Monday, July 4, 2022

ಬಾವನೊಂದಿಗೆ ಸೇರಿ ಪತಿಯ ಬರ್ಬರ ಹತ್ಯೆ

ಮೈಸೂರು: ಸಹೋದರರು, ಬಾವನೊಂದಿಗೆ ಸೇರಿ ತನ್ನ ಪತಿಯನ್ನೇ ಪತ್ನಿ ಕೊಲೆ ಮಾಡಿರುವ ಘಟನೆ ಮೈಸೂರಿನ ಇಲವಾಲ ಹೋಬಳಿಯ ಭದ್ರಗೌಡನಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ನಂಜನಗೂಡು ತಾಲೂಕಿನ ಹಿಬ್ಜಾಲ ಗ್ರಾಮದ ಕೆಂಪಶೆಟ್ಟಿ (35) ಕೊಲೆಯಾದವರು. ಪತ್ನಿ ಶಶಿರೇಖಾ, ಸಂಬಂಧಿಗಳಾದ ಕೆಂಡಶೆಟ್ಟಿ, ರಮೇಶ್, ನಾಗೇಂದ್ರ ಎಂಬವರೇ ಚಾಕುವಿನಿಂದ ಹತ್ಯೆ ಮಾಡಿದ್ದಾರೆ. 12 ವರ್ಷಗಳ ಹಿಂದೆ ಕೆಂಪಶೆಟ್ಟಿ ಮತ್ತು ಎಚ್‌ಡಿಕೋಟೆ ತಾಲೂಕಿನ ಹೊಸಹುಂಡಿ ಗ್ರಾಮದ ಶಶಿಕಲಾ ಮದುವೆಯಾಗಿದ್ದರು. ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಮೂರು ವರ್ಷಗಳಿಂದ ಕೂರ್ಗಳ್ಳಿಯಲ್ಲಿ ವಾಸವಾಗಿದ್ದರು. ಮೃತ ಕೆಂಪಶೆಟ್ಟಿ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಶಶಿಕಲಾ ಗಾರ್ಮೆಂಟ್ಸ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಈ ನಡುವೆ ಕೆಂಪಶೆಟ್ಟಿ, ಶಶಿಕಲಾ ಶೀಲ ಶಂಕಿಸುತ್ತಿದ್ದ ಎನ್ನಲಾಗಿದೆ. ಹಾಗಾಗಿ ಇಬ್ಬರ ನಡುವೆ ಪದೇ ಪದೆ ಜಗಳವಾಗುತ್ತಿತ್ತು. ಎರಡು ಬಾರಿ ಈತ ಹೆಂಡತಿಯ ಮೇಲೆ ಹಲ್ಲೆಗೆ ಯತ್ನಿಸಿದ್ದು, ಒಮ್ಮೆ ಮೂರು ತಿಂಗಳ ಕಾಲ ಜೈಲು ವಾಸ ಅನುಭವಿಸಿ ಜಾಮೀನಿನ ಮೇಲೆ ಹೊರಬಂದಿದ್ದ. ಬಳಿಕ ಹೆಂಡತಿಯಿಂದ ಪ್ರತ್ಯೇಕವಾಗಿದ್ದ ಕೆಂಪಶೆಟ್ಟಿ ಪದೇ ಪದೇ ಹೆಂಡತಿ ಮನೆಯ ಬಳಿ ಗಲಾಟೆ ಮಾಡುತ್ತಿದ್ದ ಎಂಬ ಮಾಹಿತಿ ದೊರೆತಿದೆ. ಸೋಮವಾರ ತಡರಾತ್ರಿ ಕೂರ್ಗಳ್ಳಿಯ ತನ್ನ ಹೆಂಡತಿಯ ಮನೆಯ ಬಳಿ ಬಂದಿರುವ ಕೆಂಪಶೆಟ್ಟೆಯನ್ನ ಶಶಿರೇಖಾ ಸಹೋದರರಾದ ಕೆಂಡಶೆಟ್ಟಿ, ನಾಗೇಂದ್ರ, ಬಾವ ರಮೇಶ ಸೇರಿಕೊಂಡು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಸ್ಥಳಕ್ಕೆ ಡಿಸಿಪಿ ಪ್ರದೀಪ ಗುಂಟಿ, ಎನ್‌ಆರ್ ವಿಭಾಗದ ಎಸಿಪಿ ಶಿವಶಂಕರ್, ವಿಜಯನಗರ ಇನ್ಸ್‌ಪೆಕ್ಟರ್ ಬಾಲಕೃಷ್ಣ ಭೇಟಿ ನೀಡಿ ಪರಿಶೀಲಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರಿನಲ್ಲಿ 518 ಅಕ್ರಮ ವಿದೇಶಿಗರು ಪೊಲೀಸರ ವಶಕ್ಕೆ

ಮಂಗಳೂರು: ಮಂಗಳೂರು ಪೊಲೀಸರು ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಯೂರಿರುವ ವಿದೇಶಿಗರ ಪತ್ತೆ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ.ಸರಿಯಾದ ದಾಖಲೆಗಳಿಲ್ಲದ 518 ವಿದೇಶಿ ವಲಸಿಗರೆಂದು ಹೇಳಲಾದವರ ವಿಚಾರಣೆ ಆರಂಭಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಸೂಚನೆಯಂತೆ ಅಕ್ರಮವಾಗಿ ‌ನೆಲೆಸಿರುವ ವಿದೇಶಿಯರ...

ಮಂಗಳೂರು: ಬೆಂಗ್ರೆ ವಾರ್ಡಿನ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಕಾಮತ್

ಮಂಗಳೂರು: ಮಹಾನಗರ ಪಾಲಿಕೆಯ ಬೆಂಗ್ರೆ ವಾರ್ಡಿನಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.ತೋಟ ಬೆಂಗ್ರೆಯ ಪ್ಯಾಸೆಂಜರ್ ಬೋಟ್ ಜೆಟ್ಟಿಯ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿ ಮಾತನಾಡಿದ ಶಾಸಕ...

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ನೀರುಪಾಲು-ಓರ್ವನ ರಕ್ಷಣೆ

ಬಂಟ್ವಾಳ: ನದಿಯಲ್ಲಿ ಈಜಲು ತೆರಳಿದ್ದ ಐವರು ಬಾಲಕರಲ್ಲಿ ಇಬ್ಬರು ನೀರು ಪಾಲಾಗಿದ್ದು, ಓರ್ವನನ್ನು ಸ್ಥಳೀಯರು ರಕ್ಷಣೆ ಮಾಡಿದರೆ, ಮತ್ತೋರ್ವ ಬಾಲಕ ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಳ್ಳಾಲ ತಾಲೂಕಿನ ಸಜಿಪಪಡು...