BBK 11 : ಬಿಗ್ ಬಾಸ್ ಕನ್ನಡ ಶೋ ನಲ್ಲಿ ವಾರದ ಕೊನೆಯಲ್ಲಿ ಕಿಚ್ಚನ ಜೊತೆಗೆ ಪಂಚಾಯತಿ ನಡೆಯುತ್ತೆ. ಆದ್ರೆ ಈ ವಾರ ಸುದೀಪ್ ಬಂದಿಲ್ಲ. ಹಾಗಾಗಿ ಶನಿವಾರದ ಎಪಿಸೋಡ್ಗೆ ನಿರ್ದೇಶಕ ಯೋಗರಾಜ್ ಭಟ್ ಮನೆಗೆ ಬಂದಿದ್ದರು. ಇನ್ನು ಭಾನುವಾರದ ಎಪಿಸೋಡ್ಗೆ ಹೊಸ ಅತಿಥಿ ಬಂದಿದ್ದು ತಮ್ಮೊಟ್ಟಿಗೆ ಕಾರುಗಳನ್ನು ಸಹ ಕರೆತಂದಿದ್ದಾರೆ.
ಕಳೆದ ಶನಿವಾರ ಸುದೀಪ್ ಅವರ ತಾಯಿ ಸರೋಜಮ್ಮ ನಿಧನರಾದ ಕಾರಣ ಸುದೀಪ್ ಆ ನಂತರದ ತಮ್ಮ ಎಲ್ಲ ಚಿತ್ರೀಕರಣ, ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ. ಈ ವೀಕೆಂಡ್ನ ವಾರದ ಪಂಚಾಯಿತಿಗೆ ಸಹ ಸುದೀಪ್ ಬಂದಿಲ್ಲ. ಹಾಗಾಗಿ ಬಿಗ್‌ಬಾಸ್ ಆಯೋಜಕರು ಇಬ್ಬರು ಅತಿಥಿಗಳನ್ನು ಮನೆಯ ಒಳಕ್ಕೆ ಕಳಿಸಿದ್ದಾರೆ. ಶನಿವಾರದ ಎಪಿಸೋಡ್ಗೆ ನಿರ್ದೇಶಕ ಯೋಗರಾಜ್ ಭಟ್ ಅವರು ಬಂದಿದ್ದರು. ಮನೆಯ ಸದಸ್ಯರ ಕೈಲಿ ಕೆಲವು ತಮಾಷೆಯ ಟಾಸ್ಕ್ಗಳನ್ನು ಮಾಡಿದ್ದರು. ಕೆಲವರಿಗೆ ಬುದ್ಧಿವಾದ ಹೇಳಿದ್ದರು. ಇದೀಗ ಭಾನುವಾರದ ಎಪಿಸೋಡ್ಗೆ ಸೃಜನ್ ಬಂದಿದ್ದಾರೆ.
ಈ ಹಿಂದೆ ಸೃಜನ್ ಸ್ಪರ್ಧಿಯಾಗಿ ಬಿಗ್‌ಬಾಸ್‌ಗೆ ಬಂದಿದ್ದರು, ಆದರೆ ಈಗ ಅತಿಥಿಯಾಗಿ ಬಂದಿದ್ದಾರೆ. ಖಾಲಿ ಕೈಯಲ್ಲಿ ಬಾರದೆ ತಮ್ಮೊಡನೆ ದುಬಾರಿ ಟಾಟಾ ಕರ್ವ್ ಕಾರುಗಳನ್ನು ತಂದಿದ್ದರು. ಮನೆಗೆ ಬಂದಿದ್ದ ಕಾಲಿ ಕಾರುಗಳು ಎಲಿಮಿನೇಟ್ ಆಗಲಿರುವ ಒಬ್ಬ ಸ್ಪರ್ಧಿಯನ್ನು ಮನೆಯಿಂದ ಹೊರಗೆ ಕರೆದುಕೊಂಡು ಹೋಗಿವೆ. ಆದರೆ ಆ ವ್ಯಕ್ತಿ ಯಾರು ಎಂದು ಇವತ್ತಿನ ಎಪಿಸೋಡ್‌ನಲ್ಲಿ ಕಾದು ನೋಡಬೇಕಷ್ಟೇ.
