ಕೊರೊನಾ ಚಿಕಿತ್ಸೆಗೆ ವೆನ್ ಲಾಕ್ ವಿಫಲ: ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ದೂರು ದಾಖಲು
ಮಂಗಳೂರು: ಕರಾವಳಿ ಜಿಲ್ಲೆ ಮಂಗಳೂರಿನಲ್ಲೂ ಕೊರೊನಾ ಭೀತಿ ಹಬ್ಬಿದೆ. 22 ವರ್ಷದ ಯುವಕ ಮೊದಲ ಕೊರೊನಾ ಪೇಷೆಂಟ್ ಆಗಿ ವೆನ್ಲಾಕ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾನೆ.
ಈ ನಡುವೆ ವೆನ್ಲಾಕ್ ಆಸ್ಪತ್ರೆಯಲ್ಲಿ ವ್ಯವಸ್ಥೆ ಸರಿ ಇಲ್ಲ. ಕೊರೊನಾ ಚಿಕಿತ್ಸೆಗೆ ವೆನ್ಲಾಕ್ ಸಂಪೂರ್ಣ ಸನ್ನಧವಾಗಿಲ್ಲ.
ಚಿಕಿತ್ಸೆಗೆ ಸರಿಯಾದ ವ್ಯವಸ್ಥೆ ಹೊಂದಿಲ್ಲ ಅನ್ನೋ ಆರೋಪಗಳು ಕೇಳಿ ಬಂದಿದೆ. ಅಲ್ಲದೇ ಈ ಬಗ್ಗೆ ಒಂದು ಫೋನ್ ಕಾಲ್ ಕೂಡ ವೈರಲ್ ಆಗಿದೆ.
ಇದೀಗ ಈ ಬಗ್ಗೆ ಕ್ರಮ ಕೈಗೊಂಡಿರುವ ವೆನ್ಲಾಕ್ ಜಿಲ್ಲಾಸ್ಪತ್ರೆಯ ಅಧೀಕ್ಷಕರು ಇದೊಂದು ಸುಳ್ಳು ಸುದ್ದಿ ಎಂದಿದ್ದಾರೆ. ಅಲ್ಲದೇ ಹಬ್ಬಿಸಿದವರ ವಿರುದ್ಧ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದಾರೆ.
ಎಸ್… ವೆನ್ಲಾಕ್ ಆಸ್ಪತ್ರೆಯಲ್ಲಿ ಕೋವಿಡ್-19 ಸಂಶಾಯಾಸ್ಪದ ಪ್ರಕರಣಗಳಿಗೆ 8 ವಿಶೇಷ ಪ್ರತ್ಯೇಕ ಕೊಠಡಿಗಳನ್ನು ಕಾದಿರಿಸಲಾಗಿದೆ.
ಸಂಶಯಾಸ್ಪದ ಪ್ರಕರಣಗಳು ಬಂದರೆ, ಅಂತಹ ರೋಗಿಗಳನ್ನು ಈ ಕೊಠಡಿಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಒಬ್ಬೊಬ್ಬರನ್ನು, ಒಂದೊಂದು ಕೊಠಡಿಗೆ ಕಾದಿರಿಸಿ ದಾಖಲಿಸಲಾಗುತ್ತಿದೆ. ಅವರ ಗಂಟಲುದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುತ್ತಿದೆ.
ಪರೀಕ್ಷೆ ನೆಗೆಟಿವ್ ಬಂದರೆ ಅವರಿಗೆ 14 ದಿನಗಳ ನಿಗಾವಣೆಯಲ್ಲಿರಲು ಸೂಚನೆ ನೀಡಿ ಮನೆಗೆ ಕಳುಹಿಸಲಾಗುತ್ತಿದೆ.
ಪೊಸಿಟಿವ್ ಬಂದರೆ, ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗದರ್ಶನದಂತೆ ಚಿಕಿತ್ಸೆ ಕೊಡಲಾಗುತ್ತದೆ.
ಇದಕ್ಕಾಗಿ ಜಿಲ್ಲಾಧಿಕಾರಿಗಳ ಆದೇಶದಂತೆ, ವೆನ್ ಲಾಕ್ ನಲ್ಲಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ವಿಶೇಷವಾದ ಪ್ರತ್ಯೇಕ ಕೊಠಡಿಗಳಲ್ಲಿ ಈ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರತೀ ರೋಗಿಗೂ ಎಲ್ಲ ರೀತಿಯ ಜೈವಿಕ ಮೆಡಿಕಲ್ ವ್ಯವಸ್ಥೆ ಕಲ್ಪಿಸಿ, ಇಲಾಖೆಯ ಮಾರ್ಗಸೂಚಿಗಳಂತೆ ತಜ್ಞವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ವೆನ್ ಲಾಕ್ ಆಸ್ಪತ್ರೆಯಲ್ಲಿ ಕೋವಿಡ್ 19 ಬಗ್ಗೆ ಜಾಗೃತಿ, ಮಾಹಿತಿ ನೀಡಲು ಹೆಲ್ಪ್ ಡೆಸ್ಕ್ ಅಲ್ಲಲ್ಲಿ ಸ್ಥಾಪಿಸಲಾಗಿದೆ.
