುವ ಸಾದ್ಯತೆ ಹಿನ್ನಲೆಯಲ್ಲಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Continue Reading

LATEST NEWS

ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಹೃದಯಘಾತಕ್ಕೆ ಬಲಿ..!

Published

on

ಯಾದಗಿರಿ: ಸುರಪುರ ಕಾಂಗ್ರೆಸ್ ಶಾಸಕರ ರಾಜಾ ವೆಂಕಟಪ್ಪ ನಾಯಕ ಅವರು ಫೆ.25 ರಂದು ಹೃದಯಘಾತದಿಂದ ನಿಧನ ಹೊಂದಿದರು.


ರಾಜಾ ವೆಂಕಟಪ್ಪ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹೃದಯಘಾತಕ್ಕೆ ಬಲಿಯಾದ ರಾಜಾ ವೆಂಕಟಪ್ಪ ಅವರ ಸಾವು ಕಾಂಗ್ರೆಸ್ ಗರಿಗೆ ಶಾಕ್ ನೀಡಿದಂತಾಗಿದೆ. ಇವರ ಸಾವಿಗೆ ಹಲವು ನಾಯಕರು ಬೇಸರ ವ್ಯಕ್ತಪಡಿಸಿದ್ದಾರೆ.

Continue Reading

LATEST NEWS

Trending