ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ರಾಜ್ಯದಲ್ಲಿ ನೈಟ್ ಕರ್ಫ್ಯೂ ದಿನಂಪ್ರತಿ ಮುಂದುವರಿಸಲು ತೀರ್ಮಾನಿಸಲಾಗಿದ್ದು ವೀಕೆಂಡ್ ಕರ್ಫ್ಯೂ ತಿಂಗಳಾಂತ್ಯದವರೆಗೆ ವಿಸ್ತರಣೆ ಮಾಡಲಾಗಿದೆ.
ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಚಿವರು ಹಾಗೂ ತಜ್ಞರ ಜೊತೆ ವರ್ಚುವಲ್ ಸಭೆ ನಡೆಸಿದ್ದಾರೆ.
ಸರಕಾರದ ನಿರ್ಧಾರದ ಪ್ರಕಾರ ರಾಜ್ಯದಾದ್ಯಂತ ಎಲ್ಲಾ ರೀತಿಯ ರ್‍ಯಾಲಿಗಳು, ಧರಣಿಗಳು ಮತ್ತು ಪ್ರತಿಭಟನೆಗಳನ್ನು ನಿಷೇಧಿಸಿದೆ.
ಜನವರಿ 31ರವರೆಗೆ ವೀಕೆಂಡ್ ಕರ್ಫ್ಯೂ ಮುಂದುವರಿಕೆಯಾಗಲಿದೆ ಎಂದು ಸರಕಾರ ಹೇಳಿದೆ. ಶಾಲೆಗಳನ್ನು ಮುಚ್ಚುವ ಬಗ್ಗೆ ಕೈಗೊಳ್ಳಬೇಕಾದ ನಿರ್ಧಾರದ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.
ಮದುವೆ ಸಮಾರಂಭಗಳಲ್ಲಿ ಈ ಹಿಂದಿನ ಆದೇಶವನ್ನೇ ಮುಂದುವರಿಸಲಾಗಿದ್ದು, ತೆರೆದ ಸ್ಥಳದಲ್ಲಿ 200 ಮಂದಿ ಹಾಗೂ ಒಳಾಂಗಣದಲ್ಲಿ 100ಜನರು ಭಾಗವಹಿಸಲಷ್ಟೇ ಅವಕಾಶ ಎಂದು ಉಲ್ಲೇಖಿಸಲಾಗಿದೆ.
ಮಹಾರಾಷ್ಟ್ರ, ಕೇರಳ ಮತ್ತು ಗೋವಾ ಗಡಿಗಳಲ್ಲಿ ಕಣ್ಗಾವಲು ತೀವ್ರಗೊಳಿಸಲಾಗಿದೆ. ಥಿಯೇಟರ್, ಬಾರ್‌ಗಳಿಗೆ ಶೇಕಡ 50 ಜನರಿಗೆ ಮಾತ್ರ ಅವಕಾಶವಿರಲಿದ್ದು ದೇವಸ್ಥಾನಗಳಿಗೂ ಭಕ್ತರ ಪ್ರವೇಶಕ್ಕೆ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ದೇವಸ್ಥಾನಗಳು, ಮಂದಿರ, ಮಸೀದಿ ಮತ್ತು ಚರ್ಚ್‌ಗಳಲ್ಲಿ ಪೂಜೆ, ಆಚರಣೆಗೆ ಯಾವುದೇ ನಿರ್ಬಂಧ ಇಲ್ಲ.
ಆದರೆ ವೈಕುಂಠ, ಏಕಾದಶಿ ಹಿನ್ನೆಲೆ ಅಂದು ದೇಗುಲಕ್ಕೆ ಒಮ್ಮೆಗೆ 50 ಜನರಿಗೆ ಮಾತ್ರ ಅವಕಾಶ ಇದ್ದು, ಭಕ್ತರು ಕಡ್ಡಾಯವಾಗಿ ಎರಡು ಡೋಸ್ ಪಡೆದಿರಬೇಕು.
ಸೇವೆಗಳು ಎಂದಿನಂತೆ ನಡೆದರೂ , ಭಕ್ತರ ಪ್ರವೇಶಕ್ಕೆ ಮಾತ್ರ ಮಿತಿ ಇರಬೇಕು ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಮಂಗಳೂರು/ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ನಿಧ*ನ ಹೊಂದಿದ್ದಾರೆ.
