Tuesday, May 30, 2023

ಮುತಾಲಿಕ್ ಆರ್​ಎಸ್​ಎಸ್​,ವಿಹೆಚ್‌ಪಿ ಬಿಟ್ಟು ಹೊರ ಬಂದದ್ದು ಯಾಕೆ..!? : ಮುತಾಲಿಕ್​ಗೆ ಸುನೀಲ್ ಕುಮಾರ್ ಟಾಂಗ್

ಪ್ರಮೋದ್ ಮುತಾಲಿಕ್ ಅವರು ಆರ್​ಎಸ್​ಎಸ್​​ ಹಾಗೂ ವಿಶ್ವ ಹಿಂದೂ ಪರಿಷತ್ ಬಿಟ್ಟು ಯಾಕೆ ಹೊರಬಂದರು ಎಂಬುದಕ್ಕೆ ಮುತಾಲಿಕ್ ಮೊದಲು ಉತ್ತರಿಸಲಿ ಎಂದು ಸುನೀಲ್ ಕುಮಾರ್ ಸವಾಲು ಎಸೆದಿದ್ದಾರೆ.

ಬೆಂಗಳೂರು: ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹಿಂದುತ್ವದ ಹೆಸರಿನಲ್ಲಿ ಏಕೆ ಚುನಾವಣೆ ಬಯಸುತ್ತಿದ್ದಾರೆ ಎಂದು ಬಿಡಿಸಿ ಹೇಳುವ ಅಗತ್ಯವಿಲ್ಲ.

ಆದರೆ ಕಾರ್ಕಳದಲ್ಲಿ ಹಿಂದುತ್ವಕ್ಕೆ ಯಾವುದೇ ರೀತಿಯಿಂದಲೂ ಧಕ್ಕೆಯಾಗಿಲ್ಲ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

ಕಾರ್ಕಳದಿಂದ ಶ್ರೀರಾಮಸೇನೆ ಮುಖ್ಯಸ್ಥ ಮುತಾಲಿಕ್ ಸ್ಪರ್ಧೆ ವಿಚಾರವಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿದ ಅವರು, ಪ್ರಮೋದ್ ಮುತಾಲಿಕ್ ಅವರು ಆರ್​ಎಸ್​ಎಸ್​​ ಹಾಗೂ ವಿಶ್ವ ಹಿಂದೂ ಪರಿಷತ್ ಬಿಟ್ಟು ಯಾಕೆ ಹೊರಬಂದರು ಎಂಬುದಕ್ಕೆ ಮುತಾಲಿಕ್ ಮೊದಲು ಉತ್ತರಿಸಲಿ ಎಂದು ಸುನೀಲ್ ಕುಮಾರ್ ಸವಾಲು ಎಸೆದಿದ್ದಾರೆ.

ಸುನೀಲ್ ​ಕುಮಾರ್ ಏನೆಂಬುದು ಕಾರ್ಕಳ ಕ್ಷೇತ್ರದ ಜನತೆ ನೋಡಿದ್ದಾರೆ. ಮುಂದೆಯೂ ಕ್ಷೇತ್ರದ ಜನ ತೀರ್ಮಾನ ಮಾಡುತ್ತಾರೆ.

ಮುತಾಲಿಕ್ ನನ್ನ ವಿರುದ್ಧ ವೈಯಕ್ತಿಕ ಟೀಕೆ ಮಾಡಿದ್ದಾರೆ, ಮುಂದೆಯೂ ಮಾಡಬಹುದು. ಆದರೆ ನಾನು ಆ ವಿಚಾರಗಳಿಗೆ ಉತ್ತರ ನೀಡಲು ಹೋಗಲ್ಲ.

ನಾನು ಯಾರ ವಿರುದ್ಧವೂ ವೈಯಕ್ತಿಕ ಟೀಕೆ ಮಾಡುವುದಿಲ್ಲ. ಅಭಿವೃದ್ಧಿ ವಿಚಾರದ ಬಗ್ಗೆ ಕಾರ್ಕಳದ ಜನ ಪ್ರಶ್ನಿಸಿದರೆ ಉತ್ತರಿಸುತ್ತೇನೆ ಎಂದು ಸವಾಲೆಸೆದರು.

ಈ ಹಿಂದೆ ಕೂಡ ಅನಂತಕುಮಾರ್ ಮತ್ತು ಪ್ರಹ್ಲಾದ್ ಜೋಶಿ ವಿರುದ್ಧವೂ ಪ್ರಮೋದ್ ಮುತಾಲಿಕ್ ಅವರು ಸ್ಪರ್ಧಿಸಿದ್ದರು.

ಚುನಾವಣೆಯ ಫಲಿತಾಂಶ ಏನಾಯ್ತು ಎಂಬುದು ಎಲ್ಲರಿಗೂ ಗೊತ್ತಿದೆ. ಅವರ ಮುಂದಿನ ಆಯ್ಕೆ ಯಾವುದೋ ಗೊತ್ತಿಲ್ಲ. ಈಗ ಕಾರ್ಕಳ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಕಾರ್ಕಳದಲ್ಲಿ ಹಿಂದುತ್ವಕ್ಕೆ ಯಾವುದೇ ರೀತಿಯಿಂದಲೂ ಧಕ್ಕೆಯಾಗಿಲ್ಲ. ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಸ್ಪರ್ಧೆ ಮಾಡಬಹುದಾಗಿದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

Hot Topics