Home ಪ್ರಮುಖ ಸುದ್ದಿ ವೆನ್ಲಾಕ್ ಜಿಲ್ಲಾಸ್ಪತ್ರೆ ಇದೀಗ ಸಂಪೂರ್ಣ ಕೊರೊನಾ ಆಸ್ಪತ್ರೆ

ವೆನ್ಲಾಕ್ ಜಿಲ್ಲಾಸ್ಪತ್ರೆ ಇದೀಗ ಸಂಪೂರ್ಣ ಕೊರೊನಾ ಆಸ್ಪತ್ರೆ

ವೆನ್ಲಾಕ್ ಜಿಲ್ಲಾಸ್ಪತ್ರೆ ಇದೀಗ ಸಂಪೂರ್ಣ ಕೊರೊನಾ ಆಸ್ಪತ್ರೆ

ಮಂಗಳೂರು: ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯನ್ನು ಸಂಪೂರ್ಣ ಕೊರೊನಾ  ಆಸ್ಪತ್ರೆಯಾಗಿ ಮಾರ್ಪಾಡು ಮಾಡಲಾಗಿದ್ದು, ಕೊರೊನಾ ಪಾಸಿಟಿವ್ ರೋಗಿಗಳಿಗಾಗಿ 250 ಬೆಡ್ ಗಳನ್ನು ಮೀಸಲಿಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಈ ವಿಚಾರದ ಬಗ್ಗೆ ಮಾಹಿತಿ  ನೀಡಿದ ಅವರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೊರೊನಾ ಆಸ್ಪತ್ರೆಯಾಗಿಯೇ ಮಾರ್ಪಾಡು ಮಾಡಲಾಗಿದೆ.

ಕೊರೊನಾ ಪಾಸಿಟಿವ್ ಇರುವ ರೋಗಿಗಳಿಗಾಗಿಯೇ 250 ಬೆಡ್ ಗಳನ್ನು ಮೀಸಲಿಡಲಾಗಿದ್ದು, 20 ಹಾಸಿಗೆಗಳನ್ನು ಕೊರೊನಾ ಶಂಕಿತರಿಗಾಗಿ ಮೀಸಲಿಡಲಾಗಿದೆ.

ಅಲ್ಲದೆ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಕೊರೊನಾ ಶಂಕಿತರನ್ನೂ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈಗಾಗಲೇ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಇತರ 218 ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದ್ದು, ಹೊರ ರೋಗಿಗಳಿಗೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಸೂಚಿಸಲಾಗಿದೆ.

ಬಡ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಯ ಸೌಲಭ್ಯ ಮಾಡಲಾಗಿದೆ. ಜಿಲ್ಲೆಯಲ್ಲಿರುವ ಪ್ರತೀ ಮೆಡಿಕಲ್ ಕಾಲೇಜುಗಳಲ್ಲಿ 20 ಐಸೋಲೇಷನ್ ವಾರ್ಡ್ ಗಳನ್ನು ತೆರೆಯಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

ಮಂಗಳೂರಿನಲ್ಲಿ ಈಗಾಗಲೇ 5 ಕೊರೊನಾ ಪಾಸಿಟೀವ್ ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ 4 ಮಂದಿ ಕಾಸರಗೋಡಿನವರು, ಒಬ್ಬ ಭಟ್ಕಳದವರು.

ಒಟ್ಟು ಜಿಲ್ಲೆಯಲ್ಲಿ 140 ಕೊರೊನಾ ಶಂಕಿತರಿದ್ದು, 17 ಮಂದಿಯ ರಿಪೋರ್ಟ್ ಬರಲು ಬಾಕಿಯಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.

- Advertisment -

RECENT NEWS

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ ಮಂಗಳೂರು: ಸದ್ಯ ಕೊರೊನಾ ವೈರಸ್ ಹಿನ್ನಲೆ ಕೇರಳ ಹಾಗೂ ಕರ್ನಾಟಕ ಗಡಿ ಸಮಸ್ಯೆ ತಾರಕಕ್ಕೇರಿದ್ದು, ಇದೀಗ ಈ ಸಮಸ್ಯೆ ಪರಿಹರಿಸಲು ಮಾಜಿ ಪ್ರಧಾನಿ...

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ ಮಂಗಳೂರು: ಎಮ್ ರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕ ಕೊರಂಗ್ರಪಾಡಿ ಪ್ರಕಾಶ್ ಶೆಟ್ಟಿ ಅವರ ಉದಾರ ದಾನವಾಗಿ...

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..!

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..! ಮಂಗಳೂರು : ಇಂದು ಐದು ವರ್ಷದ ಬಾಲಕನೊಬ್ಬ ಸಿಎಂ ಪರಿಹಾರ ನಿಧಿಗೆ ತನ್ನ ಪಾಕೆಟ್ ಮನಿಯನ್ನೇ ದೇಣಿಗೆ ನೀಡಿ...

ದೆಹಲಿ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್

ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್ ಬೀದರ್: ಬೀದರ್‌ನಲ್ಲಿ 11 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ 11 ಮಂದಿಯೂ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಾಗಿದ್ದಾರೆ. ಬೀದರ್‌ನಿಂದ ದೆಹಲಿಗೆ ತೆರಳಿದ್ದ...