Connect with us

LATEST NEWS

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ನಿಮಗೆಷ್ಟು ಗೊತ್ತು…?

Published

on

ಮುಂಬೈ: ಭಾರತದ 15ನೇ ರಾಷ್ಟ್ರಪತಿಯಾಗಿ ಇಂದು ಅಧಿಕಾರ ಸ್ವೀಕರಿಸಿದ ದ್ರೌಪದಿ ಮುರ್ಮು ಇಂದು ಹಲವು ಹೊಸ ದಾಖಲೆಗಳನ್ನು ನಿರ್ಮಿಸಿದ್ದಾರೆ. ಜೊತೆಗೆ ಅವರು ಪಾಲಿಕೆ ಸದಸ್ಯೆಯಾಗಿ, ಶಾಸಕಿಯಾಗಿ, ಮಂತ್ರಿಯಾಗಿ, ರಾಜ್ಯಪಾಲೆಯಾಗಿ ರಾಷ್ಟ್ರಪತಿ ಹುದ್ದೆಗೇರಿದವರು ಅವರು ಯಾರು, ಹಿನ್ನೆಲೆ ಏನು ತಿಳಿಯೋಣ.


ದ್ರೌಪದಿ ಮುರ್ಮು ಓಡಿಶಾ ರಾಜ್ಯದ ಮಯೂರ್‌ ಬಂಜ್‌ ಜಿಲ್ಲೆಯ ಸಂತಾಲ್‌ ಎಂಬ ಬುಡಕಟ್ಟು ಜನಾಂಗದಲ್ಲಿ 1958 ಜೂ.20 ರಂದು ಜನಿಸಿದರು.

ಅವರ ತಂದೆ ಹಾಗೂ ಅಜ್ಜ ಪಂಚಾಯತ್‌ನಲ್ಲಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಸಣ್ಣ ವಯಸ್ಸಿನಲ್ಲಿ ಶಿಕ್ಷಣದಲ್ಲಿ ಅತ್ಯಂತ ಚುರುಕಾಗಿದ್ದ ಮುರ್ಮು 1979 ರಲ್ಲಿ ಭುವನೇಶ್ವರದ ರಮಾ ದೇವಿ ಮಹಿಳಾ ವಿವಿಯಿಂದ ಬಿ.ಎ ಪದವಿ ಪಡೆದರು.

ಈ ಮಧ್ಯೆ ಬ್ಯಾಂಕ್ ಆಫ್ ಇಂಡಿಯಾ ನೌಕರರಾಗಿದ್ದ ಶ್ಯಾಮ ಚರಣ ಮುರ್ಮು ಅವರೊಂದಿಗೆ ವಿವಾಹವಾಯಿತು. ಅದಾದ ನಂತರ ನೀರಾವರಿ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಸ್ವಲ್ಪ ಸಮಯ ಅರೋಬಿಂದೋ ಶಿಕ್ಷಣ ಸಂಸ್ಥೆಯಲ್ಲಿ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸಿದರು.

1997ರಲ್ಲಿ ಬಿಜೆಪಿ ಸೇರಿದ ಅವರು ಅದೇ ವರ್ಷ ರಾಯ್‌ರಂಗಾಪುರ ಪಂಚಾಯತ್‌ನ ಕೌನ್ಸಿಲರ್‌ ಆಗಿ ಆಯ್ಕೆಯಾದರು. 2000ನೇ ಇಸವಿಯಲ್ಲಿ ರಾಯ್‌ರಂಗಾಪುರ ನಗರ ಪಂಚಾಯತ್‌ ಅಧ್ಯೆಕ್ಷೆಯಾಗಿ ಅದೇ ವರ್ಷ ರಾಯ್‌ರಂಗ್‌ಪುರದಿಂದ ಬಿಜೆಪಿಯಿಂದ ಟಿಕೆಟ್‌ ಪಡೆದು ಮೊದಲ ಬಾರಿ ವಿಧಾನ ಸಭೆ ಪ್ರವೇಶಿಸಿದರು.

