Connect with us

    DAKSHINA KANNADA

    ಕುಕ್ಕೆಗೆ ಪ್ರವೇಶ ನಿಷೇಧ-ಹೊರಗಿನಿಂದಲೇ ಕೈ ಮುಗಿದು ತೆರಳುತ್ತಿರುವ ಭಕ್ತರು

    Published

    on

    ಪುತ್ತೂರು: ರಾಜ್ಯದಲ್ಲಿ ಕೊರೊನಾ ಹಿನ್ನೆಲೆ ವೀಕೆಂಡ್ ಕರ್ಫ್ಯೂ ಘೋಷಿಸಲಾಗಿದೆ. ಅಂಗಡಿ ಮುಂಗಟ್ಟು ಬಂದ್‌ ಮಾಡಲಾಗಿದ್ದು, ಧಾರ್ಮಿಕ ಕ್ಷೇತ್ರಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ದ.ಕ ಜಿಲ್ಲೆಯ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಭಕ್ತರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.


    ಕುಕ್ಕೆಯಲ್ಲಿ ನಿಷೇಧವಿದ್ದರೂ ಕ್ಷೇತ್ರದ ಕಡೆಗೆ ಆಗಮಿಸುತ್ತಿರುವ ಅನ್ಯ ರಾಜ್ಯದ ಭಕ್ತರು ಆಗಮಿಸುತ್ತಿದ್ದಾರೆ. ದೇವರ ದರ್ಶನಕ್ಕೆ ಇಂದು ಮತ್ತು ನಾಳೆ ಅವಕಾಶವಿಲ್ಲದ ಹಿನ್ನೆಲೆ ಹೊರಗಿನಿಂದಲೇ ದೇವರಿಗೆ ಪ್ರಾರ್ಥಿಸಿ ತೆರಳುತ್ತಿರುವ ದೃಶ್ಯ ಇಂದು ಕ್ಷೇತ್ರದಲ್ಲಿ ಕಂಡುಬಂದಿತು.

    DAKSHINA KANNADA

    ಅ*ನ್ಯಕೋಮಿನ ಯುವಕನಿಂದ ವಿದ್ಯಾರ್ಥಿನಿಗೆ ಕಿ*ರುಕುಳ; ದೂರು ದಾಖಲಿಸಲು ಪೊಲೀಸರ ಹಿಂದೇಟು !!

    Published

    on

    ಕುಂಬಳೆ: ಬೆಳಗಿನ ಜಾವ ಮಂಗಳೂರಿಗೆ ವಿದ್ಯಾಭ್ಯಾಸಕ್ಕಾಗಿ ತೆರಳುವ ಹಿಂದು ವಿಧ್ಯಾರ್ಥಿನಿಗೆ ಅ*ನ್ಯಕೋಮಿನ ಯುವಕನೊಬ್ಬ ಕಿ*ರುಕುಳ ನೀಡಲು ಪ್ರಯತ್ನಿಸಿದ ವೇಳೆ ಆತನನಿಂದ ತಪ್ಪಿಸಿಕೊಂಡು ಯುವತಿ ತನ್ನ ಮನೆಯವರು ಹಾಗು ಹಿಂದು ಐಕ್ಯವೇದಿ ನೇತಾರರ ಜೊತೆಗೆ ಹೋಗಿ ಕುಂಬಳೆ ಪೊಲೀಸರಿಗೆ ದೂರು ನೀಡಿದ ಘಟನೆ ಇತ್ತೀಚೆಗೆ ನಡೆದಿದೆ.

    ಕಿ*ರುಕುಳ ನೀಡಲು ಯತ್ನಿಸಿದ ಯುವಕ ತಂಗಲ್ ವೀಡ್ ಪರಿಸರದ ಕುಂಬಳೆ ಸಿ. ಎಚ್. ಸಿ ರೋಡ್ ನಿವಾಸಿ ನೌಫಲ್ ಎಂಬಾತನೆಂದು ತಿಳಿದುಬಂದಿದೆ.

    ಈತ ಪ್ರಸ್ತುತ ತಂಗಳಬೀಡು ಪರಿಸರವಾಸಿ ಎಂದು ಗುರುತಿಸಲಾಗಿದ್ದು, ಈ ವಿಚಾರದ ಬಗ್ಗೆ ಕುಂಬಳೆ ಪೊಲೀಸರಿಗೆ ದೂರು ನೀಡಿದ ವೇಳೆ ಪೊಲೀಸರು ಪ್ರಕರಣ ದಾಖಲಿಸದೆ ನೌಫಾಲ್ ನನ್ನು ಕೇಸಿನಿಂದ ಪಾರು ಮಾಡಲು ಪ್ರಯತ್ನಿಸಿದ್ದರು ಎಂಬ ಆರೋಪ ಕೂಡ ಕೇಳಿಬಂದಿತ್ತು. ಈ ವಿಷಯವನ್ನು ಅರಿತ ಹಿಂದು ಐಕ್ಯ ವೇದಿ ನೇತಾರರು ಮತ್ತು ಮನೆಯವರು ಈ ವಿಚಾರವನ್ನು ಕಾಸರಗೋಡು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯ ಗಮನಕ್ಕೆ ತಂದರು. ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ಆದೇಶದಂತೆ ಕುಂಬಳೆ ಪೊಲೀಸರು ದೂರು ದಾಖಲಿಸಿ ಕೊಂಡರು.