ಮುಖ್ಯವಾಗಿ ಬಿಗ್‌ಬಾಸ್ ಮನೆಗೆ ಬಂದ ಸೃಜನ್ ಮೊದಲಿಗೆ ಟಾಸ್ಕ್ ನೀಡಿ ಕೆಲವು ತಾಷೆ ಆಟಗಳನ್ನೂ ಆಡಿದ್ದಾರೆ. ಬಳಿಕ ಮನೆಯಿಂದ ಯಾರು ಹೊರಹೋಗಬೇಕು ಹಾಗೂ ಯಾಕೆ ? ಎಂಬ ಸೂಕ್ತ ಕಾರಣ ಸ್ಪರ್ಧಿಗಳಿಗೆ ನೀಡಿದ್ದಾರೆ. ಐಶ್ವರ್ಯ ಸೇರಿದಂತೆ ಇನ್ನೂ ಹಲವರು ವಿಕ್ರಮ ಹೆಸರು ಹೇಳಿದ್ದಾರೆ. ಒಬ್ಬೊಬ್ಬರ ಹೆಸರು ಕೆಳಿ ಬಂದಿದ್ದು, ಕೊನೆಗೆ ಮತಗಲ ಆಧಾರದಲ್ಲಿ ಒಬ್ಬ ಸ್ಪರ್ಧಿಯನ್ನು ಇಂದು ಬಿಗ್‌ಬಾಸ್ ಮನೆಯಿಂದ ಹೊರ ಹಾಕಲಿದೆ.
ಮಂಗಳೂರು : ಜನವರಿ 11 ಮತ್ತು 12 ರಂದು ಮಂಗಳೂರಿನ ಕದ್ರಿ ಪಾರ್ಕ್ ನಲ್ಲಿ ಶರಧಿ ಪ್ರತಿಷ್ಟಾನವು ಆಯೋಜಿಸುವ ‘ ಕಲಾ ಪರ್ಬ ‘ ಇದರ ಲಾಂಛನ ಮತ್ತು ಕರಪತ್ರವನ್ನು ಇಂದು ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ಯು.ಟಿ. ಖಾದರ್ ರವರು ಬಿಡುಗಡೆ ಗೊಳಿಸಿದರು.
ಕಲಾವಿದರೆಲ್ಲರನ್ನೂ ಒಗ್ಗೂಡಿಸಿ ವಿವಿಧ ಕಲಾ ಪ್ರಕಾರಗಳನ್ನು ಒಂದೇ ಕಡೆ ಅಭಿವ್ಯಕ್ತ ಪಡಿಸುವ ಮತ್ತು ಇದರ ಮೂಲಕ ಕಲಾ ಕ್ಷೇತ್ರ ಇನ್ನಷ್ಟು ವಿಕಸನವಾಗುವ ಉದ್ದೇಶವನ್ನು ಇಟ್ಟುಕೊಂಡು ಈ ಕಲಾ ಪರ್ಬವನ್ನು ಆಯೋಜಿಸಲಾಗುತ್ತಿದೆ. ಇಲ್ಲಿ ಮೂರ್ತ – ಅಮೂರ್ತ, ಹಿರಿಯ – ಕಿರಿಯ ಎಂಬ ಯಾವುದೇ ಅಂತರ, ಬೇಧ ಇಲ್ಲದೇ ಎಲ್ಲಾ ಕಲಾವಿದರು ತಮ್ಮ ಕಲಾ ಪ್ರಕಾರಗಳನ್ನು ಕಲಾ ವೀಕ್ಷಕರಿಗೆ, ಕಲಾಭಿಮಾನಿಗಳಿಗೆ ಕಲಾಕೃತಿಗಳ ಪ್ರದರ್ಶನ, ಮಾರಾಟ ಮತ್ತು ಪ್ರಾತ್ಯಕ್ಷಿಕೆ ಮೂಲಕ ಪರಿಚಯಿಸುವುದು ಪ್ರಮುಖವಾಗಿರುತ್ತದೆ. ಚಿತ್ರ ಕಲೆ, ಶಿಲ್ಪಕಲೆ ಮತ್ತು ನೃತ್ಯ ಪ್ರಕಾರಗಳ ವಿವಿಧ ರೂಪಗಳ ಅಭಿವ್ಯಕ್ತ ಹರಿವು, ಸೆಳವುಗಳ ಮೂಲಕ ಮೇಳದ ರೂಪದಲ್ಲಿ ಇಲ್ಲಿ ಆಗುತ್ತಿರುವುದು ಕಲಾ ಸಂಭ್ರಮ ಮತ್ತು ಕಲಾ ಜಂಗಮ.