2004ರಲ್ಲಿ ಮತ್ತೊಮ್ಮೆ ಚುನಾಯಿತರಾಗಿ, ರಾಜ್ಯ ಸರ್ಕಾರದಲ್ಲಿ 5 ವರ್ಷಗಳ ವಿವಿಧ ಇಲಾಖೆಗಳ ಮಂತ್ರಿಯಾಗಿ ಸೇವೆ ಸಲ್ಲಿಸಿದರು. 2007ರಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಶಾಸಕರಿಗೆ ಓಡಿಶಾ ಸರಕಾರ ನೀಡುವ ‘ನೀಲ್‌ಕಾಂತ್‌’ ಪ್ರಶಸ್ತಿಗೆ ಭಾಜನರಾದರು. 2015ರ ಮೇ 18 ರಂದು ಜಾರ್ಖಂಡ್‌ ಗವರ್ನರ್‌ ಆಗಿ ಕಾರ್ಯ ನಿರ್ವಹಿಸಿದರು.

ರಾಜಕೀಯ ಪಯಣದಷ್ಟು ಸಿಹಿಯಾಗದ ಕೌಟುಂಬಿಕ ಪಯಣ

ದ್ರೌಪದಿ ಮುರ್ಮು ಅವರ ರಾಜಕೀಯ ಬದುಕು ತುಂಬಾನೇ ಚೆನ್ನಾಗಿತ್ತು, 2010ರಲ್ಲಿ ಅವರ ಬದುಕಿನಲ್ಲಿ ದೊಡ್ಡ ದುರಂತವೇ ಉಂಟಾಯಿತು. ಪತಿ, ಮೂವರು ಮಕ್ಕಳ ಸುಂದರ ಕುಟುಂಬವಾಗಿತ್ತು ಅವರದ್ದು.

ಆದರೆ 2010ರಲ್ಲಿ ಅವರ ಮಗ ಸಾವನ್ನಪ್ಪುತ್ತಾರೆ. ಒಬ್ಬ ಮಗನನ್ನು ಕಳೆದುಕೊಂಡ ದುಃಖದಲ್ಲಿರುವಾಗ ವಿಧಿ ಮತ್ತೊಮ್ಮೆ ಅವರ ಬದುಕಿನಲ್ಲಿ ಆಟವಾಡಿತು.

ಎರಡನೇ ಮಗನನ್ನು 2013ರಲ್ಲಿ ಅಪಘಾತದಲ್ಲಿ ಕಳೆದುಕೊಂಡರು. ದ್ರೌಪದಿ ಮುರ್ಮು ಹಾಗೂ ಅವರ ಪತಿ ಶ್ಯಾಮ್‌ಗೆ ಬದುಕಿನಲ್ಲಿ ಸಂಪೂರ್ಣ ಕತ್ತಲಾವರಿಸಿತು.

ಇಬ್ಬರು ಪುತ್ರರನ್ನು ಕಳೆದುಕೊಂಡ ದುಃಖದಲ್ಲಿಯೇ 2014ರಲ್ಲಿ ಪತಿ ಹೃದಯಾಘಾತದಿಂದ ಸಾವನ್ನಪ್ಪುತ್ತಾರೆ.

2009ರಿಂದ- 2015ರ ನಡುವೆ ತಾಯಿ ಹಾಗೂ ಒಬ್ಬ ಸಹೋದರನನ್ನೂ ಕಳೆದುಕೊಳ್ಳುತ್ತಾರೆ. ಈಗ ಅವರಿಗಿರುವುದು ಒಬ್ಬಳು ಮಗಳು ಇತಿಶ್ರೀ ಮುರ್ಮು ಮಾತ್ರ, ಸದ್ಯ ಮಗಳೊಂದಿಗೆ ವಾಸವಾಗಿದ್ದಾರೆ.

ಇವರ ವಿಶೇಷತೆಯೆಂದರೆ ಭಾರತದ ಸ್ವಾತಂತ್ರ್ಯ ನಂತರ ಹುಟ್ಟಿದ ಮೊದಲ ರಾಷ್ಟ್ರಪತಿ ಎನಿಸಿಕೊಂಡಿದ್ದಾರೆ.

ಅಷ್ಟೇ ಅಲ್ಲದೆ ಭಾರತದ ಮೊದಲ ಕಿರಿಯ ರಾಷ್ಟ್ರಪತಿ ಹಾಗೂ ಎರಡನೇ ಮಹಿಳಾ ರಾಷ್ಟ್ರಪತಿ ಮತ್ತು ದೇಶದ ಮೊದಲ ಬುಡಕಟ್ಟು ಸಮುದಾಯದಿಂದ ಅತ್ಯುನ್ನತ ಹುದ್ದೆಗೇರಿದ ಮೊದಲ ಮಹಿಳೆ ಎಂಬ ಮನ್ನಣೆಗೆ ಪಾತ್ರವಾಗಿದ್ದಾರೆ.

