Connect with us

LATEST NEWS

DC ಕೊರಳಪಟ್ಟಿ ಹಿಡಿಯುವವರು, 100 ಮೀಟರ್‌ ಅಂತರದಲ್ಲೇ PFI ಕಚೇರಿ ಇದೆಯೆಂದು ಮರೆಯದಿರಿ: ಎ.ಕೆ ಅಶ್ರಫ್ ಎಚ್ಚರಿಕೆ

Published

on

ಮಂಗಳೂರು: ‘ಜಿಲ್ಲಾಧಿಕಾರಿಯ ಕೊರಳಪಟ್ಟಿ ಹಿಡಿಯುತ್ತೇವೆ ಎನ್ನುವವರು ಡಿಸಿ ಕಛೇರಿಯ 100 ಮೀಟರ್ ಅಂತರದಲ್ಲಿ ಪಾಪ್ಯುಲರ್ ಫ್ರಂಟ್ ನ ಕಛೇರಿಯು ಇದೆ ಎಂಬುವುದು ನೆನಪಿರಲಿ ಎಂದು ಪಾಪ್ಯುಲರ್ ಫ್ರಂಟ್ ಆಫ್‌ ಇಂಡಿಯಾದ ರಾಜ್ಯ ಕಾರ್ಯದರ್ಶಿ ಎ.ಕೆ ಅಶ್ರಫ್ ಹೇಳಿದ್ದಾರೆ.


ಪಾಪ್ಯುಲರ್ ಫ್ರಂಟ್ ವತಿಯಿಂದ ಕಲ್ಲಾಪುವಿನ ಯುನಿಟಿ ಮೈದಾನದಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆ ನಡೆಯಿತು. ಈ ವೇಳೆ ಮಾತನಾಡಿ, ಗಣೇಶ್‌ ಕಾರ್ಣಿಕ್‌ ಈ ಹಿಂದೆ ಹೇಳಿದಂತೆ ಪೊಲೀಸರಲ್ಲಿ ಬಜರಂಗದಳ ಬೆಂಬಲಿಸುವ 60 ಶೇಕಡಾ ಪೊಲೀಸರಿದ್ದಾರೆಂದು,

ಆದರೆ ಒಂದು ನೆನಪಿಡಿ ಜಿಲ್ಲಾಧಿಕಾರಿ ಕಚೇರಿ ಬಳಿ ಜಿಲ್ಲಾಧಿಕಾರಿಯ ಕಾಲರ್‌ ಪಟ್ಟಿ ಹಿಡಿಯುವವರು ಬರುವಾಗ ಗಣೇಶ್‌ ಕಾರ್ಣಿಕ್‌ ಹೇಳಿದ ಅಲ್ಲಿ ಪೊಲೀಸರಿಲ್ಲದಿದ್ದರೂ ಪಿಎಫ್‌ಐ ಕಾರ್ಯಕರ್ತರಿದ್ದಾರೆ. ನೀವು ಜಿಲ್ಲಾಧಿಕಾರಿ ಕೊರಳಪಟ್ಟಿ ಬಿಡಿ ಜಿಲ್ಲಾಧಿಕಾರಿ ಕಚೇರಿಯ ಗೇಟಿನ ಒಳಗಡೆ ಒಂದು ಹೆಜ್ಜೆ ಇಡಲು ಬಿಡುವುದಿಲ್ಲ.
ಸಂಘಪರಿವಾರದ ವಿರುದ್ಧದ ಹೋರಾಟಕ್ಕೆ ಪ್ರತಿಭಟನೆಯಲ್ಲ ಪ್ರತಿರೋಧವೇ ಮದ್ದು” ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪಾಪ್ಯುಲರ್ ಫ್ರಂಟ್ ರಾಜ್ಯ ಉಪಾಧ್ಯಕ್ಷರಾದ ಅಯ್ಯೂಬ್ ಅಗ್ನಾಡಿ ” NRC, CAA ವಿರೋಧಿ ಹೋರಾಟದಲ್ಲಿ ಭಾಗಿಯಾದ ನಾಗರಿಕರ ಜನಶಕ್ತಿ ಅದೇ ರೀತಿ ಅನ್ನದಾತ ರೈತನ ಹೋರಾಟದಲ್ಲಿ ಪ್ರಭುತ್ವದ ದಮನಕಾರಿ ನೀತಿಯಿಂದ ಹಿಂದೆ ಸರಿಸಲು ಅನಿವಾರ್ಯ ಪಡಿಸಿತು,

