Connect with us

FILM

ನೇಹಾ ಹ*ತ್ಯೆ ಪ್ರಕರಣ : ಏನಂದ್ರು ನಟ ದರ್ಶನ್?

Published

on

ಬೆಂಗಳೂರು : ಹುಬ್ಬಳ್ಳಿಯಲ್ಲಿ ನಡೆದ ಆ ಒಂದು ಕೊ*ಲೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಹುಬ್ಬಳ್ಳಿ ಕಾರ್ಪೋರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾ ಹಾಡಹಗಲೇ ಫಯಾಝ್ ಎಂಬಾತನಿಂದ ಪ್ರಾ*ಣ ಕಳೆದುಕೊಂಡಿದ್ದಳು. ಈ ಘಟನೆಗೆ ರಾಜ್ಯವ್ಯಾಪಿ ಆಕ್ರೋಶ ಕೇಳಿ ಬಂದಿದೆ.

ಸದ್ಯ ಸೋಶಿಯಲ್ ಮೀಡಿಯಾದಲ್ಲಿ #justiceforneha ಎಂಬ ಅಭಿಯಾನವೂ ಆರಂಭವಾಗಿದೆ. ಇದಕ್ಕೆ ಸಿನಿ ತಾರೆಯರೂ ಕೈ ಜೋಡಿಸಿದ್ದಾರೆ. ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ.

ದರ್ಶನ್ ಏನಂದ್ರು?

ನೇಹಾ ಕೊ*ಲೆ ಭಯಹುಟ್ಟಿಸಿರೋದು ಸುಳ್ಳಲ್ಲ. ಇನ್ನು ಮುಂದೆ ಇಂತಹ ಕೃತ್ಯಗಳು ನಡೆಯಬಾರದು ಎಂಬ ಆಗ್ರಹವೂ ಕೇಳಿ ಬರುತ್ತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಆಕ್ರೋಶ ಹೊರ ಹಾಕಿದ್ದಾರೆ.


ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ. ಇನ್ನು ಬಾಳಿ ಬದುಕಬೇಕಿದ್ದ ೨೩ ವಯಸ್ಸಿನ ನೇಹಾ ಹಿರೇಮಠ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಜೊತೆಗೆ #justicefornehahiremath ಎಂದು ಹ್ಯಾಶ್ ಟ್ಯಾಗ್ ಕೂಡಾ ಬಳಸಿದ್ದಾರೆ.

ವಿ ವಾಂಟ್ ಜಸ್ಟೀಸ್ ಎಂದ ಡಿಂಪಲ್ ಕ್ವೀನ್ :

ಇನ್ನು ಘಟನೆಗೆ ನಟಿ ರಚಿತಾ ರಾಮ್ ಬೇಸರ ವ್ಯಕ್ತಪಡಿಸಿದ್ದಾರೆ. ಜಾತಿ, ಧರ್ಮ, ಯಾವುದೇ ಆಗಿರಲಿ ಮೊದಲು ನಾವು ಮಾನವರು. ನಾನು ಈ ಪೋಸ್ಟ್ ಹಾಕಲು ಕಾರಣ ಆಕೆಗೆ ಆಗಿರುವ ಅನ್ಯಾಯ. ತಪ್ಪು ಯಾರೇ ಮಾಡಿದರು ತಪ್ಪೆ. ಸರ್ಕಾರಕ್ಕೆ ನನ್ನ ಒಂದು ಮನವಿ! ರಾಜಕೀಯ ಆಯಾಮದಲ್ಲಿ ಈ ವಿಷಯವನ್ನು ತರಬೇಡಿ. ಆಗಿರೋದು ಅನ್ಯಾಯ. ಈಗ ನ್ಯಾಯ ಬೇಕಾಗಿದೆ. ಅಷ್ಟೇ. ಈ ರೀತಿಯ ಕೃತ್ಯ ಮಾಡುವವರನ್ನು ಗ*ಲ್ಲಿಗೇರಿಸುವ ಬದಲು ಅವರನ್ನು ಜನಸಾಮಾನ್ಯರ ಕೈಗೆ ಒಪ್ಪಿಸಿ. #WEWANTJUSTICE ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.