DAKSHINA KANNADA

ಪದ್ಮರಾಜ್ ಪೂಜಾರಿ ಪ್ರಚಾರ ಶೈಲಿ..! ಜನಾರ್ದನ ಪೂಜಾರಿಯನ್ನ ನೆನೆದ ಜನ…!

Published

on

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರ ಪ್ರಚಾರ ಶೈಲಿಗೆ ಜನ ಜನಾರ್ದನ ಪೂಜಾರಿಯವರನ್ನು ನೆನಪಿಸಿಕೊಳ್ತಾ ಇದ್ದಾರೆ. ಗುರುವಿನಂತೆ ಶಿಷ್ಯ ಕೂಡಾ ಪ್ರಚಾರ ಮಾಡ್ತಾ ಇರೋದು ನೋಡಿದ ಜನ ಇವರು ನಿಜವಾಗಿಯೂ ಜನಾರ್ದನ ಪೂಜಾರಿ ಅವರಂತೆ ಜನನಾಯಕ ಅಂತಿದ್ದಾರೆ.

ಜನಾರ್ದನ ಪೂಜಾರಿ ಅವರು 2014 ರ ಲೋಕಸಭಾ ಚುನಾವಣೆಯಲ್ಲಿ ತಮ್ಮ ಕೊನೆಯ ಸ್ಪರ್ಧೆಯನ್ನ ನೀಡಿದ್ದರು. ಹತ್ತು ವರ್ಷದ ಬಳಿಕ ಅವರ ಶಿಷ್ಯ ಪದ್ಮರಾಜ್ ಪೂಜಾರಿ ಈಗ ಲೋಕಸಭಾ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ಪದ್ಮರಾಜ್ ಪೂಜಾರಿ ಅವರು ಜನರೊಂದಿಗೆ ಬೆರೆಯುವ ರೀತಿ, ಜನರಿಗೆ ತೋರಿಸುವ ಪ್ರೀತಿ, ಹಾಗೂ ಪ್ರಚಾರದ ವೇಳೆ ಅವರು ವರ್ತಿಸೋ ರೀತಿ ನೋಡಿದ ಸಾಕಷ್ಟು ಜನ ಜನಾರ್ಧನ ಪೂಜಾರಿ ಅವರ ಚುನಾವಣ ಪ್ರಚಾರದ ವೈಖರಿಯನ್ನು ನೆನಪಿಸಕೊಳ್ಳುವಂತೆ ಮಾಡಿದೆ.

ಸಂಸದರಾಗಿ , ಕೇಂದ್ರ ಸಚಿವರಾಗಿ, ಬಡವರ ಬಂಧು ಅಂತ ಕರೆಸಿಕೊಂಡಿದ್ದ ಜನಾರ್ದನ ಪೂಜಾರಿ ಅವರಿಗೆ ಚುನಾವಣೆಯಲ್ಲಿ ಸೋಲಾಗಿದ್ರೂ, ಜನರು ಮಾತ್ರ ಅವರನ್ನು ಮರೆತಿಲ್ಲ. ಜನಾರ್ದನ ಪೂಜಾರಿಯವರು ರಾಜಕೀಯದಿಂದ ದೂರ ಉಳಿದು ವರ್ಷಗಳೇ ಕಳೆದ್ರು ಜನರಿಗೆ ಅವರ ಮೇಲಿರೋ ಪ್ರೀತಿ ಅಭಿಮಾನ ಕಡಿಮೆ ಆಗಿಲ್ಲ. ಚುನಾವಣಾ ಸಮುಯದಲ್ಲಿ ಪ್ರಚಾರಕ್ಕೆ ಇಳಿಯುತ್ತಿದ್ದ ಜನಾರ್ದನ ಪೂಜಾರಿ ಅವರ ಪ್ರಚಾರ ವೈಖರಿಯನ್ನಂತು ಜನ ಮರೆಯೋದೆ ಕಷ್ಟ. ಮುಂಜಾನೆಯಿಂದ ರಾತ್ರಿ ವರೆಗೂ ಅವರು ಮತಯಾಚನೆ ಮಾಡುತ್ತಿದ್ದ ರೀತಿಗೆ ಜನರೇ ದಂಗಾಗಿ ಹೋಗ್ತಾ ಇದ್ರು. ಇನ್ನು ನಡೆದುಕೊಂಡು ಮತಯಾಚಿಸೋ ಜನಾರ್ದನ ಪೂಜಾರಿ ಅವರ ಜೊತೆ ಕಾರ್ಯಕರ್ತರು ಓಡಿಕೊಂಡು ಹೋಗಬೇಕು ಅನ್ನುವಷ್ಟು ವೇಗವಾಗಿ ಸಾಗ್ತಾ ಇದ್ರು. ಅದೇ ಸೇಮ್ ಟು ಸೇಮ್ ಅನ್ನುವಂತೆ ಪದ್ಮರಾಜ್ ಪೂಜಾರಿ ಕೂಡಾ ಪ್ರಚಾರ ಮಾಡ್ತಾ ಇದ್ದಾರೆ.

ಪದ್ಮರಾಜ್ ಪೂಜಾರಿಯವರು ಒಮ್ಮೆ ಬೈಕ್‌ನಲ್ಲಿ ಮತಯಾಚನೆಗೆ ತೆರಳಿದ್ರೆ, ಮತ್ತೊಮ್ಮೆ ಜೀಪ್ ಏರಿ ರೋಡ್ ಶೋ ನಡೆಸ್ತಾರೆ. ಇನ್ನು ಗ್ರಾಮೀಣ ಪ್ರದೇಶದಲ್ಲಿ ಪಾದಯಾತ್ರೆ ಮಾಡಿದ್ರೆ ಅವರ ವೇಗದ ನಡಿಗೆ ಮತ್ತು ಓಡಿಕೊಂಡು ಹೋಗುವ ಅವರ ಶೈಲಿ ಜನಾರ್ದನ ಪೂಜಾರಿ ಅವರನ್ನು ನೆನಪಿಸುತ್ತದೆ. ಎಲ್ಲೇ ಹೋದ್ರು ಜನ ಪದ್ಮರಾಜ್ ಅವರನ್ನು ಮುತ್ತಿಕೊಂಡು ಪ್ರೀತಿಯಿಂದ ಮಾತಾಡಿಸ್ತಾ ಇದ್ದಾರೆ. ಅದೇ ರೀತಿ ಪದ್ಮಾರಾಜ್ ಕೂಡಾ ಜನರಿಗೆ ಬಹಳಷ್ಟು ಹತ್ತಿರವಾಗಿ ಅಭಿಮಾನ ಪ್ರೀತಿಯನ್ನ ಗಳಿಸಿಕೊಂಡಿದ್ದಾರೆ. ಸದ್ಯಕ್ಕಂತು ಜನ ಜನಾರ್ದನ ಪೂಜಾರಿ ಅವರ ಸ್ಥಾನ ತುಂಬಲು ಪದ್ಮರಾಜ್ ಅವರೇ ಸರಿಯಾದ ಅಭ್ಯರ್ಥಿ ಅಂತ ಮಾತನಾಡುತ್ತಿದ್ದು, ಅವರ ಗೆಲುವಿಗೆ ಹಾರೈಸುತ್ತಿದ್ದಾರೆ.

ಇದನ್ನೂ ಓದಿ : ಉಡುಪಿ: ಅನ್ಯಕೋಮಿನವರ ಕೊಬ್ಬಿಗೆ ಸಿದ್ದರಾಮಯ್ಯ ಆಡಳಿತವೇ ಮುಖ್ಯ ಕಾರಣ : ಸುನಿಲ್ ಕುಮಾರ್

