Connect with us

LATEST NEWS

ಷರಿಯತ್ ಕಾನೂನು ಬೇಕೆನ್ನುವವರಿಗೆ ಅದೇ ಶಿಕ್ಷೆ ಕೊಡುವ ವ್ಯವಸ್ಥೆಯಾಗಬೇಕು: ಶಾಸಕ ರಘುಪತಿ ಭಟ್‌

Published

on

ಉಡುಪಿ: ಯಾರು ಷರಿಯತ್ ಕಾನೂನು ಬೇಕು ಅಂತ ಹೇಳುತ್ತಾರೆ. ಅವರಿಗೆ ಷರಿಯತ್ ಕಾನೂನಿನಲ್ಲಿ ಈ ರೀತಿಯ ಹಿಂಸಾಚಾರಕ್ಕೆ ಯಾವ ಶಿಕ್ಷೆ ಇದೆಯೋ ಅಂತಹ ಶಿಕ್ಷೆಯನ್ನೇ ಕೊಡುವಂತಹ ವ್ಯವಸ್ಥೆಗಳು ಆಗಬೇಕು.

ಜೊತೆಗೆ ಕಾನೂನು ಕೈಗೆತ್ತಿಕೊಂಡವರ ಮೇಲೆ ಗೋಲಿಬಾರ್‌ ಮಾಡಿದರೆ ಮಾತ್ರ ಅವರಿಗೆ ಬುದ್ದಿ ಬರುತ್ತದೆ ಎಂದು ಉಡುಪಿ ಶಾಸಕ ರಘುಪತಿ ಭಟ್‌ ಹೇಳಿದ್ದಾರೆ.


ಹಳೆ ಹುಬ್ಬಳ್ಳಿಯ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಗೆ ಸಂಬಂಧ ಪಟ್ಟಂತೆ ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು ಹಿಜಾಬ್,

ಹಲಾಲ್ ವಿವಾದಗಳು ಆದಂತಹ ಸಂದರ್ಭದಲ್ಲಿ ಯಾವುದೇ ಹಿಂದೂಗಳು ಘರ್ಷಣೆಗೆ ಹೋಗಿಲ್ಲ. ಮುಸ್ಲಿಂ ಅಂಗಡಿಗಳಲ್ಲಿ ಮಾಂಸ ಖರೀದಿ ಮಾಡಬೇಡಿ ಎಂದು ಹೇಳಿದ್ದು ಬಿಟ್ಟರೆ ಅಂಗಡಿಗಳನ್ನು ಬಂದ್ ಮಾಡಿಸಿಲ್ಲ.

ಯಾವುದೇ ಕೋಮಿನವರು ಹಿಂಸಾಚಾರಕ್ಕೆ ಕಾರಣವಾದ್ರೆ ಅವರ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕು. ಕಾನೂನು ಕೈಗೆತ್ತಿಕೊಂಡವರ ಮೇಲೆ ಗೋಲಿಬಾರ್‌ ಮಾಡಿದರೆ ಮಾತ್ರ ಅದಕ್ಕೆ ಪರಿಹಾರ ಎಂದರು.

DAKSHINA KANNADA

‘ಅಡ್ಡಣ ಪೆಟ್ಟು’ ದೈವಾರಾಧನೆಯ ವಿಶೇಷ ಆಚರಣೆ…! ಇದು ಸೌಹಾರ್ದತೆ ಬಯಸೋ ದೈವ..!

