DAKSHINA KANNADA
ಬಿಳಿ ಅಕ್ಕಿ vs ಕೆಂಪಕ್ಕಿ: ನಿಮ್ಮ ಆರೋಗ್ಯಕ್ಕೆ ಯಾವುದು ಒಳ್ಳೆಯದು
ಮಂಗಳೂರು: ಭಾರತೀಯರ ಆಹಾರದಲ್ಲಿ ಅನ್ನಕ್ಕೆ ವಿಶೇಷ ಸ್ಥಾನ. ಅದರಲ್ಲೂ ದಕ್ಷಿಣ ಭಾರತೀಯರಿಗೆ ನಿತ್ಯ ಅನ್ನ ಬೇಕೇ ಬೇಕು. ವಿವಿಧ ಬಗೆಯ ಅಕ್ಕಿಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಬಿಳಿ ಮತ್ತು ಕೆಂಪು ಅಕ್ಕಿ (ಬ್ರೌನ್ ರೈಸ್) ಹೆಚ್ಚು ಬಳಕೆಯಲ್ಲಿದೆ. ಬಿಳಿ ಅಕ್ಕಿಯನ್ನು ಹೆಚ್ಚಾಗಿ ಬಳಸಲಾಗುತ್ತದೆ. ಇನ್ನೂ ಕೆಲವರು ಆರೋಗ್ಯಕ್ಕೆ ಒಳ್ಳೆಯದು ಎಂದು ಕೆಂಪಕ್ಕಿಯನ್ನು ಸೇವಿಸುತ್ತಾರೆ.
ಬಿಳಿ ಅಕ್ಕಿ ಮತ್ತು ಕೆಂಪಕ್ಕಿ ನಡುವೆ ಆರೋಗ್ಯಕ್ಕೆ ಯಾವುದು ಹೆಚ್ಚು ಪ್ರಯೋಜನಕಾರಿ ಎಂಬುದನ್ನು ತಿಳಿಯೋಣ.
ಕೆಂಪಕ್ಕಿಯಲ್ಲಿ ಅದರ ಮೇಲಿನ ಪದರ ಹಾಗೆಯೇ ಇರುತ್ತದೆ. ಇದರಲ್ಲಿ ಫೈಬರ್ ಅಂಶವಿರುತ್ತದೆ. ಅಂದರೆ ಬಿಳಿ ಅಕ್ಕಿಗಿಂತ ಹೆಚ್ಚು ಫೈಬರ್ ಬ್ರೌನ್ ರೈಸ್ನಲ್ಲಿದೆ. ಬಿಳಿ ಅಕ್ಕಿಗೆ ಹೋಲಿಸಿದರೆ ಕಂದು ಅಕ್ಕಿಯಲ್ಲಿ ಗ್ಲೈಸೆಮಿಕ್ ಸೂಚ್ಯಂಕ ತುಂಬಾ ಕಡಿಮೆ. ಹೆಚ್ಚಿನ ಗ್ಲೈಸೆಮಿಕ್ ಸೂಚ್ಯಂಕದಿಂದಾಗಿ ರಕ್ತದಲ್ಲಿನ ಸಕ್ಕರೆಯು ವೇಗವಾಗಿ ಹೆಚ್ಚಾಗುತ್ತದೆ.
ಕೆಂಪಕ್ಕಿಯ ಮೇಲಿನ ಪದರದಲ್ಲಿ ಫೈಬರ್ ಮಾತ್ರವಲ್ಲದೇ ಮೆಗ್ನೀಸಿಯಮ್, ರಂಜಕ ಮತ್ತು ಅನೇಕ ಜೀವಸತ್ವಗಳು ಇರುತ್ತವೆ. ಬಿಳಿ ಅಕ್ಕಿ ಹಗುರವಾಗಿರುತ್ತದೆ. ಆದರೆ ಕೆಂಪಕ್ಕಿ ತೂಕ ಹೆಚ್ಚು. ಜೀರ್ಣಕ್ರಿಯೆ ದುರ್ಬಲವಾಗಿರುವವರಿಗೆ ಬಿಳಿ ಅಕ್ಕಿ ಉತ್ತಮ. ಬ್ರೌನ್ ರೈಸ್ ತೂಕ ನಷ್ಟಕ್ಕೆ ಪ್ರಯೋಜನಕಾರಿಯಾದರೆ, ಬಿಳಿ ಅಕ್ಕಿ ತೂಕ ಹೆಚ್ಚಿಸಲು ಸಹಕಾರಿ.
DAKSHINA KANNADA
ಕೋಲ್ನಾಡು ಆಟೋರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ : ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ
ಮಂಗಳೂರು : ಕೋಲ್ನಾಡು ಆಟೋರಿಕ್ಷಾ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ ಮಂಗಳವಾರ(ಜೂ.18) ಕೆಎಸ್ ರಾವ್ ನಗರದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಿಸಲಾಯಿತು.
ಈ ಸಂದರ್ಭ ಸರ್ವೋತ್ತಮ ಅಂಚನ್, ಜಯಕೃಷ್ಣ ಕೋಟ್ಯಾನ್ ಹಳೆಯಂಗಡಿ, ಹಿಂದುಸ್ತಾನ್ ಪೆಟ್ರೋಲಿಯಂನ ರವಿ ಎಸ್ ಶೆಟ್ಟಿ, ಶಾಲೆಯ ಮುಖ್ಯೋಪಾಧ್ಯಾಯ ದಿನೇಶ್ ಕೆ, ಹಾಗೂ ಆಟೋರಿಕ್ಷಾ ಚಾಲಕರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಇದನ್ನೂ ಓದಿ : ಯುವಕನ ಜೊತೆ ಓಡಿಹೋದ ತಾಯಿ..! ಅಮ್ಮಾ ಬಾರಮ್ಮ..ಎಂದು ಮಕ್ಕಳು ಅಂಗಲಾಚಿದ್ರೂ ಕ್ಯಾರೇ ಅನ್ನದ ತಾಯಿ..!!
DAKSHINA KANNADA
ಚಿಕ್ಕಮೇಳದ ಹೆಸರಿನಲ್ಲಿ ಯಕ್ಷಗಾನ ಕಲೆಗೆ ಅಪಚಾರ ಮಾಡದಿರಿ; ಒಕ್ಕೂಟ ಮನವಿ
ಮಂಗಳೂರು: ಇಂದು ದೇಶ, ವಿದೇಶಗಳಲ್ಲಿ ಯಕ್ಷಗಾನದ ಹಿರಿಮೆ ಸಾರಲಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕಲೆಯ ಹೆಸರಿನಲ್ಲಿ ಕಲೆಯ ಗಂಧಗಾಳಿ ಇಲ್ಲದವರು ಕೂಡಾ ಯಕ್ಷ ಕಲೆಯನ್ನು ವಿರೂಪಗೊಳಿಸುತ್ತಿವುದು ವಿಷಾದನೀಯ ಸಂಗತಿ. ಇತ್ತೀಚಿನ ದಿನಗಳಲ್ಲಿ ಮಳೆಗಾಲದಲ್ಲಿ ತಿರುಗಾಟದ ಇಲ್ಲದ ಸಂದರ್ಭದಲ್ಲಿ ಮನೆ ಮನೆಗೆ ಚಿಕ್ಕ ಮೇಳಗಳು ಹೊರಡುತ್ತವೆ. ಆದರೆ ಯಕ್ಷಗಾನದ ಬಾಲಪಾಠವೂ ಆಗದವರಿಂದ ಚಿಕ್ಕ ಮೇಳ ಎಂದು ಹೆಸರಿಟ್ಟುಕೊಂಡು ಅದೊಂದು ದಂಧೆಯಾಗಿ ವ್ಯಾಪಕವಾಗಿರುವುದು ನೋವಿನ ಸಂಗತಿ ಎಂದು ತೆಂಕುತಿಟ್ಟು ಚಿಕ್ಕಮೇಳಗಳ ಒಕ್ಕೂಟ ದಕ್ಷಿಣ ಕನ್ನಡ ಜಿಲ್ಲೆ ಕೇಂದ್ರ ಸಮಿತಿ ದೂರಿದೆ.
ಸಂಪ್ರದಾಯಕ್ಕೆ ಬದ್ಧವಾಗಿ, ಶಿಸ್ತುಬದ್ಧವಾಗಿ ಯಕ್ಷಗಾನ ಮಾಡಲು ಕಲಾವಿದರಲ್ಲಿ ಒಟ್ಟು ಮಾಡಿಕೊಂಡು ತೆಂಕುತಿಟ್ಟು ಚಿಕ್ಕಮೇಳ ಹೆಸರಿನಲ್ಲಿ ತಿರುಗಾಟವನ್ನು ಆರಂಭಿಸಲಾಗಿದೆ. ಒಕ್ಕೂಟದ ಪರವಾನಿಗೆ ಇದ್ದವರಿಗೆ ಮಾತ್ರ ಮನೆಯಲ್ಲಿ ಆಟವಾಡಿಸಲು ಜನತೆ ಅನುವು ಮಾಡಿಕೊಡಬೇಕು ಎಂದು ಒಕ್ಕೂಟದ ಅಧ್ಯಕ್ಷ ಸರಪಾಡಿ ಅಶೋಕ್ ಶೆಟ್ಟಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು ನಿಜವಾದ ಕಲಾವಿದರಿಗೆ ಅನ್ಯಾಯವಾಗಬಾರದು ಎನ್ನುವ ನಿಟ್ಟಿನಲ್ಲಿ ಒಕ್ಕೂಟವನ್ನು ರಚನೆ ಮಾಡಲಾಗಿದೆ. ಒಕ್ಕೂಟದ ಅಧಿಕೃತ ಪರವಾಣಿಗೆ ಪಡೆದು ತಿರುಗಾಟ ಮಾಡುವವರು ಸಂಜೆ 6ರಿಂದ ರಾತ್ರಿ 10.30ರವರೆಗೆ ಕನ್ನಡ ಇಲ್ಲವೇ ತುಳುಭಾಷೆಗಳ ಗರಿಷ್ಠ 20 ನಿಮಿಷಗಳ ಸಂದೇಶ ಇರುವ ಸನ್ನಿವೇಶದ ಪ್ರದರ್ಶನ ಮಾಡಲಿರುವರು ಎಂದರು.
ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳಾದ ರಮೇಶ ಕುಲಶೇಖರ, ಕುಮಾರ್ ಮಾಲೆಮಾರ್, ದಿವಾಕರ ದಾಸ್, ಕಡಬ ದಿನೇಶ ರೈ ಮೊದಲಾದವರಿದ್ದರು.
DAKSHINA KANNADA
ಉಪ್ಪಿನಂಗಡಿ: ಮಹಿಳೆ ಸಾ*ವಿನಲ್ಲಿ ಅನುಮಾನ; ಕೊ*ಲೆ ಶಂಕೆ
ಉಪ್ಪಿನಂಗಡಿ : ಇಲ್ಲಿನ ಪೆರ್ನೆ ಬಳಿಯ ಬಿಳಿಯೂರು ದರ್ಖಾಸ್ ಎಂಬಲ್ಲಿ ಮಹಿಳೆಯೋರ್ವರು ಮೃ*ತಪಟ್ಟಿದ್ದು ಕೊ*ಲೆ ಶಂಕೆ ವ್ಯಕ್ತವಾಗಿದೆ. ಹೇಮಾವತಿ (37) ಮೃ*ತ ಮಹಿಳೆ.
ಈಕೆ ತಾಯಿ, ಅಕ್ಕನ ಮಗನೊಂದಿಗೆ ಮನೆಯಲ್ಲಿದ್ದ ವೇಳೆ ಭಾನುವಾರ(ಜೂ.16) ರಾತ್ರಿ ಕೃತ್ಯ ನಡೆದಿದೆ. ಮೊದಲಿಗೆ ಪರಿಸರದಲ್ಲಿ ಹೃದಯಾಘಾ*ತವೆಂಬ ಸುದ್ದಿ ಹರಡಿತ್ತು. ಆದರೆ ಬಳಿಕ ಈ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.
ಇದನ್ನೂ ಓದಿ : ಕಡಬ : ವಿದ್ಯುತ್ ಶಾಕ್ ಹೊಡೆದು ಯುವಕ ಸಾ*ವು
ವಿಚಾರಣೆಗಾಗಿ ಮೃ*ತಳ ಅಕ್ಕನ ಮಗ ಎಸ್ ಎಸ್ ಎಲ್ ಸಿ ಓದುತ್ತಿರುವ ಅಪ್ರಾಪ್ತ ಬಾಲಕನನ್ನು, ಆತನ ತಂದೆ ಶಂಕರ ಎಂಬವರನ್ನು ಕರೆದೊಯ್ದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಉಪ್ಪಿನಂಗಡಿ ಪೊಲೀಸರ ತನಿಖೆಯಿಂದಷ್ಟೇ ಬೆಳಕಿಗೆ ಬರಬೇಕಷ್ಟೇ. ಮೃ*ತರು ಹೊಟೇಲ್ ಕಾರ್ಮಿಕೆಯಾಗಿದ್ದರು.
- LATEST NEWS5 days ago
ಅಡುಗೆ ಮನೆಯಿಂದ ಹಲ್ಲಿಗಳನ್ನು ಓಡಿಸಲು ಈ ಟಿಪ್ಸ್ ಅನುಸರಿಸಿ
- LATEST NEWS6 days ago
ಅಡುಗೆಯಲ್ಲಿ ಉಪ್ಪು ಜಾಸ್ತಿ ಆಯ್ತಾ? ಯೋಚನೆ ಬೇಡ, ಈ ಟಿಪ್ಸ್ ಫಾಲೋ ಮಾಡಿ
- FILM5 days ago
ಡ್ರೋನ್ ಪ್ರತಾಪ್ ಹುಟ್ಟು ಹಬ್ಬಕ್ಕೆ ಸಿಕ್ತು ಬ್ಯೂಟಿಫುಲ್ ಗಿಫ್ಟ್
- LATEST NEWS6 days ago
ನಿಲ್ಲಿಸಿದ್ದ ಕಂಟೈನರ್ ಗೆ ಎಕ್ಸ್ ಪ್ರೆಸ್ ಬಸ್ ಡಿಕ್ಕಿ..; ಚಾಲಕ ಸಹಿತ 20ಕ್ಕೂ ಅಧಿಕ ಮಂದಿಗೆ ಗಾಯ
Pingback: ಪಾರ್ಲಿಮೆಂಟ್ನಲ್ಲಿ ಸ್ಮೋಕ್ ಬಾಂ*ಬ್ ಪ್ರಕರಣ: ಆರೋಪಿಗಳಿಗೆ ಖಲಿಸ್ಥಾನ್ ನಂಟು..!? - NAMMAKUDLA NEWS - ನಮ್ಮಕುಡ್ಲ ನ್ಯೂಸ್