Connect with us

  LATEST NEWS

  ಲಾರಿ ಪಲ್ಟಿಯಾದಾಗ ನಾ ಮುಂದು ತಾ ಮುಂದು ಎಂದು ಬಿಯರ್ ಬಾಟಲಿಗೆ ಮುಗಿ ಬಿದ್ದ ಜನತೆ..

  Published

  on

  ಚಿಕ್ಕಮಗಳೂರು: ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬಿಯರ್ ಹೊತ್ತೊಯ್ಯುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಶಿವಮೊಗ್ಗ ತರಿಕೇರಿ ರಸ್ತೆಯಲ್ಲಿ ನಡೆದಿದೆ.ಲಾರಿ ಪಲ್ಟಿಯಾಗಿದ್ದ ಸ್ಥಳದಲ್ಲಿ ಯಾರಿಗೆ ಏನು ಗಾಯವಾಗಿದೆ, ಯಾವ ಪರಿಸ್ಥಿತಿಯಲ್ಲಿದ್ದಾರೆ ಅನ್ನೋದನ್ನ ನೋಡೋ ಗೋಜಿಗೆ ಹೋಗದೆ. ಚಾಲಕ ಮಾರಣಾಂತಿಕ ಸ್ಥಿತಿಯಲ್ಲಿದ್ದರೂ ಲೆಕ್ಕಿಸದೆ ಕೇವಲ ಬಿಯರ್ ಬಾಟಲಿಗಳನ್ನು ಹೊತ್ತೊಯ್ಯಲು ಮುಗಿಬಿದ್ದಿದ್ದರು.

  ಪೊಲೀಸರು ಸ್ಥಳಕ್ಕೆ ಬಂದು ಜನರನ್ನು ಚದುರಿಸಲು ನೋಡಿದ್ರೆ ಅವರಿಗೇ ಆಮಿಷ ಒಡ್ಡಿ ಬಿಟ್ಟು ಬಿಡಿ ಎಂದು ಮನವಿ ಮಾಡಿಕೊಳ್ಳುತ್ತಿದ್ದ ದೃಶ್ಯವೂ ಕಂಡು ಬಂತು.

  ಕೊನೆಗೆ ಲಾರಿಯಲ್ಲಿದ್ದ ಬಾಟಲಿಗಳು ಖಾಲಿಯಾದ ನಂತರವೇ ಜನರ ನೂಕು ನುಗ್ಗಲು ಕಡಿಮೆಯಾಗಿ ಪೊಲೀಸರು ಅಪಘಾತದ ಬಗ್ಗೆ ಪರಿಶೀಲನೆ ನಡೆಸುವಂತಾಯಿತು.

  LATEST NEWS

  ಚಾಕೊಲೇಟ್ ಗ್ಯಾಂಗ್ ಆಯ್ತು ಈಗ ದರೋಡೆಗಿಳಿದಿದೆ ಜ್ಯೂಸ್ ಗ್ಯಾಂಗ್!

  Published

  on

  ಮಂಗಳೂರು / ಬೆಳಗಾವಿ : ರಾಜ್ಯದಲ್ಲಿ ದಿನೇ ದಿನೇ ಕಳ್ಳತನ ಪ್ರಕರಣಗಳು ಹೆಚ್ಚುತ್ತಿವೆ. ರೈಲಿನಲ್ಲಿ ಚಾಕೋಲೇಟ್ ನೀಡಿ ನಗ ನಗದು ದೋಚುತ್ತಿದ್ದ ಪ್ರಕರಣಗಳು ಹೆಚ್ಚಾಗಿದ್ದವು, ಆದರೆ, ಈಗ ಜ್ಯೂಸ್ ಗ್ಯಾಂಗ್ ಒಂದು ತಲೆ ಎತ್ತಿದೆ.


  ಹೌದು, ಚಲಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಜ್ಯೂಸ್ ಹಾಗೂ ಬಾಳೆಹಣ್ಣು ನೀಡಿ ನಗ ನಾಣ್ಯ ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ನಡೆದಿರುವುದು ಹುಬ್ಬಳ್ಳಿಯಿಂದ ಬೆಳಗಾವಿಗೆ ಬರುತ್ತಿದ್ದ ಬಸ್ ನಲ್ಲಿ. ಸಂಜೀವ್ ಖೋತ (40) ಹಾಗೂ ಮತ್ತೋರ್ವ ಪ್ರಯಾಣಿಕರಿಂದ ಈ ಗ್ಯಾಂಗ್ ನಗ ನಗದು ದೋಚಿದೆ.

  ಪ್ರಜ್ಞೆ ತಪ್ಪಿಸಿ ಕೃತ್ಯ!

