Thursday, February 9, 2023

ಪ್ರಧಾನಿ ಉದ್ಘಾಟಿಸುವ 4000 ಕೋಟಿಯ ಕಾಮಗಾರಿ ಯಾವುದು: ಖಾದರ್ ಪ್ರಶ್ನೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದು, ಅವರನ್ನು ಜಿಲ್ಲೆಯ ಜನತೆಯ ಪರವಾಗಿ ಸ್ವಾಗತಿಸುತ್ತೇವೆ. ಆದರೆ ಪ್ರಧಾನಿಯವರು ಚಾಲನೆ ನೀಡಲಿರುವ ಬಿಜೆಪಿಯವರು ಪ್ರಚಾರಪಡಿಸುತ್ತಿರುವ 4000 ಕೋಟಿ ಕಾಮಗಾರಿ ಯಾವುದು ಎನ್ನುವುದನ್ನು ಜನತೆಯ ಮುಂದೆ ಪ್ರಸ್ತುತಪಡಿಸಬೇಕು ಎಂದು ವಿಧಾನಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಹೇಳಿದರು.


ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು “ಜಿಲ್ಲೆಗೆ ಪ್ರಧಾನಿಗಳು ಆಗಮಿಸುವ ಸಂದರ್ಭದಲ್ಲಿ ಕೆಲವೊಂದು ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಸಂಪ್ರದಾಯ ಹಿಂದಿನಿಂದಲೂ ನಡೆದುಕೊಂಡು ಬಂದಿದೆ.

ಆದರೆ ಆ ಸಮಯದಲ್ಲಿ ಕಾರ್ಯಕ್ರಮಗಳ ಎಲ್ಲಾ ವಿವರಗಳನ್ನು ಜನರ ಮುಂದೆ ವಿವರಿಸಲಾಗುತ್ತಿತ್ತು.
ಆದರೆ ಪ್ರಧಾನಿ ಮೋದಿ ಬರುವ ಕಾರ್ಯಕ್ರಮದಲ್ಲಿ 4000 ಕೋಟಿ ಕಾಮಗಾರಿಗೆ ಚಾಲನೆ ನೀಡುತ್ತಾರೆ ಎಂದು ಬಿಜೆಪಿಯವರು ಕೇವಲ ಪತ್ರಿಕೆಗಳಲ್ಲಿ ಪ್ರಚಾರ ಮಾಡುತ್ತಿದ್ದು, ಯಾವ ಕಾಮಗಾರಿ ಎನ್ನುವುದನ್ನು ಜನತೆಗೆ ತಿಳಿಸಿಲ್ಲ.

ಅದರಲ್ಲಿ ರಾಜ್ಯ ಮತ್ತು ಕೇಂದ್ರದ ಪಾಲೆಷ್ಟು ಎಂದು ಪ್ರಶ್ನಿಸಿದರು.
ದೇಶದ ಜನ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದರೂ, ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಇದರ ಯಾವುದೇ ಗೋಚರವೇ ಇಲ್ಲ ಎಂದು ದೂರಿದ ಅವರು ದಕ್ಷಿಣ ಕನ್ನಡ ಜಿಲ್ಲೆಯ ಜನ ಬೆಲೆ ಏರಿಕೆಯಿಂದ ತತ್ತರಿಸಿದ್ದು,

ಯುವಕರು ಉದ್ಯೋಗವಿಲ್ಲದೆ ಅಲೆದಾಡುವಂತಹ ಸ್ಥಿತಿಯಲ್ಲಿದ್ದಾರೆ. ರಾಜ್ಯ ಸರಕಾರ ಕೋಮುವಾದಿಗಳು ನಡೆಸುತ್ತಿರುವ ದುಷ್ಕೃತ್ಯಗಳನ್ನು ಸಮರ್ಥಿಸಿಕೊಳ್ಳುತ್ತಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.

LEAVE A REPLY

Please enter your comment!
Please enter your name here

Hot Topics

ಸುರತ್ಕಲ್ ‌ಫಾಝಿಲ್ ಕೊಲೆ ಆರೋಪಿಯಿಂದ ಹಣಕ್ಕಾಗಿ ಬೆದರಿಕೆ: ಉಳ್ಳಾಲ ಠಾಣೆಯಲ್ಲಿ ‌ಪ್ರಕರಣ ದಾಖಲು

ಕೇಳಿದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮಾಡೂರು ಬಳಿ ನಡೆದಿದೆ.ಉಳ್ಳಾಲ: ಕೇಳಿದ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆಯೊಡ್ಡಿದ ಘಟನೆ...

ಹಾಸನ: ಅಪಹರಣಕ್ಕೆ ಒಳಗಾಗಿದ್ದ ಯುವಕನ ಶವ ಪತ್ತೆ, ಕೊಲೆ ಶಂಕೆ ..!

ಹಾಸನ :  ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಅಪಹರಣಕ್ಕೆ ಒಳಗಾಗಿದ್ದ ಯುವಕನ ಶವ ಪತ್ತೆಯಾದ ಘಟನೆ ಹಾಸನ ಜಿಲ್ಲೆಯ ಯೋಗೀಹಳ್ಳಿಯಲ್ಲಿ ನಡೆದಿದೆ.26 ವರ್ಷ ಪ್ರಾಯದ ಲಿಖಿತ್‌ಗೌಡ ಯಾನೆ ಬಂಗಾರಿ ಕೊಲೆಯಾದ ಯುವಕ. ಈತನನ್ನು ಕೊಲೆ...

ಸುರತ್ಕಲ್ ವ್ಯಾಪ್ತಿಯಲ್ಲಿ ಲಘು ಅಪಘಾತ: ಇತ್ತಂಡಗಳ ಮಧ್ಯೆ ಹೊಯ್‌ಕೈ- ಮಾತಿನ ಚಕಮಕಿ..!

ಮಂಗಳೂರು : ಮಂಗಳೂರು ಹೊವಲಯದ  ಸುರತ್ಕಲ್ ಠಾಣಾ ವ್ಯಾಪ್ತಿಯ ಗಣೇಶ್ ಪುರ ಎಂಬಲ್ಲಿ ಬುಧವಾರ ರಾತ್ರಿ ಬೈಕ್- ಕಾರ್ ನಡುವೆ ಲಘು ಅಪಘಾತ ಸಂಭವಿಸಿದ್ದು, ಇದರಿಂದ ಪರಿಸ್ಥಿತಿ ವಿಕೋಪಕ್ಕೆ ಹೋಗಿ ಕೆಲ ಕಾಲ...