Continue Reading

LATEST NEWS

ಉಡುಪಿ: ಅನ್ಯಕೋಮಿನವರ ಕೊಬ್ಬಿಗೆ ಸಿದ್ದರಾಮಯ್ಯ ಆಡಳಿತವೇ ಮುಖ್ಯ ಕಾರಣ : ಸುನಿಲ್ ಕುಮಾರ್

Published

on

ಉಡುಪಿ : ರಾಜ್ಯದಲ್ಲಿ ಅನ್ಯಕೋಮಿನವರು ದೊಡ್ಡ ಪ್ರಮಾಣದಲ್ಲಿ ವಿಜ್ರಂಭಿಸಲು ಆರಂಭ ಮಾಡಿದ್ದಾರೆ. ರಾಜ್ಯದಲ್ಲಿ ಒಂದಾದ ನಂತರ ಒಂದು ಘಟನೆಗಳು ನಡೆಯುತ್ತಿದೆ. ಅನ್ಯಕೋಮಿನವರ ಈ ಪ್ರಮಾಣದ ಕೊಬ್ಬಿಗೆ ಸಿದ್ದರಾಮಯ್ಯ ಆಡಳಿತ ಮತ್ತು ಧೋರಣೆಯೇ ಮುಖ್ಯ ಕಾರಣ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಹೇಳಿದರು.


ಹುಬ್ಬಳ್ಳಿಯ ನೇಹಾ ಹಿರೇಮಠ ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿಯಲ್ಲಿ ಶನಿವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸಿದ್ದರಾಮಯ್ಯನವರು ನೇಹಾ ಕುಟುಂಬಕ್ಕೆ ಸಾಂತ್ವನ ಹೇಳುವ ಬದಲು ವೈಯಕ್ತಿಕ ಘಟನೆ ಎಂದು ಹೇಳುತ್ತಾರೆ.

ಇದನ್ನೂ ಓದಿ : ನೇಹಾ ಹ*ತ್ಯೆ ಪ್ರಕರಣ : ಆಕ್ರೋಶ ಹೊರ ಹಾಕಿದ ಸಿನಿತಾರೆಯರು

ಮುಖ್ಯಮಂತ್ರಿಯಾದವರು ಇಂತಹ ಘಟನೆಯಾದಾಗ ಜಾರಿಕೊಂಡರೆ ರಾಜ್ಯದ ರಕ್ಷಣೆ ಯಾರು ಮಾಡಬೇಕು? ರಾಮೇಶ್ವರಂ ಬಾಂಬ್ ಸ್ಫೋಟ, ಪಾಕ್ ಜಿಂದಾಬಾದ್, ಕೊ*ಲೆ ಸಂದರ್ಭದಲ್ಲಿ ಸಿಎಂ ಮಾತನಾಡುವುದಿಲ್ಲ. ಹಾಡು ಹಗಲೇ ಹ*ತ್ಯೆಯಾದಾಗ ಕಠಿಣ ಧೋರಣೆ ವಹಿಸಬೇಕಿತ್ತು. ಲವ್ ಜಿ*ಹಾದ್, ಮತಾಂ*ಧತೆ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಗರಿಗೆದರಿದೆ. ರಾಜ್ಯದ ರಕ್ಷಣೆ ಕಾಂಗ್ರೆಸ್ ನಿಂದ ಅಸಾಧ್ಯ. ಸಮಾಜ ದೊಡ್ಡ ಪ್ರಮಾಣದಲ್ಲಿ ಜಾಗೃತವಾಗ ಬೇಕಾದ ಅನಿವಾರ್ಯತೆ ಇದೆ ಎಂದರು.

 

Continue Reading

FILM

ಸೂಪರ್ ಹಿಟ್ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್ ಡೇಟ್ ಫಿಕ್ಸ್!

Published

on

ಮಲಯಾಳಂನ ಮಂಜುಮ್ಮೆಲ್ ಬಾಯ್ಸ್ ಭಾರೀ ಯಶಸ್ಸನ್ನು ಗಳಿಸಿದ ಚಿತ್ರ. ಚಿತ್ರ ನೋಡಿ ಮತ್ತೆ ಮತ್ತೆ ವೀಕ್ಷಿಸಲು ಥಿಯೇಟರ್ ಗೆ ಜನ ಲಗ್ಗೆ ಇಡುತ್ತಿದ್ದಾರೆ. ಮಲಯಾಳಂ ಸಿನಿ ಪ್ರಿಯರು ಚಿತ್ರ ನೋಡಿ ಭಾರೀ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಯಾವುದೇ ಸಿನಿಮಾ ಬಂದ್ರೂ ಅದು ಓಟಿಟಿಯಲ್ಲಿ ಯಾವಾಗ ಬರುತ್ತೆ ಅಂತ ಕಾಯೋದು ಸಹಜ. ಇದೀಗ ‘ಮಂಜುಮ್ಮೆಲ್ ಬಾಯ್ಸ್’ ಸರದಿ.

