Friday, August 19, 2022

ನಾ ರಾಜಿನಾಮೆ ಕೊಡಲ್ಲ-ನಾನ್ಯಾಕೆ ರಾಜಿನಾಮೆ ಕೊಡ್ಲಿ?.. : ಈಶ್ವರಪ್ಪ ಪ್ರಶ್ನೆ

ಶಿವಮೊಗ್ಗ: ಮೃತ ಸಂತೋಷ್‌ ನನ್ನನ್ನು 80-90 ಬಾರಿ ಬಂದು ಭೇಟಿ ಆಗಿದ್ದೇನೆ ಎಂದು ಹೇಳುತ್ತಿರುವುದು ಶುದ್ಧ ಸುಳ್ಳು. ಅವರು ನನ್ನ ಮನೆಗೆ ಒಂದು ಬಾರಿ ಕೂಡ ಬರಲಿಲ್ಲ, ನಾನು ಮುಖ ಕೂಡ ನೋಡಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್ ಈಶ್ವರಪ್ಪ ಹೇಳಿದರು.


ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಸಂಬಂಧಿಸಿ ಆರೋಪ ಹೊತ್ತಿರುವ ಸಚಿವ ಕೆ.ಎಸ್ ಈಶ್ವರಪ್ಪ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ” ನನ್ನ ಮೇಲಿನ ಆರೋಪಕ್ಕೆ ನಾನು ಓಡಿ ಹೋಗುವುದಿಲ್ಲ. ಸಮಗ್ರ ತನಿಖೆ ಆಗಲಿ.

ಸತ್ಯಾಂಶ ಹೊರಗೆ ಬರಲಿ. ಷಡ್ಯಂತ್ರ ನಡೆಯುತ್ತಿದೆ. ವಾಟ್ಸಪ್ ಸಂದೇಶದ ಬಗ್ಗೆ ಅನುಮಾನವಿದೆ. ನಾನು ಯಾವ ಕಾರಣಕ್ಕೆ ರಾಜೀನಾಮೆ ಕೊಡಬೇಕು ಎಂದು ಕಾಂಗ್ರೆಸ್ ನವರು ಸ್ಪಷ್ಟ ಕಾರಣ ಕೊಡಲಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ ಇಬ್ಬರಿಗೂ ಮಾತನಾಡಿದ್ದೇನೆ. ವಿವರವನ್ನೂ ನೀಡಿದ್ದೇನೆ. ರಾಜೀನಾಮೆ ಕೊಡುವುದಿಲ್ಲ ಎಂದೂ ಹೇಳಿದ್ದಾಗಿ ಸ್ಪಷ್ಟನೆ ನೀಡಿದ್ದಾರೆ.

ಗುತ್ತಿಗೆದಾರ ಸಂತೋಷ್ ಪಾಟೀಲ್ ಯಾರು ಎನ್ನುವುದೇ ಗೊತ್ತಿಲ್ಲ. ಅವರ ಮುಖ ಕೂಡ ನೋಡಿದ ನೆನಪಿಲ್ಲ. ಸಾವಿರಾರು ಜನ ಬರುತ್ತಾರೆ. ಫೋಟೊ ತೆಗೆಸಿಕೊಂಡು ಹೋಗುತ್ತಾರೆ. ಅವರೆಲ್ಲರ ಪರಿಚಯ ಇಟ್ಟುಕೊಳ್ಳಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

ನಾನು ಅವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕಿದ್ದು ನಿಜ. ಇದನ್ನು ಕೋರ್ಟ್ ಅಡ್ಮಿಟ್ ಮಾಡಿಕೊಂಡಿತ್ತು. ನೋಟೀಸ್ ಕೂಡ ಅವರಿಗೆ ನೀಡಿದೆ. ದೆಹಲಿಯಲ್ಲಿ ಪ್ರಧಾನಿ ಹಾಗೂ ಅಮಿತ್ ಷಾ ಕಚೇರಿಗೆ ಪತ್ರ ಕೊಟ್ಟೋರು ಹೆದರಿ ಸೂಸೈಡ್ ಮಾಡ್ಕೊಂಡಿದ್ದಾರೆ ಯಾಕೆ ಅನ್ನೋದು ಅನುಮಾನ. ಇದು ಅಮೂಲಾಗ್ರ ತನಿಖೆ ಆದ್ರೆ ಮಾತ್ರ ಹೊರಗೆ ಬರಲು ಸಾಧ್ಯ ಎಂದು ಹೇಳಿದರು.

