Monday, January 24, 2022

ರಾಜ್ಯದಲ್ಲಿ ನೈಟ್ ಕರ್ಫ್ಯೂ ಮುಂದುವರಿಕೆ: ವೀಕೆಂಡ್ ಕರ್ಫ್ಯೂ ತಿಂಗಳಾಂತ್ಯದವರೆಗೆ ವಿಸ್ತರಣೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ರಾಜ್ಯದಲ್ಲಿ ನೈಟ್ ಕರ್ಫ್ಯೂ ದಿನಂಪ್ರತಿ ಮುಂದುವರಿಸಲು ತೀರ್ಮಾನಿಸಲಾಗಿದ್ದು ವೀಕೆಂಡ್ ಕರ್ಫ್ಯೂ ತಿಂಗಳಾಂತ್ಯದವರೆಗೆ ವಿಸ್ತರಣೆ ಮಾಡಲಾಗಿದೆ.

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಚಿವರು ಹಾಗೂ ತಜ್ಞರ ಜೊತೆ ವರ್ಚುವಲ್ ಸಭೆ ನಡೆಸಿದ್ದಾರೆ.


ಸರಕಾರದ ನಿರ್ಧಾರದ ಪ್ರಕಾರ ರಾಜ್ಯದಾದ್ಯಂತ ಎಲ್ಲಾ ರೀತಿಯ ರ್‍ಯಾಲಿಗಳು, ಧರಣಿಗಳು ಮತ್ತು ಪ್ರತಿಭಟನೆಗಳನ್ನು ನಿಷೇಧಿಸಿದೆ.

ಜನವರಿ 31ರವರೆಗೆ ವೀಕೆಂಡ್ ಕರ್ಫ್ಯೂ ಮುಂದುವರಿಕೆಯಾಗಲಿದೆ ಎಂದು ಸರಕಾರ ಹೇಳಿದೆ. ಶಾಲೆಗಳನ್ನು ಮುಚ್ಚುವ ಬಗ್ಗೆ ಕೈಗೊಳ್ಳಬೇಕಾದ ನಿರ್ಧಾರದ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.

ಮದುವೆ ಸಮಾರಂಭಗಳಲ್ಲಿ ಈ ಹಿಂದಿನ ಆದೇಶವನ್ನೇ ಮುಂದುವರಿಸಲಾಗಿದ್ದು, ತೆರೆದ ಸ್ಥಳದಲ್ಲಿ 200 ಮಂದಿ ಹಾಗೂ ಒಳಾಂಗಣದಲ್ಲಿ 100ಜನರು ಭಾಗವಹಿಸಲಷ್ಟೇ ಅವಕಾಶ ಎಂದು ಉಲ್ಲೇಖಿಸಲಾಗಿದೆ.

ಮಹಾರಾಷ್ಟ್ರ, ಕೇರಳ ಮತ್ತು ಗೋವಾ ಗಡಿಗಳಲ್ಲಿ ಕಣ್ಗಾವಲು ತೀವ್ರಗೊಳಿಸಲಾಗಿದೆ. ಥಿಯೇಟರ್‌, ಬಾರ್‌ಗಳಿಗೆ ಶೇಕಡ 50 ಜನರಿಗೆ ಮಾತ್ರ ಅವಕಾಶವಿರಲಿದ್ದು ದೇವಸ್ಥಾನಗಳಿಗೂ ಭಕ್ತರ ಪ್ರವೇಶಕ್ಕೆ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ದೇವಸ್ಥಾನಗಳು, ಮಂದಿರ, ಮಸೀದಿ ಮತ್ತು ಚರ್ಚ್‌ಗಳಲ್ಲಿ ಪೂಜೆ, ಆಚರಣೆಗೆ ಯಾವುದೇ ನಿರ್ಬಂಧ ಇಲ್ಲ.

ಆದರೆ ವೈಕುಂಠ, ಏಕಾದಶಿ ಹಿನ್ನೆಲೆ ಅಂದು ದೇಗುಲಕ್ಕೆ ಒಮ್ಮೆಗೆ 50 ಜನರಿಗೆ ಮಾತ್ರ ಅವಕಾಶ ಇದ್ದು, ಭಕ್ತರು ಕಡ್ಡಾಯವಾಗಿ ಎರಡು ಡೋಸ್ ಪಡೆದಿರಬೇಕು.

ಸೇವೆಗಳು ಎಂದಿನಂತೆ ನಡೆದರೂ , ಭಕ್ತರ ಪ್ರವೇಶಕ್ಕೆ ಮಾತ್ರ ಮಿತಿ ಇರಬೇಕು ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ.

Hot Topics

‘ಸುಳ್ಳುಗಳ ಮೂಲಕ ನಾರಾಯಣಗುರುವಿಗೆ ಮಾಡಿದ ಅಪಚಾರವನ್ನು ಮುಚ್ಚಿಟ್ಟುಕೊಳ್ಳಲಾಗದು’

ಮಂಗಳೂರು: ಸುಳ್ಳುಗಳ ಮೂಲಕ ಸಾಮಾಜಿಕ ಸುಧಾರಣೆಯ ಹರಿಕಾರ  ನಾರಾಯಣ ಗುರು ಅವರಿಗೆ ಮಾಡಿದ ಅಪಚಾರವನ್ನು ಬಿಜೆಪಿ ಮುಚ್ಚಿಟ್ಟುಕೊಳ್ಳಲಾಗದು ಎಂದು ಸಿಪಿಐಎಂ ಹೇಳಿದೆ.ಕೇರಳ ರಾಜ್ಯ ಸರಕಾರ ಸೂಚಿಸಿದ ನಾರಾಯಣಗುರು ಇರುವ ಸ್ಥಬ್ದ ಚಿತ್ರವನ್ನು ಪರಿಗಣಿಸದೇ...

ಮಲಗಿದ್ದ ಅತ್ತೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಸೊಸೆ

ಚಿತ್ರದುರ್ಗ: ಅತ್ತೆ-ಸೊಸೆ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರೋ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿಯಲ್ಲಿ ನಡೆದಿದೆ.ರುದ್ರಮ್ಮ(60) ಹತ್ಯೆಗೀಡಾದ ದುರ್ದೈವಿಯಾಗಿದ್ದು, ಆರೋಪಿ ಸೊಸೆ ಮುದ್ದಕ್ಕ (38)ಳನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ. ಅತ್ತೆ-ಸೊಸೆ ನಡುವೆ ಹೊಂದಾಣಿಕೆ...

ಯಕ್ಷಗಾನ ಕಲಾವಿದ ಗೋವಿಂದ ಶೇರಿಗಾರ್ ನಿಧನ: ಯಕ್ಷಗಾನ ಕಲಾರಂಗ ಸಂತಾಪ

ಕುಂದಾಪುರ: ಗಂಡುಕಲೆಯಲ್ಲಿ ಸ್ತ್ರೀ ವೇಷಧಾರಿ ಪಾತ್ರ ಮಾಡುತ್ತಿದ್ದ ಮಾರ್ಗೋಳಿ ಗೋವಿಂದ ಶೇರಿಗಾರ್ (96) ನಿಧನರಾಗಿದ್ದು ಇಬ್ಬರು ಪುತ್ರರು ಹಾಗೂ ಪುತ್ರಿಯರನ್ನು ಅಗಲಿದ್ದಾರೆ.ಬಡಗುತಿಟ್ಟು ಪುರಾಣ ಪ್ರಸಂಗಗಳಲ್ಲಿ ಅತ್ಯಂತ ಪ್ರಸಿದ್ಧವಾದ ದೇವಿ ಮಹಾತ್ಮೆ ಪ್ರಸಂಗಗಳಲ್ಲಿ ಮೊದಲು...