Wednesday, December 1, 2021

ವಾರಾಂತ್ಯ ಕರ್ಫ್ಯೂ ಹಿನ್ನೆಲೆ: ಮಂಗಳೂರು ವಿವಿ ಪರೀಕ್ಷೆಗಳ ಮುಂದೂಡಿಕೆ

ಮಂಗಳೂರು: ರಾಜ್ಯ ಸರ್ಕಾರ ಗಡಿ ಜಿಲ್ಲೆಗಳಲ್ಲಿ ಕೊವಿಡ್‌- 19 ನಿಯಂತ್ರಣಕ್ಕಾಗಿ ಜಾರಿಗೆ ತಂದಿರುವ ವಾರಾಂತ್ಯ ಕರ್ಫ್ಯೂ ನಿಂದ ಸಾರ್ವಜನಿಕ ಸಾರಿಗೆಯಲ್ಲಿ ವ್ಯತ್ಯಯವಾಗಿರುವ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಆಗಸ್ಟ್‌ 14 ಮತ್ತು ಆಗಸ್ಟ್‌ 28 ರ ಶನಿವಾರಗಳಂದು ನಿಗದಿಪಡಿಸಿದ್ದ ಸ್ನಾತಕ/ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಪರೀಕ್ಷೆಗಳ ದಿನಾಂಕಗಳನ್ನು ಮರುನಿಗದಿಪಡಿಸಿ, ಪರೀಷ್ಕೃತ ಪರೀಕ್ಷಾ ವೇಳಾಪಟ್ಟಿಯನ್ನು ಇ-ಮೇಲ್‌ ಮೂಲಕ ಕಳಿಸಿಕೊಡಲಾಗುವುದು ಮತ್ತು ವಿಶ್ವವಿದ್ಯಾನಿಲಯದ ಅಧಿಕೃತ ಜಾಲತಾಣ (www.mangaloreuniversity.co.in) ದಲ್ಲಿ ಇಂದು (ಗುರುವಾರ) ಪ್ರಕಟಿಸಲಾಗುವುದು ಎಂದು, ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಪಿ ಎಲ್‌ ಧರ್ಮ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...