ಇಂತಹ ವ್ಯವಸ್ಥೆ ಇರುವಾಗ ಸಾಮಾಜಿಕ ಜಾಲತಾಣದಲ್ಲಿ ವೆನ್ ಲಾಕ್ ಆಸ್ಪತ್ರೆಯಲ್ಲಿ ಕೋವಿಡ್ 19 ಚಿಕಿತ್ಸೆಯ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಗ್ಗೆ ಸೈಬರ್ ಪೊಲೀಸರಿಗೆ ಹಾಗೂ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಲಾಗುತ್ತಿದೆ ಎಂದು ವೆನ್ ಲಾಕ್ ಆಸ್ಪತ್ರೆಯ ಅಧೀಕ್ಷಕರು ಪ್ರಕಟಣೆ ಹೊರಡಿಸಿದ್ದಾರೆ.
ಆದ್ದರಿಂದ ಇದೀಗ ಯಾರನ್ನು ನಂಬೋದು, ಯಾರನ್ನು ಬಿಡೋದು ಅಂತ ಜನಸಾಮಾನ್ಯರು ಗೊಂದಲದಲ್ಲಿದ್ದಾರೆ.
ಪುತ್ತೂರು : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ ಕೆಜಿಎಫ್ ಪ್ರೌಢ ಶಾಲೆಯಲ್ಲಿ ಜ. 8 ಮತ್ತು 9 ರಂದು ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ತಂಡದಲ್ಲಿ ಆದ್ಯ ಕೆ, ಶಾನ್ವಿ ಪ್ರೀಷ್ಮ, ಫಾತಿಮಾತ್ ಮುನವರ, ಫಾತಿಮಾತ್ ಝುಲ್ಫ, ನಿರೀಕ್ಷಾ H ಶೆಟ್ಟಿ, ಸ್ನಿಗ್ಧ, ಆಯಿಷಾತ್ ಹಿಬಾ ಉತ್ತಮ ಪ್ರದರ್ಶನವನ್ನು ನೀಡಿ ಗೆಲುವಿಗೆ ಕಾರಣೀಭೂತರಾದರು. ಹಿಬಾ ಉತ್ತಮ ಆಟಗಾರ್ತಿಯಾಗಿ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡರು.
ತಂಡಕ್ಕೆ ದೈಹಿಕ ಶಿಕ್ಷಕರಾದ ನಿರಂಜನ್ ಹಾಗೂ ಅಕ್ಷಯ್ ತರಬೇತಿಯನ್ನು ನೀಡಿದ್ದಾರೆ. ತಂಡದ ವ್ಯವಸ್ಥಾಪಕಿಯಾಗಿ ಅನಿತಾಸಿಯ ಗೋನ್ಸಲ್ವಸ್ ಇವರು ತಂಡವನ್ನು ಮುನ್ನಡೆಸಿದರು ಎಂಬುದಾಗಿ ಶಾಲಾ ಮುಖ್ಯ ಶಿಕ್ಷಕಿ ಭಗಿಣಿ ಸೆಲಿನ್ ಪೇತ್ರ ಮಾಹಿತಿ ನೀಡಿದ್ದಾರೆ.
ಮಂಗಳೂರು/ಗದಗ : ಶಿರಹಟ್ಟಿ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿಯ ಕಾರು ಚಾಲಕ ನೇ*ಣಿಗೆ ಶರಣಾಗಿದ್ದಾರೆ. ಸುನಿಲ್ ಲಮಾಣಿ(25) ಆತ್ಮಹ*ತ್ಯೆ ಮಾಡಿಕೊಂಡವರು. ಸುನಿಲ್ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಮಲ್ಲಾಡ್ ಕಾಲೋನಿಯಲ್ಲಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಆತ್ಮಹ*ತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸುನೀಲ್ ಲಮಾಣಿ ಆತ್ಮಹ*ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಶಾಸಕ ಚಂದ್ರು ಲಮಾಣಿ ಇತ್ತೀಚೆಗೆ ಖರೀದಿಸಿದ್ದ ಮನೆಯಲ್ಲಿ ಸುನೀಲ್ ಆತ್ಮಹ*ತ್ಯೆ ಮಾಡಿಕೊಂಡಿದ್ದು, ಆತ ಚಂದ್ರು ಅವರ ಸಂಬಂಧಿ ಎಂದು ತಿಳಿದುಬಂದಿದೆ . ಮನೆ ಕಟ್ಟುವ ವಿಚಾರದಲ್ಲಿ ಸಹೋದರರ ನಡುವೆ ಕಲಹ ಉಂಟಾಗಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ಸುನಿಲ್ ಆತ್ಮಹ*ತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
ನೀವು ಚಿಕ್ಕವರಾಗಿರಲಿ ಅಥವಾ ವಯಸ್ಸಾದವರಾಗಿರಲಿ ಸಿಹಿತಿಂಡಿ ಸೇವಿಸಿದ ನಂತರ ಹಲ್ಲುಗಳನ್ನ ಸ್ವಚ್ಛಗೊಳಿಸುವಲ್ಲಿನ ಅಜಾಗರೂಕತೆಯು ಹಲ್ಲುಗಳಿಗೆ ಸೋಂಕು ತಗುಲಿಸಬಹುದು. ಇದು ಇಡೀ ಹಲ್ಲನ್ನು ಹಾನಿಗೊಳಿಸುತ್ತದೆ. ಅಂತಹ ಸಂದರ್ಭಗಳಲ್ಲಿ, ಜನರು ದಂತವೈದ್ಯರ ಬಳಿಗೆ ಹೋಗುತ್ತಾರೆ ಮತ್ತು ಆಗಾಗ್ಗೆ ಹಲ್ಲುಗಳನ್ನ ಕೀಳಬೇಕಾಗುತ್ತದೆ. ಯಾಕಂದ್ರೆ, ಇದು ಇತರ ಹಲ್ಲುಗಳಿಗೆ ಹಾನಿ ಮಾಡುವ ಅಪಾಯವನ್ನ ಹೆಚ್ಚಿಸುತ್ತದೆ.