ಸುಮಾರು 200 ಮಳಿಗೆಗಳಲ್ಲಿ ಕಲಾಕೃತಿ, ಛಾಯಾ ಚಿತ್ರ 30 ಮಳಿಗೆಗಳಲ್ಲಿ ಶಿಲ್ಪ ಕಲಾ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ ಇರುವುದು. ಕಲಾಕೃತಿಗಳನ್ನು ಮಿತ ದರದಲ್ಲಿ ಖರೀದಿಸುವವರಿಗೆ ಉತ್ತಮ ಅವಕಾಶವಿದು.
ಲಾಂಛನದ ಅರ್ಥ :
ಈ ಕಲಾಪರ್ಬದ ಲಾಂಛನವು ಒಂದು ಸಂದೇಶವನ್ನು ನೀಡುತ್ತಿದೆ. ಇಲ್ಲಿ ಒಂದು ಕ್ಯಾನ್ವಾಸ್ ನಲ್ಲಿ 3 ಬಣ್ಣಗಳ ಸಂಗಮ ( K ) ಇಲ್ಲಿ ಕ್ಯಾನ್ವಾಸ್ ಕಲಾಕೃತಿಯ ಪ್ರತೀಕವಾದರೂ ನಮ್ಮ ಸಮಾಜವೇ ಒಂದು ರೀತಿಯ ಕ್ಯಾನ್ವಾಸ್ ಎಂಬ ಚೌಕಟ್ಟು. ಈ ಬದುಕಿನ ಚೌಕಟ್ಟಿನ ಒಳಗೆ ಎಲ್ಲರದ್ದೂ ಒಂದು ರೀತಿಯ ಬಣ್ಣದ ಬದುಕು. ನಮ್ಮ ನಿತ್ಯ ದಿನಚರಿ, ಚಟುವಟಿಕೆಗಳಿಂದ ಸಮಾಜಕ್ಕೆ, ಪ್ರಕೃತಿಗೆ ಒಂದು ಕೊಡುಗೆಯನ್ನು ನೀಡಬೇಕಾದರೆ ನಮ್ಮ ಸೀಮಿತ ಚೌಕಟ್ಟಿನಿಂದ ವಾದ ಮತ್ತು ಪಾದಗಳನ್ನು ಹೊರಗಿಡಲೇ ಬೇಕು. ಇದರ ಪ್ರತಿ ರೂಪವಾಗಿ ಕ್ಯಾನ್ವಾಸ್ ನಿಂದ ಒಂದು ಕಡೆ ಕುಂಚ ( ವಾದ…ತತ್ವ, ಸಿದ್ದಾಂತ ) ಹೊರಗೆ ಬಂದಿರುತ್ತದೆ. ಇನ್ನೊಂದು ಕಡೆ ಹೆಜ್ಜೆ ( ಪಾದ…ನಡೆ, ನಡತೆ ) ಹೊರಗೆ ಬಂದಿರುತ್ತದೆ.
