FILM
ಅಮೃತಧಾರೆ ನಟಿ ಬದುಕಲ್ಲಿ ಅಯ್ಯೋ ಇದೇನಾಯ್ತು! ಸೋಶಿಯಲ್ ಮೀಡಿಯಾದಲ್ಲಿ ನೋವು ಹಂಚಿಕೊಂಡ ಕಲಾವಿದೆ
Published
4 weeks agoon
By
NEWS DESK4ಮಂಗಳೂರು/ಬೆಂಗಳೂರು : ಶಾಂಭವಿ ಕನ್ನಡ ಕಿರುತೆರೆಯ ಜನಪ್ರಿಯ ನಟಿ. ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ನಿಗೂಢರಾತ್ರಿ, ಪಾರು, ಲಕ್ಷ್ಮಿ, ಗೀತಾಂಜಲಿ ಧಾರಾವಾಹಿಗಳಲ್ಲಿ ನಟಿಸಿ ಜನಮನ ಗೆದ್ದಿದ್ದರು. ಇತ್ತೀಚಿಗೆ ಜನಪ್ರಿಯ ಧಾರಾವಾಹಿ ಅಮೃತಧಾರೆಯಲ್ಲಿ ಗೌತಮ್ ದಿವಾನ್ ಮಾಜಿ ಪ್ರೇಯಸಿ ಮಾನ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.
ಬಹುತೇಕ ನೆಗೆಟಿವ್ ಶೇಡ್ ರೋಲ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದ ಶಾಂಭವಿಗೆ ಅವಳಿ ಮಕ್ಕಳು. ಅವರ ಆರೈಕೆಗಾಗಿ ಶಾಂಭವಿ ಬಿಝಿ ಆಗಿದ್ದಾರೆ. ಸದಾ ಸಾಮಾಜಿಕ ಜಾಲತಾಣದಲ್ಲಿ ಆಕ್ಟೀವ್ ಆಗಿರುವ ಶಾಂಭವಿ ಇಬ್ಬರು ಟ್ವಿನ್ಸ್ ಮಕ್ಕಳ ಕ್ಯೂಟ್ ಫೋಟೋಗಳನ್ನು ಹಾಗೂ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಅದೇ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಬದುಕಿಗೆ ಸಂ*ಕಟ ಹಂಚಿಕೊಂಡಿದ್ದಾರೆ.
ಏನಾಯ್ತು ನಟಿ ಬಾಳಲ್ಲಿ?
ನಟಿ ಶಾಂಭವಿಗೆ ಮೂರು ವರ್ಷದ ದುರ್ಗಾ ಮತ್ತು ದುಶ್ಯಂತ್ ಎಂಬ ಇಬ್ಬರು ಮಕ್ಕಳಿದ್ದಾರೆ. ಈ ಪೈಕಿ ಗಂಡು ಮಗು ದುಶ್ಯಂತ್ ಬ್ಲಡ್ ಕ್ಯಾ*ನ್ಸರ್ ನಿಂದ ಬಳಲುತ್ತಿದ್ದಾನೆ ಎಂಬ ವಿಚಾರವನ್ನು ನಟಿ ಹೇಳಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ದುಶ್ಯಂತ್‌ನ ಕೂದಲು ಉದುರುವ ಹಾಗೂ ಆತನ ತಲೆ ಬೋಳಿಸುವ ಸಮಯ ಬಂದಿದೆ ಎಂದು ವೀಡಿಯೋ ಪೋಸ್ಟ್‌ವೊಂದನ್ನು ಶಾಂಭವಿ ಹಂಚಿಕೊಂಡಿದ್ದರು.
ಕೆಲವರು ಮಗುವಿನ ಆರೋಗ್ಯ ಸಮಸ್ಯೆ ಬಗ್ಗೆ ಗೆಸ್ ಮಾಡಿದ್ದರೂ ಅಭಿಮಾನಿಗಳು ಕಮೆಂಟ್ ಮೂಲಕ ನಟಿ ಶಾಂಭವಿಗೆ ಪ್ರಶ್ನೆ ಕೇಳುತ್ತಿದ್ದರು. ಈ ಹಿನ್ನೆಲೆಯಲ್ಲಿ ಶಾಂಭವಿ ಸುದೀರ್ಘ ಪೋಸ್ಟ್‌ನೊಂದಿಗೆ ಹಾಗೂ ದುಶ್ಯಂತ್‌ನ ಫೋಟೋದೊಂದಿಗೆ ಇರುವ ಅಸಲಿ ವಿಚಾರವನ್ನು ಹಂಚಿಕೊಂಡಿದ್ದಾರೆ.
