Connect with us

LATEST NEWS

ಪ್ರಗತಿಪರ ಕೃಷಿಕ ಮೂಡುಬಿದಿರೆಯ ಸೋನ್ಸ್ ಫಾರ್ಮ್ ನ ಡಾ. ಎಲ್. ಸಿ. ಸೋನ್ಸ್ ಇನ್ನಿಲ್ಲ

Published

on

ಮೂಡುಬಿದಿರೆ ಎಪ್ರಿಲ್ 05: ಪ್ರಗತಿಪರ ಕೃಷಿ ಮೂಡುಬಿದಿರೆಯ ಸೋನ್ಸ್ ಫಾರ್ಮ್ ನ ಡಾ. ಎಲ್. ಸಿ. ಸೋನ್ಸ್ ಅವರು ಇಂದು ನಿಧನರಾಗಿದ್ದಾರೆ.


1934ರ ಎಪ್ರಿಲ್ 4ರಂದು ಜನಿಸಿದ ಲಿವಿಂಗ್ ಸ್ಟನ್ ಚಂದ್ರಮೋಹನ ಸೋನ್ಸ್ ಮಂಗಳವಾರ 89 ವರ್ಷ ತುಂಬಿ 90ಕ್ಕೆ ಕಾಲಿರಿಸಿದ್ದರು. ಮೂಡುಬಿದಿರೆ ಪಡುಮಾರ್ನಾಡು ಗ್ರಾಮದ ಬನ್ನಡ್ಕದಲ್ಲಿ ಕೃಷಿ ಕುಟುಂಬದ ಕುಡಿ ಇವರು. ತನ್ನ ಜೀವನವನ್ನು ಕೃಷಿಗಾಗಿ ಮುಡಿಪಾಗಿಟ್ಟವರು ಸೋನ್ಸ್. ಸಸ್ಯ ಶಾಸ್ತ್ರದಲ್ಲಿ ಪದವಿ, ಮೊಂಟಾನ ವಿ.ವಿ.ಯಿಂದ ಪಿಎಚ್ ಡಿ. ಪದವಿ ಪಡೆದುಕೊಂಡಿದ್ದರು.

ಕೃಷಿ ಕ್ಷೇತ್ರದಲ್ಲಿ ಅಸಾಮಾನ್ಯ ಸಾಧನೆ ಮಾಡಿರುವ ಸೋನ್ಸ್ ಅನಾನಸು ಕೃಷಿ, ಬಿದಿರಿನ ವಿವಿಧ ಪ್ರಬೇಧ, ದೇಶ-ವಿದೇಶಗಳ ಹಣ್ಣು-ತರಕಾರಿ ಪ್ರಬೇಧಗಳನ್ನು ಮೂಡುಬಿದಿರೆ ಬನ್ನಡ್ಕದ ಮಣ್ಣಿನಲ್ಲಿ ಬೆಳೆಸಿ, ಅದರಿಂದ ಫಸಲು ಹಾಗೂ ಲಾಭಗಳಿಸಿದವರಾಗಿದ್ದಾರೆ. ಜಲ ತಜ್ಞರಾಗಿಯೂ ವಿಶೇಷ ಪರಿಣಿತಿಯನ್ನು ಹೊಂದಿದ್ದರು.

DAKSHINA KANNADA

ಉಳ್ಳಾಲ : ಕಾರು ಡಿ*ಕ್ಕಿ; ಇಹಲೋಕ ಇಹಲೋಕ ತ್ಯಜಿಸಿದ ಬಿಜೆಪಿ ಕಾರ್ಯಕರ್ತ

Published

on

ಉಳ್ಳಾಲ : ಕಾರು ಡಿ*ಕ್ಕಿ ಹೊಡೆದು ಪಾದಚಾರಿ ಬಿಜೆಪಿ ಕಾರ್ಯಕರ್ತ ಮೃ*ತಪಟ್ಟ ಘಟನೆ ರಾ.ಹೆ.66 ರ ಕೋಟೆಕಾರು ಬಳಿಯ ಅಡ್ಕ ಎಂಬಲ್ಲಿ ನಡೆದಿದೆ. ಕೋಟೆಕಾರು ನೆಲ್ಲಿ ಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನಿವಾಸಿ ಶ್ರೀಕಾಂತ್ (46)ಮೃ*ತಪಟ್ಟವರು. ಶ್ರೀಕಾಂತ್ ಆಟೋ ಇಲೆಕ್ಟ್ರೀಷಿಯನ್ ಕೆಲಸ ಮಾಡುತ್ತಿದ್ದರು.

