Friday, July 1, 2022

ಉಕ್ರೇನ್‌ನಲ್ಲಿರುವ ಭಾರತೀಯರೇ ಮೋದಿ ಮೇಲೆ ನಂಬಿಕೆಯಿಡಿ: ಸಂಸದ ಪ್ರತಾಪ್‌ಸಿಂಹ

ಮೈಸೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮೇಲೆ ನಿರೀಕ್ಷೆಗಳು ಹೆಚ್ಚಾಗಿವೆ. ಆದರೆ, ಮಧ್ಯಸ್ಥಿಕೆ ವಹಿಸುವುದು ಅಷ್ಟು ಸುಲಭವಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.


ಮೈಸೂರಿನಲ್ಲಿ ಮಾತನಾಡಿದ ಅವರು, ‘ರಷ್ಯಾ ಅಧ್ಯಕ್ಷರೇ ಖುದ್ದಾಗಿ ಪ್ರಧಾನಿಯವರಿಗೆ ಕರೆ ಮಾಡಿದ್ದಾರೆ. ಅಂತಾರಾಷ್ಟ್ರೀಯ ವಿಚಾರ ಯಾವ ರೀತಿ ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಬೇಕು ಎಂಬುದು ಗೊತ್ತಿದೆ.

ಭಾರತ ಸರ್ಕಾರ ಅಥವಾ ಮೋದಿಯವರಿಗೆ ಸಲಹೆ ಕೊಡುವಷ್ಟು ನಾನು ದೊಡ್ಡವನಲ್ಲ. ಮೋದಿ ಮತ್ತು ಪುಟಿನ್ ನಡುವೆ ಆತ್ಮೀಯ ಸ್ನೇಹ ಸಂಬಂಧ ಇದೆ. ಅವರು ಏನು ಮಾತನಾಡಿದ್ದಾರೊ ನನಗೆ ಮಾಹಿತಿ ಇಲ್ಲ ಎಂದರು.

ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಕೆಂದ್ರ ಸರ್ಕಾರ ಬದ್ಧವಾಗಿದೆ. ಭಾರತೀಯರನ್ನು ಸುರಕ್ಷಿತವಾಗಿ ಕರೆತರುವಲ್ಲಿ ಪ್ರಧಾನಿಗಳು ಮಾತುಕತೆ ನಡೆಸುತ್ತಿದ್ದಾರೆ. ಯಾವುದೇ ಭಯ ಬೇಡ.

ಮೋದಿ ಮೇಲೆ ನಂಬಿಕೆ ಇಡಿ. ಸುರಕ್ಷಿತವಾಗಿ ಭಾರತೀಯರನ್ನು ಕರೆತರುತ್ತೇವೆ ಎಂದು ಸಂಸದ ಪ್ರತಾಪ್ ಸಿಂಹ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿ ಸರಕಾರ: ಪುತ್ತೂರಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಪುತ್ತೂರು: ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಶಿವಸೇನೆಯ ಬಂಡಾಯ ಶಾಸಕರೊಂದಿಗೆ ಮೈತ್ರಿ ಸರಕಾರ ರಚನೆ ಮಾಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಿಜೆಪಿ ಕಛೇರಿಯಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ...

ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದರಿಂದ ಮನನೊಂದು ಪಿಯುಸಿ ವಿದ್ಯಾರ್ಥಿನಿ ಜೀವಾಂತ್ಯ

ಉಡುಪಿ: ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಮತ್ತೆ ಅನುತ್ತೀರ್ಣಳಾಗಿದ್ದರಿಂದ ಮನನೊಂದು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮದಲ್ಲಿ ನಿನ್ನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮಾನಸ (17)...

ಮಂಗಳೂರಿನಲ್ಲಿ ಅಗ್ನಿವೀರ್ ಪ್ರವೇಶ ಪರೀಕ್ಷೆ: ಅವಿವಾಹಿತ ಪುರುಷರಿಂದ ಅರ್ಜಿ ಆಹ್ವಾನ

ಮಂಗಳೂರು: ಭಾರತೀಯ ವಾಯುಪಡೆಯಿಂದ ಅಗ್ನಿಪತ್ ಯೋಜನೆಯಡಿ ಅಗ್ನಿವೀರ್ ವಾಯು ಪ್ರವೇಶ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಶೇ.50ರಷ್ಟು ಅಂಕ ಮತ್ತು...