Connect with us

    DAKSHINA KANNADA

    ಮಳೆ ಹಾನಿಗೆ 10 ಸಾವಿರ ಕೊಟ್ಟರೆ ಏನು ಪ್ರಯೋಜನ-ಸರ್ಕಾರಕ್ಕೆ ಐವನ್ ಪ್ರಶ್ನೆ

    Published

    on

    ಮಂಗಳೂರು: ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಜನರ ಪರಿಸ್ಥಿತಿ ಕಂಗೆಟ್ಟು ಹೋಗಿದೆ. ಚರಂಡಿಯ ಮೇಲೆ ನೀರು ನಿಂತಿರುವುದು ಅಂತೂ ಶೋಚನೀಯ ಸ್ಥಿತಿ. ಸರ್ಕಾರ ಏನು ಪರಿಹಾರ ಕ್ರಮವನ್ನು ಕೈಗೊಳ್ಳುತ್ತಿದೆ ಎನ್ನುವುದು ತಿಳಿಯುತ್ತಿಲ್ಲ.

    ಡಿಸಿ ಅಕೌಂಟ್‌ನಲ್ಲಿ ಎಷ್ಟಿದೆ ಅಂತ ಕೇಳಿದ್ರೆ 15 ಕೋಟಿ ಅಂತಾರೆ. ಆದರೆ ಖರ್ಚು ಎಷ್ಟು ಮಾಡಿದ್ರಿ ಅಂತ ಕೇಳಿದ್ರೆ ಗೊತ್ತಿಲ್ಲ ಅಂತಾರೆ. ಹಾಗಾದ್ರೆ 15 ಕೋಟಿ ಇಟ್ಟುಕೊಂಡು ಖರ್ಚು ಮಾಡದಿದ್ರೆ ಏನು ಪ್ರಯೋಜನ. ಅದನ್ನು ಯಾರಿಗೆ ಕೊಡ್ಲಿಕ್ಕೆ’ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಐವನ್ ಡಿಸೋಜಾ ಸರ್ಕಾರದ ಬಗ್ಗೆ ವ್ಯಂಗ್ಯವಾಡಿದ್ದಾರೆ.

    ಮಳೆಯಿಂದ ಸಂಭವಿಸಿರುವ ಅಪಾರ ಹಾನಿಯ ಬಗ್ಗೆ ನಗರದ ಕಾಂಗ್ರೆಸ್ ಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸತತವಾಗಿ ಮಳೆ ಸುರಿಯುತ್ತಿರುವುದರಿಂದ ಅಪಾರ ಹಾನಿ ಉಂಟಾಗಿದೆ. ಕಾಂಗ್ರೆಸ್ ಪಕ್ಷ ಸಂತ್ರಸ್ತರಿಗೆ ನೆರವು ನೀಡುವ ಕೆಲಸ ನಿರಂತರವಾಗಿ ಮಾಡುತ್ತಿದೆ.

    ಹಲವು ಮನೆಗಳಿಗೆ ಹಾನಿ ಉಂಟಾಗಿದೆ. ಸಂಪೂರ್ಣ ಮನೆ ಕಳೆದುಕೊಂಡವರಿಗೆ ಕೇವಲ 95,000 ರೂಪಾಯಿ ಅಲ್ಪ ಮೊತ್ತದ ಪರಿಹಾರವನ್ನು ಅಧಿಕಾರಿಗಳು ನೀಡುತ್ತಿದ್ದಾರೆ. ಆದರೆ ಸೂಕ್ತ ರೀತಿಯ ಪರಿಹಾರವನ್ನು ನೀಡಲು ಸರಕಾರ ಮುಂದಾಗುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


