Wednesday, October 5, 2022

ದ.ಕ ಜಿಲ್ಲೆಯಲ್ಲಿ ಇಂದು ರಾತ್ರಿಯಿಂದ ವೀಕೆಂಡ್ ಕರ್ಫ್ಯೂ: ಅಗತ್ಯ ವಸ್ತು ಹೊರತುಪಡಿಸಿ ಎಲ್ಲವೂ ಬಂದ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ಇಂದು ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರಲಿದೆ. ಆದರೆ ಬಸ್ಸು ಸಂಚಾರ ಓಡಾಡವಿರಲಿದೆ, ಆತಂಕ ಬೇಡ ಎಂದು ಕೆಎಸ್ಸಾರ್ಟಿಸಿ ಮಾಲಕ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ರಾತ್ರಿಯಿಂದಲೇ ಎಲ್ಲೆಡೆ ಪೊಲೀಸರು ಬಂದೋಬಸ್ತ್‌ ಏರ್ಪಡಿಸಲಿದ್ದಾರೆ. ಇನ್ನು ವಾರಾಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಬಸ್ಸುಗಳು ಎಂದಿನಂತೆ ಓಡಾಡಲಿದ್ದು, ಜನತೆ ಆತಂಕಗೊಳ್ಳಬೇಕಾಗಿಲ್ಲ. ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಸಮಸ್ಯೆಯಾಗದಂತೆ ಕ್ರಮ ವಹಿಸಲಾಗುವುದು ಎಂದು ಖಾಸಗಿ ಬಸ್ಸು ಮಾಲಕರು ಮತ್ತು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

ವಾರಾಂತ್ಯದ ಸಂದರ್ಭದಲ್ಲಿ ಜನತೆ ಕಡಿಮೆ ಇರುವ ಕಾರಣದಿಂದಾಗಿ ಎಲ್ಲಾ ಬಸ್ಸುಗಳನ್ನು ಓಡಿಸುವುದರಿಂದ ಮಾಲಕರಿಗೆ ನಷ್ಟ ಉಂಟಾಗುತ್ತಿದೆ.

ಆದರೆ ಜಿಲ್ಲಾಡಳಿತದ ಆದೇಶಕ್ಕೆ ಆನುಗುಣವಾಗಿ ನಾವು ಬಸ್ಸುಗಳನ್ನು ಸಂಚರಿಸಲು ಅವಕಾಶ ಮಾಡಿಕೊಡಲಿದ್ದೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘದ ಅಧ್ಯಕ್ಷ ಜಯಶೀಲ ಅಡ್ಯಂತಾಯ ಹೇಳಿದ್ದಾರೆ.

ನಮ್ಮ ಕುಡ್ಲ ವಾಹಿನಿಗೆ ಪ್ರತಿಕ್ರಿಯೆ ನೀಡಿದ ಅವರು ಕರ್ಫ್ಯೂ ಇರುವ ಕಾರಣ ಜನತೆಗೆ ಸಮಸ್ಯೆ ಉಂಟಾಗದಂತೆ ನಾವು ಎಲ್ಲಾ ಕ್ರಮ ಕೈಗೊಳ್ಳುತ್ತೇವೆ.

ಆದರೆ ಜನತೆಗೆ ಕೊನೆ ಕ್ಷಣದಲ್ಲಾಗುವ ಸಮಸ್ಯೆಯಿಂದಾಗಿ ಬಸ್ಸು ಮಾಲಕರು ನಷ್ಟವನ್ನು ಅನುಭವಿಸಿದ್ದಾರೆ. ಆದರೂ ಜನರ ಸ್ಪಂದನೆ ನೋಡಿಕೊಂಡು ಬಸ್ಸು ಓಡಿಸುತ್ತೇವೆ.

ಸರಕಾರಿ ಬಸ್ಸುಗಳು ಕೂಡಾ ನಗರದಲ್ಲಿ ಎಂದಿನಂತೆ ಓಡಾಡಲಿವೆ. ವೀಕೆಂಡ್‌ನಲ್ಲಿ ಜನತೆ ಸ್ಪಂದನೆ ನೋಡಿಕೊಂಡು ಬಸ್ಸು ಓಡಿಸಲಾಗುವುದು.

ಎಲ್ಲಾ ಕಡೆಗಳಿಗೂ ವಾಹನಗಳ ಓಡಾಟವಿರಲಿದೆ. ಜನತೆ ಆತಂಕಗೊಳ್ಳಬೇಕಾದ ಅಗತ್ಯ ಇಲ್ಲ ಎಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಎನ್ ಎಸ್ ಅರುಣ್ ಹೇಳಿದ್ದಾರೆ.

ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದೆಲ್ಲಾ ಸೇವೆಗಳನ್ನು ಬಂದ್ ಮಾಡಲಾಗುತ್ತದೆ.

LEAVE A REPLY

Please enter your comment!
Please enter your name here

Hot Topics

Breaking: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನ..!

ನವದೆಹಲಿ: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ (Cheetah Helicopter) ಪತನಗೊಂಡು ಪೈಲಟ್ (Pilot) ಹುತಾತ್ಮರಾಗಿರುವ ಘಟನೆ ಅರುಣಾಚಲ ಪ್ರದೇಶದಲ್ಲಿ (Arunachal Pradesh) ನಡೆದಿದೆ.ತವಾಂಗ್ ಬಳಿಯ ಪ್ರದೇಶದಲ್ಲಿ ಹಾರಾಟ ನಡೆಸುತ್ತಿದ್ದ ಸೇನಾ ವಾಯುಯಾನ ಚೀತಾ...

ಎಲ್‌ಇಡಿ ಟಿ.ವಿ ಬ್ಲಾಸ್ಟ್‌..! : ಬಾಲಕ ಸಾವು-ಮನೆ ಗೋಡೆ ಕುಸಿತ

ಲಕ್ನೋ: ಎಲ್‌ಇಡಿ ಟಿ.ವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್ ಐಡಿ ಟಿವಿ...

ದೇವಳದ ಅಂಗಳದಲ್ಲಿ ಐಟಂ ಸಾಂಗ್‍ಗೆ ಡ್ಯಾನ್ಸ್ – ಯುವತಿ ವಿರುದ್ಧ FIR

ಭೋಪಾಲ್: ಯುವತಿಯೊಬ್ಬಳು ದೇವಸ್ಥಾನವೊಂದರ ಆವರದಲ್ಲಿ ಐಟಂ ಸಾಂಗ್‍ವೊಂದಕ್ಕೆ ಡ್ಯಾನ್ಸ್ ಮಾಡಿ ಕೆಂಗಣ್ದಣಿಗೆ ಗುರಿಯಾದ ಘಟನೆ  ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ನಡೆದಿದೆ.ಇನ್‍ಸ್ಟಾಗ್ರಾಮ್‍ನಲ್ಲಿ 4 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಹೋಮದಿರುವ ನೇಹಾ ಎಂಬಾಕೆ ದೇವಸ್ಥಾನದಲ್ಲಿ ಮುನ್ನಿ...