Thursday, April 22, 2021

ಬೆಂಗಳೂರಿಗೆ ಹೋಗುವ ಪ್ರಯಾಣಿಕರೇ ಎಚ್ಚರ ಎಚ್ಚರ : ಗುಂಡ್ಯದಲ್ಲಿ ಮೂತ್ರ ವಿಸರ್ಜನೆಗೆ ವಾಹನದಿಂದ ಇಳಿದ ಚಾಲಕ ಕಾಡಾನೆಗೆ ಬಲಿ..!

ಬೆಂಗಳೂರಿಗೆ ಹೋಗುವ ಪ್ರಯಾಣಿಕರೇ ಎಚ್ಚರ ಎಚ್ಚರ : ಗುಂಡ್ಯದಲ್ಲಿ ಮೂತ್ರ ವಿಸರ್ಜನೆಗೆ ವಾಹನದಿಂದ ಇಳಿದ ಚಾಲಕ ಕಾಡಾನೆಗೆ ಬಲಿ..!

ಪುತ್ತೂರು : ಕಾಡಾನೆ ದಾಳಿ ನಡೆಸಿದ ಪರಿಣಾಮ ಲಾರಿ ಚಾಲಕನೋರ್ವ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ಸಂಭವಿದೆ.

ಇಲ್ಲಿನ ಶಿರಾಡಿ ಘಾಟ್‌ನ ಕೆಂಪುಹೊಳೆ ಸಮೀಪ ನಿನ್ನೆ ಗುರುವಾರ ತಡ ರಾತ್ರಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಮೃತ ಟ್ರಕ್ ಚಾಲಕ ರಾಜಸ್ಥಾನ ಮೂಲದವನೆಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಲಾರಿ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಕೆಂಪು ಹೊಳೆ ಸಮೀಪ ಮೂತ್ರ ವಿಸರ್ಜನೆಗೆಂದು ಟ್ರಕ್ ನಿಲ್ಲಿಸಿ ಇಳಿದಾಗ ಕಾಡಾನೆ ದಾಳಿ ನಡೆಸಿದೆ ಎಂದು ಹೇಳಲಾಗಿದೆ.

ಘಟನನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು- ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...