    ನಾವು ವಿರೊಧ ಪಕ್ಷದವರಾದರೂ ಕೂಡಾ ಸರ್ವೇ ಮಾಡಿ ಸರ್ಕಾರಕ್ಕೆ ನೀಡಿದ್ದೇವೆ. ಆದರೆ ದುರಾದೃಷ್ಟ ಅಂದ್ರೆ ಸರ್ಕಾರ ಅದಕ್ಕೂ ಏನೂ ಸ್ಪಂದನೆ ನೀಡಿಲ್ಲ. ಸಾಕಷ್ಟು ಒತ್ತಡ ಹಾಕಿದ್ರೂ ಕೂಡಾ ಸರ್ಕಾರ ಕೊರೋನಾದ ನೆವನ ಹೇಳಿ ಏನೂ ಪರಿಹಾರ ಕೊಟ್ಟಿಲ್ಲ. ಮನೆ ಬಿದ್ದವರಿಗೆ, 2-3 ವರ್ಷದಿಂದ ಬೆಳ್ತಂಗಡಿಯಲ್ಲಿ ಸರಿಯಾಗಿ ಪರಿಹಾರವೇ ಕೊಟ್ಟಿಲ್ಲ. ಜಿಲ್ಲೆಯ ವಿವಿಧ ಕಡೆಗಳಲ್ಲಿ ಪರಿಹಾರಕ್ಕಾಗಿ ಕೇವಲ 10 ಸಾವಿರ ಕೊಟ್ಟರೆ ಏನು ಪ್ರಯೋಜನವಿದೆ ಎಂದು ಪ್ರಶ್ನಿಸಿದರು.

    ಕೇವಲ ಅರ್ ಅಶೋಕ್ ಅವರು ಬಂದು ವೀಕ್ಷಣೆ ಮಾಡಿ ಹೋಗಿದ್ದಾರೆ. ಆದರೆ ಉಳಿದ ಯಾವ ಜನಪ್ರತಿನಿಧಿಯೂ ಬಂದಿಲ್ಲ. ಇಲ್ಲಿ ಎಷ್ಟು ನಷ್ಟವಾಗಿದೆ. ಎಷ್ಟು ಪರಿಹಾರ ಕೊಟ್ಟಿದ್ದೀರಿ ಎನ್ನುವ ವಿಚಾರವನ್ನು ಜನತೆ ಮುಂದಿಡಿ. ಸಾಂಕ್ರಾಮಿಕ ರೋಗಗಳು ಬರುವ ಭೀತಿ ಇದೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಏನು ಕ್ರಮ ಕೈಗೊಂಡಿದ್ದೀರಿ ಎಂದು ವಿವರಿಸಿ ಎಂದರು.

    ಇನ್ನು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ 75 ವರ್ಷದ ಜನ್ಮ ದಿನವನ್ನು ಪಕ್ಷದ ವತಿಯಿಂದ ಹಾಗೂ ಹಿತೈಷಿಗಳ ಒಟ್ಟುಗೂಡುವಿಕೆಯಲ್ಲಿ ಅದ್ದೂರಿಯಾಗಿ ಆಗಸ್ಟ್ 3ರಂದು ದಾವಣಗೆರೆಯಲ್ಲಿ ನಡೆಸಲಿದ್ದೇವೆ ಎಂದರು.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಬಂಟ್ವಾಳ :ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾ*ತ; ಪತ್ನಿ ಸಾ*ವು; ಪತಿ ಗಂಭೀ*ರ

    Published

    on

    ಬಂಟ್ವಾಳ : ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಸಂಭವಿಸಿ ಪತ್ನಿ ಸಾ*ವನ್ನಪ್ಪಿದ್ದು, ಪತಿ ಗಂ*ಭೀರವಾಗಿ ಗಾ*ಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾ*ವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಅನಿಶ್ ಕೃಷ್ಣ ಗಂಭೀ*ರವಾಗಿ ಗಾ*ಯಗೊಂಡಿದ್ದಾರೆ.

    ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಸಿರೋಡಿನ ಕಡೆಯಿಂದ ‌ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ನವದಂಪತಿಯ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿದೆ. ಬಳಿಕ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಗೆ ಡಿ*ಕ್ಕಿ ಹೊಡೆದಿದೆ.

