Thursday, September 29, 2022

“ಸಾವರ್ಕರ್ ಬಗ್ಗೆ ಹೇಳಿಕೆ ಕೊಡುವಾಗ ಪ್ರತಿಭಟನೆಯನ್ನು ಸಹಿಸುವ ಶಕ್ತಿಯೂ ಇರಬೇಕು”

ಉಡುಪಿ: ಸಾವರ್ಕರ್‌ ಬಗ್ಗೆ ಬೇಕಾ ಬಿಟ್ಟಿ ಹೇಳಿಕೆ ನೀಡುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಕಿಡಿ ಕಾರಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಾರ್ಯಕರ್ತರು ಮಡಿಕೇರಿಯಲ್ಲಿ ಮೊಟ್ಟೆ ಎಸೆದು ಪ್ರತಿಭಟಿಸಿದ ಬಗ್ಗೆ ಉಡುಪಿಯಲ್ಲಿ ಇಂದು ಪ್ರತಿಕ್ರಿಯಿಸಿದ ಸುನಿಲ್‌ ಕುಮಾರ್‌, ಸಾವರ್ಕರ್ ಬಗ್ಗೆ ಹೇಳಿಕೆ ಕೊಡುವಾಗ ಪ್ರತಿಭಟನೆಯನ್ನು ಸಹಿಸುವ ಶಕ್ತಿಯೂ ಇರಬೇಕು. ಸಾವರ್ಕರ್ ಅವರ ಹೆಸರು ಮುನ್ನಲೆಗೆ ಬರಲು ಸಿದ್ದರಾಮಯ್ಯ ಅವರೇ ಕಾರಣ.

ಸಾವರ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದರೆ ಮುಂದಿನ ದಿನಗಳಲ್ಲಿ ಮೆರವಣಿಗೆಗಳು, ಕಾರ್ಯಕ್ರಮಗಳು, ಬ್ಯಾನರ್‌ಗಳು, ಪುತ್ಥಳಿಗಳು ವ್ಯಾಪಕ ಆಗಲಿವೆ ಎಂದರು. ಸಿದ್ದರಾಮಯ್ಯ ಅವರು ಸಾವರ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಾ ಬಂದಿದ್ದಾರೆ. ಸಾವರ್ಕರ್ ಅವಹೇಳನ ಸಹಿಸಿಕೊಳ್ಳಲು ಯುವ ಸಮುದಾಯ ಸಿದ್ಧವಿಲ್ಲ.

ಈಗ ನಡೆಯುತ್ತಿರುವ ಪ್ರತಿಭಟನೆಗಳು ಯಾರೂ ಹೇಳಿಕೊಟ್ಟು ಮಾಡಿಸುತ್ತಿರುವುದಲ್ಲ. ಜನರ ಮನಸ್ಸಿನಲ್ಲಿರುವ ಭಾವನೆಗಳು ಸ್ಫೋಟಗೊಂಡಾಗ ಇಂತಹ ಪ್ರತಿಭಟನೆಗಳು ಸಹಜ. ಸಿದ್ದರಾಮಯ್ಯ ಅವರಿಗೆ ಹಣೆ ಮೇಲೆ ಕುಂಕುಮ ಇಟ್ಟವರನ್ನು ಕಂಡರೆ ಆಗಲ್ಲ. ಸಾವರ್ಕರ್ ಫೋಟೋ ಕಂಡರೆ ಸಹಿಸುವುದಿಲ್ಲ. ತಮ್ಮ ನಡವಳಿಕೆ, ಹೇಳಿಕೆ, ಆಡಳಿತದಲ್ಲಿ ಪ್ರತ್ಯೇಕತೆಯ ಭಾವನೆ ತೋರಿಸುತ್ತಾರೆ. ಇದನ್ನು ಕರ್ನಾಟಕದ ಜನ ಸಹಿಸುವುದಿಲ್ಲ.

ಏನು ಬೇಕಾದರೂ ಹೇಳಿಕೆ ಕೊಟ್ಟು ಜೀರ್ಣ ಮಾಡಿಕೊಳ್ಳುತ್ತೇನೆ ಎನ್ನುವ ಕಾಲ ಇದಲ್ಲ. ಹೋರಾಟದ ಕಾರಣಕ್ಕೆ ಸಾವರ್ಕರ್ ಅವರನ್ನು ವೀರ ಸಾವರ್ಕರ್ ಎಂದು ಕರೆದಿದ್ದಾರೆ. ಸಾವರ್ಕರ್ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ ಅಂದರೆ ಇತಿಹಾಸದ ಬಗ್ಗೆ ಅರ್ಧಂಬರ್ಧ ತಿಳಿದುಕೊಂಡಿದ್ದಾರೆ ಎಂದರ್ಥ. ಸಾವರ್ಕರ್ ಅಂತಸತ್ವ ತಿಳಿದವರು ಯಾರು ಅವರನ್ನು ಟೀಕಿಸಲು ಸಾಧ್ಯವಿಲ್ಲ.