    *ಒಂದೊಂದು ಮತದವರಿಗೆ ಒಂದೊಂದು ಕಾನೂನು ಎಂದು ಹೇಳಲು ಕೇರಳ ರಾಜ್ಯವೆಂಬುದು ಒಂದು ಪ್ರತ್ಯೇಕ ಮತ ರಾಜ್ಯವಲ್ಲ* ಎಂದು ಹಿಂದು ಐಕ್ಯ ವೇದಿ ಕುಂಬಳೆ ಪಂಚಾಯತ್ ಸಮಿತಿಯು ಅಭಿಪ್ರಾಯವನ್ನು ಹಿಂದೂ ಐಕ್ಯವೇದಿ ಪತ್ರಿಕಾ ಪ್ರಕಟಣೆಯಲ್ಲಿ ವ್ಯಕ್ತಪಡಿಸಿದೆ. ಇಂತಹ ಕುಕೃತ್ಯಗಳನ್ನು ಮಾಡುವವರಿಗೆ ತಕ್ಕ ಶಾಸ್ತಿಯಾಗಬೇಕೆಂದು ಹಿಂದೂಪರ ಸಂಘಟನೆಗಳು ಆಗ್ರಹಿಸಿವೆ.

    Continue Reading

    BELTHANGADY

    ಧರ್ಮವನ್ನು ಅಂಗಿಯಂತೆ ಧರಿಸಿ ಕಳಚಬೇಡಿ : ವೀರೇಂದ್ರ ಹೆಗ್ಗಡೆ

    Published

    on

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ ಸಂಭ್ರಮ ಜರುಗುತ್ತಿದ್ದು, ಲಕ್ಷಾಂತರ ಮಂದಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಶುಕ್ರವಾರ ಕ್ಷೇತ್ರದ ಅಮೃತವರ್ಷಿಣಿ ಸಭಾಭವನದಲ್ಲಿ 92ನೇ ವರ್ಷದ ಸರ್ವ ಧರ್ಮ ಸಮ್ಮೇಳನ ನಡೆಯಿತು. ಉದ್ಘಾಟನೆಯನ್ನು ನೆರವೇರಿಸಲು ಆಗಮಿಸಿದ್ದ ರಾಜ್ಯ ಗೃಹ ಸಚಿವ ಡಾ ಜಿ ಪರಮೇಶ್ವರ್, ಅಧ್ಯಕ್ಷತೆಯನ್ನು ವಹಿಸಿದ್ದ ರಾಜರಾಜೇಶ್ವರಿ  ನಗರದ ಶ್ರೀ ಕೈಲಾಸ ಆಶ್ರಮದ ಶ್ರೀ ಜಯೇಂದ್ರ ಪುರಿ ಸ್ವಾಮೀಜಿ ಮತ್ತು ಕ್ಷೇತ್ರದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆ ಸಹಿತ ಗಣ್ಯರನ್ನು ಮೆರವಣಿಗೆಯಲ್ಲಿ ಕರೆತರಲಾಯಿತು. ರಾಜ್ಯ ಗೃಹ ಸಚಿವ ಡಾ ಜಿ ಪರಮೇಶ್ವರ್‌ ದೀಪ ಬೆಳಗಿ ಉದ್ಘಾಟಿಸಿದರು. ಧರ್ಮಸ್ಥಳ ಮಂಜೂಷಾ ವಸ್ತು ಸಂಗ್ರಹಾಲಯಕ್ಕೆ ವಿಶ್ವಮಾನ್ಯತೆ ದೊರಕಿದ ಹಿನ್ನೆಲೆಯಲ್ಲಿ ಡಾ ವೀರೇಂದ್ರ ಹೆಗ್ಗಡೆ ಅವರಿಗೆ ಇಂಡಿಯಾ ಬುಕ್‌ ಆಫ್ ರೆಕಾರ್ಡ್‌ ಪ್ರಮಾಣ ಪತ್ರ ಪ್ರದಾನ ಮಾಡಲಾಯಿತು.