ಅದೇ ರೀತಿ ಸಮಾಜಕ್ಕೆ ಕಂಟಕವಾಗಿರುವ ಫ್ಯಾಸಿಸ್ಟ್ ರ ಕೈಯನ್ನು ಹಿಮ್ಮೆಟ್ಟಿಸಲು ಇಂದು ಸಮಾನ ಮನಸ್ಕರು ಜೊತೆ ಗೂಡಿ ಪ್ರಯತ್ನ ನಡೆಸಬೇಕಾಗಿದೆ.”ಎಂದರು.

ದಿಕ್ಸೂಚಿ ಭಾಷಣ ಮಾಡಿದ ಪಾಪ್ಯುಲರ್ ಫ್ರಂಟ್ ರಾಷ್ಟ್ರೀಯ ಕಾರ್ಯದರ್ಶಿ ಮೊಹಮ್ಮದ ಶಾಕಿಫ್ “75 ವರ್ಷಗಳ ಸ್ವಾತಂತ್ರ್ಯ ನಂತರದ ಇತಿಹಾಸ ಅವಲೋಕಿಸಿದಾಗ ಎಲ್ಲಾ ದೌರ್ಜನ್ಯದ ಹಿಂದೆ ಆರೆಸ್ಸೆಸ್ ಎಂಬ ದೇಶದ ಕ್ಯಾನ್ಸರ್ ಕೆಲಸ ಮಾಡುತ್ತಿದೆ.

ನೀವು ಪಾಪ್ಯುಲರ್ ಫ್ರಂಟ್ ವಿರುದ್ಧ ಎಷ್ಟು ಸುಳ್ಳು ಹರಡಿದರು ನಾವು ಭಯ ಪಡುವುದಿಲ್ಲ,ನಮ್ಮ ಕೆಲಸ ಮುಂದುವರಿಸುತ್ತಲೇ ಇರುತ್ತೇವೆ.” ಎಂದರು.


ಆಲ್ ಇಂಡಿಯಾ ಇಮಾಮ್ ಕೌನ್ಸಿಲ್ ಕೇರಳ ರಾಜ್ಯ ಉಪಾಧ್ಯಕ್ಷರಾದ ಮಜೀದ್ ಕಾಸಿಮಿ ಮಾತನಾಡಿ “ಸಂಘಪರಿವಾರ ವರ್ಣಾಶ್ರಮ ಪದ್ದತಿಯ ಮೂಲಕ ದೇಶವನ್ನು ಬ್ರಾಹ್ಮಣದ ಕಡೆಗೆ ಕೊಂಡೊಯ್ದು ಜಾತ್ಯಾತೀತ ಹಿಂದು,ಮುಸ್ಲಿಂ ಸಿಖ್ ಹಾಗೂ ಕ್ರೈಸ್ತರನ್ನು ದೇಶದಿಂದ ಇಲ್ಲವಾಗಿಸಲು ಪ್ರಯತ್ನಿಸುತ್ತಿದೆ.