ಶುಕ್ರವಾರ ಮಧ್ಯಾಹ್ನ ಅಡ್ಕದಲ್ಲಿ ಹೆದ್ದಾರಿ ದಾಟುತ್ತಿದ್ದ ವೇಳೆ ಕೇರಳದಿಂದ ಧಾವಿಸುತ್ತಿದ್ದ ಕಾರು ಶ್ರೀಕಾಂತ್ ಗೆ ಡಿ*ಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಶ್ರೀಕಾಂತ್ ರನ್ನು ಅಪಘಾ*ತ ನಡೆಸಿದ ಕಾರು ಚಾಲಕನೇ ಮಂಗಳೂರಿನ‌ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು, ಚಿಕಿತ್ಸೆ ಫಲಕೊಡದೆ ಮೃ*ತಪಟ್ಟಿದ್ದಾರೆ.

ಇದನ್ನೂ ಓದಿ : ಮಂಗಳೂರು : ನಾಳೆಯಿಂದ ರೇಶನಿಂಗ್ ಆರಂಭ; ಎಲ್ಲೆಲ್ಲಿ ನೀರಿಲ್ಲ?

ಮೃ*ತ ಶ್ರೀಕಾಂತ್ ತುಳುನಾಡು ಫ್ರೆಂಡ್ಸ್ ಕೋಟೆಕಾರುವಿನ ಸಕ್ರಿಯ ಸದಸ್ಯರಾಗಿದ್ದು, ಬಿಜೆಪಿಯ ಕಾರ್ಯಕರ್ತರಾಗಿದ್ದರು. ಶ್ರೀಕಾಂತ್ ಅವಿವಾಹಿತರಾಗಿದ್ದು ತಾಯಿ, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ಮಂಗಳೂರು : ನಾಳೆಯಿಂದ ರೇಶನಿಂಗ್ ಆರಂಭ; ಎಲ್ಲೆಲ್ಲಿ ನೀರಿಲ್ಲ?

Published

on

ಮಂಗಳೂರು: ಕರಾವಳಿಗೆ ಬಿರುಬೇಸಿಗೆಯ ಬಿಸಿ ಭಾರೀ ತಟ್ಟಿದ್ದು, ನೀರಿನ ಅಭಾವ ಎದುರಾಗಿದೆ. ಮಂಗಳೂರು ಮಹಾ ನಗರಪಾಲಿಕೆಯ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿದಿದೆ. ಹೀಗಾಗಿ ಮಂಗಳೂರು ನಗರ ಪಾಲಿಕೆ ಆಯುಕ್ತರು ಮೇ 5 ರಿಂದ ನೀರಿನ ರೇಶನಿಂಗ್ ಆರಂಭಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಲಭ್ಯವಿರುವ ನೀರನ್ನು ಮಂಗಳೂರು ನಗರ (ಮಂಗಳೂರು ನಗರ ದಕ್ಷಿಣ) ಮತ್ತು ಸುರತ್ಕಲ್ (ಮಂಗಳೂರು ನಗರ ಉತ್ತರ ಭಾಗಕ್ಕೆ) ಪರ್ಯಾಯ ದಿನಗಳಲ್ಲಿ ನೀರು ಬಿಡಲು ಕ್ರಮ ವಹಿಸಲಾಗಿದೆ.

ಬೆಂದೂರು ಸ್ಥಾವರದಿಂದ ನೀರು ಪೂರೈಕೆ :

ಮೇ 5ರಿಂದ ಬೆಸ ದಿನಗಳಲ್ಲಿ ಬೆಂದೂರು ಸ್ಥಾವರದಿಂದ ಕೋರ್ಟ್ ಪ್ರದೇಶ, ಕಾರ್‌ಸ್ಟ್ರೀಟ್, ಬಾವುಟಗುಡ್ಡ, ಆಕಾಶವಾಣಿ, ಪದವು, ಗೋರಿಗುಡ್ಡ, ಸೂಟರ್‌ಪೇಟೆ, ಶಿವಬಾಗ್, ಕದ್ರಿ, ವಾಸ್‌ಲೇನ್, ಬೆಂದೂರು, ಲೋವರ್ ಬೆಂದೂರು, ಕುದ್ರೋಳಿ, ಕೋಡಿಯಾಲ್ ಬೈಲ್ ಮತ್ತು ಪಡೀಲ್ ಸ್ಥಾವರದಿಂದ ಮಂಗಳಾದೇವಿ, ಅತ್ತಾವರ, ಬಾಬುಗುಡ್ಡ, ವೆಲೆನ್ಸಿಯಾ, ಜಪ್ಪಿನಮೊಗರು, ಬಿಕರ್ನಕಟ್ಟೆ, ಉಲ್ಲಾಸ್‌ನಗರ, ಬಜಾಲ್, ತಿರುವೈಲು, ವಾಮಂಜೂರು ಹಾಗೂ ಶಕ್ತಿನಗ ಟ್ಯಾಂಕ್‌ನಿಂದ ಕುಂಜತ್ತಬೈಲ್, ಮೊಗ್ರೊಡಿ, ಶಕ್ತಿನಗರ, ಸಂಜಯನಗರ, ಪ್ರೀತಿನಗರ, ಮಂಜಡ್ಕ, ರಾಜೀವ ನಗರ, ಬೋಂದೆಲ್, ಗಾಂಧಿ ನಗರ, ಶಾಂತಿನಗರ, ಕಾವೂರು ಮತ್ತು ತುಂಬೆ – ಪಣಂಬೂರು ನೇರ ಲೈನ್‌ನಿಂದ ಕಂಕನಾಡಿ, ನಾಗುರಿ, ಪಂಪ್‌ವೆಲ್, ಬಳ್ಳೂರುಗುಡ್ಡೆ, ಪಡೀಲ್‌ಗೆ ನೀರು ಪೂರೈಕೆ ಮಾಡಲಾಗುವುದು.

ಪಣಂಬೂರು ಸ್ಥಾವರದಿಂದ ನೀರು ಪೂರೈಕೆ :

ಮೇ 6 ರಿಂದ ಪಣಂಬೂರು ಸ್ಥಾವರದಿಂದ ಸುರತ್ಕಲ್, ಎನ್‌ಐಟಿಕೆ, ಮುಕ್ಕ, ಹೊಸಬೆಟ್ಟು, ಕುಳಾಯಿ, ಜನತಾ ಕಾಲನಿ, ಬೈಕಂಪಾಡಿ, ಪಣಂಬೂರು, ಮೀನಕಳಿಯ ಮತ್ತು ಪಡೀಲ್ ಸ್ಥಾವರದಿಂದ ಬಜಾಲ್, ಜಲ್ಲಿಗುಡ್ಡ, ಮುಗೇರ್, ಎಕ್ಕೂರು, ಸದಾಶಿವ ನಗರ, ಅಳಪೆ, ಮೇಘ ನಗರ, ಮಂಜಳಿಕೆ, ಕಂಕನಾಡಿ ರೈಲ್ವೆ ಸ್ಟೇಷನ್, ಕುಡುಪು, ಪಾಂಡೇಶ್ವರ, ಸ್ಟೇಟ್‌ ಬ್ಯಾಂಕ್, ಗೂಡ್ಸ್‌ಶೆಡ್, ಬಂದರ್ ದಕ್ಕೆ,ಕಣ್ಣೂರು, ನಿಡ್ಡೆಲ್, ಶಿವನಗರ. ಕೊಡಕ್ಕಲ್, ನೂಜಿ, ಸರಿಪಳ್ಳ, ಉಲ್ಲಾಸ್ ನಗರ, ವೀರನಗದ ಹಾಗೂ ಶಕ್ತಿನಗರ ಟ್ಯಾಂಕ್‌ನಿಂದ ಕಂಡೆಟ್ಟು, ಕುಲಶೇಖರ, ಮರೋಳಿ, ಕಕ್ಕೆಬೆಟ್ಟು, ಸಿಲ್ವರ್ ಗೇಟ್, ಕೊಂಗೂರು ಮಠ, ಪ್ರಶಾಂತ್ ನಗರ ಮತ್ತು ತುಂಬೆ-ಪಣಂಬೂರು ನೇರ ಲೈನ್‌ನಿಂದ ಮುಡಾ ಪಂಪ್ ಹೌಸ್, ಕೊಟ್ಟಾರ ಚೌಕಿ ಪಂಪ್‌ಹೌಸ್, ಕೂಳೂರು ಪಂಪ್‌ಹೌಸ್, ಕಾಪಿಕ್ಕಾಡ್, ದಡ್ಡಲ್‌ಕಾಡ್, ಬಂಗ್ರ ಕೂಳೂರುಗೆ ನೀರು ಸರಬರಾಜು ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪೋಲು ಮಾಡಿದಲ್ಲಿ ನೀರು ಕಡಿತ :

ಕಟ್ಟಡ ರಚನೆ ಮತ್ತಿತರ ನಿರ್ಮಾಣ ಕಾಮಗಾರಿಗಳು ಹಾಗೂ ವಾಹನ ತೊಳೆಯುವ ಸರ್ವಿಸ್ ಸೆಂಟರ್‌ಗಳ ಜೋಡಣೆ ಯನ್ನು ಮುಂದಿನ ಸೂಚನೆಯವರೆಗೆ ಕಡಿತಗೊಳಿಸುವುದು. ಸಾರ್ವಜನಿಕರು ನೀರನ್ನು ಅನವಶ್ಯಕವಾಗಿ ಪೋಲು ಮಾಡುವುದು ಕಂಡು ಬಂದಲ್ಲಿ ಯಾವುದೇ ಸೂಚನೆ ನೀಡದೆ ಜೋಡಣೆ ಕಡಿತಗೊಳಿಸುವುದು ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ :

ಸಂಪರ್ಕ ಸಂಖ್ಯೆ :

ಕುಡಿಯುವ ನೀರಿನ ಸಮಸ್ಯೆಯಾದರೆ ದೂ.ಸಂ: ಪಡೀಲ್ ರೇಚಕ ಸ್ಥಾವರ-0824-2220364 ಹಾಗೂ ಮನಪಾ ವಾಟ್ಸ್‌ಆ್ಯಪ್ ಸಂಖ್ಯೆ 9449007722/ಮನಪಾ ಕಂಟ್ರೋಲ್ ರೂಮ್- 0824-2220319/2220306ನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

Continue Reading

FILM

ಬಾಲಿವುಡ್ ಜನಪ್ರಿಯ ನಿರೂಪಕಿ ಭಾರತಿ ಸಿಂಗ್ ಆಸ್ಪತ್ರೆ ದಾಖಲು..!

Published

on

ಮುಂಬೈ: ಬಾಲಿವುಡ್ ನಿರೂಪಕಿ, ಹಾಸ್ಯ ನಟಿ ಭಾರತಿ ಸಿಂಗ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ ಡ್ಯಾನ್ಸ್ ದೀವಾನೆ ಸೀಸನ್ 4 ಅನ್ನು ಹೋಸ್ಟ್ ಮಾಡುತ್ತಿರುವ ಖ್ಯಾತ ನಿರೂಪಕಿ ಭಾರತಿ ಸಿಂಗ್  ತೀವ್ರ ಹೊಟ್ಟೆ ನೋವಿನಿಂದ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

bharathi

‘ಕಳೆದ ಮೂರು ದಿನಗಳಿಂದ ತೀವ್ರವಾದ ಹೊಟ್ಟೆ ನೋವನ್ನು ಅನುಭವಿಸುತ್ತಿದ್ದೇನೆ’ ಎಂದು ತನ್ನ ವ್ಲಾಗ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಆರಂಭದಲ್ಲಿ ಅದನ್ನು ಗ್ಯಾಸ್ಟ್ರೊನಲ್ ಅಥವಾ ಆಮ್ಲೀಯ ಅಸ್ವಸ್ಥತೆ ಆಗಿರಬಹುದೆಂದು ಭಾವಿಸಿ ನಿರ್ಲಕ್ಷ ಮಾಡಿದ್ದರಂತೆ. ಆದರೆ, ನೋವು ತಡೆದುಕೊಳ್ಳಲಾಗದೆ ವೈದ್ಯಕೀಯ ಚಿಕಿತ್ಸೆ ಪಡೆಯಲು ನಿರ್ಧರಿಸಿ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ವ್ಲಾಗ್‌ನಲ್ಲಿ ಹೇಳಿದ್ದಾರೆ. ಇನ್ನು ವೈದ್ಯಕೀಯ ಪರೀಕ್ಷೆ ಬಳಿಕ ಭಾರತಿಗೆ ಪಿತ್ತಕೋಶದಲ್ಲಿ ಕಲ್ಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.  ಏನೂ ತಿನ್ನಲು ಆಗುತ್ತಿಲ್ಲ ತಿಂದರೂ ವಾಂತಿ ಆಗುತ್ತಿದೆ ಎಂದ ಹೇಳಿದ ಅವರು ಭಾವುಕರಾದರು.

ಮುಂದೆ ಓದಿ..;‘ಅರ್ಜುನ’ ಆನೆಯನ್ನು ನೆನೆದ ಡಿಬಾಸ್; ದರ್ಶನ್ ಕೋರಿಕೆ ಏನು?

ಈ ನಡುವೆ ಭಾರತಿ ಆರೋಗ್ಯದಲ್ಲಿ ಏರುಪೇರು ಉಂಟಾಗಿರುವುದಕ್ಕೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಬೇಗ ಚೇತರಿಸಿಕೊಳ್ಳುವಂತೆ ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದು ಕಮೆಂಟ್‌ಗಳನ್ನು ಹಾಕಿದ್ದಾರೆ.

 

Continue Reading

LATEST NEWS

Trending