Monday, January 24, 2022

ಗಂಡನ ಡಾಬಾಗೆ ಬೆಂಕಿ ಹಚ್ಚಲು ರೌಡಿಗೆ 20 ಸಾವಿರಕ್ಕೆ ಸುಪಾರಿ ಕೊಟ್ಟ ಹೆಂಡ್ತಿ

ಬೆಂಗಳೂರು: ಪಾಲುದಾರಿಕೆಯಲ್ಲಿ ಪತಿ ನಡೆಸುತ್ತಿದ್ದ ಡಾಬಾಗೆ ಬೆಂಕಿ ಹಚ್ಚಲು ಪತ್ನಿಯೇ ರೌಡಿಗೆ ಸುಪಾರಿ ನೀಡಿದ ಘಟನೆ ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿ ನಡೆದಿದೆ.

ಪತ್ನಿಯನ್ನು ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡಿದ್ದ ಯೂ ಟರ್ನ್ ಡಾಬಾ ಮಾಲೀಕ ಅರ್ಪಿತ್ ಪತ್ನಿ ಶೀತಲ್ ಎಂಬಾಕೆಯನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.

ಕಳೆದ‌ ತಿಂಗಳು 24ರಂದು ರಾತ್ರಿ ದುಷ್ಕರ್ಮಿಗಳು ಬಂದು ಡಾಬಾ‌‌ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು‌.

ಇದನ್ನು ಪ್ರಶ್ನಿಸಲು ಹೋದ ಡಾಬಾದ ಸಿಬ್ಬಂದಿ ಮನೋಜ್ ಎಂಬಾತನ ಮೇಲೂ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದರು.

ಚಿಕಿತ್ಸೆ ಫಲಕಾರಿಯಾಗದೆ ಮನೋಜ್ ಮೃತಪಟ್ಟಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸೋಲದೇವನಹಳ್ಳಿ ಪೊಲೀಸರು ಮೂವರು ಆರೋಪಿಗಳಾದ ರೌಡಿಶೀಟರ್ ಮನುಕುಮಾರ್ ಮತ್ತು ಆತನ ಸಹಚರರಾದ ಹೇಮಂತ್ ಹಾಗೂ ಮಂಜುನಾಥನನ್ನು ಬಂಧಿಸಿದ್ದರು‌.

ಕೆಲ ತಿಂಗಳ ಹಿಂದೆ ಅರ್ಪಿತ್ ಹಾಗೂ ಶೀತಲ್ ಮದುವೆಯಾಗಿತ್ತು.‌ ಪ್ರಾರಂಭದಲ್ಲಿ ಅನ್ಯೋನ್ಯವಾಗಿದ್ದ ದಂಪತಿ ಕಾಲಕ್ರಮೇಣ ಕೌಟುಂಬಿಕ ಕಾರಣಕ್ಕಾಗಿ ಇಬ್ಬರ ನಡುವೆ ವೈಮನಸ್ಸು ಬೆಳೆದಿತ್ತು. ‌

ನಿತ್ಯ ಜಗಳವಾಗುತಿತ್ತು‌. ಈ ಹಿನ್ನೆಲೆ ಹೆಂಡತಿಯನ್ನು ತವರು ಮನೆಗೆ ಬಿಟ್ಟು ಬಂದಿದ್ದ.

ಹಲವು ದಿನಗಳಾದರೂ ಹೆಂಡ್ತಿ ನೋಡಲು ಹೋಗದೆ ಡಾಬಾ ವ್ಯವಹಾರದಲ್ಲಿ‌ ಮಗ್ನನಾಗಿದ್ದ.‌ ಇದರಿಂದ ಅಸಮಾಧಾನಗೊಂಡು ಗಂಡನಿಗೆ ಬುದ್ಧಿ ಕಲಿಸಲು ಹೋದ ಹೆಂಡತಿ ಶೀತಲ್, ತನ್ನ ಸ್ನೇಹಿತ ರೌಡಿಶೀಟರ್ ಮನುಕುಮಾರ್​ಗೆ 20 ಸಾವಿರಕ್ಕೆ ಸುಪಾರಿ ನೀಡಿದ್ದಳು. ಶೀತಲ್ ಡಾಬಾಗೆ ಬೆಂಕಿ ಹಚ್ಚಿದರೆ ಅರ್ಪಿತ್​​ಗೆ ಬುದ್ಧಿ ಬರುತ್ತದೆ ಎಂಬ ಪ್ಲಾನ್ ಮಾಡಿದ್ದಳು. ಪ್ಲಾನ್​​ನಂತೆ ಮನು ಸುಪಾರಿ ತೆಗೆದುಕೊಂಡಿದ್ದ. ಈತನ ಸಹಚರರಿಗೆ ಹಣ ಕೊಟ್ಟು ಬೆಂಕಿ ಹಚ್ಚುವ ಸಂಚು ರೂಪಿಸಿದ್ದ.

Facebook Notice for EU!
You need to login to view and post FB Comments!

Hot Topics

ಕಾರ್ಕಳದಲ್ಲಿ ಕೊರೋನಾದಂತೆ ಹರಡುತ್ತಿದೆ ಕಾಲು ಬಾಯಿ ರೋಗ

ಕಾರ್ಕಳ: ಇಲ್ಲಿನ ಆಸುಪಾಸಿನಲ್ಲಿ ಪ್ರಾಣಿಗಳಲ್ಲಿ ಕಂಡುಬರುವ ಅದರಲ್ಲೂ ಜಾನುವಾರಿನಲ್ಲಿ ಸಾಂಕ್ರಾಮಿಕ ಕಾಲುಬಾಯಿ ರೋಗ ಹರಡುತ್ತಿದೆ.ಇದರಿಂದಾಗಿ ಈಗಾಗಲೇ ಹಲವು ಜಾನುವಾರು ಬಲಿಯಾಗಿದ್ದು, ಪಶು ಇಲಾಖೆಯ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.ಕಾರ್ಕಳ ನಗರ, ತೆಳ್ಳಾರು, ಮಿಯಾರು,...

ಯಕ್ಷಗಾನ ಕಲಾವಿದ ಗೋವಿಂದ ಶೇರಿಗಾರ್ ನಿಧನ: ಯಕ್ಷಗಾನ ಕಲಾರಂಗ ಸಂತಾಪ

ಕುಂದಾಪುರ: ಗಂಡುಕಲೆಯಲ್ಲಿ ಸ್ತ್ರೀ ವೇಷಧಾರಿ ಪಾತ್ರ ಮಾಡುತ್ತಿದ್ದ ಮಾರ್ಗೋಳಿ ಗೋವಿಂದ ಶೇರಿಗಾರ್ (96) ನಿಧನರಾಗಿದ್ದು ಇಬ್ಬರು ಪುತ್ರರು ಹಾಗೂ ಪುತ್ರಿಯರನ್ನು ಅಗಲಿದ್ದಾರೆ.ಬಡಗುತಿಟ್ಟು ಪುರಾಣ ಪ್ರಸಂಗಗಳಲ್ಲಿ ಅತ್ಯಂತ ಪ್ರಸಿದ್ಧವಾದ ದೇವಿ ಮಹಾತ್ಮೆ ಪ್ರಸಂಗಗಳಲ್ಲಿ ಮೊದಲು...

‘ಪುಷ್ಪ’ ಸಿನಿಮಾ ನೋಡಿ ಅಪ್ರಾಪ್ತರಿಂದ ಯುವಕನ ಬರ್ಬರ ಹತ್ಯೆ- ಕೃತ್ಯದ ವೀಡಿಯೋ ಚಿತ್ರೀಕರಣ

ನವದೆಹಲಿ: ಟಾಲಿವುಡ್‌ನ ಅಲ್ಲು ಅರ್ಜುನ್‌ ನಟನೆಯ ಸೂಪರ್‌ ಹಿಟ್‌ 'ಪುಷ್ಪ' ಸಿನಿಮಾ ನೋಡಿ ಅದರಿಂದ ಪ್ರಭಾವಿತರಾಗಿ ಯುವಕನನ್ನು ಮೂವರು ಆರೋಪಿಗಳು ಬರ್ಬರವಾಗಿ ಥಳಿಸಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ.ಕೊಲೆಗೀಡಾದ ಯುವಕ...