Published

on

ಮಂಗಳೂರು : ತುಳುನಾಡಿನ ದೈವಾರಾಧನೆಯಲ್ಲಿ ಒಂದಕ್ಕಿಂತ ಒಂದು ವಿಶೇಷವಾದ ಆಚರಣೆ ಹಾಗೂ ನಂಬಿಕೆಗಳು ಇದೆ. ಅದು ಪ್ರದೇಶದಿಂದ ಪ್ರದೇಶಕ್ಕೆ ಒಂದಷ್ಟು ಬದಲಾವಣೆಯೊಂದಿಗೆ ನಡೆಯುತ್ತದೆ ಕೂಡಾ. ಕೇರಳದ ಗಡಿಗೆ ಹೊಂದಿಕೊಂಡಿರುವ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದಲ್ಲಿ ನಡೆಯೋ ದೈವಾರಾಧನೆ ಕೂಡಾ ಅದೇ ರೀತಿಯಾದ ವಿಶೇಷ ಆಚರಣೆಯೊಂದಕ್ಕೆ ಹೆಸರಾಗಿದೆ. ಇಲ್ಲಿನ ಶ್ರೀ ಮಹಾವಿಷ್ಣುಮೂರ್ತಿ ದೇವರ ಜಾತ್ರೆಯ ಬಳಿಕ ನಡೆಯುವ ದೈವದ ನೇಮದಲ್ಲಿ ‘ಅಡ್ಡಣ ಪೆಟ್ಟು’ ಅನ್ನೋ ಸಂಪ್ರದಾಯವಿದೆ. ಗ್ರಾಮದ ಜಾತ್ರೆಯ ಪ್ರಮುಖ ಆಕರ್ಷಣೆ ಕೂಡಾ ಇದೇ ಆಗಿದ್ದು, ಇದನ್ನು ನೋಡಲೆಂದೆ ಸಾವಿರಾರು ಜನ ಬರ್ತಾರೆ.


ನಾಲ್ಕು ಮನೆತನಗಳ ನಡುವೆ ಹೊಡೆದಾಟ…!

‘ಅಡ್ಡಣ ಪೆಟ್ಟು’ ಇದು ಮಂಡೆಕೋಲು ಗ್ರಾಮದ ಜಾತ್ರೆ ಮುಗಿದ ಬಳಿಕ ನಡೆಯುವ ಉಳ್ಳಾಕುಲು ಹಾಗೂ ಪರಿವಾರ ದೈವದ ನೇಮದಲ್ಲಿ ಕಾಣುವ ದೃಷ್ಯ. ನಾಲ್ಕು ಗೌಡ ಮನೆತನದವರು ಬೆತ್ತದ ಗುರಾಣಿ ಹಿಡಿದು ದಂಡದಿಂದ ಹೊಡೆದಾಡುವುದೇ ಈ ‘ಅಡ್ಡಣ ಪೆಟ್ಟು’ ಅನ್ನೋ ವಿಶಿಷ್ಠ ಆಚರಣೆ. ದೇವಸ್ಥಾನಕ್ಕೆ ಸಂಬಂಧಪಟ್ಟ ಕೇನಾಜೆ- ಮಾವಜಿ, ಮುರೂರು- ಬೊಳುಗಲ್ಲು ಎಂಬ ನಾಲ್ಕು ಗೌಡ ಮನೆತನಗಳು ಈ ರೀತಿ ಹೊಡೆದಾಟ ನಡೆಸ್ತಾರೆ. ಈ ವೇಳೆ ಉಳ್ಳಾಕುಲು ದೈವ ಮದ್ಯಪ್ರವೇಶ ಮಾಡಿ ಜಗಳ ಬಿಡಿಸುತ್ತದೆ. ಇದು ನೋಡಲು ಕೂಡಾ ಸಾಕಷ್ಟು ಕುತೂಹಲವಾಗಿದ್ದು, ಇದರ ಜೊತೆ ದೈವದ ಸಂದೇಶ ಕೂಡಾ ಇದೆ.


‘ಅಡ್ಡಣ ಪೆಟ್ಟು’ವಿನ ಹಿಂದೆ ಇದೆ ದೈವದ ಸಂದೇಶ..!