ಇದಕ್ಕೆ ಪಾಪ್ಯುಲರ್ ಫ್ರಂಟ್ ಅವಕಾಶ ನೀಡುವುದಿಲ್ಲ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಮಿತಿ ಸದಸ್ಯರಾದ ಝಕರಿಯ ಗೋಳ್ತಮಜಲು, ಬಂಟ್ವಾಳ ತಾಲೂಕು ಅಧ್ಯಕ್ಷರಾದ ಸಲೀಂ ಕುಂಪನಮಜಲು, ಬೆಳ್ತಂಗಡಿ ತಾಲೂಕು ಅಧ್ಯಕ್ಷರಾದ ಮುಸ್ತಫಾ ಗುರವಾಯನಕೆರೆ,

ಮಂಗಳೂರು ನಗರ ಅಧ್ಯಕ್ಷರಾದ ಖಾದರ್, ಮಂಗಳೂರು ಗ್ರಾಮಾಂತರ ಅಧ್ಯಕ್ಷರಾದ ನವಾಝ್ ಕಾವೂರು, ವಿಟ್ಲ ವಲಯ ಅಧ್ಯಕ್ಷರಾದ ರಹೀಮ್ ಆಲಂಪಾಡಿ ಉಪಸ್ಥಿತರಿದ್ದರು.

DAKSHINA KANNADA

ಹೊತ್ತಿ ಉರಿದು ಭಸ್ಮ*ವಾದ ಸ್ವೀಟ್ ಕಾರ್ನ್ ಸ್ಟಾಲ್‌..!! ಓಡಿ ಜೀವ ಉಳಿಸಿಕೊಂಡ ಸ್ಟಾಲ್ ಮಾಲೀಕ, ಗ್ರಾಹಕರು

Published

on

ಉಳ್ಳಾಲ: ರಸ್ತೆಯ ಬದಿಯಲ್ಲಿ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಸ್ಟಾಲ್ ಒಂದರಲ್ಲಿ ಆಕಸ್ಮಿ*ಕ ಬೆಂಕಿಯಿಂದಾಗಿ ಸ್ಟಾಲ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಉಳ್ಳಾಲದ ದೇರಳಕಟ್ಟೆಯಲ್ಲಿ ನಡೆದಿದೆ.

sweet corn burn

ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ. ರಸ್ತೆಯ ಬದಿಯಲ್ಲೇ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಅಂಗಡಿ ಮಾಲೀಕ ಕಾರ್ನ್ ತಯಾರಿಸುವಾಗ ಈ ಅವಘಡ ಸಂಭವಿಸಿದೆ. ತಕ್ಷಣ ಅಂಗಡಿ ಮಾಲೀಕ ಹಾಗೂ ಸ್ವೀಟ್ ಕಾರ್ನ ತಿನ್ನಲು ಬಂದಿದ್ದ ಗ್ರಾಹಕರು ಓಡಿ ತಪ್ಪಿಸಿಕೊಂಡಿದ್ದಾರೆ. ಸ್ಥಳೀಯರು ತಕ್ಷಣ ಮರಳು ಹಾಗೂ ನೀರನ್ನ ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದ್ರೆ ಅಷ್ಟರಲ್ಲಾಗಲೇ ಸ್ಟಾಲ್ ಉರಿದು ಭಸ್ಮವಾಗಿ ಹೋಗಿದೆ.