    ಡಾ ವೀರೇಂದ್ರ ಹೆಗ್ಗಡೆ ಅವರು ಸ್ವಾಗತಿಸಿದರು. ತನ್ನ ಅಜ್ಜ ಮಂಜಯ್ಯ ಹೆಗ್ಗಡೆ ಅವರು ಆರಂಭಿಸಿದ ಈ ಸಮ್ಮೇಳನವನ್ನು ತಂದೆ ರತ್ನವರ್ಮ ಹೆಗ್ಗಡೆ ಮುನ್ನಡೆಸಿದ್ದು, ಇದೀಗ 91 ವರ್ಷಗಳು ಸಂದು ಹೋದವು ಎಂದರು. ಈ ವೇದಿಕೆಯಲ್ಲಿ ಹಲವು ಮಂದಿ ಹಿರಿಯ ವಿದ್ವಾಂಸರು, ಮಾನವೀಯ, ಆದರ್ಶದ ಹಾದಿಯನ್ನು ನಾವು ಮುನ್ನಡೆಯಬೇಕೆಂದು ಹಿತವಚನ ನಿಡಿದರು. ಜನವರಿ 1ರಿಂದ ಉಜಿರೆ ಎಸ್‌ಡಿಎಂ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೇವೆ ಉಚಿತವಾಗಿ ಸಿಗಲಿದೆ. ವರ್ಷಕ್ಕೆ 10,000 ಬಡ ರೋಗಿಗಳಿಗೆ ನೆರವಾಗಲಿದೆ ಎಂದರು.

     

    ಗೃಹ ಮಂತ್ರಿ ಜಿ ಪರಮೇಶ್ವರ, ಸ್ವಾಮೀಜಿ ಮತ್ತು ಅತಿಥಿಗಳಿಗೆ ಹೆಗ್ಗಡೆ ಗೌರವಾಭಿನಂದನೆ ಸಲ್ಲಿಸಿದರು. ಡಾ ಪರಮೇಶ್ವರ ಮಾತನಾಡಿ, ಸರಕಾರಗಳು ಮಾಡದಿರುವ ಕೆಲಸಗಳನ್ನು ಇಂದು ಧರ್ಮಾಧಿಕಾರಿ ವಿರೇಂದ್ರ ಹೆಗ್ಡೆ ಮಾಡಿದ್ದಾರೆ. ಸರ್ವಧರ್ಮದ ಸಂದೇಶ ಇಂದಿನ ದಿನ ಬಹಳ ಅಗತ್ಯವಿದೆ. ದೇಶಕ್ಕೆ ಸಂವಿಧಾನ ಬರುವ ಮುಂಚೆಯೇ ಧರ್ಮಸ್ಥಳದಲ್ಲಿ ಸರ್ವಧರ್ಮ ಸಂದೇಶ ಸಾರುವ ಕಾರ್ಯ ನಡೆಯುತ್ತಿದೆ ಎಂದರು.

    ಶ್ರೀ ಕೈಲಾಸ ಆಶ್ರಮದ ಶ್ರೀ ಜಯೇಂದ್ರ ಪುರಿ ಸ್ವಾಮೀಜಿ ಆಶೀರ್ವಚನ ನೀಡಿ, ಇಡೀ ಜಗತ್ತೇ ಪರಮೇಶ್ವರ ಮಯ. ಈ ಜ್ಞಾನ ಇರುವವರು ಸಮಾನತೆ ಅನುಸರಿಸುತ್ತಾರೆ. ಇಲ್ಲದದವರು ದ್ವೇಷ ಸಾಧಿಸುತ್ತಾರೆ. ಸಹಬಾಳ್ವೆ ದೂರ ಮಾಡುವ ಯಾವುದಾದರೂ ಮತವಿದ್ದರೆ ಅದಕ್ಕೆ ಭೂಮಿಯಲ್ಲಿರುವಅಧಿಕಾರವೇ ಇಲ್ಲ. ಅಂತಹ ಮತವನ್ನು ಪರಿಷ್ಕರಿಸಬೇಕು ಎಂದರು.

    ಸಂಶೋಧಕ ಡಾ ಜಿ ಬಿ ಹರೀಶ್‌, ಮಾಜಿ ಪ್ರಾಂಶುಪಾಲ ಡಾ ಜೋಸೆಫ್‌ ಎನ್ ಎಂ, ವಿಜಯಪುರದ ಮೆಹತಾಬಾ ಇಬ್ರಾಹಿಂ ಸಾಬ ಕಾಗವಾಡ ಉಪನ್ಯಾಸ ನೀಡಿದರು. ಡಿ ಸುರೇಂದ್ರ ಕುಮಾರ್, ಡಿ. ಹರ್ಷೇoದ್ರ ಕುಮಾರ್, ಹೇಮಾವತಿ ವೀ. ಹೆಗ್ಗಡೆ, ಶ್ರದ್ದಾ ಅಮಿತ್, ಸುಪ್ರಿಯಾ ಹರ್ಷೇoದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಸುನೀಲ್ ಪಂಡಿತ್ ಮೊದಲಾದವರಿದ್ದರು. ರುಡ್ ಸೆಟ್ ನಿರ್ದೇಶಕ ಅಜಯ್ ವಂದಿಸಿದರು. ಪ್ರಾಧ್ಯಾಪಕ ಡಾ ಶ್ರೀಧರ್ ಭಟ್ ಕಾರ್ಯಕ್ರಮ ನಿರೂಪಿಸಿದರು.

