Wednesday, December 1, 2021

ಎಷ್ಟು ಮಂದಿ ಕನ್ನಡಿಗರು ಅಫ್ಘಾನಿಸ್ತಾನದಲ್ಲಿ ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿ ಇಲ್ಲ: ಗೃಹಸಚಿವ ಅರಗ ಜ್ಞಾನೇಂದ್ರ

ಮಂಗಳೂರು: ರಾಜ್ಯದ ಎಷ್ಟು ಮಂದಿ ಅಫ್ಘಾನಿಸ್ತಾನದಲ್ಲಿ ಸಿಲುಕಿಕೊಂಡಿದ್ದಾರೆ ಎಂಬ ಸರಿಯಾದ ಮಾಹಿತಿ ಇಲ್ಲ. ಸದ್ಯ ಅವರ ರಕ್ಷಣೆಗಾಗಿ ಸಿ.ಐ.ಡಿಯಲ್ಲಿ ಕರ್ತವ್ಯದಲ್ಲಿರುವ ಉಮೇಶ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿದ್ದೇವೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.


ಮಂಗಳೂರಿಗೆ ಇಂದು ಭೇಟಿ ನೀಡಿದ ಅವರು ಬಜಪೆ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರದಿಂದ ಅಫ್ಘಾನಿಸ್ತಾನದಲ್ಲಿ ಸಿಲುಕಿಕೊಂಡವರನ್ನು ಕರೆತರುವ ವ್ಯವಸ್ಥೆಯಾಗುತ್ತಿದೆ.

ರಾಜ್ಯ ಸರ್ಕಾರ ಸಹ ಇದಕ್ಕೆ ಸಹಕಾರ ನೀಡುತ್ತಿದೆ.

ಅದಕ್ಕಾಗಿ ನೋಡಲ್‌ ಅಧಿಕಾರಿಯನ್ನು ನೇಮಿಸಿದೆ. ಈ ಹಿಂದೆ ವಿದೇಶದಲ್ಲಿ ಅತಂತ್ರರಾಗಿದ್ದ ಕನ್ನಡಿಗರನ್ನು ನೋಡಲ್ ಅಧಿಕಾರಿ ಉಮೇಶ್ ಕರೆ ತಂದಿದ್ದಾರೆ.

ಸಂಕಷ್ಟದಲ್ಲಿರುವವರು ಅವರನ್ನು ಸಂಪರ್ಕ ಮಾಡಬಹುದು ಎಂದು ತಿಳಿಸಿದ್ದಾರೆ.
ಇದೇ ವೇಳೆ ಮಂಗಳೂರಿನಲ್ಲಿ ಎನ್.ಐ.ಎ ಕೇಂದ್ರ ಸ್ಥಾಪನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಕರಾವಳಿಯಲ್ಲಿ ಕೆಲ ವರ್ಷಗಳಿಂದ ಭಯೋತ್ಪಾದಕ ಚಟುವಟಿಕೆ ನಡೀತಾ ಇದೆ.

ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಚಟುವಟಿಕೆಗಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ‌ ನೀಡಿದ್ದೇನೆ.

ಕೇಂದ್ರದ ಜೊತೆ ಮಾತನಾಡಿ ಎನ್.ಐ.ಎ ಕಚೇರಿ ಸ್ಥಾಪಿಸುವ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ತಿಳಿಸಿದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...