Connect with us

BANTWAL

ಬಂಟ್ವಾಳ: ಸೆಂಟ್ರಿಗ್‌ ಕೆಲಸಕ್ಕೆ ಬಂದವನು ಹೆಂಡತಿಯನ್ನು ಬುಟ್ಟಿಗೆ ಹಾಕಿ ಗಂಡನನ್ನೇ ಮುಗಿಸಿದ..!

Published

on

ವಿಟ್ಲ: ಮಲಗಿದ್ದಲ್ಲೇ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವ್ಯಕ್ತಿಯ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಬಂಧಿಸಲಾಗಿದೆ.

ಕೊಲೆಯಾದ ಅರವಿಂದ ಭಾಸ್ಕರ ಹಾಗೂ ಆರೋಪಿ ಯೋಗೀಶ ಗೌಡ

ಮೃತ ವ್ಯಕ್ತಿಯನ್ನು ಅರವಿಂದ ಭಾಸ್ಕರ ಎಂದು ಗುರುತಿಸಲಾಗಿದೆ.
ಬಂಧಿತರನ್ನು ಅರವಿಂದ ಭಾಸ್ಕರನ ಪತ್ನಿ ಆಶಾ ಹಾಗೂ ಯೋಗೀಶ ಗೌಡ ಎಂದು ಗುರುತಿಸಲಾಗಿದೆ.
ಘಟನೆ ವಿವರ
ಮೃತ ಅರವಿಂದ ಭಾಸ್ಕರ ಅವರು 2 ವರ್ಷಗಳಿಂದ ಹೊಸ ಮನೆಯನ್ನು ಕಟ್ಟಲು ಆರಂಭಿಸಿದ್ದು, ಸದ್ರಿ ಮನೆಯ ಸೆಂಟ್ರಿಂಗ್‌ ಕೆಲಸವನ್ನು ಯೋಗೀಶ ಗೌಡ ಎಂಬಾತನು ಮಾಡಿಸುತ್ತಿದ್ದು, ಈ ವೇಳೆ ಅರವಿಂದ ಭಾಸ್ಕರನ ಪತ್ನಿ ಆಶಾಳೊಂದಿಗೆ ಈತ ತುಂಬಾ ಸಲುಗೆಯಿಂದ ಇದ್ದು, ಅಕ್ರಮ ಸಂಬಂಧಕ್ಕೆ ತಿರುಗಿತ್ತು.

ಈ ಮಧ್ಯೆ ಅರವಿಂದ ಭಾಸ್ಕರನು ತನ್ನ ತೋಟದ ಅಡಿಕೆಯನ್ನು ತೆಗದುಕೊಂಡು ಹೋಗಿ ಮಾರಾಟ ಮಾಡಿ ಅದರಿಂದ ಬಂದ ಹಣವನ್ನು ದುಂದುವೆಚ್ಚ ಮಾಡುತ್ತಿದ್ದ ಬಗ್ಗೆ ಆತನ ಪತ್ನಿ ಆಕ್ಷೇಪಿಸುತ್ತಿದ್ದಳು. ಈ ವೇಳೆ ಪ್ರಿಯಕರ ಯೋಗೀಶನು ಸಹ ಆಶಾಳೊಂದಿಗೆ ಸೇರಿಕೊಂಡು ಅರವಿಂದ ಭಾಸ್ಕರನಿಗೆ ಹಲ್ಲೆ ನಡೆಸುತ್ತಿದ್ದನು.

ಇದಕ್ಕೋಸ್ಕರ ಅರವಿಂದ ಭಾಸ್ಕರ ಹೆದರಿ ರಾತ್ರಿ ವೇಳೆಯಲ್ಲಿ ಆತನ ಮನೆಯ ಕೋಣೆಯ ಬಾಗಿಲಿನ ಚಿಲಕವನ್ನು ಹಾಕಿ ರಾತ್ರಿ ವೇಳೆಯಲ್ಲಿ ಮನೆಯಲ್ಲಿ ಮಲಗುತ್ತಿದ್ದ.
ಫೆ.26 ರಂದು ರಂದು ಬೆಳಿಗ್ಗೆ 8.00 ಗಂಟೆಗೆ ಆಶಾ ಸಂಬಂಧಿಕರೊಬ್ಬರಿಗೆ ಕರೆ ಮಾಡಿ ಅರವಿಂದ ಭಾಸ್ಕರ ರಾತ್ರಿ 10.00 ಗಂಟೆಗೆ ಕೋಣೆಯಲ್ಲಿ ಮಲಗಿದ್ದು ಈಗ ಮಲಗಿದ್ದಲ್ಲಿಂದ ಏಳುತ್ತಿಲ್ಲ. ನೀವು ಮನೆಗೆ ಬನ್ನಿ ಎಂದು ಹೇಳಿದಾಗ ಸಂಬಂಧಿಕರು ಸ್ಥಳಕ್ಕೆ ಬಂದು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ.

ಆಗ ವೈಧ್ಯರು ಪರೀಕ್ಷಿಸಿ ಅರವಿಂದ ಭಾಸ್ಕರ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಆದರೆ ಭಾಸ್ಕರನ ಮೃತದೇಹ ನೋಡಿದಾಗ ಕುತ್ತಿಗೆ ಹಿಸುಕಿ ಕೊಲೆ ಮಾಡಿರುವ ಸಂಶಯ ವ್ಯಕ್ತವಾಗಿದ್ದು,

ಈ ಬಗ್ಗೆ ಭಾಸ್ಕರ ಅವರ ಸಂಬಂಧಿಕರು ಪೊಲೀಸರಿಗೆ ದೂರು ನೀಡಿದ್ದು, ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

BANTWAL

BANTWAL: ಬಸ್ – ಕಾರು ನಡುವೆ ಅಪಘಾತ; ಕಾರು ಚಾಲಕ ಗಂ*ಭೀರ

Published

on

ಬಂಟ್ವಾಳ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬಲೆನೋ ಕಾರಿನ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರು ಚಾಲಕನನ್ನು ಗಂಭೀರ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಬಂಟ್ವಾಳ ತಾಲೂಕಿನ ವಗ್ಗದ ಸಮೀಪ ಮುಂಜಾನೆ ಈ ಅಪಘಾತ ನಡೆದಿದೆ.

ಮಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುವ ಬಸ್ ಹಾಗೂ ಬೆಳ್ತಂಗಡಿಯಿಂದ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿತ್ತು. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದರೆ, ಬಸ್‌ನ ಮುಂಬಾಗ ಜಖಂಗೊಂಡಿದೆ.

ತಕ್ಷಣ ಸ್ಥಳೀಯರ ನೆರವಿನಿಂದ ಕಾರಿನಲ್ಲಿ ಸಿಲುಕಿದ್ದ ಚಾಲಕನನ್ನು ಹೊರ ತೆಗೆದು ತಕ್ಷಣ ಆಸ್ಪತ್ರೆಗೆ ರವಾನಿಸಲಾಗಿದೆ. ಗಂಭೀರ ಗಾಯಗೊಂಡಿದ್ದ ಚಾಲಕನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Continue Reading

BANTWAL

WATCH VIDEO : ಬಂಟ್ವಾಳದಲ್ಲಿ ಧರ್ಮಗುರುವಿನ ಪೈಶಾಚಿಕ ಕೃತ್ಯ; ಅಸಹಾಯಕ ವೃದ್ಧ ದಂಪತಿಗೆ ಹಿಗ್ಗಾಮುಗ್ಗ ಥಳಿತ

Published

on

ಬಂಟ್ವಾಳ : ಕ್ರೈಸ್ತ ದಂಪತಿ ಮೇಲೆ ಧರ್ಮಗುರುವೊಬ್ಬರು ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ವಿಟ್ಲ ಸಮೀಪದ ಪುಣಚ ಗ್ರಾಮದ ಎರ್ಮೆತ್ತಡ್ಕ ನಿವಾಸಿ 79 ವರ್ಷ ಪ್ರಾಯದ ಗ್ರೆಗರಿ ಮೊಂತೇರೋ ಹಾಗೂ ಅವರ ಪತ್ನಿ ಮೇಲೆ ಮನೆಲಾ ಚರ್ಚ್‌ನ ಪ್ರಧಾನ ಧರ್ಮ ಗುರು ನೆಲ್ಸನ್‌ ಒಲಿವೆರಾ ಅವರು ಹಲ್ಲೆ ಮಾಡಿದ್ದಾರೆ.

ಫಾದರ್ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಫೆ.29 ರ ಮುಂಜಾನೆ ಈ ಘಟನೆ ನಡೆದಿದೆ. ಮನೆ ಶುದ್ಧ ಭೇಟಿ ನಿಮಿತ್ತ ವೃದ್ಧ ದಂಪತಿಗಳ ಮನೆಗೆ ಬಂದಿದ್ದ ಫಾದರ್ ಒಲಿವೆರಾ ಗೇಟ್‌ ಬಳಿಯಲ್ಲೇ ಗ್ರೆಗರಿ ಮೊಂತೆರೋ ಅವರಿಗೆ ಕಾಲಿನಿಂದ ತುಳಿದು ಹಲ್ಲೆ ಮಾಡಿದ್ದಾರೆ.

ಇಷ್ಟೇ ಅಲ್ಲದೆ, ಕುತ್ತಿಗೆ ಹಿಡಿದು ಎಳೆದಾಡಿದ್ದು, ಕೋಲಿನಿಂದಲೂ ಹಲ್ಲೆ ನಡೆಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವೇಳೆ ಗ್ರೆಗರಿ ಮೊಂತೆರಾ ಅವರ ಪತ್ನಿ ಪ್ರತಿರೋಧ ತೋರಿಸಿದ್ರೂ ಫಾದರ್ ಜೊತೆಗಿದ್ದ ವ್ಯಕ್ತಿ ವೃದ್ಧೆಯನ್ನು ಅಡ್ಡ ಗಟ್ಟಿದ್ದಾನೆ.

ಆದರೆ, ಫಾದರ್ ಅವರಿಗೂ ಕಾಲಿನಿಂದ ತುಳಿದು ಹಲ್ಲೆ ನಡೆಸಿದ್ದಾರೆ. ಫಾಧರ್ ಆಗಿದ್ದು ವಯೋ ವೃದ್ಧರಿಗೆ ಗೌರವ ಕೊಡಲು ಗೊತ್ತಿಲ್ಲದ ಇಂತಹ ನೀಚನ ವಿರುದ್ಧ ಕ್ರಮ ಕೈಗೊಳ್ಳಿ ಅಂತ ವೃದ್ಧ ದಂಪತಿ ವಿಟ್ಲ ಠಾಣೆಗೆ ದೂರು ನೀಡಿದ್ದಾರೆ. ಆದರೆ, ಫಾದರ್‌ ಪರ ಹಲವರು ವಿಟ್ಲ ಠಾಣೆ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

Continue Reading

BANTWAL

ಬಾಲವಿಕಾಸದಲ್ಲಿ ಜಿಲ್ಲಾ ಮಟ್ಟದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್ ಪರೀಕ್ಷಾ ಶಿಬಿರ

Published

on

ವಿಟ್ಲ: ಪೆರಾಜೆ, ಮಾಣಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮಾಣಿ ಸ್ಥಳೀಯ ಸಂಸ್ಥೆ ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿ ಇವರ ಸಹಭಾಗಿತ್ವದಲ್ಲಿ ಫೆ. 28 ರಂದು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ, ವಿದ್ಯಾನಗರ ಪೆರಾಜೆ, ಮಾಣಿ ಇಲ್ಲಿ 2023-24 ನೇ ಸಾಲಿನ ಜಿಲ್ಲಾ ಮಟ್ಟದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್ ಪರೀಕ್ಷಾ ಶಿಬಿರವು ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಸಂಚಾಲಕ ಹಾಗೂ ಮಾಣಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷ  ಪ್ರಹ್ಲಾದ್ ಶೆಟ್ಟಿ ಜೆ  ಪರೀಕ್ಷಾ ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಎಳವೆಯಲ್ಲಿಯೇ ವಿದ್ಯಾರ್ಥಿಗಳಿಗೆ ನಾಯಕತ್ವ ಗುಣವಿದ್ದಾಗ ಮುಂದಿನ ದಿನಗಳಲ್ಲಿ ಸದೃಢ ದೇಶ ಕಟ್ಟಬಲ್ಲರು ಎಂದು ಹೇಳಿ ಪರೀಕ್ಷಾ ಶಿಬಿರಕ್ಕೆ ಶುಭ ಹಾರೈಸಿದರು.

ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿ ರವೀಂದ್ರ ಡಿ ಸ್ವಾಗತಿಸಿ,ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಕಬ್ ವಿಭಾಗದ ಶಿಬಿರ ನಾಯಕಿ ಯಮುನಾ,ಬುಲ್ ಬುಲ್ ವಿಭಾಗದ ಶಿಬಿರ ನಾಯಕಿ ಯಶೋಧ ಕೆ (HWB) ರವರು ಉಪಸ್ಥಿತರಿದ್ದರು. ಪರೀಕ್ಷಾ ಶಿಬಿರದಲ್ಲಿ ಸಹಾಯಕರಾಗಿ ಕಬ್ ಮಾಸ್ಟರ್ ಮತ್ತು ಫ್ಲಾಕ್ ಲೀಡರ್ ಗಳಾದ ಕಾಂತಪ್ಪ, ಸುಮಾ, ಅಮಿತಾ ಎಸ್, ಪ್ರಮೀಳಾ, ಕುರ್ಶಿದ, ಯೋಗಿನಿ, ಚಿತ್ರ ಕೆ, ವೀಣಾ, ಶೀಲಾವತಿ, ಪ್ರಮೀಳಾ ಕ್ರಾಸ್ತಾ, ಸೌಮ್ಯ ಹಾಗೂ ಸ್ಕೌಟ್ ಮತ್ತು ಗೈಡ್ ಶಿಕ್ಷಕಿ ಸಪ್ನ, ಅನಿತಾ ಗೌರಿ, ಲೀಲಾರವರು ಸಹಕರಿಸಿದರು. ಕಬ್ ವಿಭಾಗದಲ್ಲಿ 77 ವಿದ್ಯಾರ್ಥಿಗಳು ಹಾಗೂ ಬುಲ್ ಬುಲ್ ವಿಭಾಗದಲ್ಲಿ 66 ವಿದ್ಯಾರ್ಥಿಗಳು ಒಟ್ಟು 143 ವಿದ್ಯಾರ್ಥಿಗಳು ಪರೀಕ್ಷಾ ಶಿಬಿರದಲ್ಲಿ ಭಾಗವಹಿಸಿದ್ದರು. ಸ್ವಯಂ ಸೇವಕರಾಗಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿಯ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳು ಸಹಕರಿಸಿದರು. ಗೈಡ್ ಕ್ಯಾಪ್ಟನ್ ಸುಪ್ರಿಯಾ ಡಿ ಕಾರ್ಯಕ್ರಮ ನಿರೂಪಿಸಿದರು.

Continue Reading

LATEST NEWS

Trending