ಇತ್ತೀಚೆಗಷ್ಟೇ ಇವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಹಾಗಾಗಿ ಕಳೆದ 4 ದಿನಗಳಿಂದ ಯಶವಂತಪುರದ ಬಳಿಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದರ ಮಧ್ಯೆ ನಟ ಸರಿಗಮ ವಿಜಿ ಆರೋಗ್ಯ ಸ್ಥಿತಿ ಗಂ*ಭೀರವಾಗಿದೆ ಎಂದು ಹೇಳಲಾಗಿತ್ತು. ಈಗ ಇವರು ಮೃ*ತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಹಲವು ದಿಗ್ಗಜ ನಟರ ಜೊತೆ ತೆರೆಹಂಚಿಕೊಂಡಿದ್ದರು. ಹಾಸ್ಯ ಪಾತ್ರಗಳಲ್ಲಿ ಸರಿಗಮ ವಿಜಿ ಮಿಂಚಿದ್ದರು. ಹಲವು ಧಾರವಾಹಿಗಳಲ್ಲೂ ಅವರು ಬಣ್ಣಹಚ್ಚಿದ್ದಾರೆ. 400ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಅವರು 100ಕ್ಕೂ ಅಧಿಕ ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ತೆಲುಗು ವಿಜ್ಞಾನ ಸಮಿತಿ ನೀಡುವ ‘ಶ್ರೀ ಕೃಷ್ಣದೇವರಾಯ ಪುರಸ್ಕಾರ’, ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದಾರೆ.
ಮಹಾಲಕ್ಷೀ ಲೇಔಟ್ ನಲ್ಲಿರುವ ಅವರ ನಿವಾಸದಲ್ಲಿ ನಾಳೆ ಬೆಳಿಗ್ಗೆ 10 ಗಂಟೆವರೆಗೆ ಪಾರ್ಥಿ*ವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ವೇಳೆ ಅಂ*ತ್ಯಕ್ರಿಯೆ ನಡೆಯಲಿದೆ.
ಮಂಗಳೂರು/ಬೆಂಗಳೂರು : ಬೇಟೆಗಾರನನ್ನು ಬೇಟೆ ಆಡುವ ರಣ ಬೇಟೆಗಾರ ಬಂದ ಎಂಬ ಡೈಲಾಗ್ನಂತೆ ‘ಬಿಗ್ ಬಾಸ್’ ದಾಖಲೆಯನ್ನು ‘ಸರಿಗಮಪ’ ಹಿಂದಿಕ್ಕಿದೆ. ಇಷ್ಟು ದಿನಗಳ ಕಾಲ ಟಿಆರ್‌ಪಿಯಲ್ಲಿ ಬಿಗ್ ಬಾಸ್ ಪಾರುಪತ್ಯ ಸಾಧಿಸುತ್ತಾ ಬರುತ್ತಿತ್ತು. ಎಲ್ಲಾ ಧಾರಾವಾಹಿಗಳ ಟಿಆರ್ಪಿಯನ್ನು ಬೀಟ್ ಮಾಡಿ ಬಿಗ್ ಬಾಸ್ ಮೊದಲ ಸ್ಥಾನದಲ್ಲಿ ಇರುತ್ತಿತ್ತು. ಆದರೆ, ಭರ್ಜರಿ ಟಿಆರ್ಪಿ ಪಡೆಯುವ ಮೂಲಕ ಈ ಶೋ ಮೊದಲ ಸ್ಥಾನ ಪಡೆದಿದೆ.