ಅಂದರೆ ಕಲಾಕ್ಷೇತ್ರದಲ್ಲಿ ಆಗಲಿ, ಸಮಾಜದಲ್ಲಾಗಲಿ ನಾವು ನಮ್ಮದೇ ಸೀಮಿತ ಬಣ್ಣ, ಬದುಕು ಎಂಬ ಚೌಕಟ್ಟಿನಲ್ಲಿ ಕಂಡು ಕೊಂಡದ್ದಕ್ಕಿಂತ, ನಾವು ಚೌಕಟ್ಟು ಮೀರಿ ಹೊರ ಆಯಾಮವನ್ನು ತಲುಪಲು ಪ್ರಯತ್ನಿಸಿದರೆ ( ಖಾಸಗಿ ಬದುಕಿನಿಂದ ಸಾಮಾಜಿಕ ಬದುಕಿಗೆ ) ಉತ್ತಮವಾದ ಕಲಾಕೃತಿಯನ್ನು ಮತ್ತು ಸಮಾಜವನ್ನು ರೂಪಿಸಬಹುದು ಎಂಬುದು ಈ ಲಾಂಛನದ ಒಳಾರ್ಥ.
ಅದೇ ರೀತಿ ಕರ ಪತ್ರದಲ್ಲಿ ಬಣ್ಣದ ಹುಡುಗಿಯೊಬ್ಬಳು ಸಂಭ್ರಮಿಸುತ್ತಿದ್ದಾಳೆ. ಆಕೆಯ ಮುಖ ಬಣ್ಣದ ಪಾಲೇಟ್ ಮತ್ತು ನೀರಿನ ಹೂಜಿ, ಕೈ, ಕಾಲುಗಳು ಕುಂಚ ( ಚಿತ್ರ ಕಲಾ ಮೇಳ ಆಗಿರುವುದರಿಂದ ) ಕೆಳಗಿನ ಪಾದದ ಕುಂಚಗಳಲ್ಲಿ ಹೆಜ್ಜೆ – ಗೆಜ್ಜೆ ( ಈ ಪರ್ಬದಲ್ಲಿ ನೃತ್ಯವೂ ಇರುವುದರಿಂದ ) ಉಟ್ಟ ಲಂಗವು ಶಿಲಾ ಹಾಸುಗಳ ಪ್ರತಿರೂಪ ( ಈ ಪರ್ಬದಲ್ಲಿ ಶಿಲ್ಪ ಕಲೆಯೂ ಇರುವುದರಿಂದ ) ಎದೆ ಭಾಗದಲ್ಲಿ ಕ್ಯಾಮೆರಾ ಲೆನ್ಸ್ ( ಈ ಪರ್ಬದಲ್ಲಿ ಛಾಯಾ ಚಿತ್ರ ಪ್ರದರ್ಶನವೂ ಇರುವುದರಿಂದ ) ಇದೆಲ್ಲರ ಪ್ರತೀಕವಾಗಿ ಈ ಚಿತ್ರವನ್ನು ರಚಿಸಲಾಗಿದೆ.
ಬನ್ನಿ ಕಲಾ ಪರ್ಬ ನಿಮ್ಮದೇ…ಬಣ್ಣದ ಲೋಕದಲ್ಲಿ ಸಂಭ್ರಮಿಸೋಣ. ನಿಮ್ಮ ಬೆಂಬಲವೇ ಈ ಪರ್ಬದ ಯಶಸ್ಸು
ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.
ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್ ನೆಪದಲ್ಲಿ ಈ ನಂಬರ್ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.
ಅನಂತರ ವಾಟ್ಸಪ್ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.