  ಸಂಜೀವ್ ಹಾಗೂ ಮತ್ತೋರ್ವ ಪ್ರಯಾಣಿಕನಿಗೆ ಈ ಗ್ಯಾಂಗ್ ಜ್ಯೂಸ್​​ನಲ್ಲಿ ಮೂರ್ಛೆ ಬರುವ ಪದಾರ್ಥ ಮಿಶ್ರಣ ಮಾಡಿ ಪ್ರಜ್ಞೆ ತಪ್ಪಿಸಿದೆ. ಬಳಿಕ ಬಂಗಾರದ ಚೈನ್, ಬ್ಯಾಗ್, ಪರ್ಸ್ ಕದ್ದು ಪರಾರಿ ಆಗಿದ್ದಾರೆ. ಸದ್ಯ ಹದಿನಾಲ್ಕು ಗಂಟೆಯಿಂದ ಸಂಪೂರ್ಣ ಪ್ರಜ್ಞಾಹೀನ‌ ಸ್ಥಿತಿಯಲ್ಲಿರುವ ಸಂಜೀವ್ ಖೋತಗೆ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

  ಮತ್ತೋರ್ವನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
  ಇತ್ತೀಚೆಗೆ ರೈಲು ಪ್ರಯಾಣಿಕರನ್ನು ಲೂಟಿ ಮಾಡುತ್ತಿದ್ದ ಚಾಕೋಲೇಟ್ ಗ್ಯಾಂಗ್ ಪೊಲೀಸರ ನಿದ್ದೆಗೆಡಿಸಿತ್ತು.

  ಇದನ್ನೂ ಓದಿ : 100 ಅಡಿ ಎತ್ತರದಿಂದ ಕೆರೆಗೆ ಹಾರಿದ ಯುವಕ; ರೀಲ್ಸ್ ಗಾಗಿ ಹೋಯ್ತು ಪ್ರಾ*ಣ!

  ಪ್ರಯಾಣಿಕರ ಸೋಗಿನಲ್ಲಿ ಬಂದು ಈ ಗ್ಯಾಂಗ್ ಪ್ರಯಾಣಿಕರ ಗೆಳೆತನ ಬೆಳೆಸಿ ಚಾಕೋಲೇಟ್ ನೀಡಿ, ಪ್ರಜ್ಞೆ ತಪ್ಪಿಸಿ, ಬಳಿಕ ನಗ, ನಗದು ದೋಚಿ ಪರಾರಿಯಾಗುತ್ತಿತ್ತು. ರೈಲ್ವೆ ಪೊಲೀಸರು ಕಾರ್ಯಾಚರಣೆ ನಡೆಸಿ, ಖದೀಮರನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿತ್ತು.

  Continue Reading

  LATEST NEWS

  100 ಅಡಿ ಎತ್ತರದಿಂದ ಕೆರೆಗೆ ಹಾರಿದ ಯುವಕ; ರೀಲ್ಸ್ ಗಾಗಿ ಹೋಯ್ತು ಪ್ರಾ*ಣ!

  Published

  on

  ಮಂಗಳೂರು / ಜಾರ್ಖಂಡ್ : ರೀಲ್ಸ್ ಮಾಡುವ ಕ್ರೇಜ್ ಇಂದು ಬಹುತೇಕ ಮಂದಿಯಲ್ಲಿ ಕಾಣುತ್ತೇವೆ. ಯುವಕ – ಯುವತಿಯರೂ ಬಿಡಿ. ಮಕ್ಕಳೂ, ವೃದ್ಧರೂ ಕೂಡ ರೀಲ್ಸ್ ಮಾಡುತ್ತಿರುತ್ತಾರೆ. ಹೆಚ್ಚು ವೀಕ್ಷಣೆ ಪಡೆಯುವ ಸಲುವಾಗಿ ಸರ್ಕಸ್ ಮಾಡುತ್ತಲೇ ಇರುತ್ತಾರೆ. ರೀಲ್ಸ್ ಗಾಗಿ ಪ್ರಾ*ಣ ತೆಗೆದವರೂ ಇದ್ದಾರೆ. ಪ್ರಾ*ಣ ಕಳೆದುಕೊಂಡವರೂ ಇದ್ದಾರೆ.