ಅತಿ ಹೆಚ್ಚು ಗಳಿಕೆ :


‘ಮಂಜುಮ್ಮೆಲ್ ಬಾಯ್ಸ್’ ಸರಳ ಕಥಾಹಂದರ ಹೊಂದಿದ್ದರೂ ಅದ್ಭುತವಾಗಿ ಕಟ್ಟಿಕೊಡಲಾಗಿದೆ. ಚಿತ್ರವನ್ನು ಚಿದಂಬರಂ ಮನೋಜ್ಞವಾಗಿ ಚಿತ್ರಿಸಿದ್ದಾರೆ. ಫೆಬ್ರವರಿ 22 ರಂದು ಈ ಚಿತ್ರ ತೆರೆಕಂಡಿತ್ತು. ಬಾಕ್ಸ್ ಆಫೀಸ್ ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಈಗಾಗಲೇ ಗ್ರಾಸ್ ಕಲೆಕ್ಷನ್ 200 ಕೋಟಿ ರೂಪಾಯಿ ದಾಟಿದೆ. ಮಲಯಾಳಂನಲ್ಲಿ ಅತಿ ಹೆಚ್ಚು ಗಳಿಕೆ ಕಂಡ ಸಿನಿಮಾ ಎಂಬ ಹೆಗ್ಗಳಿಕೆ ಗಳಿಸಿದೆ.


ಶೌಬಿನ್ ಶಾಹಿರ್, ಶ್ರೀನಾಥ್ ಬಾಸಿ, ಬಾಲು ವರ್ಗೀಸ್, ಗಣಪತಿ ಸೇರಿದಂತೆ ಸಾಕಷ್ಟು ಜನ ಕಲಾವಿದರು ಚಿತ್ರದಲ್ಲಿ ಪಾತ್ರವಾಗಿದ್ದಾರೆ. ಅಂದಾಜು 20 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣವಾಗಿದ್ದ ಸ್ಟಾರ್ ನಟರಿಲ್ಲದ ಈ ಸಿನಿಮಾ 200 ಕೋಟಿ ರೂ. ಕಲೆಕ್ಷನ್ ಮಾಡಿರೋದು ಆಶ್ಚರ್ಯ ಹುಟ್ಟು ಹಾಕಿದೆ.

ಓಟಿಟಿಯಲ್ಲಿ ಯಾವಾಗ ?

‘ಮಂಜುಮ್ಮೆಲ್ ಬಾಯ್ಸ್’ ಸಿನಿಮಾವನ್ನು ಥಿಯೇಟರ್ ಅಂಗಳದಲ್ಲಿ ನೋಡಿ ಎಂಜಾಯ್ ಮಾಡಿದವರು ಅನೇಕ ಮಂದಿ ಇದ್ದಾರೆ. ಇದೀಗ ಸಿನಿಮಾ ಓಟಿಟಿಯಲ್ಲಿ ಯಾವಾಗ ಅನ್ನೋ ಪ್ರಶ್ನೆ ಹುಟ್ಟಿತ್ತು. ಇದಕ್ಕೆ ಉತ್ತರವೂ ಸಿಕ್ಕಿದೆ.

ಡಿಸ್ನಿ ಪ್ಲಸ್ ಹಾಟ್‌ಸ್ಟರ್‌ನಲ್ಲಿ ಮೇ 3 ರಂದು ಸ್ಟ್ರೀಮಿಂಗ್ ಆಗುವುದು ಬಹುತೇಕ ಖಚಿತವಾಗಿದೆ. ಫೆಬ್ರವರಿ 22 ರಂದು ತೆರೆಗೆ ಬಂದಿದ್ದ ಸಿನಿಮಾ ಈಗಾಗಲೇ 50 ದಿನ ಪೂರೈಸಿದೆ. ಸದ್ಯ ತೆಲುಗು, ತಮಿಳು, ಕನ್ನಡಕ್ಕೂ ಸಿನಿಮಾ ಡಬ್ ಆಗಿದ್ದು, ಏಕಕಾಲಕ್ಕೆ ಓಟಿಟಿಯಲ್ಲಿ ಸ್ಕ್ರೀಮಿಂಗ್ ಆಗಲಿದೆಯಾ ಎಂಬುದು ತಿಳಿದು ಬಂದಿಲ್ಲ.

 

Continue Reading

LATEST NEWS

Trending