ನಟಿ ಪೋಸ್ಟ್ ನಲ್ಲೇನಿದೆ?
ಕನಸು ಮನಸಿನಲ್ಲೂ ನೆನೆಸದ ವಿಷಯ ನಡೆದುಹೋಗಿದೆ. ಸೆಪ್ಟೆಂಬರ್ 23ರಂದು 3 ವರುಷದ ಪುಟಾಣಿ ಕಂದ ದುಷ್ಯುಗೆ ಮೂರನೇ ಸ್ಟೇಜ್ ಬ್ಲ*ಡ್ ಕ್ಯಾ*ನ್ಸರ್ ಇರೋದು ಪತ್ತೆ ಆಯ್ತು. 5 – 6 ದಿನಗಳಲ್ಲಿ ನಡೆದ ಟೆಸ್ಟ್ ರಿಸಲ್ಟ್ಸ್ ಬರೋ ವರೆಗೆ ಪ್ರತಿ ಕ್ಷಣವೂ ಇದು ಕ್ಯಾನ್ಸ*ರ್ ಆಗಿರದೆ ಇರಲಿ ಅಂಥ ಪ್ರಾರ್ಥಿಸಿದೆವು. ಆದರೆ, ಹಣೆಯಲಿ ಬರೆದಿರೋದನ್ನು ಬದಲಿಸೋಕೆ ಆಗದಿದ್ದಾಗ ಈ ಪೂಜೆ, ಪ್ರಾರ್ಥನೆ, ಹರಕೆಗಳೆಲ್ಲ ಯಾಕೆ ಅನಿಸುತ್ತದೆ.
ಎನಾಗತ್ತೋ ಆಗ್ಲಿ ಅಂತ ರೆಡಿ ಆಗಿ ನಿಂತಿದ್ದೇವೆ ಇವಾಗ. ಬೇರೆ ಆಯ್ಕೆ ಆದರೂ ಏನಿದೆ? ಇದು 95% ಗುಣ ಮುಖವಾಗುತ್ತದೆ ಅಂಥ ವೈದ್ಯರು ಭರವಸೆ ಕೊಟ್ಟಿದ್ದಾರೆ. ಆದರೆ ಪಾಪ! ದುಷ್ಯೂಗೆ ತನ್ನ ಜೊತೆ ಏನಾಗ್ತಾ ಇದೆ? ಯಾಕ್ ಆಗ್ತಾ ಇದೆ ಅನ್ನೋ ಅರಿವೇ ಇಲ್ಲ. ಎಷ್ಟೆಲ್ಲಾ ನೋವು ಅನುಭವಿಸಬೇಕಲ್ಲ ಈ ಕಂದ ಅನ್ನೋದೇ ಸಂಕಟ.
ಇದನ್ನೂ ಓದಿ : ತ್ರಿವಿಕ್ರಮ್ಗೆ ಒಲಿದ ಅದೃಷ್ಟ; ಬಿಗ್ಬಾಸ್ ಮನೆಯಲ್ಲಿ ಈಗ ‘ಆನೆ’ ನಡೆದಿದ್ದೇ ದಾರಿ!
ನಿನಗೆ ಹುಷಾರಿಲ್ಲ ಮಗನೇ, ತುಂಬಾ ದೊಡ್ಡ ಟ್ರೀಟ್ಮೆಂಟ್ ತಗೋಬೇಕಿದೆ ಅಂಥ ಅರ್ಥ ಮಾಡಿಸೋಕೆ ಪ್ರಯತ್ನ ಪಡುತ್ತಾ ಇರುತ್ತೇನೆ. ಕಿಮಿಯೋ ಥೆರಪಿ ಮೊದಲ ಹಂತ ಮುಗಿದು ಎರಡನೇ ಹಂತ ಶುರುವಾಗಿದೆ. ಸುಮಾರು 40 ದಿನಗಳ ಹಿಂದೆ ಥೆರಪಿಯ ಮೊದಲ ದಿನದಂದು ಕ್ಲಿಕ್ಕಿಸಿದ ಫೋಟೋ ಇದು ಎಂದು ದುಶ್ಯಂತ್ ಫೋಟೋವನ್ನು ಹಂಚಿಕೊಂಡಿದ್ದಾರೆ.
