Connect with us

    LATEST NEWS

    ಸಚಿವ ಸ್ಥಾನ ತ್ಯಜಿಸುವ ಬಗ್ಗೆ ಸುರೇಶ್ ಗೋಪಿ ಹೇಳಿದ್ದೇನು..?

    Published

    on

    ಕೇರಳ: ಕೇರಳದಲ್ಲಿ ಮೊದಲ ಬಾರಿಗೆ ಬಿಜೆಪಿ ಬಾವುಟ ಹಾರಿಸಿದ ನಟ ಸುರೇಶ್ ಗೋಪಿ ಸಚಿವ ಸ್ಥಾನವನ್ನೂ ಪಡೆದಿದ್ದಾರೆ.  ನಿನ್ನೆ ಸುರೇಶ್ ಗೋಪಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಕೇರಳದಿಂದ ಬಿಜೆಪಿಯ ಮೊದಲ ಸಚಿವ ಅನ್ನೋ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

    ಆದರೆ ಸುರೇಶ್ ಗೋಪಿ ಸಚಿವ ಸ್ಥಾನದಲ್ಲಿ ಮುಂದುವರೆಯುವ ಬಗ್ಗೆ ಸಾಕಷ್ಟು ಅನುಮಾನಗಳು ಕಾಡಿತ್ತು. ಸುರೇಶ್ ಗೋಪಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮಾತು ಕೇಳಿ ಬಂದಿತ್ತು. ಸುರೇಶ್ ಗೋಪಿ ಸಚಿವ ಸ್ಥಾನ ತಿರಸ್ಕಾರ ಮಾಡ್ತಾ ಇರೋದು ಅವರ ಸಿನೆಮಾಗಳಿಗಾಗಿ ಎಂದು ಮಲೆಯಾಳಂ ಚಾನೆಲ್‌ಗಳು ವರದಿ ಮಾಡಿತ್ತು.

    ಸಚಿವ ಸ್ಥಾನಕ್ಕೆ ಸುರೇಶ್ ಗೋಪಿ ರಾಜೀನಾಮೆ ಸಾಧ್ಯತೆ? ಚಿತ್ರರಂಗಕ್ಕಾಗಿ ಸಚಿವ ಸ್ಥಾನ ಕೈ ಬಿಟ್ಟ ಬಿಜೆಪಿ ಸಂಸದ!?

    ಸುರೇಶ್ ಗೋಪಿ ಹೇಳಿದ್ದೇನು..?

    ಮಲೆಯಾಳಂ ಚಿತ್ರರಂಗದಲ್ಲಿ ಸುರೇಶ್ ಗೋಪಿ ಬಹುಬೇಡಿಕೆಯ ನಟರಾಗಿದ್ದು, ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಕೇಂದ್ರ ಸಚಿವ ಸಂಪುಟ ಸೇರಿದರೆ ಸುರೇಶ್ ಗೋಪಿ ಚಿತ್ರರಂಗದಿಂದ ದೂರ ಉಳಿಯಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಅವರು ಸಚಿವ ಸಂಪುಟ ಸ್ಥಾನವನ್ನು ತ್ಯಜಿಸಲಿದ್ದಾರೆ ಎಂಬ ಸುದ್ದಿಗಳು ಮಾಧ್ಯಮಗಳಲ್ಲಿ ಹರಿದಾಡಿತ್ತು. ಇದೀಗ ಈ ಊಹಾಪೋಹಗಳಿಗೆ ಸುರೇಶ್ ಗೋಪಿ ಅಂತ್ಯ ಹಾಡಿದ್ದಾರೆ.  ‘ನಾನು ಮೋದಿ ಸಚಿವ ಸಂಪುಟಕ್ಕೆ ರಾಜಿನಾಮೆ ನೀಡಲಿದ್ದೇನೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡುತ್ತಿದೆ. ಆದೆರ ಇದು ಸತ್ಯಕ್ಕೆ ದೂರವಾದ ಮಾತು. ಮೋದಿಯವರ ಸಚಿವ ಸಂಪುಟದಲ್ಲಿ ನನ್ನ ರಾಜ್ಯವನ್ನು ಪ್ರತಿನಿಧಿಸುವುದು ನನಗೆ ಹೆಮ್ಮೆಯ ವಿಚಾರವಾಗಿದೆ’ ಎಂದು ಸುರೇಶ್ ಗೋಪಿಯವರು ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ.

    ಈ ಮೂಲಕ ತಮ್ಮ ನಿಲುವನ್ನು ಸುರೇಶ್ ಗೋಪಿ ಸ್ಪಷ್ಟಪಡಿಸಿದ್ದಾರೆ. ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಜೊತೆ ನಿಕಟವರ್ತಿಯಾಗಿರವ ಸುರೇಶ್ ರವರು ಕಾಂಗ್ರೆಸ್ ಅಭ್ಯರ್ಥಿ ಮುರಳೀಧರನ್‌ ಅವರನ್ನು 74, 686 ಮತಗಳ ಅಂತರದಿಂದ ಸೋಲಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಕೇಂದ್ರ ಸಚಿವ ಜನಾರ್ದನ ಪೂಜಾರಿ ಭೇಟಿ ಮಾಡಿದ ಸಂಸದ ಚೌಟ

    Published

    on

    ಮಂಗಳೂರು : ಕರಾವಳಿ ಕಂಡ ಹಿರಿಯ ಮುತ್ಸದ್ದಿ, ನೇರ ನುಡಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ತೆರಳಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಆಶೀರ್ವಾದ ಪಡೆದು ಪಡೆದು ವಿದ್ಯಮಾನಗಳ ಕುರಿತು ಮಾತನಾಡಿದರು.

    ಬಂಟ್ವಾಳ ಮಂಡಲ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್, ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ, ಗೋವಿಂದ ಪ್ರಭು, ಜಿಲ್ಲಾ ಉಪಾಧ್ಯಕ್ಷ ದಿನೇಶ್ ಅಮ್ಟೂರು ಮತ್ತು ಜಿಲ್ಲಾ ಮಾಧ್ಯಮ ಸಂಚಾಲಕ ವಸಂತ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

    Continue Reading

    LATEST NEWS

    ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಾತೃ ವಿಯೋಗ

    Published

    on

    ಕೋಟ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ ವಯೋಸಹಜ ಅಸೌಖ್ಯದಿಂದ ನಿನ್ನೆ(ಜೂ.30) ನಿಧ*ನರಾದರು. ಅವರಿಗೆ 97 ವರ್ಷ ವಯಸ್ಸಾಗಿತ್ತು.

    ಮೃ*ತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅವರ ನಿಧ*ನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

    ಇದನ್ನೂ ಓದಿ : ‘ಎಲ್ಲಾ ಹಣೆಬರಹ..ನಾವೇನು ಮಾಡೋಕ್ಕಾಗಲ್ಲ…’ ದರ್ಶನ್ ಕೊಲೆ ಪ್ರಕರಣದ ಬಗ್ಗೆ ಶಿವಣ್ಣ ಪ್ರತಿಕ್ರಿಯೆ

    Continue Reading

    bangalore

    ಈ ಪುಣ್ಯಕ್ಷೇತ್ರಕ್ಕೆ ಹೋಗಲು ರಾಜ್ಯ ಸರ್ಕಾರದಿಂದ ಸಹಾಯಧನ ಸಿಗಲಿದೆ..!

