Sunday, May 16, 2021

ಪ್ರಿಯತಮೆಗೆ ಉಡುಗೊರೆ ನೀಡಲು ಈತ ಮಾಡಿದ್ದಾದರೂ ಏನು? ಕೇಳಿದ್ರೆ ನೀವೂ ಬೆರಗಾಗುತ್ತೀರಿ..

ಉಡುಪಿ :ಏ.16 ರಂದು ಅಂಬಾಗಿಲು ಮುಖ್ಯರಸ್ತೆಯಲ್ಲಿರುವ ತಾಂಗದಗಡಿ ವೀರಾಂಜನೇಯ ದೇವಸ್ಥಾನದ ಹುಂಡಿ ಕಳವಿಗೆ ವಿಫಲ ಯತ್ನ ನಡೆಸಿದ ಆರೋಪಿಯನ್ನು ಪೊಲೀಸರು ಮಂಗಳೂರಿನ ಮೂಡುಶೆಡ್ಡೆ ಗ್ಯಾಸ್ ಗೋಡೌನ್  ಬಳಿ ಬಂಧಿಸಿದ್ದಾರೆ.

ಬಂಧಿತನನ್ನು ಮಂಗಳೂರಿನಲ್ಲಿ ವಾಸವಿರುವ ರಾಂಚಿ ಮೂಲದ ಆರ್ಶಿತ್ ಅವಿನಾಶ ಡೋಡ್ರೆ(18) ಎಂದು ಗುರುತಿಸಲಾಗಿದೆ. ಈತ ವಿಚಾರಣೆ ವೇಳೆ ತನ್ನ ಪ್ರಿಯತಮೆಯೊಂದಿಗೆ ಸುತ್ತಾಟ ನಡೆಸಲು, ಹಾಗೂ  ಉಡುಗೊರೆ ನೀಡಲು ಹಣದ ಅವಶ್ಯಕತೆ ಇದ್ದ ಕಾರಣ

ಈ ಕಳ್ಳತನ ಪ್ರಯತ್ನ ಮಾಡಿರುವುದಾಗಿ ಹೇಳಿದ್ದಾನೆ ಇದಲ್ಲದೆ ಈತ ಈ ಹಿಂದೆಯೂ ಸಣ್ಣ ಪುಟ್ಟ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಏಪ್ರಿಲ್ 16 ರಂದು ವೀರಾಂಜನೇಯ ದೇವಸ್ಥಾನದ ಹುಂಡಿ ಕಳವಿಗೆ ಯತ್ನಿಸುತ್ತಿರುವಾಗ ಸ್ಥಳೀಯರು ಎಚ್ಚರವಾಗಿ ಆತನನ್ನು ಹಿಡಿಯಲು ಪ್ರಯತ್ನಿಸಿದ್ದರು.

ಈ ಸಂದರ್ಭ ಆತ ಬಂದಿದ್ದ ಕಾರನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದ. ಕಾರಿನ ಜಾಡು ಹಿಡಿದು ಹೋದ ಪೊಲೀಸರು ಕಾರಿನ ಆರ್.ಸಿ ಮಾಲೀಕ ಸೌರಭ್ ಜೈನ್ ಅವರನ್ನು ವಿಚಾರಿಸಿದಾಗ ಅವರು ಪ್ರೀತಂ ಅವರ ಕಾರ್ ಲಿಂಕ್ಸ್ ಗೆ ತನ್ನ ಕಾರನ್ನು ಬಾಡಿಗೆಗೆ ನೀಡಿದ ವಿಚಾರವನ್ನು ತಿಳಿಸಿದ್ದರು.

ಪ್ರೀತಂ ಅವರಿಂದ ಕಾರು ಪಡೆದ ಬಗ್ಗೆ ಮಾಹಿತಿ ಸಂಗ್ರಹಿಸಿ ಆರೋಪಿಯನ್ನು ಬಂಧಿಸಲಾಗಿದೆ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...