    Continue Reading

    DAKSHINA KANNADA

    ಅಕ್ರಮ ಮರಳುಗಾರಿಕೆ ತಡೆ; ಕೇಸು ಹಾಕುವಂತೆ ಗ್ರಾಮಸ್ಥರಿಂದ ಒತ್ತಾಯ

    Published

    on

    ಕಡಬ: ಚಾರ್ವಾಕ ಗ್ರಾಮದ ಕುಮಾರಧಾರ ನದಿಯಲ್ಲಿ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರು ಸಿಡಿದೆದ್ದಿರುವ ಘಟನೆ ಕಡಬ ತಾಲೂಕಿನಲ್ಲಿ ನಡೆದಿದೆ.

    ಇದೀಗ ಬೋಟ್ ಕಟ್ಟಿ ಹಾಕಿದವರ ವಿರುದ್ದ ಕೇಸು ದಾಖಲಿಸುವ ಬಗ್ಗೆ ಬಂದ ಸುದ್ದಿಯ ಹಿನ್ನೆಲೆ ಶುಕ್ರವಾರ (ನ.29) ಸಂಜೆ ಭಾರೀ ಸಂಖ್ಯೆಯಲ್ಲಿ ಗ್ರಾಮಸ್ಥರು ಕಡಬ ಠಾಣೆಗೆ  ಆಗಮಿಸಿದ್ದಾರೆ.

    ಚಾರ್ವಾಕ ಕುಂಬ್ಲಾಡಿ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖರು ಊರವರು ಸೇರಿ ಚಾರ್ವಾಕ ಗ್ರಾಮದ ಭಾಗದಲ್ಲಿ ಮರಳುಗಾರಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದಲ್ಲದೆ, ನಿರ್ಣಯವನ್ನೂ ಮಾಡಿದ್ದರು.ಮರಳುಗಾರಿಕೆಯಿಂದ ದೈವಸಾನಿಧ್ಯ ನಾಶ ಮತ್ತು ಪ್ರಕೃತಿ ನಾಶವಾದ ಕಾರಣ ಊರವರು ಮರಳುಗಾರಿಕೆಗೆ ವಿರೋಧ ವ್ಯಕ್ತಪಡಿಸಿ ಸಂಬಂಧಪಟ್ಟ ಕಾಣಿಯೂರು ಗ್ರಾಮ ಪಂಚಾಯತಿಗೂ ಮನವಿ ಸಲ್ಲಿಸಿ ಇಲಾಖೆಗಳಿಗೆಲ್ಲ ಮರಳುಗಾರಿಕೆ ನಡೆಸದಂತೆ ಪತ್ರ ಬರೆದಿದ್ದಾರೆ.

    ಎರಡು ದಿನದ ಹಿಂದೆ ಚಾರ್ವಾಕ ಭಾಗದಲ್ಲಿ ಮರಳುಗಾರಿಕೆಗೆ ಬಂದ ತಂಡಕ್ಕೆ ಊರವರು ಪ್ರತಿರೋಧ ವ್ಯಕ್ತಪಡಿಸಿದ್ದರು. ನ.29ರಂದು ಮತ್ತೆ ಬೋಟ್ ಮೂಲಕ ತಂಡ ಬಂದಾಗ ಬೋಟನ್ನು ಹಿಡಿದು ಚಾರ್ವಾಕ ಭಾಗದಲ್ಲಿ ಕಟ್ಟಿ ಹಾಕಲಾಗಿತ್ತು. ಬೋಟ್ ನಲ್ಲಿದ್ದ ಮರಳು ಕಾರ್ಮಿಕರು ಈಜಿ ಆಚೆ ಬದಿಗೆ ಪರಾರಿಯಾಗಿದ್ದರು. ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದರೂ ಕಡಬದ ತಹಶೀಲ್ದಾರ್ ಆಗಲಿ, ಕಂದಾಯ ನಿರೀಕ್ಷಕರೀಗಲೀ,ಕಡಬದ ಪೊಲೀಸರಾಗಲಿ ಯಾವುದೇ ಕ್ರಮ ಕೈಗೊಳ್ಳದೆ ಮೌನಕ್ಕೆ ಶರಣಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ .

    Continue Reading

    LATEST NEWS

    Trending