ಮಂಡೆಕೋಲು ನೇಮದಲ್ಲಿ ಅಡ್ಡಣ ಪೆಟ್ಟು ಸಂಪ್ರದಾಯಕ್ಕೆ ಬೇರೆ ಬೇರೆ ಐಹಿತ್ಯವಿದೆ. ಅಡ್ಡಣಪೆಟ್ಟು ನಡೆದರೆ ಊರಲ್ಲಿ ಮುಂದೆ ಗಲಾಟೆ, ಹೊಡೆದಾಟಗಳು ಸಂಭವಿಸುವುದಿಲ್ಲ ಎಂಬ ನಂಬಿಕೆಯೂ ಊರಿನ ಭಕ್ತ ಜನರಲ್ಲಿದೆ. ನಾಲ್ಕೂರಿನ ಜಗಳವನ್ನು ದೈವ ಬಿಡಿಸುವುದು, ಗಲಾಟೆ ಮಾಡದೆ ಸೌಹಾರ್ದದಿಂದ ಬಾಳಿ ಎನ್ನುವ ಸಂದೇಶವೂ ಈ ಆಚರಣೆಯಲ್ಲಿದೆ. ಪುರಾತನ ಕಾಲದಲ್ಲಿ ಯಾವುದೋ ಗಲಾಟೆ ನಡೆದ ಸಂದರ್ಭ ಉಳ್ಳಾಕುಲು ದೈವ ಬಂದು ಗಲಾಟೆ ಬಿಡಿಸಿ ಪರಸ್ಪರ ಸಂದಾನ ನಡೆಸಿತ್ತು ಎಂಬ ಪ್ರತೀತಿಯೂ ಇದೆ. ಇದೇ ಕಾರಣದಿಂದ ಪ್ರತಿ ವರ್ಷ ಉಳ್ಳಾಕುಲು ನೇಮದ ಸಂದರ್ಭ “ಅಡ್ಡಣ ಪೆಟ್ಟು” ಒಂದು ಸಂಪ್ರದಾಯವಾಗಿ ನಡೆದು ಬರುತ್ತಿದೆ.

‘ಅಡ್ಡಣ ಪೆಟ್ಟು’ವಿನ ಆಚರಣೆ ಹೇಗೆ ?

ನೇಮೋತ್ಸವ ದಿನದಂದು ಉಳ್ಳಾಕುಲು ದೈವದ ಭಂಡಾರ ತೆಗೆದ ಬಳಿಕ ದೈವ ಸಹಿತ ನಾಲ್ಕೂರಿನ ಪ್ರತಿನಿಧಿಗಳು, ದೈವರ ಪರಿಚಾರಕರು ದೇವಸ್ಥಾನದ ಸಮೀಪದ ಗದ್ದೆಯಲ್ಲಿರುವ ಕಟ್ಟೆಗೆ ತೆರಳುತ್ತಾರೆ. ಕೇನಾಜೆ- ಮಾವಜಿ, ಮುರೂರು-ಬೊಳುಗಲ್ಲು ಮನೆತನಕ್ಕೆ ಸೇರಿದ ನಾಲ್ವರು ಪ್ರತಿನಿಧಿಗಳು ಸಮವಸ್ತ್ರ ಧರಿಸಿ ದಂಡ ಮತ್ತು ಗುರಾಣಿ (ಅಡ್ಡಣ) ಹಿಡಿದು ದೈವದ ಜತೆಯಲ್ಲಿ ತೆರಳುತ್ತಾರೆ. ಕಟ್ಟೆಯ ಬಳಿ ತೆರಳಿದ ಬಳಿಕ ಕೆಲವೊಂದು ಸಂಪ್ರದಾಯ ಆಚರಣೆಗಳು ನಡೆದು ಅಡ್ಡಣ ಹಿಡಿದ ಯುವಕರು ಅಡ್ಡಣವನ್ನು ನೆಲದಲ್ಲಿ ಎದುರು ಬದುರಾಗಿ ಇಡುತ್ತಾರೆ. ಲಾಠಿ ಮಾದರಿಯ ಹೊಡೆಯುವ ದಂಡವನ್ನು ಕೈಯಲ್ಲಿ ಹಿಡಿದಿರುತ್ತಾರೆ. ಇತ್ತ ಅಡ್ಡಣ ಹೊಡೆತದಲ್ಲಿ ಭಾಗವಹಿಸುವ ನಾಲ್ವರು ಯುವಕರಿಗೆ ಬೆನ್ನು ಹಾಕಿ ನಿಂತಿರುವ ಉಳ್ಳಾಕುಲು ದೈವಕ್ಕೆ ಅಣಿಯನ್ನು ಕೂರಿಸಲಾಗುತ್ತದೆ. ಅಣಿ ಇಟ್ಟ ಬಳಿಕ ತುಳು ನುಡಿಗಟ್ಟೊಂದನ್ನು ಹೇಳಲಾಗುತ್ತದೆ. ಈ ನುಡಿಗಟ್ಟು ಮುಗಿಯುತ್ತಿದ್ದಂತೆ ದೈವದ ಪರಿಚಾರಕರೊಬ್ಬರು ಅಡ್ಡಣ ಹೊಡೆತಕ್ಕೆ ಅಣಿಯಾಗಿ ನಿಂತಿರುವ ಯುವಕರತ್ತ ಕಲಶದ ನೀರಿನಿಂದ ಪ್ರೋಕ್ಷಣೆ ಮಾಡುತ್ತಾರೆ. ಕಲಶ ಪ್ರೋಕ್ಷಣೆ ಆಗುತ್ತಿದ್ದಂತೆ ಎದುರು ಬದುರಾಗಿ ನಿಂತಿರುವ ಯುವಕರು ನೆಲದಲ್ಲಿಟ್ಟ ಅಡ್ಡಣವನ್ನು ಕೈಗೆ ಎತ್ತಿಕೊಂಡು ಅದನ್ನು ಗುರಾಣಿಯಂತೆ ಹಿಡಿದು ಎದುರುಬದುರಾಗಿ ಹೊಡೆದಾಟ ಆರಂಭಿಸುತ್ತಾರೆ. ಪ್ರತಿಯೊಬ್ಬರೂ ಎದುರು ಪ್ರತಿನಿಧಿಯ ಕೈಯಲ್ಲಿ ಹಿಡಿದಿರುವ ಅಡ್ಡಣಕ್ಕೆ ಹೊಡೆಯಬೇಕೆಂಬ ನಿಯಮವೂ ಇದೆ. ಹೊಡೆದಾಟ ಜೋರಾಗುತ್ತಿದ್ದಂತೆ ಬೆನ್ನು ಹಾಕಿ ನಿಂತಿರುವ ಉಳ್ಳಾಕುಲು ದೈವ ಬಂದು ಹೊಡೆದಾಟವನ್ನು ಬಿಡಿಸುತ್ತದೆ.

Continue Reading

FILM

ಜೊತೆಯಾಗಿ ಕಾಣಿಸಿಕೊಂಡ ಸೂಪರ್ ಸ್ಟಾರ್ – ಬಿಗ್ ಬಿ; ಸ್ಟೈಲಿಶ್ ಫೋಟೋ ವೈರಲ್

Published

on

ಬೆಂಗಳೂರು : ಸೂಪರ್ ಸ್ಟಾರ್ ರಜನಿಕಾಂತ್ 170 ನೇ ಸಿನಿಮಾ ‘ವೆಟ್ಟೈಯಾನ್‘ ಈಗಾಗಲೇ ನಿರೀಕ್ಷೆ ಹೆಚ್ಚಿಸಿದೆ. ಈಗಾಗಲೇ ಟೀಸರ್ ಬಹಳ ಸದ್ದು ಮಾಡಿದೆ. ಅಲ್ಲದೇ ಈ ಚಿತ್ರದಲ್ಲಿ ಸೂಪರ್ ಸ್ಟಾರ್ – ಬಿಗ್ ಬಿ ಜೊತೆಯಾಗ್ತಿರೋದು ವಿಶೇಷ. ಅದೂ 33 ವರ್ಷಗಳ ಬಳಿಕ. ಹಾಗಾಗಿ ಸಹಜವಾಗಿಯೇ ಚಿತ್ರದ ಕುರಿತು ನಿರೀಕ್ಷೆ ಹೆಚ್ಚಿದೆ.

ವೈರಲ್ ಆಯ್ತು ಫೋಟೋ :


ಇಬ್ಬರು ಸಿನಿ ದಿಗ್ಗಜರು ಜೊತೆಯಾಗೋದು ಅಂದ್ರೆ ಕೇಳ್ಬೇಕಾ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಾಗುತ್ತದೆ. ಈ ಚಿತ್ರದ ಅಪ್ಡೇಟ್ಸ್ ಗಾಗಿ ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಅಭಿಮಾನಿಗಳು ಕಾಯುತ್ತಿರೋದು ಸುಳ್ಳಲ್ಲ. ಇದೀಗಲೈಕಾ ಪ್ರೊಡಕ್ಷನ್ ಸಂಸ್ಥೆ ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಒಟ್ಟಿಗೆ ಇರೋ ಫೋಟೋಗಳನ್ನು ಪೋಸ್ಟ್ ಮಾಡಿದೆ.


‘ಭಾರತೀಯ ಸಿನಿಮಾ ರಂಗದ ದಿಗ್ಗಜರು. ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಮುಂಬೈನ ವೆಟ್ಟೈಯನ್ ಸಿನಿಮಾ ಸೆಟ್​ನಲ್ಲಿ ಎಂದು ಲೈಕಾ ಪ್ರೊಡಕ್ಷನ್ಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ : ಬಾಲಿವುಡ್ ಜನಪ್ರಿಯ ನಿರೂಪಕಿ ಭಾರತಿ ಸಿಂಗ್ ಆಸ್ಪತ್ರೆ ದಾಖಲು..!

ಈ ಫೋಟೋಗಳಲ್ಲಿ ರಜನಿಕಾಂತ್ ಹಾಗೂ ಅಮಿತಾಭ್ ಇಬ್ಬರೂ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ನೆಟ್ಟಿಗರು ಈ ಫೋಟೋಗಳನ್ನು ನೆಚ್ಚಿಕೊಂಡಿದ್ದು, ಕಮೆಂಟ್ಸ್ ಹರಿದು ಬರುತ್ತಿದೆ.

Continue Reading

LATEST NEWS

ಮೊಸಳೆ ಇದ್ದ ನಾಲೆಗೆ ಕಂದಮ್ಮನನ್ನು ಎಸೆದ ಹೆತ್ತ ತಾಯಿ..! ಗಂಡ-ಹೆಡತಿ ಜಗಳದಲ್ಲಿ ಮೊಸಳೆ ಪಾಲಾದ ಮಗು..!

Published

on

ಉತ್ತರ ಕನ್ನಡ/ಮಂಗಳೂರು: ತಾಯಿಯೊಬ್ಬಳು ಕೋಪದಲ್ಲಿ ತನ್ನ ಮಗುವನ್ನೇ ಕಾಲುವೆಗೆ (Murder case ) ಎಸೆದಿದ್ದಾಳೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಹಾಲಮಡ್ಡಿಯಲ್ಲಿ ಘಟನೆ ನಡೆದಿದೆ. ಸಾವಿತ್ರಿ ಎಂಬಾಕೆ ತನ್ನ ಆರು ವರ್ಷದ ಮಗನನ್ನು ನಾಲೆಗೆ ಎಸೆದಿದ್ದಾಳೆ. ವಿನೋದ್ (6) ಮೃತ ದುರ್ದೈವಿ.

child death

ಮಗುವು ಮೂಕನಾಗಿದ್ದರಿಂದ ಸಾವಿತ್ರಿ ಹಾಗೂ ರವಿಕುಮಾರ್ ದಂಪತಿ ನಡುವೆ ಗಲಾಟೆ ನಡೆಯುತ್ತಿತ್ತು. ರವಿಕುಮಾರ್‌ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಪ್ರತೀ ಬಾರಿ ಗಲಾಟೆಯಾದಾಗಲೂ ಮಗು ಸಾಯಲಿ ಎಂದು ಸಾವಿತ್ರಿಗೆ ಬೈಯ್ಯುತ್ತಿದ್ದ.

ನಿನ್ನೆ ಶನಿವಾ(ಏ.5) ರಾತ್ರಿಯೂ ಸಹ ಸಾವಿತ್ರಿ ಹಾಗೂ ಪತಿ ರವಿಕುಮಾರ್‌ ಜತೆಗೆ ಜಗಳ ನಡೆದಿದೆ. ಪತಿ ಜತೆಗೆ ಗಲಾಟೆ ಆದಾಗ ಸಾವಿತ್ರಿ ಕೋಪದಲ್ಲಿ ಮಗುವನ್ನು ಎತ್ತಿಕೊಂಡು ಹೋಗಿ ನಾಲೆಗೆ ಎಸೆದಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಮಗುವನ್ನು ಹುಡುಕಾಡಲು ಮುಂದಾಗಿದ್ದಾರೆ.

ಮುಂದೆ ಓದಿ..; ನಡುರಸ್ತೆಯಲ್ಲಿ ಗರ್ಭಿಣಿಯನ್ನು ಉಸಿರುಗಟ್ಟಿಸಿ ಹತ್ಯೆಗೈದ ದುಷ್ಕರ್ಮಿಗಳು..!

ಆದರೆ ಮಗು ಸಿಗದಿದ್ದಾಗ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಹಾಲಮಡ್ಡಿಯಲ್ಲಿ ನಡೆದ ಶೋಧ ಕಾರ್ಯಾಚರಣೆ ವೇಳೆ ಮೃತದೇಹವು ಪತ್ತೆಯಾಗಿದೆ. ನಾಲೆಗೆ ಎಸೆಯಲ್ಪಟ್ಟಾಗ ಮೊಸಳೆಯೊಂದು ಮಗುವಿನ ಬಲಗೈ ಕಚ್ಚಿ ಎಳೆದು ಹೋಗಿತ್ತು. ಆರು ವರ್ಷದ ಗಂಡು ಮಗುವಿಗಾಗಿ ನಿನ್ನೆ ಶನಿವಾರ ರಾತ್ರಿಯಿಂದ ಶೋಧ ಕಾರ್ಯಾಚರಣೆ ಮುಂದುವರಿದಿತ್ತು.

ಭಾನುವಾರ ಬೆಳಗ್ಗೆ ಕಾರ್ಯಾಚರಣೆ ವೇಳೆ ಮಗುವಿನ ಜತೆ ಆಗಾಗ ಮೊಸಳೆಯು ಕಾಣಿಸಿಕೊಂಡಿತ್ತು. ದಾಂಡೇಲಿಯ ಗ್ರಾಮೀಣ ಠಾಣಾ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ಸಹಕಾರದಲ್ಲಿ ಮಗುವಿನ ಮೃತದೇಹ ಪತ್ತೆ ಮಾಡಲಾಗಿದೆ. ಮುಳುಗು ತಜ್ಞರು ಮೊಸಳೆಯ ಬಾಯಿಯಿಂದ ಮಗುವಿನ ಮೃತದೇಹ ಬಿಡಿಸಿಕೊಂಡು ಬಂದಿದ್ದಾರೆ.

ಇನ್ನೂ ಆರೋಪಿಗಳಾದ ರವಿ ಕುಮಾರ್ ಹಾಗೂ ಸಾವಿತ್ರಿ ದಂಪತಿಯನ್ನು ದಾಂಡೇಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ. ಅಪ್ಪ-ಅಮ್ಮನ ಜಗಳದಲ್ಲಿ ಏನು ತಿಳಿಯದ ಮಗುವೊಂದು ಪ್ರಾಣವನ್ನೇ ಕಳೆದುಕೊಂಡಿದೆ.

Continue Reading

LATEST NEWS

Trending