ನಟ ಧ್ರುವ ಸರ್ಜಾ ಅವರು ಟ್ವೀಟ್ ಮಾಡಿ, ಸಹೋದರಿ ನೇಹಾ ಹಿರೇಮಠ್ ರ ಹ*ತ್ಯೆ ಅತ್ಯಂತ ಹೀನ ಕೃತ್ಯ. ಕ್ಯಾಂಪಸ್ ಲಿ ಹ*ತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ. ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು. ಹಾಗು ಇದನ್ನ ಎಲ್ಲಾ ಆಯಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು. ಜೈ ಆಂಜನೇಯ ಎಂದಿದ್ದಾರೆ.

ಘಟನೆ ಬಗ್ಗೆ ನಟಿ, ನಿರ್ಮಾಪಕಿ ರಕ್ಷಿತಾ ಪ್ರೇಮ್ ಆಕ್ರೋಶ ಹೊರ ಹಾಕಿದ್ದಾರೆ. ನೇಹಾ ಹಿರೇಮಠ್ ಗೆ ನ್ಯಾಯ ಸಿಗಲೇಬೇಕು. ಮಹಿಳೆಯರಿಗೆ ಸುರಕ್ಷತೆ ಎಲ್ಲಿದೆ? ಕಾಲೇಜಿಗೆ ಹೋಗುವ ಯುವತಿಯರಿಗೂ ಕೂಡ ರಕ್ಷಣೆ ಇಲ್ಲ. ಶೇಮ್ ಶೇಮ್ ಎಂದಿದ್ದಾರೆ.

ಪ್ರೀತಿಸಬೇಕು ಅಂತ ಅದ್ಹೇಗೆ ಒತ್ತಾಯಿಸಲು ಸಾಧ್ಯ? ಪ್ರೀತಿಯನ್ನ ಒಪ್ಪಿಕೊಳ್ಳಲಿಲ್ಲ ಅಂತ ಬರ್ಬರವಾಗಿ ಹುಬ್ಬಳ್ಳಿ ಕಾಲೇಜ್ ಕ್ಯಾಂಪಸ್ನಲ್ಲೇ ಹ*ತ್ಯೆ ಮಾಡಿದ್ದಾನೆ. ಅದೆಂಥಾ ಮೈಂಡ್ ಸೆಟ್ ಹೊಂದಿದ್ದಾರೆ ಆ ವಯಸ್ಸಿನ ಹುಡುಗರು? ಪೋಷಕರಾಗಿ ನಮ್ಮ ಗಂಡು ಮಕ್ಕಳಿಗೆ ಕೆಲವು ಬೇಸಿಕ್ ಸಂಗತಿಗಳನ್ನ ನಾವು ಹೇಳಿಕೊಡಲೇಬೇಕು. ಅದನ್ನೆಲ್ಲಾ ಶಾಲಾ ಕಾಲೇಜುಗಳಲ್ಲಿ ಕಲಿಸುವುದಿಲ್ಲ. ಇದನ್ನ ಸಹಿಸಲು ಸಾಧ್ಯವೇ ಇಲ್ಲ. ಶೇಮ್ ಶೇಮ್. ಪೋಷಕರಾಗಿ ನನ್ನ ಹೃದಯ ಛಿದ್ರವಾಗುತ್ತಿದೆ ಎಂದು ರಕ್ಷಿತಾ ಪ್ರೇಮ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ನೇಹಾ ಹ*ತ್ಯೆ ಪ್ರಕರಣ : ಆಕ್ರೋಶ ಹೊರ ಹಾಕಿದ ಸಿನಿತಾರೆಯರು

ಹುಬ್ಬಳ್ಳಿ ಕಾರ್ಪೋರೇಟರ್ ನಿರಂಜನ್ ಹಿರೇಮಠ ಅವರ ಮಗಳು ನೇಹಾ ಹಿರೇಮಠಳನ್ನು ಫಯಾಜ್ ಎಂಬಾತ ಕಾಲೇಜ್ ಕ್ಯಾಂಪಸ್ ನಲ್ಲಿ ಚಾಕುವಿನಿಂದ ಇರಿದು ಹ*ತ್ಯೆ ಮಾಡಿದ್ದ. ಹುಬ್ಬಳ್ಳಿಯ ಕೆಎಲ್ ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನೇಹಾ ಪ್ರಥಮ ವರ್ಷದ ಎಂಸಿಎ ಓದುತ್ತಿದ್ದಳು. ಸದ್ಯ ಪ್ರಕರಣದ ಬಗ್ಗೆ ತೀವ್ರ ಆಕ್ರೋಶ ಕೇಳಿ ಬಂದಿದೆ. ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು ಎಂಬ ಆಗ್ರಹ ಕೇಳಿ ಬಂದಿದೆ.

1 Comment

1 Comment

  1. Pingback: ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ - ಅಭಿ ಆ್ಯನಿವರ್ಸರಿ ಫೋಟೋ! - NAMMAKUDLA NEWS - ನಮ್ಮಕುಡ್ಲ ನ್ಯೂಸ್

Leave a Reply

Your email address will not be published. Required fields are marked *

FILM

ಬಾಲಿವುಡ್ ಜನಪ್ರಿಯ ನಿರೂಪಕಿ ಭಾರತಿ ಸಿಂಗ್ ಆಸ್ಪತ್ರೆ ದಾಖಲು..!

Published

on

ಮುಂಬೈ: ಬಾಲಿವುಡ್ ನಿರೂಪಕಿ, ಹಾಸ್ಯ ನಟಿ ಭಾರತಿ ಸಿಂಗ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ ಡ್ಯಾನ್ಸ್ ದೀವಾನೆ ಸೀಸನ್ 4 ಅನ್ನು ಹೋಸ್ಟ್ ಮಾಡುತ್ತಿರುವ ಖ್ಯಾತ ನಿರೂಪಕಿ ಭಾರತಿ ಸಿಂಗ್  ತೀವ್ರ ಹೊಟ್ಟೆ ನೋವಿನಿಂದ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

bharathi

‘ಕಳೆದ ಮೂರು ದಿನಗಳಿಂದ ತೀವ್ರವಾದ ಹೊಟ್ಟೆ ನೋವನ್ನು ಅನುಭವಿಸುತ್ತಿದ್ದೇನೆ’ ಎಂದು ತನ್ನ ವ್ಲಾಗ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಆರಂಭದಲ್ಲಿ ಅದನ್ನು ಗ್ಯಾಸ್ಟ್ರೊನಲ್ ಅಥವಾ ಆಮ್ಲೀಯ ಅಸ್ವಸ್ಥತೆ ಆಗಿರಬಹುದೆಂದು ಭಾವಿಸಿ ನಿರ್ಲಕ್ಷ ಮಾಡಿದ್ದರಂತೆ. ಆದರೆ, ನೋವು ತಡೆದುಕೊಳ್ಳಲಾಗದೆ ವೈದ್ಯಕೀಯ ಚಿಕಿತ್ಸೆ ಪಡೆಯಲು ನಿರ್ಧರಿಸಿ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ವ್ಲಾಗ್‌ನಲ್ಲಿ ಹೇಳಿದ್ದಾರೆ. ಇನ್ನು ವೈದ್ಯಕೀಯ ಪರೀಕ್ಷೆ ಬಳಿಕ ಭಾರತಿಗೆ ಪಿತ್ತಕೋಶದಲ್ಲಿ ಕಲ್ಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.  ಏನೂ ತಿನ್ನಲು ಆಗುತ್ತಿಲ್ಲ ತಿಂದರೂ ವಾಂತಿ ಆಗುತ್ತಿದೆ ಎಂದ ಹೇಳಿದ ಅವರು ಭಾವುಕರಾದರು.

ಮುಂದೆ ಓದಿ..;‘ಅರ್ಜುನ’ ಆನೆಯನ್ನು ನೆನೆದ ಡಿಬಾಸ್; ದರ್ಶನ್ ಕೋರಿಕೆ ಏನು?

ಈ ನಡುವೆ ಭಾರತಿ ಆರೋಗ್ಯದಲ್ಲಿ ಏರುಪೇರು ಉಂಟಾಗಿರುವುದಕ್ಕೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಬೇಗ ಚೇತರಿಸಿಕೊಳ್ಳುವಂತೆ ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದು ಕಮೆಂಟ್‌ಗಳನ್ನು ಹಾಕಿದ್ದಾರೆ.