ಆದ್ದರಿಂದ ಸಿದ್ದರಾಮಯ್ಯನವರೇ, ದಯಮಾಡಿ ಅಂಡಮಾನಿನ ಸೆಲ್ಯೂಲರ್ ಜೈಲು ನೋಡಿಕೊಂಡು ಬನ್ನಿ. ಸಮಾಜವಾದಿ ಎಂದು ಹೇಳಿಕೊಂಡು ಲಕ್ಷಾಂತರ ಜನರನ್ನು ಸೇರಿಸಿ ಹುಟ್ಟು ಹಬ್ಬ ಮಾಡುತ್ತೀರಿ. ಸಾವರ್ಕರ್ ಇದ್ದ ಜೈಲನ್ನು ನೋಡಿದರೆ ಕಣ್ಣಲ್ಲಿ ನೀರು ಬರುತ್ತೆ.

ಅವರು ನಡೆಸಿದ ಹೋರಾಟ ಮತ್ತು ಬ್ರಿಟಿಷರ ಕ್ರೂರತೆ ಯಾವ ರೀತಿ ಇತ್ತು ಅನ್ನೋದು ಗೊತ್ತಾಗುತ್ತೆ ಎಂದರು.
ಸರಕಾರಿ ಶಾಲೆಗಳಲ್ಲಿ ಗಣೇಶೋತ್ಸವಕ್ಕೆ ಆಕ್ಷೇಪದ ಬಗ್ಗೆ ಪ್ರತಿಕ್ರಿಯಿಸಿ, ದೇಶದ ಸಂಪ್ರದಾಯ ಪರಂಪರೆಯನ್ನು ನಾವು ಉಳಿಸಿಕೊಳ್ಳುತ್ತೇವೆ.

ಅನಗತ್ಯವಾಗಿ ವಿವಾದ ಮಾಡ ಬೇಡಿ. ಸರಕಾರಿ ಶಾಲೆಗಳಲ್ಲಿ, ಆಟದ ಮೈದಾನದಲ್ಲಿ ಸಹಜವಾಗಿಯೇ ಸಾರ್ವಜನಿಕ ಗಣೇಶ ಉತ್ಸವಗಳು ನಡೆಯುತ್ತವೆ. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರೆ ನಮ್ಮ ಸರಕಾರ ಸಹಿಸಿಕೊಳ್ಳುವುದಿಲ್ಲ.

ನಮಾಜಿಗೆ ಶಾಲೆ ಆವರಣದಲ್ಲಿ ಅವಕಾಶ ಕೊಡುವುದಿಲ್ಲ ಎಂದು ಸರಕಾರ ಸ್ಪಷ್ಟವಾಗಿ ಹೇಳಿದೆ. ಆರ್. ಎಸ್. ಎಸ್. ನಿಂದ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಇರುವ ಬಗ್ಗೆ ಪ್ರಸ್ತಾವಿಸಿ ನಮಗೆ ಹಿಂಸೆಯ ಮೇಲೆ ಯಾವತ್ತೂ ನಂಬಿಕೆ ಇಲ್ಲ ನಾವು ಹಿಂಸೆಯನ್ನು ಯಾವತ್ತೂ ಒಪ್ಪಿಲ್ಲ ಎಂದರು.

LEAVE A REPLY

Please enter your comment!
Please enter your name here

Hot Topics

ತ್ರಿಶೂಲ ವಿತರಣೆ ಮಾಡಿ ಗಲಭೆಗೆ ಕುಮ್ಮಕ್ಕು ನೀಡುವ ಭಜರಂಗದಳ ಮಾಡುತ್ತಿರುವುದು ಸರಿಯೇ..?

ಮಂಗಳೂರು: ಇಲ್ಲಿ ಗಲಭೆಗೆ ಕಾರಣವಾಗುತ್ತಿರುವುದು ಕೇವಲ ಈ ಒಂದು ಸಂಘಟನೆ ಮಾತ್ರವೇ...? ಭಜರಂಗದಳದವರು ತ್ರಿಶೂಲ ವಿತರಣೆ ಮಾಡಿ ಗಲಭೆಗೆ ಕುಮ್ಮಕ್ಕು ನೀಡಿಲ್ಲವೇ ಎಂದು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ ಅಶ್ರಫ್‌ ಪ್ರಶ್ನಿಸಿದ್ದಾರೆ.ಕೇಂದ್ರ ಗೃಹ...

‘ಪುರಾಣ ಜ್ಞಾನ ನೀಡುವ ಅದ್ಭುತವಾದ ಕಲೆ ಯಕ್ಷಗಾನ’

ಮಂಗಳೂರು: ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವದ 29 ನೆಯ ಸರಣಿ ಕಾರ್ಯಕ್ರಮದಲ್ಲಿ ಲೆಕ್ಕ ಪರಿಶೋಧಕ CA ಗಿರಿಧರ ಕಾಮತ್ ಯಕ್ಷಗಾನ ಕಲೆಯು ಪುರಾಣ ಜ್ಞಾನ ನೀಡುವಷ್ಟು ಬೇರೆ ಯಾವ ಮಾಧ್ಯಮವೂ...

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: PFI ಬ್ಯಾನ್ ಬಗ್ಗೆ M.K ಪೈಝಿ ರಿಯಾಕ್ಷನ್

ಮಂಗಳೂರು: ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳ ಮೇಲೆ ನಿಷೇಧ ಹೇರಿರುವ ಒಕ್ಕೂಟ ಸರ್ಕಾರದ ನಿರ್ಧಾರ ದೇಶದ ಸಂವಿಧಾನ ಪ್ರಜೆಗಳಿಗೆ ಖಾತರಿಪಡಿಸಿರುವ ಹಕ್ಕುಗಳಿಗೆ ನೀಡಿರುವ ಬಲವಾದ ಪೆಟ್ಟು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...