ಶಾಂಭವಿ ಪೋಸ್ಟ್ ಹಾಗೂ ದುಶ್ಯಂತ್ ಫೋಟೋ ಎಂತವರ ಕರುಳೂ ಹಿಂಡುವಂತಿದೆ. ನಟಿಯ ಪೋಸ್ಟ್ ನೋಡಿದ ಪ್ರತಿಯೊಬ್ಬರು ಕೂಡ ಮಗುವಿನ ಆರೋಗ್ಯ ಚೇತರಿಕೆಗಾಗಿ ಹಾರೈಸಿದ್ದಾರೆ. ಧೈರ್ಯ ತುಂಬುತ್ತಿದ್ದಾರೆ.
FILM
ಅಮ್ಮ ಲೀಲಾವತಿಗಾಗಿ ಸ್ಮಾರಕ ನಿರ್ಮಿಸಿದ ವಿನೋದ್ ರಾಜ್
Published
10 hours agoon
05/12/2024By
NEWS DESK2ಹಿರಿಯ ನಟಿ ಡಾ.ಲೀಲಾವತಿ ಸ್ಮಾರಕ ಉದ್ಘಾಟನೆ ಇಂದು (ಡಿ.5) ಸೋಲದೇವನಹಳ್ಳಿಯಲ್ಲಿ ಜರುಗಿದೆ. ಸಚಿವ ಕೆ.ಎಚ್ ಮುನಿಯಪ್ಪ ಅವರಿಂದ ಲೀಲಾವತಿ ಸ್ಮಾರಕ ಉದ್ಘಾಟಿಸಿದ್ದಾರೆ.
ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟದಲ್ಲಿ ಅಮ್ಮನ ಸ್ಮಾರಕವನ್ನು ವಿನೋದ್ ರಾಜ್ ನಿರ್ಮಿಸಿದ್ದಾರೆ. ಅದಕ್ಕೆ ‘ತಾಯಿಯೇ ದೇವರು, ವರನಟಿ ಡಾ.ಲೀಲಾವತಿ ದೇಗುಲ’ ಎಂದು ವಿನೋದ್ ರಾಜ್ ಹೆಸರಿಟ್ಟಿದ್ದಾರೆ. ಇಂದು (ಡಿ.5) ಕುಟುಂಬಸ್ಥರು, ಆಪ್ತರ ಸಮ್ಮುಖದಲ್ಲಿ ಬೆಳಗ್ಗೆ ಹೋಮ, ಹವನ ಮೂಲಕ ಪೂಜೆ ನೆರವೇರಿದೆ.
ಬಹುಭಾಷಾ ನಟಿಯಾಗಿ ಮಿಂಚಿದ ಲೀಲಾವತಿ ಅವರು ಕಳೆದ ವರ್ಷ ಡಿ.8ರಂದು ಇಹಲೋಕ ತ್ಯಜಿಸಿದರು. ಸದಾ ಅಮ್ಮನ ಜೊತೆಯೇ ಇದ್ದು ನೋಡಿಕೊಳ್ಳುತ್ತಿದ್ದ ವಿನೋದ್ ರಾಜ್ ಅವರು ಅಮ್ಮನಿಗಾಗಿ ದೇಗುಲ ಕಟ್ಟಿಸಿದ್ದಾರೆ. ಲೀಲಾವತಿಯವರ ಬಾಲ್ಯದಿಂದ ಬದುಕಿನ ಕೊನೆ ಕ್ಷಣದವರೆಗೂ ಸವೆಸಿ ಹೋದ ಕಾಲಘಟ್ಟಗಳ 60ಕ್ಕೂ ಹೆಚ್ಚು ಫೋಟೋಗಳನ್ನು ಸ್ಮಾರಕದಲ್ಲಿ ಅಳವಡಿಸಲಾಗಿದೆ ಎಂಬುದು ವಿಶೇಷ.
ಮಂಗಳೂರು/ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ.
