Connect with us

LATEST NEWS

ಅಂಬೇಡ್ಕರ್ ಗೆ ದ್ರೋಹ ಮಾಡುವಾಗ ಕಾಂಗ್ರೆಸ್ ಎಲ್ಲಿತ್ತು ? : ಖರ್ಗೆಗೆ ಸಚಿವ ಸುನೀಲ್ ಕುಮಾರ್ ಪ್ರಶ್ನೆ

Published

on

ಬೆಂಗಳೂರು : ಸಂವಿಧಾನದ ಆಶಯಗಳ ಬಗ್ಗೆ ಪುಂಖಾನುಪುಂಖವಾಗಿ ಮಾತನಾಡುವ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಚಿತ್ತಾಪುರ ಮೀಸಲು ಕ್ಷೇತ್ರವನ್ನು ಸಾಮಾನ್ಯ ದಲಿತನಿಗೆ ಬಿಟ್ಟುಕೊಟ್ಟು ಗೆಲ್ಲಿಸುವ ಬದ್ಧತೆ ಹೊಂದಿದ್ದಾರೆಯೇ ಎಂದು ಕನ್ನಡ,ಸಂಸ್ಕ್ರತಿ ಹಾಗೂ ಇಂಧನ ಸಚಿವ ವಿ.ಸುನೀಲ್ ಕುಮಾರ್ ಪ್ರಶ್ನಿಸಿದ್ದಾರೆ.

ನಿಜವಾದ ದಲಿತನ ನೋವು- ನಲಿವುಗಳನ್ನು ಪ್ರಿಯಾಂಕ್ ಖರ್ಗೆ ಅರ್ಥ ಮಾಡಿಕೊಂಡಿಲ್ಲ.

ಬೆಂಗಳೂರಿನಲ್ಲಿ ಹುಟ್ಟಿ- ಬೆಳೆದ ” ಕಾನ್ವೆಂಟ್ ರಾಜಕಾರಣಿ “. ಬದುಕಿನಲ್ಲಿ ನೀವು ದಲಿತರಿಗೆ ಕೊಟ್ಟ ಆದ್ಯತೆ ಏನು ? ಎಂಬುದರ ಬಗ್ಗೆ ತುಸು ಆತ್ಮಾವಲೋಕನ ಮಾಡಿಕೊಳ್ಳಿ.

ದಲಿತ ಎನ್ನುವ ಪದ ಖರ್ಗೆ ಕುಟುಂಬಕ್ಜೆ ರಾಜಕೀಯ ಅಧಿಕಾರವನ್ನು ಕಾಪಿಟ್ಟುಕೊಳ್ಳುವುದಕ್ಕೆ ಬೇಕಾದ ಅಸ್ತ್ರವಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕ ಖರ್ಗೆ ಮೀಸಲು ಕ್ಷೇತ್ರಗಳನ್ನು ತಮ್ಮ ವೈಯಕ್ತಿಕ ಜಹಗೀರಿನಂತೆ ಬಳಸಿಕೊಂಡಿದ್ದಾರೆ.

ಅಂಬೇಡ್ಕರ್ ಅವರು ಪ್ರತಿಪಾದಿಸಿದ ಸಮಾನತೆಯ ಸಿದ್ಧಾಂತದಲ್ಲಿ ನಿಮಗೆ ನಿಜಕ್ಕೂ ನಂಬಿಕೆ ಇದ್ದಿದ್ದರೆ ಮೀಸಲು ಕ್ಷೇತ್ರವನ್ನು ಒಬ್ಬ ಸಾಮಾನ್ಯ ದಲಿತನಿಗೆ ಬಿಟ್ಟುಕೊಟ್ಟು ಅವರನ್ನು ಗೆಲ್ಲಿಸುವ ಬದ್ಧತೆಯನ್ನು ತೋರಬೇಕಿತ್ತು.

ಆದರೆ ಖರ್ಗೆ ಕುಟುಂಬ ಈ ಉದಾರತೆಯನ್ನು ಎಂದೂ ತೋರಿಲ್ಲ. ನಿಮಗೆ ನಿಜಕ್ಕೂ ದಲಿತಪರ ಖಾಳಜಿ ಇದ್ದರೆ ಮುಂದಿನ ಚುನಾವಣೆಯಲ್ಲಿ ಕಲಬುರ್ಗಿ ಲೋಕಸಭೆ ಹಾಗೂ ಚಿತ್ತಾಪುರ ವಿಧಾನಸಭಾ ಕ್ಷೇತ್ರವನ್ನು ಸಾಮಾನ್ಯ ದಲಿತನಿಗೆ ಬಿಟ್ಟುಕೊಡಲಿ ಎಂದು ಸವಾಲು ಹಾಕಿದ್ದಾರೆ.