   

  ಇಲ್ಲೊಬ್ಬ ಯುವಕ ರೀಲ್ಸ್ ಮಾಡುವ ಭರದಲ್ಲಿ ಇಹಲೋಕ ತ್ಯಜಿಸಿದ್ದಾನೆ. ಇನ್ಸ್ಟಾ ಗ್ರಾಂ ರೀಲ್ಸ್ ಗಾಗಿ 18 ವರ್ಷದ ಯುವಕನೊಬ್ಬ 100 ಅಡಿ ಎತ್ತರದಿಂದ ನೀರಿಗೆ ಹಾರಿ ಜೀ*ವ ಕಳೆದುಕೊಂಡಿರುವ ಘಟನೆ ಜಾರ್ಖಂಡ್ ನ ಸಾಹಿಬ್ ಗಂಜ್ ಜಿಲ್ಲೆಯಲ್ಲಿ ನಡೆದಿದೆ. ತೌಸಿಫ್(18) ಮೃ*ತ ಯುವಕ. ಸೋಮವಾರ ಸಂಜೆ ಯುವಕ ಸುಮಾರು 100 ಅಡಿ ಎತ್ತರದಿಂದ ಕ್ವಾರಿ ಕೆರೆಗೆ ಹಾರಿದ್ದಾನೆ. ಈ ವೇಳೆ ಕೆರೆಯಲ್ಲಿ ಸ್ನಾನ ಮಾಡುತ್ತಿದ್ದ ಆತನ ಸ್ನೇಹಿತರು ಆತನನ್ನು ರಕ್ಷಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ.

  ಇದನ್ನೂ ಓದಿ : ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದ ಕೋಲ್ಕತ್ತಾದಲ್ಲಿ ಶ*ವವಾಗಿ ಪತ್ತೆ!

  ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತೀವ್ರ ಶೋಧದ ಬಳಿಕ ಯುವಕನ ಮೃ*ತದೇಹ ಪತ್ತೆಯಾಗಿದೆ. ಸದ್ಯ ಯುವಕ ನೀರಿಗೆ ಜಿಗಿದಿರುವ ವೀಡಿಯೋ ವೈರಲ್ ಆಗಿದೆ. ಯುವಕ ನೀರಿಗೆ ಜಿಗಿಯುತ್ತಾನೆ. ಯುವಕ ಈಜುವ ಬದಲು ಮುಳುಗುತ್ತಿದ್ದರೂ, ಆತನ ಗೆಳೆಯರು ಪ್ರಾರಂಭದಲ್ಲಿ ತಮಾಷೆ ಎಂದು ಭಾವಿಸುತ್ತಾರೆ. ಆದರೆ, ಎಷ್ಟೇ ಹೊತ್ತಾದರೂ ಆತ ಮೇಲೆ ಬರುವುದಿಲ್ಲ. ಇದರಿಂದ ಗಾಬರಿಗೊಂಡ ಸ್ನೇಹಿತರು ಅವನನ್ನು ರಕ್ಷಿಸಲು ಯತ್ನಿಸಿದ್ದಾರೆ. ಆದರೆ, ಅದು ಸಾಧ್ಯವಾಗಲಿಲ್ಲ.

  ರೀಲ್ಸ್ ಗಾಗಿ ಈ ರೀತಿ ಹುಚ್ಚಾಟ ಮಾಡುವವರಿಗೆ ಇದೊಂದು ಪಾಠ ಎಂಬುದಾಗಿ ನೆಟ್ಟಿಗರು ಆಕ್ರೋಶ ಹೊರ ಹಾಕಿದ್ದಾರೆ.

  Continue Reading

  BELTHANGADY

  ಶಾಸಕನ ಬಂಧನಕ್ಕೆ ಮುಂದಾದ ಪೊಲೀಸರು…! ಎಚ್ಚರಿಕೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ…!

  Published

  on

  ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ವಿರುದ್ಧ ಕೇಸು ದಾಖಲಿಸಿಕೊಂಡ ಪೊಲೀಸರು ಇಂದು ಹರೀಶ್ ಪೂಂಜಾ ಬಂಧನಕ್ಕೆ ಮುಂದಾಗಿದ್ದಾರೆ.

  ಬೆಳ್ತಂಗಡಿಯಲ್ಲಿ ಅಕ್ರಮ ಗಣಿಗಾರಿಕೆಯ ವಿಚಾರದಲ್ಲಿ ಸ್ಫೋಟಕ ಕಾಯ್ದೆಯಡಿ ಬಂಧನವಾಗಿರುವ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಪರವಾಗಿ ಹರೀಶ್ ಪೂಂಜ ಪ್ರತಿಭಟನೆ ನಡೆಸಿದ್ದರು. ನೀತಿ ಸಂಹಿತೆ ಜಾರಿಯಲ್ಲಿದ್ದಾಗ ಅನುಮತಿ ಇಲ್ಲದೆ ಪ್ರತಿಭಟನೆ ಮಾಡಿಸಿದ್ದು ಮಾತ್ರವಲ್ಲದೆ ಸಭೆಯಲ್ಲಿ ಅವರು ಮಾಡಿದ ಭಾಷಣದ ವಿಚಾರವಾಗಿ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು.