ರೇಣುಕಾಸ್ವಾಮಿ ಕೊಲೆ ನಡೆದು ಆರು ತಿಂಗಳಾಗಿದೆ. ಈ ಪ್ರಕರಣದಲ್ಲಿ ಒಟ್ಟು 17 ಜನ ಆರೋಪಿಗಳ ಬಂಧನವಾಗಿತ್ತು. ಆದರೆ ಕೆಲವು ಆರೋಪಿಗಳು ಜಾಮೀನು ಪಡೆದು ಹೊರಬಂದಿದ್ದಾರೆ. ಅದರಲ್ಲಿ ಎ2 ಆರೋಪಿ ದರ್ಶನ್ ಅನಾರೋಗ್ಯದ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಸಲ್ಮಾನ್ ಖಾನ್ ಶೂಟಿಂಗ್ ಸೆಟ್ ನಲ್ಲಿ ಭದ್ರತಾ ಲೋಪ !
ಸದ್ಯ ಫಿಸಿಯೋ ಥೆರೆಪಿ ಮಾಡಿಸಲಾಗುತ್ತಿದ್ದು, ಶೀಘ್ರವೇ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ದಾರೆ. ಈ ಮಧ್ಯೆ ದರ್ಶನ್ ಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ.
ಒಂದು ಕಡೆ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ. ಹೀಗಿರುವಾಗಲೇ ಅವರ ಮಧ್ಯಂತರ ಜಾಮೀನು ರದ್ದತಿ ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ. ಶುಕ್ರವಾರ(ಡಿ.6) ಅಥವಾ(ಡಿ.9) ಸೋಮವಾರ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.
ಇನ್ನೂ ದರ್ಶನ್ ಗೆ ತೀವ್ರ ರಕ್ತದೊತ್ತಡ ಇರುವ ಕಾರಣದಿಂದ ಅವರು ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಾಗುತ್ತಿಲ್ಲ. ಬಿಪಿ ಬಳಿಕ ಶಸ್ತ್ರ ಚಿಕಿತ್ಸೆ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
ಮಂಗಳೂರು/ಮುಂಬೈ: ನಟ ಸಲ್ಮಾನ್ ಖಾನ್ ಗೆ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ನಿಂದ ಜೀವ ಬೆದರಿಕೆ ಇರೋದು ಗೊತ್ತೆ ಇದೆ. ಇದರ ನಡುವೆ ಸಲ್ಮಾನ್ ಖಾನ್ ಚಿತ್ರವೊಂದರ ಚಿತ್ರೀಕರಣದ ವೇಳೆ ಭಾರಿ ಭದ್ರತಾ ಲೋಪವಾಗಿದೆ.
ಬಾಲಿವುಡ್ ನಟ ಸಲ್ಮಾನ್ ಖಾನ್ ಮುಂಬೈನ ದಾದರ್ ವೆಸ್ಟ್ ನಲ್ಲಿ, ಸಿನಿಮಾ ಶೂಟಿಂಗ್ ಸಂದರ್ಭ ಅಭಿಮಾನಿಯೊಬ್ಬರು ಚಿತ್ರೀಕರಣ ವೀಕ್ಷಿಸಲು ಬಯಸಿದ್ದಾರೆ. ಆದರೆ ಭದ್ರತಾ ಸಿಬ್ಬಂದಿ ಅವರನ್ನು ಪಕ್ಕಕ್ಕೆ ಸರಿಸಿದಾಗ ಅವರ ನಡುವೆ ಮಾತಿನ ಚಕಮಕಿ ನಡೆಯಿತು.
ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಎನ್.ಐ.ಎ ದಾಳಿ
ಆ ಬಳಿಕ ಕೋಪಗೊಂಡ ಆ ವ್ಯಕ್ತಿ ಲಾರೆನ್ಸ್ ಬಿಷ್ಣೋಯಿ ಹೆಸರು ಹೇಳಿದ್ದಾನೆ. ಇದರಿಂದ ಭದ್ರತಾ ಸಿಬ್ಬಂದಿ ತಕ್ಷಣವೇ ಪೊಲೀಸರನ್ನು ಕರೆಸಿ ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆ ವ್ಯಕ್ತಿ ಮುಂಬೈ ನಿವಾಸಿ ಎಂಬುದು ತಿಳಿದುಬಂದಿದೆ.
ಇತ್ತೀಚೆಗೆ, ಅಕ್ಟೋಬರ್ 24ರಂದು ಮುಂಬೈ ಸಂಚಾರಿ ಪೊಲೀಸರಿಗೆ ಬಂದ ಸಂದೇಶದಲ್ಲಿ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ಹೆಸರಿನಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಬೆದರಿಕೆ ಹಅಕಿ 5 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು.
ನಂತರ ಆ ವ್ಯಕ್ತಿಯನ್ನು ಹಾವೇರಿಯಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದಾರೆ.