Connect with us

    LATEST NEWS

    ಯಾವೂದೇ ಕಾರಣಕ್ಕೂ ಮಧ್ಯದ ಬೆರಳಿಗೆ ಚಿನ್ನದ ಉಂಗುರವನ್ನು ಧರಿಸಬಾರದು…!

    Published

    on

    ಸಾಮಾನ್ಯವಾಗಿ ಎಲ್ಲರೂ ಉಂಗುರ ಬೆರಳಿಗೆ ರಿಂಗ್‌ಗಳನ್ನು ಹಾಕಿಕೊಳ್ಳುತ್ತಾರೆ. ಈಗ ಫ್ಯಾಶನ್‌ ದೃಷ್ಟಿಯಿಂದ ತೋರು ಬೆರಳು, ಹೆಬ್ಬೆರೆಳು, ಮಧ್ಯದ ಬೆರಳು ಎಲ್ಲವಕ್ಕೂ ರಿಂಗ್‌ ಧರಿಸುತ್ತಾರೆ. ಆದ್ರೆ ಮಧ್ಯದ ಬೆರಳಿಗೆ ಚಿನ್ನದ ಉಂಗುರವನ್ನು ಧರಿಸಬಾರದು ಎನ್ನಲಾಗುತ್ತದೆ. ಹಾಗಾದರೆ ಮಧ್ಯದ ಬೆರಳಿಗೆ ಉಂಗುರವನ್ನು ಯಾಕೆ ಹಾಕಬಾರದು ಎಂಬುದು ಇಲ್ಲಿದೆ.

    ಮಧ್ಯದ ಬೆರಳಿಗೆ ಚಿನ್ನದ ಉಂಗುರವನ್ನು ಏಕೆ ಧರಿಸಬಾರದು?

    ಮಧ್ಯದ ಬೆರಳು, ಕೈಯ ಮಧ್ಯಭಾಗದಲ್ಲಿದೆ. ಸಮತೋಲನ, ಜವಾಬ್ದಾರಿ ಮತ್ತು ನಮ್ಮ ಸ್ವಯಂ ಪ್ರಜ್ಞೆಯನ್ನು ಈ ಬೆರಳು ಪ್ರತಿನಿಧಿಸುತ್ತದೆ. ಇದು ಶನಿ ಗ್ರಹದ ಜೊತೆಗೂ ಸಂಪರ್ಕ ಹೊಂದಿದ್ದು, ಇದು ಶಿಸ್ತು, ರಚನೆ ಮತ್ತು ಕರ್ಮವನ್ನು ನಿಯಂತ್ರಿಸುತ್ತದೆ. ನಮ್ಮ ಜೀವನದಲ್ಲಿ ಕ್ರಮ ಮತ್ತು ಸ್ಥಿರತೆಯನ್ನು ತರಲು ಶನಿಯ ಶಕ್ತಿಯು ಅತ್ಯಗತ್ಯವಾದರೂ, ಈ ಬೆರಳನ್ನು ತುಂಬಾ ಮುತುವರ್ಜಿಯಿಂದ ಕಾಣಲಾಗುತ್ತದೆ.

    ಮತ್ತೊಂದೆಡೆ, ಚಿನ್ನವು ಶಕ್ತಿ, ಸಂಪತ್ತು ಮತ್ತು ಯಶಸ್ಸನ್ನು ಪ್ರತಿನಿಧಿಸುವ ಗ್ರಹ ಸೂರ್ಯನೊಂದಿಗೆ ಕೂಡ ಸಂಬಂಧ ಹೊಂದಿದೆ. ಜ್ಯೋತಿಷ್ಯ ನಂಬಿಕೆಗಳ ಸೂರ್ಯ ಮತ್ತು ಶನಿ ಪರಸ್ಪರ ಶತ್ರುಗಳು, ಆದ್ದರಿಂದ, ಮಧ್ಯದ ಬೆರಳಿಗೆ ಚಿನ್ನದ ಉಂಗುರವನ್ನು ಧರಿಸುವುದು ಅಶುಭ ಪರಿಣಾಮಗಳನ್ನು ತರುತ್ತದೆ ಎನ್ನಲಾಗಿದೆ.

    ತಂದೆ-ಮಗನ ಸಂಬಂಧಕ್ಕೂ ಕುತ್ತು

    ಹೆಚ್ಚುವರಿಯಾಗಿ, ಮಧ್ಯದ ಬೆರಳಿಗೆ ಚಿನ್ನದ ಉಂಗುರವನ್ನು ಧರಿಸುವುದು ತಂದೆ ಮತ್ತು ಮಗನ ನಡುವಿನ ಸಂಬಂಧವನ್ನು ಹದಗೆಡಿಸಬಹುದು.