 

Continue Reading

FILM

ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ ‘ಗಬ್ಬರ್ ಸಿಂಗ್’ ತುಳು ಚಲನಚಿತ್ರ ಬಿಡುಗಡೆ

Published

on

ಉಡುಪಿ : ಬಹು ನಿರೀಕ್ಷಿತ ತುಳು ಚಿತ್ರ “ಗಬ್ಬರ್ ಸಿಂಗ್” ಕರಾವಳಿ ಕರ್ನಾಟಕದ ಉಡುಪಿ ಮತ್ತು ದಕ್ಷಿಣ ಕನ್ನಡದ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ ಬಿಡುಗಡೆ ಸಮಾರಂಭವೂ ನಡೆಯಿತು.

ತೊಟ್ಟಂ ಚರ್ಚ್ ನ ಧರ್ಮಗುರು ಫಾದರ್ ಡೆನಿಸ್ ಡೆಸಾ, ಶಂಕರಪುರದ ಸಾಯಿ ಈಶ್ವರ ಗುರೂಜಿ, ಮಿಯಾರ್ ಮಸೀದಿಯ ಮೌಲ್ವಿ  ಅಬುಲ್ ಹಸನ್, ರಾಜಕೀಯ ಮುಖಂಡರಾದ ಗೀತಾಂಜಲಿ ಸುವರ್ಣ, ಬೈಕಾಡಿ ಸುಪ್ರಸಾದ್ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹರೀಶ್ ಕಿಣಿ, ಸರಳಾ ಕಾಂಚನ್, ಶಿಲ್ಪಾ ಭಟ್, ಉಡುಪಿ ಬಿಜೆಪಿ ಮಾಜಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕೃಷ್ಣಮೂರ್ತಿ ಆಚಾರ್ಯ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಚಿತ್ರದ ಕಲಾವಿದರಾದ ವೀಣಾ ಎಸ್ ಶೆಟ್ಟಿ, ಸಂದೀಪ್ ಭಕ್ತ, ಆದ್ಯ, ಚಂದ್ರಹಾಸ್ ಕಪ್ಪೆಟ್ಟು, ಕಿಶೂ ಎಂಟರ್‌ಪ್ರೈಸಸ್ ವ್ಯವಸ್ಥಾಪಕ ನಿರ್ದೇಶಕರಾದ ಕಿಶೋರ್ ಗೊನ್ಸಾಲ್ವಿಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದರು.

ಇದನ್ನೂ ಓದಿ : ಕೋಸ್ಟಲ್ ವುಡ್ ಅಂಗಳದಲ್ಲಿ ‘ಗಬ್ಬರ್ ಸಿಂಗ್’ ಹವಾ ಶುರು

‘ಗಬ್ಬರ್ ಸಿಂಗ್’ ಚಿತ್ರವು ಕೌಟುಂಬಿಕ ಅಂಶಗಳನ್ನು ಒಳಗೊಂಡಿರುವ ಆಕ್ಷನ್ ಥ್ರಿಲ್ಲರ್ ಆಗಿದೆ. ಕಥೆ ಮತ್ತು ಚಿತ್ರಕಥೆಯನ್ನು ಸತೀಶ್ ಪೂಜಾರಿ ಬಾರ್ಕೂರು ರಚಿಸಿದ್ದು, ಪ್ರದೀಪ್ ನಿರ್ದೇಶನವಿದೆ. ತುಳು ಚಿತ್ರರಂಗದ ಹೆಸರಾಂತ ನಟರುಗಳು ಈ ಚಿತ್ರದಲ್ಲಿ ಪಾತ್ರವಾಗಿದ್ದಾರೆ.

Continue Reading

FILM

‘ಅರ್ಜುನ’ ಆನೆಯನ್ನು ನೆನೆದ ಡಿಬಾಸ್; ದರ್ಶನ್ ಕೋರಿಕೆ ಏನು?

Published

on

ಚಂದನವನ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅದ್ಭುತ ಕಲಾವಿದ ಜೊತೆಗೆ ಪ್ರಾಣಿ ಪ್ರಿಯರೂ ಹೌದು. ಅವರ ಪ್ರಾಣಿ ಪ್ರೇಮದ ಬಗ್ಗೆ ಹೇಳ್ಬೇಕಾ? ಹಲವಾರು ನಿದರ್ಶನಗಳನ್ನು ನಾವು ನೋಡಿದ್ದೇವೆ. ಇದೀಗ ದರ್ಶನ್ ‘ಅರ್ಜುನ’ ನ ಬಗ್ಗೆ ಮಾತನಾಡಿದ್ದಾರೆ.


