Connect with us

LATEST NEWS

ದಿನಕ್ಕೆ ಆರು ಬಾರಿ ಸ್ನಾನ: ಪತ್ನಿಯ ಸ್ವಚ್ಛತೆ ಗೀಳು ಕಂಡು ಡೈವೋರ್ಸ್‌ ಕೇಳಿದ ಗಂಡ

Published

on

ಬೆಂಗಳೂರು: ದಿನಕ್ಕೆ ಆರು ಬಾರಿ ಸ್ನಾನ, ಲ್ಯಾಪ್‍ಟಾಪ್, ಸೆಲ್‍ಫೋನ್‍ ಡಿಟರ್ಜೆಂಟ್ ಹಾಕಿ ಸ್ವಚ್ಛಗೊಳಿಸುತ್ತಿದ್ದ ಹೆಂಡತಿಯ ಸ್ಚಚ್ಛತೆಯ ಗೀಳು ತಾಳಲಾರದೇ ವಿಚ್ಛೇದನ ಕೇಳಿ ಗಂಡ ಪೊಲೀಸ್‌ ಠಾಣೆ ಮೆಟ್ಟಿಲೇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

  ಸಾಂದರ್ಭಿಕ ಚಿತ್ರ

ಆರ್.ಟಿ ನಗರದ ಸುಮಾ ಮತ್ತು ಜಯಂತ್ ವಿವಾಹದ ಬಳಿಕ ಪತ್ನಿ ಸುಮಾ ಜೊತೆ ಲಂಡನ್‍ಗೆ ಹೋಗಿದ್ದರು. ಎಂಬಿಎ ಪದವೀಧರೆಯಾಗಿರುವ ಸುಮಾ, ಲಂಡನ್‍ನಲ್ಲಿ ಮನೆಯನ್ನು ತುಂಬಾ ಸ್ವಚ್ಛವಾಗಿ ಇರಿಸಿಕೊಳ್ಳುತ್ತಿದ್ದರು.

ಮೊದಲ ಮಗು ಹುಟ್ಟಿದ 2 ವರ್ಷದ ಬಳಿಕ ಸುಮಾಗೆ ಸ್ವಚ್ಛತೆ ಗೀಳು ಮತ್ತಷ್ಟು ಹೆಚ್ಚಾಗಿತ್ತು. ಪತಿ ಕೆಲಸ ಮುಗಿಸಿ ಮನೆಗೆ ಬಂದಾಗ ಶೂ, ಬಟ್ಟೆ, ಸೆಲ್‍ಫೋನ್ ಸ್ವಚ್ಛ ಮಾಡುವಂತೆ ಪದೇಪದೆ ಹೇಳುತ್ತಿದ್ದಳು.

ಕಿರಿಕಿರಿಗೆ ಒಳಗಾದ ಪತಿ ಈಕೆಯ ಅತಿರೇಕದ ವರ್ತನೆಯಿಂದ ಬೇಸತ್ತು ಹೋಗಿದ್ದರು.
ಲಂಡನ್‍ನಿಂದ ಬೆಂಗಳೂರಿಗೆ ವಾಪಸ್ ಆದ ದಂಪತಿ ಕೌಟುಂಬಿಕ ಸಮಾಲೋಚನೆಗೆ ಒಳಗಾಗುತ್ತಾರೆ. ಈ ವೇಳೆ ಈ ಸ್ವಚ್ಛತೆಯ ಗೀಳು ಕೊಂಚ ಕಡಿಮೆಯಾಗುತ್ತದೆ. ಈ ನಡುವೆ ದಂಪತಿಗೆ 2ನೇ ಮಗು ಜನಿಸಿದ್ದು,

ಕೋವಿಡ್ ಸಂದರ್ಭದಲ್ಲಿ ಸುಮಾಳಿಗೆ ಸ್ವಚ್ಛತೆಯ ಗೀಳು ಮತ್ತೆ ಹೆಚ್ಚಾಗಿದೆ. ಮನೆಯಲ್ಲಿ ಪದೇಪದೆ ಸ್ಯಾನಿಟೈಸರ್ ಬಳಸುವುದು, ಪೀಠೋಪಕರಣಗಳು, ಚಮಚ, ಪ್ಲೋರ್, ಮ್ಯಾಟ್ ಸೇರಿದಂತೆ ಎಲ್ಲಾ ವಸ್ತುಗಳನ್ನು ಮತ್ತೆ ಮತ್ತೆ ಸ್ವಚ್ಛ ಮಾಡಲು ಪ್ರಾರಂಭಿಸಿದ್ದಳು.
ಆರು ಬಾರಿ ಸ್ನಾನ
ಲಾಕ್‍ಡೌನ್ ಸಂದರ್ಭದಲ್ಲಿ ದಿನಕ್ಕೆ ಆರು ಬಾರಿ ಸ್ನಾನ ಮಾಡುವುದು, ಸ್ನಾನಕ್ಕೆ ಬಳಸಿದ ಸೋಪನ್ನು ಮತ್ತೊಂದು ಸೋಪಿನಿಂದ ಸ್ವಚ್ಛಗೊಳಿಸುವ ಮಟ್ಟಕ್ಕೆ ವರ್ತಿಸುತ್ತಿದ್ದಾಳೆ ಎಂದು ಪತಿ ದೂರಿದ್ದಾರೆ.

ತಾಯಿ ಮೃತರಾದ ಬಳಿಕ ಮತ್ತಷ್ಟು ಸ್ವಚ್ಛತೆಯ ಗೀಳು

ಈ ನಡುವೆ ದೀರ್ಘಕಾಲಿಕ ಅನಾರೋಗ್ಯದಿಂದ ಬಳಲುತ್ತಿದ್ದ ಸುಮಾ ಅವರ ತಾಯಿ ಮೃತಪಟ್ಟಿದ್ದಾರೆ. ಈ ಘಟನೆ ಬಳಿಕ ಸುಮಾಳ ಸ್ವಚ್ಛತೆ ಮತ್ತಷ್ಟು ಹೆಚ್ಚಾಗಿದೆ. ಲಾಕ್‍ಡೌನ್ ಸಂದರ್ಭದಲ್ಲಿ ಪತಿ ವರ್ಕ್ ಫ್ರಂ ಹೋಮ್ ಕೆಲಸ ಮಡುವಾಗ ಆತನ ಲ್ಯಾಪ್‍ಟಾಪ್, ಸೆಲ್‍ಫೋನ್‍ಗಳನ್ನು ಡಿಟರ್ಜೆಂಟ್ ಹಾಕಿ ಸ್ವಚ್ಛಗೊಳಿಸುತ್ತಿದ್ದಳು.

ಮಕ್ಕಳು ಶಾಲೆಗೆ ಹೋಗಿ ಬಂದರೆ ಅವರ ಬ್ಯಾಗ್, ಯೂನಿಫಾರ್ಮ್, ಶೂಗಳನ್ನು ಪ್ರತಿ ದಿನ ಸ್ವಚ್ಛ ಮಾಡುತ್ತಿದ್ದಳು. ಈಕೆಯ ಸ್ವಚ್ಛತೆಯ ಅತಿರೇಕದ ವರ್ತನೆಗೆ ಬೇಸತ್ತ ಪತಿ ಜಯಂತ್, ಇದೀಗ ಆಕೆಯಿಂದ ವಿಚ್ಛೇದನ ಕೋರಿದ್ದಾರೆ.

DAKSHINA KANNADA

ನಾಲ್ಕು ತಿಂಗಳ ಮಗುವಿಗೆ ಹಾಲಿನಲ್ಲಿ ಆಲ್ಕೋಹಾಲ್ ಬೆರೆಸಿದ ಅಜ್ಜಿ..! ಅಜ್ಜಿ ಮಾಡಿದ ಎಡವಟ್ಟಿಗೆ ಕೋಮಾಗೆ ಜಾರಿದ ಮಗು !!

Published

on

ಮಂಗಳೂರು/ಇಟಲಿ: ಇಟಲಿಯಲ್ಲೊಂದು ಆಘಾತಕಾರಿ ಘಟನೆ ನಡೆದಿದೆ. ಅಜ್ಜಿಯೊಬ್ಬರು ನಾಲ್ಕು ತಿಂಗಳ ಮಗುವಿಗೆ ಕುಡಿಯುವ ಹಾಲಿನಲ್ಲಿ ಆಲ್ಕೋಹಾಲ್‌ ಬೆರೆಸಿರುವ ಘಟನೆ ನಡೆದಿದೆ.

feed

ಮೊಮ್ಮಗು ಕುಡಿಯುವ ಹಾಲಿಗೆ ಅಜ್ಜಿ ತಪ್ಪಾಗಿ ಆಲ್ಕೋಹಲ್ ಬೆರೆಸಿದ್ದಾರೆ. ಮಗು ಅರ್ಧ ಹಾಲು ಕುಡಿದ ಬಳಿಕ ಮಗು ಅಳಲು ಆರಂಭಿಸಿದೆ. ಅಜ್ಜಿಗೆ ಅನುಮಾನ ಬಂದು ತಾನು ಕುಡಿಸಿದ ಹಾಲಿನ ವಾಸನೆಯನ್ನು ತೆಗೆದು ಪರಿಶೀಲನೆ ಮಾಡಿದಾಗ ಅದರಲ್ಲಿ ಆಲ್ಕೋಹಾಲ್‌ ಮಿಶ್ರಣ ಹಾಕಿರುವುದು ಬೆಳಕಿಗೆ ಬಂದಿದೆ.  ಇದರಿಂದ ಆಘಾತಕ್ಕೊಳಗಾದ ವೃದ್ಧೆ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಮುಂದೆ ಓದಿ..; ಜೀವಾಂತ್ಯವಾದ ಕಾಂತಾಬಾರೆ-ಬೂದಬಾರೆ ಜನ್ಮಕ್ಷೇತ್ರದ ಮರ..! ಇತಿಹಾಸದ ಜೀವಂತ ಸಾಕ್ಷಿಯ ಅಂತ್ಯ..!

ಕೋಮಾಗೆ ಜಾರಿದ ಮಗು:

ಅದಾಗಲೇ ಮಗುವಿನ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕೋಮ ಸ್ಥಿತಿಗೆ ಜಾರಿತ್ತು. ಬಳಿಕ ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಮಗುವಿಗೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ಮಗುವಿನ ಆರೋಗ್ಯವನ್ನು ಸಂಪೂರ್ಣ ಪರಿಶೀಲಿಸಿದ ಬಳಿಕ ಅಜ್ಜಿ ವಿರುದ್ಧ ಪ್ರಕರಣ ದಾಖಲಿಸಲು ನಿರ್ಧರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

 

Continue Reading

DAKSHINA KANNADA

ಚಲಿಸುತ್ತಿದ್ದಾಗ ಒಡೆದ ಬಸ್ಸಿನ ಗಾಜು; ಇಬ್ಬರು ಮಕ್ಕಳು, ಚಾಲಕನಿಗೆ ಗಾ*ಯ

Published

on

ವಿಟ್ಲ : ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ. ಪುತ್ತೂರು ಕಡೆಯಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಹೊಡೆದಿದೆ.

ಇದನ್ನೂ ಓದಿ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗು ಸಣ್ಣಪುಟ್ಟವಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬಾಲಕನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡಿರುವ ಬಾಲಕ ಕೇರಳದ ಚೆರ್ಕಳ ನೆಲ್ಲಿಕಟ್ಟೆ ನಿವಾಸಿ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

 

Continue Reading

DAKSHINA KANNADA

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

Published

on

ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ.

accident

accident

ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

ಮುಂದೆ ಓದಿ..; ಪ್ರಾಂಶುಪಾಲೆ, ಶಿಕ್ಷಕಿ ನಡುವೆ ಹೊಯ್‌ ಕೈ..!! ವೀಡಿಯೋ ವೈರಲ್

accident

Continue Reading

LATEST NEWS

Trending