    ಒಟ್ಟಿನಲ್ಲಿ ಸೂರ್ಯ ಮತ್ತು ಶನಿಯ ಪ್ರಭಾವ ವಿವಿಧ ರೀತಿಯಲ್ಲಿ ಪ್ರಕಟವಾಗಬಹುದು. ಜೀವನದಲ್ಲಿ ಒತ್ತಡ, ಕೆಟ್ಟ ಭಾವನೆ, ಕೆಲಸದಲ್ಲಿ ಕುಂಠಿತ ಪ್ರಗತಿ ಹೀಗೆ ಕೆಟ್ಟ ಫಲಗಳು ನಿಮ್ಮದಾಗುವ ಸಾಧ್ಯತೆ ಹೆಚ್ಚು.

    ಮಧ್ಯದ ಬೆರಳು, ಕೇಂದ್ರ ಅಂಕೆಯಾಗಿದ್ದು, ನಿರ್ಧಾರಗಳನ್ನು ತೆಗೆದುಕೊಳ್ಳುವ ಮತ್ತು ನಮ್ಮ ಇಚ್ಛೆಯನ್ನು ಪ್ರತಿಪಾದಿಸುವ ಸಾಮರ್ಥ್ಯದೊಂದಿಗೆ ಸಂಪರ್ಕ ಹೊಂದಿದೆ. ಇಲ್ಲಿರುವ ಚಿನ್ನದ ಉಂಗುರವು ಈ ಪ್ರದೇಶಗಳನ್ನು ಸಂಕೀರ್ಣಗೊಳಿಸಬಹುದು, ನಿಮ್ಮ ಆಯ್ಕೆಗಳಲ್ಲಿ ಆತ್ಮವಿಶ್ವಾಸವನ್ನು ಅನುಭವಿಸಲು ಅಥವಾ ನಿಮ್ಮ ಕಾರ್ಯಗಳಲ್ಲಿ ದೃಢತೆಯನ್ನು ಅನುಭವಿಸಲು ಇದು ಕಾರಣವಾಗಬಹುದು.

    ಸಂಪತ್ತು ಮತ್ತು ಸಮೃದ್ಧಿಯ ಹರಿವಿಗೆ ಅಡ್ಡಿಯಾಗಬಹುದು

    ಇದಲ್ಲದೆ, ಸಾಂಪ್ರದಾಯಿಕ ಜ್ಯೋತಿಷ್ಯ ಮತ್ತು ವೈದಿಕ ಬೋಧನೆಗಳು ಮಧ್ಯದ ಬೆರಳಿಗೆ ಚಿನ್ನದ ಉಂಗುರವನ್ನು ಧರಿಸುವುದರಿಂದ ಸಂಪತ್ತು ಮತ್ತು ಸಮೃದ್ಧಿಯ ನೈಸರ್ಗಿಕ ಹರಿವಿಗೆ ಅಡ್ಡಿಯಾಗಬಹುದು ಎಂದು ಸೂಚಿಸುತ್ತದೆ.

    ಮಧ್ಯದ ಬೆರಳು ಸಂಪತ್ತಿನ ಶಕ್ತಿಗಳೊಂದಿಗೆ ಸ್ವಾಭಾವಿಕವಾಗಿ ಹೊಂದಿಕೆಯಾಗದ ಕಾರಣ ಚಿನ್ನವನ್ನು ಇಲ್ಲಿ ಇರಿಸುವುದರಿಂದ ನಿಮ್ಮ ಆರ್ಥಿಕ ಬೆಳವಣಿಗೆಗೆ ಅಡ್ಡಿಯಾಗಬಹುದು ಅಥವಾ ನಿಮ್ಮ ಯಶಸ್ಸಿನ ಹಾದಿಯಲ್ಲಿ ಅನಗತ್ಯ ಅಡೆತಡೆಗಳನ್ನು ಉಂಟುಮಾಡಬಹುದು.

    ಆದ್ದರಿಂದ, ನಿಮ್ಮ ಮಧ್ಯದ ಬೆರಳಿಗೆ ಚಿನ್ನದ ಉಂಗುರ ಹಾಕುವ ಬದಲು ನಿಮ್ಮ ಉಂಗುರದ ಬೆರಳಿನಲ್ಲಿ ಚಿನ್ನದ ಉಂಗುರು ಧರಿಸಿ.

