ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆಯೊಂದರಲ್ಲಿ ಮಹಾ ಸ್ಪೋಟ ಸಂಭವಿಸಿದ್ದು, ಅದರಲ್ಲಿ 9 ಜನ ಮೃತ ಪಟ್ಟಿದ್ದಾರೆ.
ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆಯೊಂದರಲ್ಲಿ ಮಹಾ ಸ್ಪೋಟ ಸಂಭವಿಸಿದ್ದು, ಅದರಲ್ಲಿ 9 ಜನ ಮೃತ ಪಟ್ಟಿದ್ದಾರೆ.
ಈ ಅವಘಡ ಪಶ್ಚಿಮ ಬಂಗಾಳದ ಮೇದಿನಿಪುರ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ನಡೆದಿದೆ.
ಮಂಗಳವಾರ ಮಧ್ಯಾಹ್ನದ ಸಮಯದಲ್ಲಿ ಇದ್ದಕ್ಕಿದ್ದಂತೆ ಭಾರಿ ಸ್ಫೋಟವೊಂದು ನಡೆದಿದ್ದು, ಪಟಾಕಿ ಕಾರ್ಖಾನೆಯ ಮೇಲ್ಛಾವಣಿ ಹಾರಿ ಹೋಗಿದೆ.
ಈ ಸ್ಫೋಟದಿಂದ ಹಲವು ಮಂದಿ ಗಾಯಗೊಂಡಿದ್ದಾರೆ. ಇನ್ನು ಹಲವು ಜನರ ಮೃತ ದೇಹಗಳು ಛಿದ್ರ ಛಿದ್ರವಾಗಿ ಬಿದ್ದಿವೆ. ಅದರಲ್ಲಿ ಕೆಲವು ಮೃತ ದೇಹಗಳು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತರು ಮತ್ತು ಗಾಯಳುಗಳನ್ನು ಆಸ್ಪತ್ರೆಗೆ ರವಾನಿಸಿಸಲಾಗಿದೆ.
ಬಳಿಕ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.
ಅಪರಾಧ ತನಿಖಾ ಇಲಾಖೆಯು ನಡೆದ ಘಟನೆಯ ತನಿಖೆ ಪ್ರಾರಂಭಿಸಿದೆ.