ತಮ್ಮ ಯೋಗ್ಯತೆಗೆ ಮೀರಿದ ಮಾತುಗಳನ್ನು ಆಡುವುದು ಪ್ರಿಯಾಂಕ್ ಖರ್ಗೆಯವರಿಗೆ ಒಂದು ಚಟವಾಗಿ ಬಿಟ್ಟಿದೆ.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಬಗ್ಗೆ ಮೇಲ್ಲಿಂದ ಮೇಲೆ ಹಗುರವಾಗಿ ಮಾತನಾಡುತ್ತಿದ್ದಾರೆ. ಹೆಸರಿನಲ್ಲೇ ನೆಹರು- ಗಾಂಧಿ ಕುಟುಂಬದ ಊಳಿಗತನವನ್ನು ಮೈಗೂಡಿಸಿಕೊಂಡಿರುವ ನಿಮಗೆ ಸ್ವಾಭಿಮಾನದ ವಿಚಾರಗಳು ಅರ್ಥವಾಗುವುದಿಲ್ಲ.

ಸಿಎಂ ಬೊಮ್ಮಾಯಿ ಅವರ ಮೌನವನ್ನು ನಿಂದಿಸುವ ಬದಲು ನಿಮ್ಮ ವಾಚಾಳಿತನವನ್ನು ತುಸು ಕಡಿಮೆ ಮಾಡಿಕೊಳ್ಳಿ ಎಂದು ಕಿವಿಮಾತು ಹೇಳಿದ್ದಾರೆ.
ಆರ್ ಎಸ್ ಎಸ್ ಎಲ್ಲಿತ್ತು ? ಸಂಘ -ಪರಿವಾರದವರು ಎಲ್ಲಿದ್ದರು ಎಂಬಿತ್ಯಾದಿಯಾಗಿ ಉಡಾಫೆ ಮಾತನಾಡುವುದಕ್ಕೆ ಮುನ್ನ ಇತಿಹಾಸವನ್ನು ತುಸು ಓದಿ ಸತ್ಯ ತಿಳಿದುಕೊಳ್ಳಿ.

ಅಂಬೇಡ್ಕರ್ ಅವರಿಗೆ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸುವಾಗ ಕಾಂಗ್ರೆಸ್ ಎಲ್ಲಿತ್ತು ?  ಲೋಕಸಭಾ ಚುನಾವಣೆಯಲ್ಲಿ ಅವರನ್ನು  ಸೋಲಿಸುವಾಗ ಕಾಂಗ್ರೆಸ್ ಎಲ್ಲಿತ್ತು ?

ಅಂಬೇಡ್ಕರ್ ಮರಣ ಹೊಂದಿದಾಗ ಅವರ ಶವ ಸಂಸ್ಕಾರಕ್ಕೂ ದಿಲ್ಲಿಯಲ್ಲಿ ಜಾಗ ಕೊಡದೆ ಅವಮಾನಿಸುವಾಗ ಕಾಂಗ್ರೆಸ್ ಎಲ್ಲಿತ್ತು ?

ಎಂಬಿತ್ಯಾದಿ ಮೂಲಭೂತ ಪ್ರಶ್ನೆಗಳಿಗೆ ಮೊದಲು ಉತ್ತರ ಹುಡುಕಿ. ಆ ಬಳಿಕ ಸಂಘ- ಪರಿವಾರದ ಬಗ್ಗೆ ಪ್ರಶ್ನೆ ಮಾಡಿ ಎಂದು ವ್ಯಂಗ್ಯವಾಡಿದ್ದಾರೆ.

ವ್ಯಂಗ್ಯ : ರಾಜ್ಯಾದ್ಯಂತ ಚಡ್ಡಿ ಸುಡುವ ಅಭಿಯಾನ ನಡೆಸಲಾಗುವುದು ಎಂದು ಕಾಂಗ್ರೆಸಿಗರು ಕರೆ ನೀಡಿದ್ದಾರೆ.ದೇಶಾದ್ಯಂತ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಕಾಂಗ್ರೆಸ್ ಗೆ ಈಗ ಮಾಡಲು ಯಾವುದೇ ಕೆಲಸವಿಲ್ಲದಂತಾಗಿದ್ದು, ಚಡ್ಡಿ ಸುಟ್ಟು ಬೆತ್ತಲಾಗಲು ಹೊರಟಿದ್ದಾರೆ ಎಂದು ಟೀಕಿಸಿದ್ದಾರೆ.

LATEST NEWS

ಬೈಕ್‌ ಅಪಘಾತ: ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಲೆ ಹರಿದ ಲಾರಿ- ಮೂವರು ಸ್ಥಳದಲ್ಲೇ ಸಾವು..!

Published

on

ಶಿವಮೊಗ್ಗ: ಬೈಕ್ ಗಳ ಮದ್ಯೆ ನಡೆದ ಅಪಘಾತದಿಂದ ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಳೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ನಡೆದಿದೆ.