  ಪೊಲೀಸ್ ಅಧಿಕಾರಿಗಳ ವಿರುದ್ಧ ಕೀಳು ಮಟ್ಟದ ಭಾಷೆ ಪ್ರಯೋಗಿಸಿದ್ದು, ಮತ್ತು ಡಿಜೆ ಹಳ್ಳಿ ಕೆ.ಜಿ ಹಳ್ಳಿ ಮಾದರಿಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಶಾಸಕರು ಹೇಳಿದ್ದರು. ಇದೀಗ ಪೊಲೀಸರು ಶಾಸಕ ಹರೀಶ್ ಪೂಂಜಾ ಮನೆಗೆ ಆಗಮಿಸಿ ಅವರ ಬಂಧನಕ್ಕೆ ಮುಂದಾಗಿದ್ದಾರೆ. ಆದ್ರೆ ಈ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ತೀವೃವಾಗಿ ಖಂಡಿಸಿದ್ದಾರೆ.

  ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ವಿಜಯೇಂದ್ರ ಇದು ಕಾಂಗ್ರೆಸ್ ಸರ್ಕಾರದ ಕುತಂತ್ರವಾಗಿದೆ ಎಂದು ಆರೋಪಿಸಿದ್ದಾರೆ. ತಮ್ಮ ಮೋರ್ಚಾದ ಅಧ್ಯಕ್ಷನ ವಿರುದ್ಧ ಸುಳ್ಳು ಕೇಸು ದಾಖಲಿಸಿದ್ದನ್ನು ಕೇಳಲು ಶಾಸಕರು ಹೋಗಿದ್ದಾರೆ. ಅವರ ಬಿಡುಗಡೆಗೆ ಪ್ರತಿಭಟನೆ ಮಾಡಿದ್ದಾರೆ. ಇದನ್ನು ನೀತಿ ಸಂಹಿತೆಯ ಕಾರಣ ನೀಡಿ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ದೊಡ್ಡ ವಿಚಾರ ಮಾಡಿದ್ದಾರೆ. ನಮ್ಮ ಶಾಸಕನನ್ನು ಬಂಧಿಸಿದರೆ ಉಗ್ರ ಹೋರಾಟವನ್ನು ಸರ್ಕಾರ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

  ಇನ್ನು ಹರೀಶ್ ಪೂಂಜಾ ಬಂಧನಕ್ಕೆ ಪೊಲೀಸರು ಮುಂದಾದ ವಿಚಾರದ ಸುದ್ದಿ ತಿಳಿದು ಪೂಂಜಾ ಪರ ವಕೀಲರು ಹಾಗೂ ಬೆಂಬಲಿಗರು ಆಗಮಿಸಿದ್ದಾರೆ. ಶಾಸಕರ ಬಂಧನಕ್ಕೆ ಅವಕಾಶ ನೀಡದಂತೆ ಕಾರ್ಯಕರ್ತರು ತಮ್ಮ ವಾಹನಗಳನ್ನು ದಾರಿಗೆ ಅಡ್ಡವಾಗಿಟ್ಟಿದ್ದಾರೆ. ಈ ವಿಚಾರವಾಗಿ ಮಾತನಾಡಿದ ವಕೀಲರು ಪೊಲೀಸರು ನಿಯಮ ಬಾಹಿರವಾಗಿ ಶಾಸಕರನ್ನು ಬಂಧಿಸಲು ಮುಂದಾಗಿದ್ದಾರೆ. ವಿಚಾರಣೆಗೆ ಹಾಜರಾಗಿ ಅಂತ ನೊಟೀಸು ಕೂಡ ನೀಡದೆ ನೇರವಾಗಿ ಮನೆಗೆ ಬಂದಿದ್ದಾರೆ. ಇದು ತಪ್ಪು ಎಂದು ಹೇಳಿದ್ದಾರೆ. ಡಿಎಸ್‌ಪಿಯವರು ನಿಮ್ಮನ್ನು ಬಂಧಿಸಲು ಬಂದಿದ್ದಲ್ಲ ವಿಚಾರಣೆಗೆ ಬನ್ನಿ ಎಂದು ಕರೆಯಲು ಬಂದಿದ್ದು ಎಂದಿದ್ದಾರೆ. ಆದರೆ ಈ ರೀತಿಯಾಗಿ ಕರೆಯಲು ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ಹೇಳಿದ್ದಾರೆ.

  Continue Reading

  LATEST NEWS

  Trending