LATEST NEWS
ಪತ್ನಿ ಮೇಲಿನ ಸಂಶಯಕ್ಕೆ ಪತ್ನಿ ಆತ್ತೆಯನ್ನು ಕೊಚ್ಚಿ ಕೊಲೆ ಮಾಡಿದ ಭೂಪ..!
Published
3 years agoon
By
Adminಬೆಂಗಳೂರು: ಕೌಟುಂಬಿಕ ಕಾರಣಕ್ಕಾಗಿ ಮನೆಯೊಂದರಲ್ಲಿ ಪತ್ನಿ ಹಾಗೂ ಅತ್ತೆಯನ್ನು ಮಚ್ಚಿನಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿಂದು ಸಂಭವಿಸಿದೆ.
ಕೃತ್ಯವೆಸಗಿದ ಬಳಿಕ ಆರೋಪಿ ಪೊಲೀಸರ ಮುಂದೆ ಶರಣಾಗಿದ್ದಾನೆ.ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮೂಡಲಪಾಳ್ಯದ ಮನೆಯೊಂದರಲ್ಲಿ ಪ್ರಕರಣ ಸಂಭವಿಸಿದ್ದು, ಪತ್ನಿ ಸುನೀತಾ ಹಾಗೂ ಅತ್ತೆ ಸರೋಜಮ್ಮ ಎಂಬುವರನ್ನು ಕೊಂದ ಆರೋಪಿ ರವಿ ಕುಮಾರ್ ಪೊಲೀಸರ ಮುಂದೆ ಸರೆಂಡರ್ ಆಗಿದ್ದಾನೆ.
ಮೂಲತಃ ಶಿವಮೊಗ್ಗದ ತೀರ್ಥಹಳ್ಳಿಯ ರವಿ ಹಲವು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದ.ಎಳನೀರು ವ್ಯಾಪಾರದಲ್ಲಿ ನಷ್ಟವಾಗಿದ್ದರಿಂದ ರವಿ ಜೀವನಕ್ಕಾಗಿ ಕಾಂಡಿಮೆಂಟ್ಸ್ ಅಂಗಡಿ ಇಟ್ಟುಕೊಂಡಿದ್ದ.
20 ವರ್ಷಗಳ ಹಿಂದೆ ಸಾವಿತ್ರಿಯೊಂದಿಗೆ ಮದುವೆ ಮಾಡಿಕೊಂಡಿದ್ದ.ಇಬ್ಬರು ಮಕ್ಕಳನ್ನು ಹೊಂದಿರುವ ಅವರು ಅನ್ಯೋನ್ಯವಾಗಿಯೇ ಇದ್ದರು. ಆದರೆ, ಇತ್ತೀಚೆಗೆ ಪತ್ನಿ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದ. ಅನೈತಿಕ ಸಂಬಂಧ ಹೊಂದಿರುವುದಾಗಿ ಶಂಕಿಸಿ ಆಗಾಗ ಇಬ್ಬರ ನಡುವೆ ಜಗಳವಾಗುತ್ತಿತ್ತಂತೆ.
ಇದೇ ವಿಚಾರಕ್ಕಾಗಿ ನಿನ್ನೆಯೂ ಸಹ ಗಲಾಟೆಯಾಗಿದೆ ಎನ್ನಲಾಗಿದೆ.ಇಂದು ಬೆಳಗ್ಗೆ ಮಕ್ಕಳಿಬ್ಬರನ್ನು ಶಾಲೆಗೆ ಕಳುಹಿಸಿ ಪತ್ನಿಯೊಂದಿಗೆ ಗಲಾಟೆ ತೆಗೆದಿದ್ದನಂತೆ. ಮಾತಿನ ಚಕಮಕಿ ಹೆಚ್ಚಾಗಿ ಜಗಳ ವಿಕೋಪಕ್ಕೆ ತಿರುಗಿದೆ.