ಬಿಗ್‌ಬಾಸ್ ರಿಯಾಲಿಟಿ ಶೋ ಸ್ಪರ್ಧಿಗಳ ಬದುಕಿಗೆ ಹೊಸ ಸ್ಪರ್ಶ ಹಾಗೂ ಭರವಸೆಗಳನ್ನು ನೀಡುತ್ತದೆ. ಬರೀ ನೆಗೆಟಿವ್ ಇಟ್ಟುಕೊಂಡೇ ಬಿಗ್‌ಬಾಸ್ ಸೀಸನ್ 10ಕ್ಕೆ ಹೋಗಿದ್ದ ಡ್ರೋನ್ ಪ್ರತಾಪ್, ವ್ಯಕ್ತಿತ್ವದ ಮೂಲಕ ಕನ್ನಡಿಗರ ಮನ ಗೆದ್ದಿದ್ದರು. ರಿಯಾಲಿಟಿ ಶೋನಿಂದ ಬಂದ ಮೇಲೆ ಅವರ ಜೀವನದಲ್ಲಿ ಒಂದೊಂದೇ ಬೆಳವಣಿಗೆ ಆಗುತ್ತಿವೆ. ಇದೀಗ ಡ್ರೋನ್ ಪ್ರತಾಪ್ ಹೀರೋ ಆಗಿ ಸಿನಿಮಾವೊಂದರಲ್ಲಿ ಅಭಿನಯ ಮಾಡುತ್ತಿದ್ದಾರೆ.
ಡ್ರೋನ್ ಪ್ರತಾಪ್ ಅವರು ನಾಯಕ ನಟನಾಗಿ ಇನ್ನು ಹೆಸರು ಇಡದ ಕನ್ನಡದ ಸಿನಿಮಾವೊಂದರಲ್ಲಿ ಅಭಿನಯ ಮಾಡುತ್ತಿದ್ದಾರೆ. ಸ್ವತಹ ಪ್ರತಾಪ್ ಈ ಬಗ್ಗೆ ತಮ್ಮ ಇನ್ಸ್ಟಾ ಅಕೌಂಟ್ನಲ್ಲಿ ವಿಡಿಯೋವೊಂದನ್ನ ಶೇರ್ ಮಾಡಿ ಮಾಹಿತಿ ತಿಳಿಸಿದ್ದಾರೆ. ಪ್ರತಾಪ್ ಹೊಸದೊಂದು ಪ್ರಾಜೆಕ್ಟ್ನಲ್ಲಿ ಬ್ಯುಸಿ ಆಗುತ್ತಿದ್ದಾರೆ. ಇದರಿಂದ ಅವರ ಬದುಕಿನಲ್ಲಿ ಮತ್ತಷ್ಟು ಅವಕಾಶಗಳು ಹುಡುಕಿಕೊಂಡು ಬರುವ ಸಾಧ್ಯತೆ ಇದೆ.
ಸದ್ಯ ಡ್ರೋನ್ ಪ್ರತಾಪ್ ಶೇರ್ ಮಾಡಿರುವ ವಿಡಿಯೋದಲ್ಲಿ ಕಾರಿನಿಂದ ಇಳಿಯುತ್ತಿದ್ದಂತೆ ನೇರ ಮಂಡ್ಯದ ಕೆ.ಆರ್ ಪೇಟೆಯ ಹುನುಮಾನ್ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ ದೇವರ ದರ್ಶನ ಪಡೆದು ಒಳ್ಳೆಯದಾಗಲಿ ಎಂದು ದೇವರ ಬಳಿ ಕೇಳಿಕೊಂಡಿದ್ದಾರೆ. ಇದೇ ವೇಳೆ ನಾನು ಹೊಸ ಸಿನಿಮಾದಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿದ್ದೇನೆ. ನನ್ನ ಬ್ಯುಸಿನೆಸ್ ಜೊತೆಗೆ ಸಿನಿಮಾ ರಂಗಕ್ಕೂ ಕಾಲಿಡುತ್ತಿದ್ದೇನೆ. ಇದಕ್ಕೆ ನಿಮ್ಮೆಲ್ಲ ಆಶೀರ್ವಾದ ಬೇಕು ಎಂದು ವೇದಿಕೆ ಮೇಲೆ ಹೇಳಿದ್ದಾರೆ.