    Published

    on

    ಬೆಂಗಳೂರು : ಕರ್ನಾಟಕ ರಾಜ್ಯದಿಂದ ಕೈಲಾಸ ಮಾನಸ ಸರೋವರ ಹಾಘೂ ಚಾರ್‌ಧಾಮ್‌ ಯಾತ್ರಿಗಳಿಗೆ ಅನುದಾನ ನೀಡುವ ಕುರಿತು ಮುಜರಾಯಿ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಮಾನಸ ಸರೋವರ ಯಾತ್ರಿಗಳಿಗೆ ರೂ.30 ಸಾವಿರ, ಚಾರ್‌ಧಾಮ್‌ ಯಾತ್ರಿಗಳಿಗೆ ರೂ.20 ಸಾವಿರ , ಹಾಗೂ ಈಗಾಗಲೇ ಕಾಶಿ ಯಾತ್ರೆ ಕೈಗೊಂಡ 30 ಸಾವಿರ ಯಾತ್ರಿಗಳಿಗೆ ತಲಾ ರೂ.5 ಸಾವಿರ ಸಹಾಯಧನ ನೀಡಲಾಗುತ್ತದೆ.
    ಕೇವಲ ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳು ಮಾತ್ರ ಈ ಸಹಾಯಧನ ಪಡೆಯಲು ಅರ್ಹರಾಗಿದ್ದಾರೆ. ಈಗಾಗಲೇ ಈ ತೀರ್ಥ ಕ್ಷೇತ್ರಗಳಿಗೆ ಹೋಗಿ ಬಂದಿರುವವರು ಸಹಾಯಧನವನ್ನು ಪಡೆಯಲು ಅರ್ಹರಾಗಿದ್ದಾರೆ. ಇದಕ್ಕಾಗಿ ರೂ.25 ಪಾವತಿಸಿ ಸಂಬಂಧಿಸಿದ ವೆಬ್‌ಸೈಟ್ ಅಥವಾ ಮೊಬೈಲ್ ಆಪ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.

    ಚಾರ್‌ಧಾಮ್ ಯಾತ್ರೆಯ ಮಾರ್ಗಸೂಚಿಗಳು

    • ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ಚುನಾವಣಾ ಗುರುತಿನ ಚೀಟಿ ಹಾಗೂ ಆಧಾರ್ ಕಾರ್ಡ್ ಅನ್ನು ಅಪ್‌ಲೋಡ್ ಮಾಡುವುದು.
    • 45 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ಮಾತ್ರ ಈ ಯೋಜನೆಯಡಿ ಸಹಾಯಧನವನ್ನು ಪಡೆಯಲು ಅರ್ಹರಾಗಿರುತ್ತಾರೆ. ಇದಕ್ಕೆ ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಅಪ್‌ಲೋಡ್ ಮಾಡಬೇಕು.
    • ಯಾತ್ರಾರ್ಥಿಗಳು ಸಹಾಯಧನವನ್ನು ಒಂದು ಬಾರಿ ಪಡೆದ ನಂತರದಲ್ಲಿ ಅದೇ ವ್ಯಕ್ತಿಗೆ ಮತ್ತೊಮ್ಮೆ ಅನುದಾನ ನೀಡಲಾಗುವುದಿಲ್ಲ.

    ಕಾಶಿ ಯಾತ್ರೆಯ ಮಾರ್ಗಸೂಚಿಗಳು

    • ಕರ್ನಾಟಕ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳು ಆಯಾ ಆರ್ಥಿಕ ವರ್ಷದ ಮೊದಲ ದಿನಕ್ಕೆ ಅನ್ವಯಿಸುವಂತೆ ಏಪ್ರಿಲ್ 1ಕ್ಕೆ 18 ವರ್ಷಗಳ ಮೇಲ್ಪಟ್ಟವರಾಗಿರತಕ್ಕದ್ದು.
    • 18 ವಯಸ್ಸಿನ ಕೆಳಗಿನವರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. 18 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಹಾಜರುಪಡಿಸಬೇಕು.

     

    ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಮಾರ್ಗಸೂಚಿಯನ್ನು ಇಲಾಖೆಯ ಅಧಿಕೃತ ವೆಬ್​ಸೈಟ್​ನಲ್ಲಿ ಪ್ರಕಟಿಸಲಾಗುತ್ತದೆ

    Continue Reading

    LATEST NEWS

    Trending