    LATEST NEWS

    ಎಸ್ಎಂ ಕೃಷ್ಣಗೆ ‘ಕರ್ನಾಟಕ ರತ್ನ’ ನೀಡುವಂತೆ ಮನವಿ ಮಾಡಿದ ವಿಪಕ್ಷ ನಾಯಕ

    Published

    on

    ಮಂಗಳೂರು/ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಅಜಾತ ಶತ್ರು, ಸರಳ ಸಜ್ಜನಿಕೆಯ ರಾಜಕಾರಣಿ ಎಸ್.ಎಂ.ಕೃಷ್ಣ ವಿಧಿವಶರಾಗಿದ್ದಾರೆ. ತಮ್ಮ 92 ವಯಸ್ಸಿಗೆ ತಮ್ಮ ಸುದೀರ್ಘ ಬಾಳಪಯಣವನ್ನು ಕೊನೆಗೊಳಿಸಿದ್ದಾರೆ.
    ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರೆನಿಸಿಕೊಂಡಿದ್ದ ಎಸ್ಎಂ ಕೃಷ್ಣ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ವಿಪಕ್ಷ ನಾಯಕ ಆರ್. ಅಶೋಕ್ ಮನವಿ ಮಾಡಿದ್ದಾರೆ.

    ಆರ್. ಅಶೋಕ್ ಟ್ವೀಟ್

    ಈ ಬಗ್ಗೆ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಆರ್. ಅಶೋಕ್ “ಕರ್ನಾಟಕ ರತ್ನ “ಎಸ್.ಎಂ.ಕೃಷ್ಣ”

    ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಮುಖ್ಯಮಂತ್ರಿ ಶ್ರೀ ಎಸ್‌.ಎಂ.ಕೃಷ್ಣ ಅವರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು ಕಂಬನಿ ಮಿಡಿಯುತ್ತಿದ್ದಾರೆ.
    ಶಾಸಕ, ಸಚಿವ, ಸ್ಪೀಕರ್‌, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ, ಹೀಗೆ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಜೊತೆಗೆ, ಜನರ ಬದುಕಿನ ಸುಧಾರಣೆಗಾಗಿ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಅವರು ಅಪಾರವಾಗಿ ಶ್ರಮಿಸಿದ್ದರು. ರಾಜಧಾನಿ ಬೆಂಗಳೂರಿಗೆ ಸಿಲಿಕಾನ್‌ ವ್ಯಾಲಿ ಹಾಗೂ ಐಟಿ ಕೇಂದ್ರದ ಸ್ಥಾನಮಾನ ನೀಡುವಲ್ಲಿ ಅವರ ಪಾತ್ರ ಗಣನೀಯ. ವಿದೇಶಾಂಗ ಸಚಿವರಾಗಿ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲೂ ಸೇವೆ ಸಲ್ಲಿಸಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.

    ಇದನ್ನೂ ಓದಿ: ಎಸ್.ಎಂ.ಕೃಷ್ಣ ಅಂತಿಮ ಯಾತ್ರೆ: ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ, ಸಿಎಂ ಸಿದ್ದರಾಮಯ್ಯ ಭಾಗಿ

    ಶ್ರೀ ಎಸ್‌.ಎಂ.ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ʼಕರ್ನಾಟಕ ರತ್ನʼ (ಮರಣೋತ್ತರ) ನೀಡುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯ. ಆದ್ದರಿಂದ ತಾವು ಈ ಸಲಹೆಯನ್ನು ಪರಿಗಣಿಸಿ ಶ್ರೀಯುತರಿಗೆ ʼಕರ್ನಾಟಕ ರತ್ನʼ ನೀಡಿ ಗೌರವ ಸಲ್ಲಿಸಬೇಕೆಂದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡುತ್ತಿದ್ದೇನೆ ಎಂದಿದ್ದಾರೆ.

    ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆ ನೆರವೆರಿದೆ.

     

    Continue Reading

    International news

    ಭ್ರಷ್ಟಾಚಾರ ಪ್ರಕರಣ: ವಿಚಾರಣೆಗೆ ಹಾಜರಾದ ಇಸ್ರೇಲ್ ಪ್ರಧಾನಿ

    Published

    on

    ಮಂಗಳೂರು/ಟೆಲ್ ಅವೀವ್: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಮೊದಲ ಬಾರಿಗೆ ಟೆಲ್ ಅವೀವ್ ನ ನ್ಯಾಯಾಲಯವೊಂದರಲ್ಲಿ ಮಂಗಳವಾರ ವಿಚಾರಣೆಗೆ ಹಾಜರಾದರು.

    ಈ ಮೂಲಕ ಅಧಿಕಾರದಲ್ಲಿರುವಾಗಲೇ ಅಪರಾಧ ಪ್ರಕರಣ ಎದುರಿಸುತ್ತಿರುವ ಮೊದಲ ಪ್ರಧಾನಿ ಎಂದೆನಿಸಿದ್ದಾರೆ.ನ್ಯಾಯಧೀಶರಲ್ಲೊಬ್ಬರು ನೆತನ್ಯಾಹು ಅವರಿಗೆ ಕಟಕಟೆಯೊಳಗೆ ಕುಳಿತುಕೊಳ್ಳುವ ಇಲ್ಲವೇ ನಿಲ್ಲಲು ಅವಕಾಶವಿರುವುದಾಗಿ ತಿಳಿಸಿದರು. ನೆತನ್ಯಾಹು ಪದೇಪದೇ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದರು. ವಂಚನೆ, ಭ್ರಷ್ಟಾಚಾರ ಮತ್ತು ನಂಬಿಕೆ ದ್ರೋಹ ಆರೋಪಗಳಿಗೆ ಸಂಬಂಧಿಸಿದಂತೆ ಅವರ ವಿರುದ್ದ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.

    ಇದನ್ನೂ ಓದಿ:ದಂಡ ತಪ್ಪಿಸಿಕೊಳ್ಳಲು ವಾಹನ ಸವಾರರ ಹೊಸ ಪ್ಲಾನ್: ಸ್ಪೂನ್ ಅಸ್ತ್ರ ! 

    ಇದು ಅಲ್ಲದೆ ತನ್ನ ಹಾಗೂ ಕುಟುಂಬವನ್ನು ಓಲೈಸುವಂತೆ ವರದಿಗಳನ್ನು ಪ್ರಕಟಿಸುವುದಕ್ಕೆ ಪ್ರತಿಫಲವಾಗಿ ಮಾಧ್ಯಮ ಮಾಲಕರಿಗೆ ಅನುಕೂಲಕರವಾಗುವಂತಹ ಕಾನೂನು, ನಿಯಮಗಳನ್ನು ಜಾರಿಗೊಳಿಸಿದ ಆರೋಪವನ್ನು ಕೂಡಾ ಅವರು ಎದುರಿಸುತ್ತಿದ್ದಾರೆ.

    ರಾಜಕೀಯ ಲಾಭ ಮಾಡಿಕೊಟ್ಟಿರುವುದಕ್ಕೆ ಪ್ರತಿಯಾಗಿ ಶ್ರೀಮಂತರಿಂದ ಬೆಲೆಬಾಳುವ ವಸ್ತುಗಳನ್ನು ಪಡೆದಿರುವ ಪ್ರಕರಣದಲ್ಲಿ ನೆತನ್ಯಾಹು ಮತ್ತು ಅವರ ಪತ್ನಿ ಸಾರಾ ಆರೋಪಿಗಳಾಗಿದ್ದಾರೆ.

    2020 ಮೇ ನಲ್ಲಿ ಆರಂಭವಾಗಿದ್ದ ವಿಚಾರಣೆಯು ಪದೇ ಪದೇ ಮುಂದೂಡಲ್ಪಟ್ಟಿತ್ತು. ಮೇಲ್ಮನವಿ ಪ್ರಕ್ರಿಯೆಯ ಕಾರಣದಿಂದ ವಿಚಾರಣೆ ವಿಳಂಬವಾಗಿತ್ತು. ಗಾಜಾ ಮತ್ತು ಲೆಬೆನಾನ್ ಜೊತೆಗಿನ ಯುದ್ದದ ಕಾರಣಕ್ಕೆ ವಿಚಾರಣೆ ಎದುರಿಸಲು ಸಾಧ್ಯವಾಗುತ್ತಿಲ್ಲ ಎಂದು ನೆತಾನ್ಯಾಹು ಹಲವಾರು ಬಾರಿ ಮನವಿ ಮಾಡಿದ್ದರು.

    ಈ ಬಗ್ಗೆ ಮಾತನಾಡಿರುವ ನೆತನ್ಯಾಹು ‘ಈ ದಿನಕ್ಕಾಗಿ ನಾನು ಎಂಟು ವರ್ಷಗಳಿಂದ ಕಾಯುತ್ತಿದ್ದೆ. ನನ್ನ ವಿರುದ್ದದ ಆಧಾರರಹಿತ ಮತ್ತು ಸುಳ್ಳು ಆರೋಪಗಳಿಗೆ ಉತ್ತರ ನೀಡಲು ಮತ್ತು ಸತ್ಯವನ್ನು ಹೇಳಲು ಕಾತರನಾಗಿದ್ದೆ’ ಎಂದು ಹೇಳಿದ್ದಾರೆ.

    Continue Reading

    DAKSHINA KANNADA

    ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕದ ದಸ್ಕತ್‌ ಚಲನಚಿತ್ರ ತೆರೆಗೆ !!

    Published

    on

    ಉಡುಪಿ: ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್ ಅರ್ಪಿಸುವ ತುಳು ಚಲನಚಿತ್ರ ‘ದಸ್ಕತ್’ ಡಿಸೆಂಬರ್ 13ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ಕಾಮಿಡಿ ಕಿಲಾಡಿಗಳು ಖ್ಯಾತಿಯ ಅನೀಶ್ ಪೂಜಾರಿ ವೇಣೂರು ತಿಳಿಸಿದ್ದಾರೆ.

    ಉಡುಪಿ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕವನ್ನು ಚಿತ್ರಿಸುವ ‘ದಸ್ಕತ್’ ನೈಜ ಘಟನೆಯನ್ನಾಧರಿಸಿದ ಚಿತ್ರವಾಗಿದ್ದು, ಬೆಳ್ತಂಗಡಿ ತಾಲೂಕಿನ ವೇಣೂರು, ನಾರಾವಿ, ಅಂಡಿಂಜೆ, ಕೊಕ್ರಾಡಿ ಮುಂತಾದ ಪ್ರದೇಶಗಳಲ್ಲಿ ಚಿತ್ರಿತವಾಗಿದೆ ಎಂದು ಚಿತ್ರಕಥೆಯನ್ನು ಬರೆದಿರುವ ಅನೀಶ್ ಪೂಜಾರಿ ತಿಳಿಸಿದರು. ರಾಘವೇಂದ್ರ ಕುಡ್ವ ಚಿತ್ರದ ನಿರ್ಮಾಪಕರಾಗಿದ್ದು, ಸಂತೋಷ್ ಆಚಾರ್ಯ ಗುಂಪಲಾಜಿ ಅವರ ಛಾಯಾಗ್ರಹಣವಿದೆ. ಸಮರ್ಥನ ಎಸ್.ರಾವ್ ಚಿತ್ರದ ಸಂಗೀತ ನಿರ್ದೇಶಕರಾಗಿದ್ದಾರೆ.

    ಚಿತ್ರದ ತಾರಾಗಣದಲ್ಲಿ ದೀಕ್ಷಿತ್ ಕೆ.ಅಂಡಿಂಜೆ, ನೀರಜ್ ಕುಂಜರ್ಪ, ಮೋಹನ್ ಶೇಣಿ, ಮಿಥುನ್ ರಾಜ್, ಭವ್ಯ ಪೂಜಾರಿ, ಚಂದ್ರಹಾಸ ಉಲ್ಲಾಳ್, ನವೀನ್ ಬೋಂದೇಲ್, ಯೋಗೀಶ್ ಶೆಟ್ಟಿ ಚೇತನ್ ಪೀಲಾರ್, ತಿಮ್ಮಪ್ಪ ಕುಲಾಲ್ ಮುಂತಾದವರು ನಟಿಸಿದ್ದಾರೆ ಎಂದರು. ಡಿ.13ರಂದು ಉಡುಪಿ, ಮಂಗಳೂರು, ಪುತ್ತೂರು, ಕಾರ್ಕಳ, ಬೆಳ್ತಂಗಡಿಗಳ ಸುಮಾರು 15 ಸಿಂಗಲ್ ಥಿಯೇಟರ್ ಹಾಗೂ ಮಲ್ಟಿಫ್ಲೆಕ್ಸ್ ಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ನಟ ಅರ್ಜುನ್ ಕಾಪಿಕಾಡ್, ಚಿತ್ರ ವಿತರಕ ಸಚಿನ್ ಉಪ್ಪಿನಂಗಡಿ, ನಿರ್ಮಾಫಕ ರಾಘವೇಂದ್ರ ಪುತ್ರ ರಾಹುಲ್ ಕುಡ್ವ, ನಟ ದೀಕ್ಷಿತ್‌ , ನಟಿ ಭವ್ಯಾ ಪೂಜಾರಿ, ಕಾರ್ಯಕಾರಿ ನಿರ್ಮಾಪಕ ಪ್ರಜ್ಞೇಶ್‌ ಶೆಟ್ಟಿ ಮೊದಲಾದವರಿದ್ದರು.

    Continue Reading

    LATEST NEWS

    Trending