ಮಂಗಳೂರು: ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಅನಾವಶ್ಯಕವಾಗಿ ಹೊರಗೆ ಬಂದವರಿಗೆ ದಂಡ ಹಾಕುವ ಮೂಲಕ ಬಿಸಿ ಮುಟ್ಟಿಸಿದ್ದಾರೆ.
ಜಿಲ್ಲೆಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅನಾವಶ್ಯಕವಾಗಿ ಜನರು ಹೊರಬರಬೇಡಿ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಮನವಿ ಮಾಡಿದ್ದರು. ಆದರೆ ಕೆಲವರು ಎಂದಿನಂತೆ ನಗರದಲ್ಲಿ ಅನಾವಶ್ಯಕವಾಗಿ ಸುತ್ತಾಡುತ್ತಿದ್ದಾರೆ ಎಂದು ಪೊಲೀಸರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕರ್ಫ್ಯೂ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯು ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಅಲ್ಲಲ್ಲಿ ನಾಕಾಬಂಧಿ ಹಾಕುವ ಮೂಲಕ ಜನರ ಓಡಾಟಕ್ಕೆ ಬ್ರೇಕ್ ಹಾಕುತ್ತಿದ್ದಾರೆ.
ನಿನ್ನೆ ಸಂಜೆ 7ರಿಂದ ಪ್ರಾರಂಭವಾದ ವೀಕೆಂಡ್ ಕರ್ಫ್ಯೂ ಸೋಮವಾರ ಬೆಳಗ್ಗೆ 7ರವೆಗೆ ಇರಲಿದೆ. ಈ ವೇಳೆ ಅಗತ್ಯ ಸೇವೆಗಳಿಗಷ್ಟೇ ಅವಕಾಶ ನೀಡಲಾಗಿದೆ.