Read More..; ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ

sweet corn burn 2

Continue Reading

LATEST NEWS

ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ

Published

on

ಬೆಳಗಾವಿ: 25 ರಿಂದ 30 ವರ್ಷದ ಯುವತಿಯೊಬ್ಬಳನ್ನು ಬರ್ಬರವಾಗಿ ಹ*ತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ ನಡೆದಿದೆ. ಇಲ್ಲಿನ ಗ್ರಾಮೀಣ ಪೊಲೀಸ್ ಠಾಣ ವ್ಯಾಪ್ತಿಯ ಮಮದಾಪುರ ಗ್ರಾಮದಲ್ಲಿ ಈ ಕೃತ್ಯ ನಡೆದಿದ್ದು ಕೊ*ಲೆ ಮಾಡಿದವರಾರು? ಹ*ತ್ಯೆ ಆದವಳು ಯಾರು? ಎಂಬುದಾಗಲಿ ಗೊತ್ತಾಗಿಲ್ಲ. ನಿನ್ನೆ(ಎ.18) ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಾಲುವೆ ಪಕ್ಕದಲ್ಲಿ ಹೊಗೆಯಾಡುತ್ತಿರುವುದನ್ನು ಜನರು ಗಮನಿಸಿದ್ದಾರೆ. ಬಿಸಿಲಿನ ತಾಪಕ್ಕೆ ಹುಲ್ಲು ಇರುವ ಜಾಗಕ್ಕೆ ಬೆಂಕಿ ಬಿದ್ದಿರಬಹುದು ಎಂದು ಕೆಲವರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಯುವತಿಯ ಮೃತದೇಹ ಕಂಡು ಬಂದಿದೆ.

murder

ಯುವತಿಯ ಕತ್ತು ಕೊಯ್ದು ಬಳಿಕ ಆಕೆಯ ಗುರುತು ಪತ್ತೆಯಾಗದಂತೆ ಸುಟ್ಟು ಹಾಕಿರಬೇಕು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ವಿಧಿ ವಿಜ್ಞಾನ ತಂಡ ಹಾಗೂ ಪೊಲೀಸರು ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಯುವತಿಯನ್ನು ಬೇರೆಡೆ ಕೊಲೆ ಮಾಡಿ ಇಲ್ಲಿ ತಂದು ಸುಟ್ಟು ಹಾಕುವ ಪ್ರಯತ್ನ ನಡೆದಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಆದರೆ ಈ ಯುವತಿ ಯಾರು ಹಾಗೂ ಯಾರು ಕೊಲೆ ಮಾಡಿದ್ದಾರೆ ಅನ್ನೋದು ತನಿಖೆಯಿಂದ ಗೊತ್ತಾಗಬೇಕಾಗಿದೆ.

Read More..: ಉಡುಪಿಯಲ್ಲಿ ಭೀಕರ ಅಪಘಾ*ತ; ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವು

Continue Reading

LATEST NEWS

ಉಡುಪಿಯಲ್ಲಿ ಭೀಕರ ಅಪಘಾ*ತ; ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವು

Published

on

ಉಡುಪಿ : ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವನ್ನಪ್ಪಿರುವ ಘಟನೆ ಉಡುಪಿಯ ಹೇರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಕೃಷ್ಣ ಗಾಣಿಗ ಮೃ*ತ ದುರ್ದೈವಿ. ಉಡುಪಿ ನಗರ ಸಭೆಯಲ್ಲಿ ಎಲೆಕ್ಟ್ರಿಷನ್ ಆಗಿ ಕೃಷ್ಣ ಕೆಲಸ ಮಾಡುತ್ತಿದ್ದರು. ಸಂತೆಕಟ್ಟೆ ಮಾರ್ಗವಾಗಿ ಬ್ರಹ್ಮಾವರದ ಕಡೆಗೆ ಸಾಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಲಾರಿ ಅಡಿಗೆ ಸಿಲುಕಿ ಸ್ಥಳದಲ್ಲೇ ಸಾ*ವನ್ನಪ್ಪಿದ್ದಾರೆ.

ಲಾರಿ ಕೃಷ್ಣ ಅವನ್ನು ಕೆಲ ದೂರ ಎಳೆದೊಯ್ದಿದೆ ಎಂದು ತಿಳಿದು ಬಂದಿದೆ. ಘಟನೆ ಬಳಿಕ ರಸ್ತೆಯಲ್ಲಿ ಕೆಲ ಕಾಲ ಸಂಚಾರ ದಟ್ಟನೆ ಉಂಟಾಗಿತ್ತು.

ಬ್ರಹ್ಮಾವರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Continue Reading

LATEST NEWS

Trending