ಇನ್ನು ಅಲ್ಲದೆ ಬೆಳಗಾವಿಯಲ್ಲಿ ರಸ್ತೆ ಕಾಮಗಾರಿ ನಡೆದಿದೆಯೋ ಇಲ್ಲವೋ ಎನ್ನುವುದು ಗೊತ್ತಿಲ್ಲ. ವರ್ಕ್ ಆರ್ಡರ್ ಪಡೆಯದೇ ಯಾರಾದರು ಕೆಲಸ ಮಾಡುತ್ತಾರಾ..? ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಗೊತ್ತಿಲ್ಲವೇ ಎಂದು ಕೇಳಿದ್ದಾರೆ.

ವರ್ಕ್ ಆರ್ಡರ್ ಇಲ್ಲದೆ ಅಕ್ರಮವಾಗಿ ಹಣ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.
ಅಲ್ಲದೆ 10 ದಿನಗಳ ಹಿಂದೆ ಅಧಿಕಾರಿಗಳಿಗೆ ಬೆಳಗಾವಿಯಲ್ಲಿ ಯಾವ ಕಾಮಗಾರಿ ಮಾಡಿದ್ದಾರೆ. ಸಂತೋಷ್ ಪಾಟೀಲ್ ಗುತ್ತಿಗೆ ಪಡೆದಿದ್ದರೇ? ಕೆಲಸ ಎಷ್ಟು ಮಾಡಿದ್ದಾರೆ. ಎಲ್ಲ ವಿವರವನ್ನು ಪಡೆಯುವಂತೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.

ಸಂತೋಷ್ ಪಾಟೀಲ್ ಗೆ ಕುಮ್ಮಕ್ಕು ಕೊಟ್ಟಿದ್ದು ಯಾರು. ಅವರನ್ನು ದೆಹಲಿಗೆ ಕಳುಹಿಸಿದ್ದು ಯಾರು. ಸಂತೋಷ್ ಪಾಟೀಲ್ ಸಾವಿಗು ಮುನ್ನ ವಾಟ್ಸಪ್ ಸಂದೇಶ ಕಳುಹಿಸಿದ್ದು ಯಾರು. ಈ ಎಲ್ಲದರ ಬಗ್ಗೆ ತನಿಖೆ ಆಗಬೇಕು. ಇದರ ಹಿಂದೆ ಯಾರ ಕೈವಾಡವಿದೆ ಎಂದು ಗೊತ್ತಾಗಬೇಕು ಎಂದು ಈಶ್ವರಪ್ಪ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ನವರು ಉದ್ದೇಶ ಪೂರ್ವಕವಾಗಿ ರಾಜ್ಯದಲ್ಲಿ ಗಲಾಟೆ ಸೃಷ್ಟಿಸುತ್ತಿದ್ದಾರೆ. ಹಿಜಾಬ್ ಪ್ರಕರಣ ಕೂಡ ಕಾಂಗ್ರೆಸ್ ಕೈವಾಡ. ಹರ್ಷ ಹತ್ಯೆ ಮುಸಲ್ಮಾನ ಗೂಂಡಾಗಳಿಂದಲೇ ಆಗಿದೆ. ಆದರೆ ಎಲ್ಲ ಮುಸಲ್ಮಾನರು ಗೂಂಡಾಗಳಲ್ಲ.

ಕಾಂಗ್ರೆಸ್ ನಂಬಿಕೊಂಡು ಮುಸಲ್ಮಾನರು ಇದ್ದರೆ ತುಂಬ ಕಷ್ಟವಾಗಲಿದೆ. ಕಾಂಗ್ರೆಸ್ ಇವರನ್ನು ನಡು ನೀರಿನಲ್ಲಿ ಕೈ ಬಿಡುತ್ತದೆ ಎಂದು ಹೇಳಿದ್ದಾರೆ.

ಇಂದು ಬೆಳಿಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಮಾತನಾಡಿದ್ದೇನೆ. ಗುತ್ತಿಗೆ ವಿಚಾರದಲ್ಲಿ ಇರುವ ಆರೋಪದ ಬಗ್ಗೆಯೂ ಮಾಹಿತಿ ನೀಡಿದ್ದೇನೆ.

ಎರಡು ದಿನಗಳಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಸಮಗ್ರ ಮಾಹಿತಿ ನೀಡುತ್ತೇನೆ ಎಂದು ಈಶ್ವರಪ್ಪ ಹೇಳಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಚಿಕ್ಕಮಗಳೂರಿನಲ್ಲೂ ಸಿದ್ದರಾಮಯ್ಯ ವಾಹನಕ್ಕೆ ಕಪ್ಪು ಬಟ್ಟೆ ಪ್ರದರ್ಶನ

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಮೆಣಸೆಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ಸಮೀಪ ಬಿಜೆಪಿಯವರು ಸಿದ್ದರಾಮಯ್ಯ ವಾಹನಕ್ಕೆ ಕಪ್ಪು ಬಟ್ಟೆ ಪ್ರದರ್ಶಿಸಿದರು.ಪ್ರತಿಯಾಗಿ ಕಾಂಗ್ರೆಸ್‌ನವರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಬಾವುಟ ಪ್ರದರ್ಶಿಸಿದರು. ಕಾಂಗ್ರೆಸ್ ಮತ್ತು ಬಿಜೆಪಿ ಗುಂಪುಗಳ...

ಕೆಎಂಎಫ್‌ನಲ್ಲಿ ಕೆಲಸ ಕೊಡಿಸುತ್ತೇನೆಂದು 3.50 ಕೋ.ರೂ ವಂಚಿಸಿದ ರಾಮ್‌ಪ್ರಸಾದ್‌ ಸೇರಿ ನಾಲ್ವರ ವಿರುದ್ಧ FIR

ಮಂಗಳೂರು: ಕೆಎಂಎಫ್‌ನಲ್ಲಿ ಕೆಲಸ ಕೊಡಿಸುತ್ತೇನೆಂದು 100ಕ್ಕೂ ಅಧಿಕ ಮಂದಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮ್‌ ಪ್ರಸಾದ್‌ ಸೇರಿ ಒಟ್ಟು ನಾಲ್ವರ ಮೇಲೆ ಮಂಗಳೂರು ನಗರ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ರಾಮ್‌ ಪ್ರಸಾದ್‌...

“ಹಿಂದೂಗಳು ಸತ್ರೆ BJPಗೆ ಓಟು ಬರುತ್ತದೆ-ಅಲ್ಪಸಂಖ್ಯಾತರು ಸತ್ತರೆ ಓಟ್ ಸಿಗಲ್ಲ”

ಮಂಗಳೂರು: ಬಿಜೆಪಿಗರಿಗೆ ಹಿಂದೂಗಳು ಸತ್ತರೆ ಅದ್ರಲ್ಲೂ ಬಿಲ್ಲವರು ಸತ್ತರೆ ಮಾತ್ರ ಓಟು ಬರುತ್ತದೆ. ಅಲ್ಪಸಂಖ್ಯಾತರು ಸತ್ತರೆ ಓಟು ಬರೋದಿಲ್ಲ. ಅದಕ್ಕಾಗಿ ಹರೀಶ್ ಪೂಜಾರಿಯವರ ಹತ್ಯೆಯಾಯ್ತು. ಕಾಂಗ್ರೆಸ್ ಪಕ್ಷ ಯಾವಾಗಲೂ ಸಾಮರಸ್ಯವನ್ನು ಬಯಸುವ ಪಕ್ಷ....