ಈ ವೇಳೆ ಮನೆಯಲ್ಲಿದ್ದ ಎಳನೀರು ಕೊಚ್ಚುವ ಮಚ್ಚಿನಿಂದ ರವಿ ಪತ್ನಿಯ ಕುತ್ತಿಗೆ ಸೀಳಿದ್ದಾನೆ ಎನ್ನಲಾಗುತ್ತಿದೆ. ಸರೋಜಮ್ಮ ಮೇಲೆಯೂ ಮಚ್ಚು ಬೀಸಿದ್ದ ಪರಿಣಾಮ ತೀವ್ರ ರಕ್ತಸ್ರಾವಗೊಂಡು ಸ್ಥಳದಲ್ಲೇ ಇಬ್ಬರೂ ಮೃತಪಟ್ಟಿದ್ದಾರೆ.
ದುಷ್ಕೃತ್ಯದ ಬಳಿಕ ಆರೋಪಿ ಗೋವಿಂದರಾಜನಗರ ಪೊಲೀಸರ ಮುಂದೆ ಹಾಜರಾಗಿ ಹತ್ಯೆ ಬಗ್ಗೆ ಮಾಹಿತಿ ನೀಡಿ ಸರೆಂಡರ್ ಆಗಿದ್ದಾನೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿ ಮೃತದೇಹಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.
ಮಂಗಳೂರು/ಚಿಕ್ಕಮಗಳೂರು: ಮಗು ಹುಟ್ಟಿದ ಎರಡನೇ ದಿನವೇ ಹೆತ್ತ ತಾಯಿ ಕಾಫಿ ತೋಟದಲ್ಲಿ ಕಂದಮ್ಮನನ್ನು ಬಿಟ್ಟು ಹೋಗಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಅಲ್ಲಂಪುರ ಗ್ರಾಮದಲ್ಲಿ ನಡೆದಿದೆ.
ಮನೆಯ ಪಕ್ಕದಲ್ಲಿರುವ ಕಾಫಿ ತೋಟದಲ್ಲಿ ಚಂದ್ರಮ್ಮ ಎಂಬುವವರು ಹುಟ್ಟಿದ ಎರಡೇ ದಿನಕ್ಕೆ ಪುಟ್ಟ ಪಾಪುವನ್ನು ಬಿಟ್ಟು ಹೋಗಿದ್ದು, ಇಂದು (ಜ.16) ಬೆಳಗ್ಗಿನ ಜಾವ 6 ಗಂಟೆಯ ಸಮಯದಲ್ಲಿ ಸ್ಥಳೀಯ ಮಹಿಳೆಯೊಬ್ಬಳಿಗೆ ಮಗು ಅಳುವ ಸದ್ದು ಕೇಳಿಸಿದೆ. ಗಂಟೆಗಳು ಕಳೆದರೂ ಕೂಡ ಮಗುವಿನ ಅಳು ನಿಲ್ಲದಿದ್ದಾಗ ತೋಟಕ್ಕೆ ಬಂದು ನೋಡಲು ಮೈ ಮೇಲೆ ಬಟ್ಟೆಯೇ ಇಲ್ಲದೆ ತೋಟದ ಒಂದು ಮೂಲೆಯಲ್ಲಿ ಅಳುತ್ತಿರುವ ಮಗು ಕಂಡು ಬಂದಿದೆ.
ಇದನ್ನೂ ಓದಿ : ಅಂದಿನ ಖ್ಯಾತ ಮಾಡಲ್ ಇಂದಿನ ಸನ್ಯಾಸಿನಿ ; ಯಾರು ಈ ಸುಂದರ ಸಾಧ್ವಿ ?
ಮಗುವನ್ನು ಕರೆತಂದು ತಮ್ಮ ಮನೆಯಲ್ಲಿ ಹಾಲು ಕುಡಿಸಿ ಆರೈಕೆ ಮಾಡಿದ್ದಾರೆ. ನಂತರ ಗ್ರಾಮದ ಆಯಾಗೆ ವಿಷಯ ತಿಳಿಸಿ ಸ್ಥಳಕ್ಕೆ ಡಾಕ್ಟರನ್ನು ಕರೆಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅಧಿಕಾರಿಗಳು ಮಗುವನ್ನು ತಮ್ಮ ಜೊತೆ ಕರೆದುಕೊಂಡು ಹೋಗಿದ್ದಾರೆ.
LATEST NEWS
ಬಾಂಬೆ ಐಐಟಿಯ ಅಭಯ್ ಸಿಂಗ್ ನಾಗಸಾಧು ಆಗಿದ್ದು ಹೇಗೆ ?
Published
1 hour agoon
16/01/2025By
NEWS DESK3ಮಂಗಳೂರು/ಪ್ರಯಾಗ್‌ರಾಜ್ : ಮಕರ ಸಂಕ್ರಾಂತಿ ಹಬ್ಬದ ದಿನದಂದು ಮಹಾಕುಂಭ ಮೇಳದಲ್ಲಿ ಕೋಟಿಗಟ್ಟಲೆ ಭಾರತೀಯರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಸಂಸ್ಕಾರದಲ್ಲಿ ಭಾಗಿಯಾಗಿದ್ದಾರೆ.
ಈಗಗಾಲೇ ಆರಂಭವಾಗಿರುವ ಮಹಾ ಕುಂಭಮೇಳದಲ್ಲಿ 40 ಕೋಟಿ ಜನರು ಭಾಗವಹಿಸಿದರೂ ಪ್ರಮುಖ ಆಕರ್ಷಣೆ ಮಾತ್ರ ನಾಗಸಾಧುಗಳು. ಆಧ್ಯತ್ಮಿಕತೆಯ ಒಲವನ್ನು ಹೊಂದಿರುವ ಹಲವಾರು ನಾಗಸಾಧುಗಳು ಈ ಕುಂಭಮೇಳದಲ್ಲಿ ಪಾಲ್ಗೊಂಡಿದ್ದಾರೆ. ಇವರಲ್ಲಿ ಇಂಜಿನಿಯರ್ ಕೆಲಸಕ್ಕೆ ಗುಡ್‌ಬೈ ಹೇಳಿದ ಬಾಬಾ ಕೂಡ ಒಬ್ಬರಾಗಿದ್ದಾರೆ.
ಐಐಟಿ ಬಾಂಬೆಯಲ್ಲಿ ಕಲಿತ ಬಾಬಾ ಅಭಯ್ ಸಿಂಗ್ ಅವರು ಮೂಲತ: ಹರಿಯಾಣದವರು. ವೈಜ್ಞಾನಿಕ ಅನ್ವೇಷಣೆಗಳನ್ನು ತೊರೆದು ಆಧ್ಯಾತ್ಮಿಕದತ್ತ ವಾಲಿದ್ದಾರೆ. ಅಂದರೆ ವಿಜ್ಞಾನದಿಂದ ಆಧ್ಯಾತ್ಮಿಕತೆಗೆ ವಾಲಿದ್ದಾರೆ. ಇವರು ಏರೋಸ್ಪೇಸ್ ಇಂಜಿನಿಯರ್ ಮುಖ್ಯಸ್ಥರಾಗಿದ್ದರು. ಇವರನ್ನು ಇಂಜಿನಿಯರ್ ಬಾಬಾ ಎಂತಲೂ ಕರೆಯುತ್ತಾರೆ. ಪ್ರತಿಷ್ಠಿತ ಕಂಪನಿಯ ಉದ್ಯೋಗವನ್ನು ತೊರೆದು ಆಧ್ಯಾತ್ಮಿಕತೆ ಕಡೆಗೆ ಒಲವು ಹರಿಸಿ ಈಗ ಬಾಬಾ ಆಗಿದ್ದಾರೆ.
ಇದನ್ನೂ ಓದಿ: ಮಹಾ ಕುಂಭಮೇಳದಿಂದ ಉತ್ತರಪ್ರದೇಶ ಸರ್ಕಾರ ಗಳಿಸುವ ಆದಾಯ ಎಷ್ಟು ?
ಅಭಯ್ ಸಿಂಗ್ ಅವರು, ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಬಾಂಬೆ (ಐಐಟಿ ಬಾಂಬೆ) ಯಲ್ಲಿ ಏರೋಸ್ಪೇಸ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿದ್ದಾರೆ. ಅಲ್ಲದೆ ಕಾಲೇಜಿನಲ್ಲಿ ಇರುವಾಗಲೇ ಕ್ಯಾಂಪಸ್‌ನಲ್ಲಿ ಆಯ್ಕೆ ಆಗಿ ಪ್ರತಿಷ್ಠಿತ ಕಂಪನಿಯಲ್ಲಿ ಉದ್ಯೋಗ ಪಡೆದುಕೊಂಡಿದ್ದರು. ಕಾರ್ಪೊರೇಟ್ ಜಗತ್ತಿನಲ್ಲಿ ಹಲವು ವರ್ಷಗಳ ಕಾಲ ಕೆಲಸ ಮಾಡಿದ್ದರು.
ಮಾಸ್ಟರ್ ಇನ್ ಡಿಸೈನ್ (MDes) ಅಧ್ಯಯನ ಮಾಡಿದರು ಮತ್ತು ಛಾಯಾಗ್ರಾಹಕರಾಗಿ ಕೆಲಸ ಮಾಡಲು ಪ್ರಾರಂಭಿಸಿದರು. ನಂತರ ಅದರಲ್ಲೂ ಯಶಸ್ಸು ಕಾಣದೇ ಕೋಚಿಂಗ್ ಸೆಂಟರ್ ಓಪನ್ ಮಾಡಿ ಭೌತಶಾಸ್ತ್ರದ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದರು. ಕೊನೆಗೆ ಇಂಜಿನಿಯರಿಂಗ್, ಫೋಟೋಗ್ರಾಫಿ, ಕೋಚಿಂಗ್ ಎಲ್ಲವನ್ನು ತ್ಯಜಿಸಿ ಆಧ್ಯಾತ್ಮಿಕತೆಯನ್ನು ಆಯ್ಕೆ ಮಾಡಿಕೊಂಡರು. ಆಧ್ಯಾತ್ಮಿಕತೆ ಸ್ವೀಕರಿಸಿದ ಬಳಿಕ ಅಭಯ್ ಅವರು ಶಿವನ ಪರಮ ಭಕ್ತರಾಗಿದ್ದಾರೆ.
ಅಭಯ್ ಸಿಂಗ್ ಬಾಬಾ ಆಗಿದ್ದು ಹೇಗೆ?
ಜೀವನದ ನಿಜವಾದ ಅರ್ಥವನ್ನು ಕಂಡುಹಿಡಿಯಲು ಅವರು ಸಾಕ್ರೆಟೀಸ್, ಪ್ಲೇಟೋ ಮತ್ತು ಆಧುನಿಕ ಪರಿಕಲ್ಪನೆಗಳ ಪುಸ್ತಕಗಳನ್ನು ಓದಲು ಶುರು ಮಾಡಿದರು. ಈ ಬಗ್ಗೆ ಅಭಯ್ ಸಿಂಗ್, ‘ಇದು ನಿಜವಾದ ಜ್ಙಾನ ಎಂದು ನಾನು ಈಗ ಅರ್ಥಮಾಡಿಕೊಂಡಿದ್ದೇನೆ. ನೀವು ಮನಸ್ಸು ಅಥವಾ ಮಾನಸಿಕ ಆರೋಗ್ಯವನ್ನು ಅರ್ಥಮಾಡಿಕೊಳ್ಳಬೇಕಾದರೆ, ನೀವು ಆಧ್ಯಾತ್ಮಿಕತೆಯ ಮೂಲಕ ಮಾಡಬಹುದು. ಯಾಕೆಂದರೆ ಈ ಹಂತವು ಅತ್ಯುತ್ತಮ ಹಂತವಾಗಿದೆ’ ಎಂದು ಹೇಳಿದ್ದಾರೆ.
LATEST NEWS
ಮಹಾನಗರ ಪಾಲಿಕೆಯಾಗಿ ಉಡುಪಿ ನಗರಸಭೆ ಮೇಲ್ದರ್ಜೆಗೆ; ಪ್ರಸ್ತಾವನೆ ಸಲ್ಲಿಸಲು ಸೂಚನೆ
Published
1 hour agoon
16/01/2025By
NEWS DESK4ಉಡುಪಿ : ಉಡುಪಿ ನಗರ ಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಲು ಸರಕಾರ ಚಿಂತನೆ ನಡೆಸಿದೆ. ಈ ಸಂಬಂಧ ಪರಿಶೀಲನೆ ನಡೆಸಿ ಸೂಕ್ತ ಶಿಫಾರಸ್ಸಿನೊಂದಿಗೆ ಪ್ರಸ್ತಾವನೆ ಸಲ್ಲಿಸುವಂತೆ ನಗರಾಭಿವೃದ್ಧಿ ಇಲಾಖೆಯು ಉಡುಪಿ ಜಿಲ್ಲಾಧಿಕಾರಿ ಮತ್ತು ಪೌರಾಯುಕ್ತರಿಗೆ ಸೂಚನೆ ನೀಡಿದೆ.
ಉಡುಪಿಯು ಸಾಂಸ್ಕೃತಿಕ, ಧಾರ್ಮಿಕ ಮತ್ತು ಆರ್ಥಿಕವಾಗಿ ಮಹತ್ವದ ಪ್ರದೇಶವಾಗಿದ್ದು, ನಗರೀಕರಣದತ್ತ ದಾಪುಗಾಲು ಹಾಕುತ್ತಿದೆ. ಜನಸಂಖ್ಯೆಯ ಪ್ರಮಾಣವೂ ಏರುತ್ತಿದೆ. ಅದಕ್ಕೆ ಪೂರಕವಾಗಿ ನಾಗರಿಕರಿಗೆ ಉತ್ತಮ ಆಡಳಿತ ಮತ್ತು ಮೂಲಸೌಕರ್ಯಗಳನ್ನು ಒದಗಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಬೇಕು ಎಂಬ ಅಭಿಪ್ರಾಯ ಸರಕಾರದ ಮಟ್ಟದಲ್ಲಿ ವ್ಯಕ್ತವಾಗಿದೆ. ಹಾಗಾಗಿ ಈ ಬಗ್ಗೆ ನಿಯಮಾನುಸಾರ ಪರಿಶೀಲಿಸಿ, ಅಗತ್ಯ ಪ್ರಸ್ತಾವನೆಯನ್ನು ಸೂಕ್ತ ಶಿಫಾರಸ್ಸಿನೊಂದಿಗೆ ಸಲ್ಲಿಸುವಂತೆ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಅವರು ಜಿಲ್ಲಾಧಿಕಾರಿ ಮತ್ತು ಪೌರಾಯುಕ್ತರಿಗೆ ಪ್ರತ್ಯೇಕವಾಗಿ ಪತ್ರ ಬರೆದಿದ್ದಾರೆ.
ಇದನ್ನೂ ಓದಿ : ಎಟಿಎಂಗೆ ಹಣ ತುಂಬಲು ಬಂದ ಸಿಬ್ಬಂದಿ ಮೇಲೆ ಗುಂ*ಡಿನ ದಾ*ಳಿ; 93 ಲಕ್ಷ ದರೋಡೆ
ಕೆಪಿಸಿಸಿ ಸದಸ್ಯ ಮತ್ತು ಮಾಜಿ ಕಾರ್ಯದರ್ಶಿ ಎಸ್. ಮೋಹನ್‌ದಾಸ್ ಹೆಗಡೆ ಈ ಕುರಿತಂತೆ ಪೌರಾಡಳಿತ ಸಚಿವ ರಹೀಂ ಖಾನ್ ಅವರ ಗಮನ ಸೆಳೆದಿದ್ದರು. ಅದಕ್ಕೆ ಪೂರಕವಾದ ದಾಖಲೆಗಳನ್ನೂ ಸಲ್ಲಿಸಿದ್ದರು. ಅದನ್ನು ಪರಿಶೀಲಿಸಿದ ಸಚಿವರು ಈ ಸೂಚನೆ ನೀಡಿದ್ದಾರೆ. ನಗರಸಭೆಯನ್ನು ಮೇಲ್ದರ್ಜೆಗೆ ಏರಿಸುವ ಸಂಬಂಧ ಪ್ರಸ್ತಾವನೆ ಸಲ್ಲಿಸಲು ಸೂಚನೆ ಬಂದಿದ್ದು, ಆದಷ್ಟು ಶೀಘ್ರದಲ್ಲಿ ನಗರಸಭೆಯ ಸಾಮಾನ್ಯ ಸಭೆ ಕರೆದು ಪರಿಶೀಲಿಸಿ ನಗರಸಭೆ ವ್ಯಾಪ್ತಿಯ ಜನಸಂಖ್ಯೆ, ಯಾವ ಯಾವ ಗ್ರಾಮ ಪಂಚಾಯತ್‌ಗಳನ್ನು ಈ ವ್ಯಾಪ್ತಿಗೆ ಸೇರಿಸಿಕೊಳ್ಳಬಹುದು ಇತ್ಯಾದಿ ಅಂಶಗಳನ್ನು ಪರಿಶೀಲಿಸಿ ನಿರ್ಣಯವನ್ನು ಕೈಗೊಂಡು ಸರಕಾರಕ್ಕೆ ಕಳುಹಿಸಿ ಕೊಡಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಮಾಹಿತಿ ನೀಡಿದ್ದಾರೆ.
LATEST NEWS
ಎಟಿಎಂಗೆ ಹಣ ತುಂಬಲು ಬಂದ ಸಿಬ್ಬಂದಿ ಮೇಲೆ ಗುಂ*ಡಿನ ದಾ*ಳಿ; 93 ಲಕ್ಷ ದರೋಡೆ
ತುಳು ಇಂಡಸ್ಟ್ರಿಗೆ ಎಂಟ್ರಿ ಕೊಟ್ಟ ‘ಗೋಲ್ಡನ್ ಮೂವೀಸ್’; ಕುದ್ರೋಳಿ ಕ್ಷೇತ್ರದಲ್ಲಿ ‘ಪ್ರೊಡಕ್ಷನ್ ನಂ 1’ಗೆ ಅದ್ದೂರಿ ಚಾಲನೆ
ಅಂದಿನ ಖ್ಯಾತ ಮಾಡಲ್ ಇಂದಿನ ಸನ್ಯಾಸಿನಿ ; ಯಾರು ಈ ಸುಂದರ ಸಾಧ್ವಿ ?
ನಾಮಿನೇಷನ್ನಿಂದ ಸೇಫ್ ಆಗಿದ್ದ ಧನರಾಜ್ ಗೆ ಕಂಟಕ !
ಕಿಂಡರ್ ಜಾಯ್ ಪ್ರಿಯರೇ ಎಚ್ಚರ! ಇಷ್ಟದ ಚಾಕಲೇಟ್ನಲ್ಲಿ ಬ್ಯಾಕ್ಟೀರಿಯಾ ಪತ್ತೆ
ಬಾಹ್ಯಾಕಾಶ ಇತಿಹಾಸದಲ್ಲಿ ಸಾಧನೆ ಮೆರೆದ ಭಾರತ; ಸ್ಪೇಡೆಕ್ಸ್ ಕಾರ್ಯಾಚರಣೆ ಯಶಸ್ವಿ
Trending
- BIG BOSS5 days ago
BBK11: ಐವರು ನಾಮಿನೇಟ್, ಕಿಚ್ಚನ ಪಂಚಾಯ್ತಿಯಲ್ಲಿ ಗೇಟ್ಪಾಸ್ ಯಾರಿಗೆ..?
- LATEST NEWS6 days ago
ಹಲ್ಲು ಹುಳುಕಾಗಿದ್ಯಾ.? ಈ ಮನೆಮದ್ದು ಪ್ರಯತ್ನಿಸಿ, ತಕ್ಷಣ ಎಲ್ಲಾ ಹಲ್ಲಲ್ಲಿರುವ ಹುಳುಗಳು ಹೊರ ಬರುತ್ತವೆ.!
- BIG BOSS3 days ago
ಕಣ್ಣೀರು ಒರೆಸಿದ ಸುದೀಪ್.. ಕಿಚ್ಚನ ಈ ದೊಡ್ಡ ಗುಣಕ್ಕೆ ಸೆಲ್ಯೂಟ್ ಹೊಡೆದ ಫ್ಯಾನ್ಸ್..!
- BIG BOSS2 days ago
ಮಿಡ್ ವೀಕ್ ಎಲಿಮಿನೇಷನ್ ನಿಂದ ಬಚಾವ್ ಆಗುವವರು ಯಾರು ?