Saturday, November 27, 2021

ಇಂದಿನಿಂದಲೇ ಬೆಂಗಳೂರು ಸೇರಿ 19 ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ…!!

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 19 ಜಿಲ್ಲೆಗಳಲ್ಲಿ ಇಂದು ( ಶುಕ್ರವಾರ) ರಾತ್ರಿಯಿಂದ ಸೋಮವಾರ ಬೆಳಗ್ಗೆವರೆಗೂ ವೀಕೆಂಡ್​ ಕರ್ಫ್ಯೂ ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಸಂದರ್ಭ ಅಗತ್ಯ ವಸ್ತುಗಳ ಪೂರೈಕೆ ಹಾಗೂ ವೈದ್ಯಕೀಯ ಸೇವಾ ವಲಯ ಸಂಚಾರ ಹೊರತುಪಡಿಸಿ ಬೇರೆಲ್ಲದಕ್ಕೂ ನಿರ್ಬಂಧ ಹೇರಲಾಗಿದೆ. ಸಾರ್ವಜನಿಕರ ಅನಗತ್ಯ ಓಡಾಟಕ್ಕೆ ಕಟ್ಟುನಿಟ್ಟಾಗಿ ನಿಷೇಧ ಹೇರಲಾಗಿದೆ.

ಅಗತ್ಯ ವಸ್ತುಗಳ ಪೂರೈಕೆ ಹಾಗೂ ವೈದ್ಯಕೀಯ ಸೇವಾ ವಲಯ ಸಂಚಾರಕ್ಕೆ ಯಾವುದೇ ಅಡ್ಡಿಯಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದು, ಮಧ್ಯಾಹ್ಮ ಎರಡು ಗಂಟೆಯವರೆಗೆ ಹಾಲು, ಹಣ್ಣು, ತರಕಾರಿ, ಮಾಂಸ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕೊಡಲಾಗಿದೆ.

ಕೊರೊನಾ ನಿಯಮ ಉಲ್ಲಂಘಿಸಿ ರಸ್ತೆಗಳಿದರೆ ವಾಹನಗಳನ್ನು ಸೀಜ್​​ ಮಾಡಲು ಕೂಡ ಆದೇಶದಲ್ಲಿ ಉಲ್ಲೇಕಿಸಲಾಗಿದೆ. ಎಲ್ಲಾ ಕೇಂದ್ರ-ರಾಜ್ಯ ಸರ್ಕಾರದ ಕಚೇರಿಗಳು, ಕೋವಿಡ್ ಸಂಬಂಧಿತ ಕೆಲಸ ಮಾಡುವ ಕಂಪನಿಗಳು, ಅಗತ್ಯ ವಸ್ತುಗಳ ಉತ್ಪಾದನೆಯ ಎಲ್ಲಾ ಕೈಗಾರಿಗಳು, ಸಂಸ್ಥೆಗಳುಟೆಲಿಕಾಂ ಹಾಗೂ ಇಂಟರ್​ನೆಟ್​​ ಸರ್ವೀಸ್ ಪೂರೈಕೆದಾರರ ಓಡಾಟಕ್ಕೆ ಅವಕಾಶಐಟಿ-ಬಿಟಿ ಸಿಬ್ಬಂದಿ ನೌಕರರು ವರ್ಕ್ ಫ್ರಂ ಹೋಂ ಕೆಲಸ ಮಾಡಬೇಕುರೋಗಿಗಳು, ಅವರ ಕುಟುಂಬಸ್ಥರು ಹಾಗೂ ವ್ಯಾಕ್ಸಿನೇಷನ್ ಹಾಕಿಸಿಕೊಳ್ಳುವವರಿಗೆ ಸಂಬಂಧಪಟ್ಟ ಪ್ರೂಫ್ ತೋರಿಸಿ ಓಡಾಟಕ್ಕೆ ಅವಕಾಶ ನೀಡಲಾಗಿದೆ.

ಅದೇ ರೀತಿ ಅಗತ್ಯ ವಸ್ತುಗಳು, ತರಕಾರಿ-ಮಾಂಸ ಮಾರಾಟಕ್ಕೆ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ, 2 ಗಂಟೆಯವರೆಗೆ ಅವಕಾಶ ಮದ್ಯದಂಗಡಿಗಳು ಕೂಡ ಎರಡು ಗಂಟೆಯವರೆಗೆ ತೆರೆದಿರಲಿವೆಹೋಟೆಲ್, ರೆಸ್ಟೋರೆಂಟ್​ಗಳಲ್ಲಿ ಪಾರ್ಸೆಲ್​ಗೆ ಅವಕಾಶರೈಲು-ವಿಮಾನ ಸಂಚಾರ ಇರಲಿದೆ.

ರಸ್ತೆ ಮಾರ್ಗದ ಮೂಲಕ ಅಂತರ್ ರಾಜ್ಯ, ಅಂತರ್ ಜಿಲ್ಲೆಗಳ ಅಗತ್ಯ ಓಡಾಟಕ್ಕೆ ಅವಕಾಶಮೊದಲೇ ಅನುಮತಿ ಪಡೆದ ಮದುವೆಗಳು 40 ಜನರ ಸಮ್ಮುಖದಲ್ಲಿ ಮನೆಗಳಲ್ಲಿ ನಡೆಯಲು ಯಾವುದೇ ನಿಬಂಧನೆ ಇಲ್ಲ.

ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಐದು ಜನಕ್ಕೆ ಅವಕಾಶ.ಈ ಕಾರಣಗಳನ್ನು ಹೊರತುಪಡಿಸಿ‌ ಅನಗತ್ಯ ಓಡಾಟ ನಡೆಸಿದರೆ ಶಿಸ್ತುಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...