ಇಂದಿಗೂ ಸಹ ನಾವು ನಮ್ಮ ಹಿರಿಯರ ಹಳೆಯ ಪರಿಹಾರಗಳನ್ನ ಅನುಸರಿಸುವ ಮೂಲಕ ಹಲ್ಲಿನ ಹುಳುಗಳನ್ನ ತೊಡೆದು ಹಾಕಬಹುದು. ಇಂದು ನಾನು ನಿಮಗೆ ಅಂತಹ ಮನೆಮದ್ದನ್ನ ಹೇಳಲಿದ್ದೇನೆ, ಅದನ್ನು ಬಳಸಿಕೊಂಡು ನೀವು ದಂತವೈದ್ಯರ ಬಳಿಗೆ ಹೋಗದೆ ಹಲ್ಲಿನ ಹುಳುಗಳನ್ನ ತೊಡೆದು ಹಾಕಬಹುದು.
ಚಾಕೊಲೇಟ್ ತಿನ್ನುವುದರಿಂದ ಮಕ್ಕಳ ಹಲ್ಲುಗಳು ಹಾನಿಗೊಳಗಾಗುತ್ತವೆ. ಆಹಾರ ಅಥವಾ ಸಿಹಿತಿಂಡಿಗಳನ್ನು ಸೇವಿಸಿದ ನಂತರ ನಾವು ತೊಳೆಯುವುದಿಲ್ಲ. 10 ರಿಂದ 12 ವರ್ಷ ವಯಸ್ಸಿನಲ್ಲಿ, ಕುಳಿಗಳಿಂದಾಗಿ ಮಕ್ಕಳ ಹಲ್ಲುಗಳು ಕ್ಷೀಣಿಸಲು ಪ್ರಾರಂಭಿಸುತ್ತವೆ.
ಇದನ್ನು ತಡೆಗಟ್ಟಲು ಸುಲಭ ಮಾರ್ಗವಿದೆ. ಯಾರಿಗಾದರೂ ಹಲ್ಲಿನಲ್ಲಿ ಕುಳಿ ಇದ್ದರೆ, ನೀವು ಅದನ್ನು ಮನೆಯಲ್ಲಿಯೇ ತೆಗೆದುಹಾಕಬಹುದು. ಮೊದಲಿಗೆ, ಈರುಳ್ಳಿ ಬೀಜಗಳನ್ನ ಮಾರುಕಟ್ಟೆಯಿಂದ ತರಬೇಕು. ನಂತರ ಬೆಂಕಿಯನ್ನ ಹೊತ್ತಿಸಿ ಕೆಂಡದ ಮೇಲೆ ಈರುಳ್ಳಿ ಬೀಜಗಳನ್ನ ಹಾಕಿ ಬಂದ ಹೊಗೆಯನ್ನ ಬಾಯಿಯಲ್ಲಿ ಶೇಖರಿಸಿ ನಂತ್ರ ಮುಚ್ಚಿ. ಈ ಪ್ರಕ್ರಿಯೆಯನ್ನ ಎರಡರಿಂದ ಮೂರು ಬಾರಿ ಮಾಡಿ. ಈಗ ನಿಮ್ಮ ಬಾಯಿಯಲ್ಲಿ ನೀರು ಹಾಕಿಕೊಂಡು ಮುಕ್ಕಳಿಸಿ ಆ ಬಟ್ಟಲಿನಲ್ಲಿ ಉಗುಳಿ. ಈಗ ಆ ಬಟ್ಟಲಿನಲ್ಲಿರುವ ನೀರಿನಲ್ಲಿ ಎಲ್ಲಾ ಹುಳುಗಳು ಗೋಚರಿಸುತ್ತವೆ.