    ಡಿ*ಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಘಟನೆಯಿಂದ ಹೆದ್ದಾರಿಯಲ್ಲಿ ಕೆಲಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು.

    ಎರಡು ದಿನದ ಹಿಂದಷ್ಟೇ ಮದುವೆ : 

    ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮಾನಸ ಹಾಗೂ ಅನಿಶ್ ಕೃಷ್ಣ  ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಇಂದು ಅಲ್ಲಿನ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸ್ ಮಾವನ ಮನೆಗೆ ಹೋಗುವ ವೇಳೆ ಈ ‌ಘ‌ಟನೆ ನಡೆದಿದೆ ಎನ್ನಲಾಗಿದೆ. ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು,  ಪ್ರಕರಣ ದಾಖಲಿಸಿಕೊಂಡಿದ್ದಾರೆ

    Continue Reading

    DAKSHINA KANNADA

    ಯಕ್ಷಗಾನ ಕಲಾವಿದ ಕುಪ್ಪೆಪದವು ಉಮೇಶ್ ಸಾಲ್ಯಾನ್ ರಿಗೆ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಪ್ರಶಸ್ತಿ

    Published

    on

    ಮಂಗಳೂರು : ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಹಿರಿಯ ಅರ್ಚಕ ದಿ.ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣಾ ಪ್ರಯುಕ್ತ ಕಟೀಲು ಮೇಳದ ಹಿರಿಯ ಯಕ್ಷಗಾನ ವೇಷಧಾರಿ ಕುಪ್ಪೆಪದವು ಉಮೇಶ್ ಸಾಲ್ಯಾನ್ ಅವರಿಗೆ ಈ ವರ್ಷದ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಪ್ರಶಸ್ತಿ ನೀಡಲಾಗುವುದು.

    ಆಸ್ರಣ್ಣ ಅಭಿಮಾನಿ ಬಳಗ ಕದ್ರಿ ಈ ಪ್ರಶಸ್ತಿಯನ್ನು ನೀಡುತ್ತಿದ್ದು, ಚಿನ್ನದ ಪದಕದೊಂದಿಗೆ ಕುಪ್ಪೆಪದವು ಉಮೇಶ್ ಸಾಲ್ಯಾನ್ ರವರನ್ನು ಗೌರವಿಸಲಾಗುವುದು.

    ಇದನ್ನೂ ಓದಿ : ಮಂಗಳೂರು: ‘ಜಿಲ್ಲಾದ್ಯಂತ ಎಲೆಕ್ಟ್ರಿಕ್ ಆಟೋ ರಿಕ್ಷಾ ಪರವಾನಗಿ ಹಿಂಪಡೆಯುವುದಿಲ್ಲ’ – ಡಿಸಿ ಮುಗಿಲನ್

    ಕಟೀಲು ಲಕ್ಷ್ಮಿ ನಾರಾಯಣ ಆಸ್ರಣ್ಣ ಮತ್ತು ಬಂಧುಗಳು ಸೆಪ್ಟೆಂಬರ್ 14 ರ ಶನಿವಾರ ಸಂಜೆ ಶ್ರೀ ಗೋಪಾಲಕೃಷ್ಣ ಆಸ್ರ ಣ್ಣ ಸಭಾಭವನದಲ್ಲಿ ಹಮ್ಮಿಕೊಡಿರುವ ಸಂಸ್ಮರಣಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಆಸ್ರಣ್ಣ ಅಭಿಮಾನಿ ಬಳಗದ, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಹಾಗೂ ನವನೀತ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Continue Reading

    DAKSHINA KANNADA

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಸೆ. 12 ರವರೆಗೆ ಕರಾವಳಿಯಲ್ಲಿ ಭಾರೀ ಮಳೆ

    Published

    on

    ಮಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಸೆಪ್ಟೆಂಬರ್ 12 ರವರೆಗೆ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

    ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಇಂದು ಮೋಡಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

    Continue Reading

    LATEST NEWS

    Trending