52ನೇ ವಾರದ ಟಿಆರ್ಪಿ ಪ್ರಕಾರ, ಬಿಗ್ ಬಾಸ್ಗೆ ಗ್ರಾಮಾಂತರ ಹಾಗೂ ನಗರ ಭಾಗದಲ್ಲಿ ವಾರದ ದಿನ 8 ಟಿವಿಆರ್, ಶನಿವಾರ 9.1 ಟಿವಿಆರ್ ಹಾಗೂ ಭಾನುವಾರ 10 ಟಿವಿಆರ್ ಸಿಕ್ಕಿದೆ. ವಾರಾಂತ್ಯದಲ್ಲಿ ಸುದೀಪ್ ಅವರು ಇರುವ ಕಾರಣ ಶೋಗೆ ಭರ್ಜರಿ ಟಿಆರ್ಪಿ ದೊರೆಯುತ್ತಿದೆ. ‘ಸರಿಗಮಪ’ ಆಡಿಷನ್ ಇತ್ತೀಚೆಗೆ ಪೂರ್ಣಗೊಂಡಿದೆ. ಶನಿವಾರ ಹಾಗೂ ಭಾನುವಾರ ಸಂಜೆ 7.30ರಿಂದ 9 ಗಂಟೆವರೆಗೆ ಈ ಶೋ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ. ಆಡಿಷನ್ ಎಪಿಸೋಡ್ ಉತ್ತಮ ಟಿಆರ್ಪಿ ಪಡೆದುಕೊಂಡಿದೆ. ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ 11.1 ಟಿವಿಆರ್ ಹಾಗೂ ಗ್ರಾಮೀಣ ಭಾಗದಲ್ಲಿ 13.1 ಟಿವಿಆರ್ ಈ ಶೋಗೆ ಸಿಕ್ಕಿದೆ. ಈ ಮೂಲಕ ಬಿಗ್ ಬಾಸ್ನ ಶೋ ಹಿಂದಿಕ್ಕಿದೆ. ‘ಸರಿಗಮಪ’ ಶೋನಲ್ಲಿ ಅನುಶ್ರೀ ಅವರು ಆ್ಯಂಕರಿಂಗ್ ಮಾಡುತ್ತಿದ್ದಾರೆ. ರಾಜೇಶ್ ಕೃಷ್ಣನ್, ವಿಜಯ್ ಪ್ರಕಾಶ್ ಹಾಗೂ ಅರ್ಜುನ್ ಜನ್ಯ ಜಡ್ಜ್ ಸ್ಥಾನದಲ್ಲಿ ಇದ್ದಾರೆ.
ಸೀರಿಯಲ್‌ಗಳ ಟಿಆರ್ಪಿ
ಸೀರಿಯಲ್‌ಗಳ ಟಿಆರ್ಪಿ ವಿಚಾರಕ್ಕೆ ಬರೋದಾದರೆ, ‘ಲಕ್ಷ್ಮೀ ನಿವಾಸ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇದೆ. ಎರಡನೇ ಸ್ಥಾನದಲ್ಲಿ ‘ಅಮೃತಧಾರೆ’ ಹಾಗೂ ‘ಅಣ್ಣಯ್ಯ’ ಧಾರಾವಾಹಿಗಳು ಇವೆ. ಮೂರನೇ ಸ್ಥಾನದಲ್ಲಿ ‘ಪುಟ್ಟಕ್ಕನ ಮಕ್ಕಳು’, ನಾಲ್ಕನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಹಾಗೂ ಐದನೇ ಸ್ಥಾನದಲ್ಲಿ ‘ಭಾಗ್ಯ ಲಕ್ಷ್ಮೀ’ ಧಾರಾವಾಹಿ ಇದೆ.
ಮಂಗಳೂರು/ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸರಿಗಮಪ ಸಂಗೀತ ರಿಯಾಲಿಟಿ ಶೋನಲ್ಲಿ ಜ್ಯೂರಿ ಪ್ಯಾನೆಲ್‌ನಲ್ಲಿ ಇರುತ್ತಿದ್ದ ಬಹುವಾದ್ಯ ಪರಿಣಿತರಾಗಿ ಎಸ್. ಬಾಲಿ ಎಂದೇ ಪ್ರಖ್ಯಾತರಾಗಿರುವ ಎಸ್ ಬಾಲಸುಬ್ರಹ್ಮಣ್ಯಂ ಅವರು ನಿಧನರಾಗಿದ್ದಾರೆ.
ಮೃದಂಗ, ತಬಲಾ, ಢೋಲಕ್ , ಢೋಲ್ಕಿ, ಖಂಜರಿ, ಕೋಲ್ ಹೀಗೆ ಹತ್ತು ಹಲವು ಲಯವಾದ್ಯಗಳನ್ನು ನುಡಿಸುವಲ್ಲಿ ಪರಿಣಿತರಾಗಿದ್ದ ಅಪರೂಪದ ವಿದ್ವಾಂಸ ಎಸ್ ಬಾಲಸುಬ್ರಹ್ಮಣ್ಯಂ ಅವರಿಗೆ 71 ವರ್ಷವಾಗಿತ್ತು.
ಕನ್ನಡ ಚಿತ್ರರಂಗದ ಅನೇಕ ಸಂಗೀತ ಸಾಧಕರು ಬಾಲಿ ಅವರನ್ನು ರಿದಂ ಕಿಂಗ್ ಎಂದೇ ಕರೆಯುತ್ತಿದ್ದರು. ಸುಗಮ ಸಂಗೀತದಲ್ಲೂ ಇವರು ಮಾಸ್ಟರ್. ದಕ್ಷಿಣ ಭಾರತದ ಏಕೈಕ ರಿದಂ ಕಂಪೋಸರ್, ಆಯೋಜಕರು ಮತ್ತು ನಿರ್ದೇಶಕರು ಎಂಬ ಹೆಗ್ಗಳಿಕೆ ಇವರದು.
ಬಯಾಲಜಿ ಸುಂದರೇಶನ್ ಎಂದೇ ಖ್ಯಾತರಾಗಿದ್ದ ಎಂ.ವಿ. ಸುಂದರೇಶನ್ ಮತ್ತು ಸಾವಿತ್ರಿ ದಂಪತಿಯ ಮಗನಾಗಿ 1953ರ ಜನವರಿ 9ರಂದು ಬೆಂಗಳೂರಿನಲ್ಲಿ ಬಾಲಿ ಅವರು ಜನಿಸಿದರು. ಮನೆಯಲ್ಲಿ ಸಂಗೀತದ ವಾತಾವರಣವಿತ್ತು. ಚಿಕ್ಕಂದಿನಿಂದಲೇ ಸಂಗೀತದತ್ತ ಒಲವು ಮೂಡಿಸಿಕೊಂಡ ಬಾಲಿ ಪಾಲಕ್ಕಾಡು ಶ್ರೀ ರವೀಂದ್ರನಾಥ ವಾರಿಯರ್ ಬಳಿ ಮೃದಂಗ ಕಲಿತರು. ಮುಂದೆ ಅವರು ಹಲವಾರು ಶಾಸ್ತ್ರೀಯ ಸಂಗೀತಗಾರರಿಗೆ ಮೃದಂಗ ಪಕ್ಕವಾದ್ಯ ಸಹಕಾರದಲ್ಲಿ ಬಾಗಿಯಾಗಿದ್ದಾರೆ.
ದಕ್ಷಿಣ ಭಾರತದ ಏಕೈಕ ರಿದಂ ಕಂಪೋಸರ್-ಅರೇಂಜರ್-ಕಂಡಕ್ಟರ್ ಎಂಬ ಹೆಗ್ಗಳಿಕೆ ಎಸ್. ಬಾಲಿ ಅವರದ್ದಾಗಿದೆ. ಶಂಕರನಾಗ್ ಅವರ ಸಂಕೇತ್ ಸ್ಟುಡಿಯೊ ಆರಂಭದ ದಿನಗಳಲ್ಲಿ ಎದುರಾದ ಸವಾಲುಗಳನ್ನು ಎದುರಿಸಲು ಬಾಲಿ ಹೆಗಲು ನೀಡಿದರು.
ಬಾಲಿ ಅವರು ಕನ್ನಡದ ಮೊಟ್ಟಮೊದಲ ಧ್ವನಿಸುರಳಿ ಕವಿ ನಿಸಾರ್ ಅಹಮ್‌ದರವರ ನಿತ್ಯೋತ್ಸವದಿಂದ ಮೊದಲುಗೊಂಡು ಮೈಸೂರು ಅನಂತಸ್ವಾಮಿಯವರ ಸಂಯೋಜನೆಗಳಿಗೆ ಸಹಾಯಕರಾಗಿ ವಾದ್ಯದ ನೆರವು ನೀಡಿದವರು. ಹಲವಾರು ಧ್ವನಿಸುರುಳಿಗಳು, ಕಿರುತೆರೆ, ನಾಟಕಗಳಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ವಿಶ್ವದೆಲ್ಲೆಡೆ ಬಾಲಿ ಅವರ ಲಯ ಸಂಗೀತ ಶಾಶ್ವತವಾಗಿ ಮೊಳಗುತ್ತಲೇ ಇದೆ. 1970ರ ದಶಕದಲ್ಲಿ ಬಾಲಿ ಬಹುಬೇಡಿಕೆಯ ವ್ಯಕ್ತಿಯಾಗಿದ್ದರು. ಅವರಿಗ ರಾಜ್ಯ ಸಂಗೀತ ನೃತ್ಯ ಅಕಾಡೆಮಿ ಗೌರವ, ಕರ್ನಾಟಕ ಕಲಾಶ್ರೀ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಸಂದಿವೆ.