Saturday, November 27, 2021

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಾನೆಂದು ಪತಿಯನ್ನೇ ವಧಿಸಿದಳಾ ಪಾಪಿ ಪತ್ನಿ..!

ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಾನೆನ್ನುವ ಕಾರಣಕ್ಕೆ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಂದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.ಆಟೋಚಾಲಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಕಲ್ಪನಾ ತನ್ನ ಸಂಬಂಧಕ್ಕೆ ಪತಿ ಅಡ್ಡಿಯಾಗುತ್ತಾನೆಂದು ಸಂಚು ರೂಪಿಸಿ ಪ್ರಿಯಕರ ಹಾಗೂ ಆತನ ಸ್ನೇಹಿತರೊಂದಿಗೆ ಸೇರಿ ಪತಿಯನ್ನು ಕೊಲೆಗೈದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ದೊಡ್ಡರಾಯಪ್ಪನಹಳ್ಳಿಯ (40)ಬೀರೇಗೌಡ ಕೊಲೆಯಾದಾತ ಎಂದು ತಿಳಿದುಬಂದಿದೆ.  ಆಟೋಚಾಲಕ ಲಕ್ಷ್ಮಣ ಎಂಬಾತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಕಲ್ಪನಾ ನವಂಬರ್ 21ರಂದು ಬೀರೇಗೌಡನನ್ನು ಕೊಲೆಗೈದು ಆಟೋದಲ್ಲಿ ಮೃತದೇಹ ಸಾಗಿಸಿದ್ದರು.

ಬಳಿಕ ಮೃತದೇಹವನ್ನು ಮಾರ್ಗಮಧ್ಯೆ ವಾಹನದಲ್ಲೇ ಬಿಟ್ಟು ದರೋಡೆಕೋರರು ಕೊಲೆಗೈದಂತೆ ಬಿಂಬಿಸಿರುವುದಾಗಿ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆಗೈದ ಪೊಲೀಸರು ರಾಜನಕುಂಟೆಯ ವೇಣುಗೋಪಾಲಸ್ವಾಮಿ ಬಡಾವಣೆ ನಿವಾಸಿ ಕಲ್ಪನಾ, ಸಾದೇನಹಳ್ಳಿ ನಿವಾಸಿ ಲಕ್ಷ್ಮಣ, ಪ್ರದೀಪ, ಹೆಸರುಘಟ್ಟದ ಅಜಯ್ ಹಾಗೂ ದರ್ಶನ್ ಎಂಬ ಐವರು ಆರೋಪಿಗಳನ್ನು  ಬಂಧಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...