ಹಳೆ ಜಂಬರಗಟ್ಟ ನಿವಾಸಿ ವಿಕಾಸ್ (18), ಯಶ್ವಂತ್ (17), ಹಾಗೂ ಶಶಾಂಕ್ (17) ಮೃತ ದುರ್ದೈವಿಗಳು.

ಎರಡು ಬೈಕ್ ಗಳ ಮಧ್ಯೆ ನಡೆದ ಅಪಘಾತದಲ್ಲಿ ಸವಾರರ ರಸ್ತೆ ಮೇಲೆ ಬಿದ್ದಿದ್ದಾರೆ.

ಇದೇ ವೇಳೆ ರಭಸವಾಗಿ ಬಂದ ಲಾರಿ ಆ ವ್ಯಕ್ತಿಗಳ ಮೇಲೆ ಹರಿದಿದೆ.

ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಒಬ್ಬನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

FILM

ಮೋದಿಗೆ ರಕ್ತದಲ್ಲಿ ಪತ್ರ ಬರೆದ ಚಿತ್ರ ನಟ ಪ್ರೇಮ್..!

Published

on

ಚಿಕ್ಕಮಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಯಬಿಡುವುದನ್ನು ಖಂಡಿಸಿದ ಕನ್ನಡ ಚಿತ್ರನಟ ಪ್ರೇಮ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ​ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದ್ದು, ಚಿತ್ರನಟ ನೆನಪಿರಲಿ ಪ್ರೇಮ್ ಸಾಥ್ ನೀಡಿದ್ದಾರೆ.

‘ಕಾವೇರಿ ನಮ್ಮದು’ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಕಾವೇರಿ ನೀರಿನಿಂದ ರಾಜ್ಯಕ್ಕೆ ನ್ಯಾಯ ನೀಡಬೇಕೆಂದು ಪತ್ರದ ಮೂಲಕ ಪ್ರೇಮ್ ಅವರು  ಮನವಿ ಮಾಡಿದ್ದಾರೆ.

ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Continue Reading

bengaluru

ನಟ ನಾಗಭೂಷಣ್ ಕಾರು ಅಪಘಾತ – ಮಹಿಳೆ ಸಾವು..!

Published

on

ಬೆಂಗಳೂರು: ಕನ್ನಡದ ಹೆಸರಾಂತ ನಟ ನಾಗಭೂಷಣ್ ಅವರು ಚಲಾಯಿಸುತ್ತಿದ್ದ ಕಾರು ದಂಪತಿಗಳಿಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನಪ್ಪಿದ್ದು, ಆಕೆಯ ಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಿನ್ನೆ ರಾತ್ರಿ 9 ಗಂಟೆಯ ಹೊತ್ತಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮಹಿಳೆಯ ಸಾವಿಗೆ ಕಾರಣರಾದ ನಟ ನಾಗಭೂಷಣ್ ಅವರನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ವಸಂತಪುರದ ನಿವಾಸಿ ಪ್ರೇಮಾ (48) ಮೃತ ಮಹಿಳೆ ಎಂದು ಗುರುತಿಸಲಾಗಿದೆ.

ನಾಗಭೂಷಣ್ ಶೂಟಿಂಗ್ ಮುಗಿಸಿಕೊಂಡು ಬರುವಾಗ ರಸ್ತೆಯಲ್ಲಿ ಅಡ್ಡಬಂದ ಪಾದಚಾರಿ ದಂಪತಿಗಳಾದ ಪ್ರೇಮಾ ಮತ್ತು ಕೃಷ್ಣ ಅವರಿಗೆ ಕಾರು ಡಿಕ್ಕಿ ಹೊಡೆದಿದೆ.

ಈ ಅಪಘಾತದಲ್ಲಿ ದಂಪತಿಗಳಿಬ್ಬರಿಗೂ ತೀವ್ರ ಗಾಯವಾಗಿದ್ದು, ಗಾಯಾಳುಗಳನ್ನು ಖುದ್ದಾಗಿ ನಾಗಭೂಷಣ್ ಅವರೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ.

ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಪ್ರೇಮಾ ಅವರು ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಪತಿ ಕೃಷ್ಣ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಾಗಭೂಷಣ್ ಅವರೇ ಸ್ವತಃ ಕಾರನ್ನು ಚಲಾಯಿಸುತ್ತಿದ್ದರಿಂದ ಅವರನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಮಾಹಿತಿ ಪಡೆಯುತ್ತಿದ್ದಾರೆ.

ಮೃತರ ಪುತ್ರನು ಕುಮಾರಸ್ವಾಮಿ ಲೇಔಟ್ ಪೊಲೀಸರಿಗೆ ದೂರು ನೀಡಿದ್ದು, ಫುಟ್ ಪಾತ್ ಮೇಲೆ ತಂದೆ ತಾಯಿ ವಾಕ್ ಮಾಡುವಾಗ ಕಾರು ಹಾಯ್ದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Continue Reading

LATEST NEWS

Trending