ಕಾಡಾನೆ ಸೆರೆ ವೇಳೆ ನಡೆದಿದ್ದ ದುರಂ*ತ :

ಹಾಸನದ ಅರಣ್ಯದಲ್ಲಿ ಕಾಡಾನೆ ಸೆರೆ ಹಿಡಿದು, ರೇಡಿಯೋ ಕಾಲರ್ ಅಳವಡಿಸುವ ಕಾರ್ಯಾಚರಣೆ ವೇಳೆ ದಸರಾ ಆನೆ ಅರ್ಜುನ ಮೃ*ತಪಟ್ಟಿದ್ದ. ಅವರಿಗೆ 63 ವರ್ಷ ವಯಸ್ಸಾಗಿತ್ತು. 2023 ರ ಡಿಸೆಂಬರ್ ತಿಂಗಳಲ್ಲಿ ಈ ಘಟನೆ ನಡೆದಿತ್ತು. ಅರ್ಜುನ 8 ಬಾರಿ ಜಂಬೂ ಸವಾರಿಯಲ್ಲಿ ಅಂಬಾರಿ ಹೊತ್ತಿದ್ದ. ಆತನ ನಿಧ*ನ ಕನ್ನಡಿಗರನ್ನು ಶೋಕಸಾಗರದಲ್ಲಿ ಮುಳುಗಿಸಿತ್ತು.

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ನಡೆಯುತ್ತಿತ್ತು. ಈ ವೇಳೆ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ಅಟ್ಯಾಕ್ ಮಾಡಿದೆ. ಕಾರ್ಯಾಚರಣೆ ವೇಳೆ ಒಂಟಿಸಲಗ ದಾಳಿ ಮಾಡುತ್ತಿದ್ದಂತೆ, ಉಳಿದ ಮೂರು ಸಾಕಾನೆಗಳು ಓಡಿ ಹೋಗಿವೆ. ಕೊನೆಗೆ ಒಂಟಿಸಲಗದ ಜೊತೆ ಅರ್ಜುನ ಆನೆಯು ಒಂಟಿಯಾಗಿ ಹೋರಾಟ ನಡೆಸಿದೆ. ಈ ಕಾಳಗ ಆರಂಭವಾಗುತ್ತಿದ್ದಂತೆ ಅರ್ಜುನನ ಮೇಲಿನಿಂದ ಮಾವುತ ಇಳಿದು ಓಡಿದ್ದಾರೆ. ಅರ್ಜುನ ಇಹಲೋಕ ತ್ಯಜಿಸಿದ್ದ. ಈ ಘಟನೆ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಜನ ಕಂಬನಿ ಮಿಡಿದಿದ್ದರು.

ಅಂದು ಡಿ ಬಾಸ್ ದರ್ಶನ್ ಕೂಡ ಸಂತಾಪ ಸೂಚಿಸಿದ್ದರು. ಇದೀಗ ಮತ್ತೆ ಡಿ ಬಾಸ್ ‘ಅರ್ಜುನ’ನನ್ನು ಸ್ಮರಿಸಿದ್ದಾರೆ.

ಏನಂದ್ರು ಡಿಬಾಸ್?

ದರ್ಶನ್ ಅರ್ಜುನ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಅರ್ಜುನನಿಗೆ ಸಲ್ಲಬೇಕಾದ ಗೌರವದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

‘ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನ ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವುದು ತಿಳಿದೇ ಇದೆ. ಆತನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ.

ಇದನ್ನೂ ಓದಿ : ತಿಮ್ಮಪ್ಪನ ಸನ್ನಿಧಾನದಲ್ಲಿ ಮಾಂಗಲ್ಯ ಮಾರಾಟ; ಮಾಂಗಲ್ಯ ಪಡೆಯುವುದು ಹೇಗೆ?

ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ. ಇನ್ನೇನು ಮಳೆಗಾಲ ಶುರುವಾಗುವ ಮುನ್ನ ಇದಕ್ಕೊಂದು ಒಳ್ಳೆ ವ್ಯವಸ್ಥೆಯಾಗಲಿ ಎಂಬ ಕೋರಿಕೆ ನಮ್ಮದು ಎಂದು ಅವರು ಬರೆದುಕೊಂಡಿದ್ದಾರೆ.

Continue Reading

LATEST NEWS

Trending