Friday, July 1, 2022

ತನ್ನ ಮುಂದೆ ಹುಚ್ಚಾಟ ನಡೆಸಿದ ವ್ಯಕ್ತಿಯನ್ನು ಅಟ್ಟಾಡಿಸಿದ ಕಾಡಾನೆ

ಚಾಮರಾಜನಗರ: ಕಾರಿನಿಂದ ಕೆಳಗಿಳಿದು ನಿಂತಿದ್ದ ಪ್ರಯಾಣಿಕನನ್ನು ಆನೆಯೊಂದು ಅಟ್ಟಾಡಿಸಿಕೊಂಡು ಬಂದ ಘಟನೆ ಬಂಡೀಪುರ ಅರಣ್ಯ ಪ್ರದೇಶದ ಮದ್ದೂರು ಚೆಕ್‌ಪೋಸ್ಟ್‌ನಲ್ಲಿ ನಡೆದಿದೆ.


ಕೇರಳ ರಸ್ತೆಯ ಅರಣ್ಯದ ಒಳಭಾಗದಲ್ಲಿ ಕಾರಿನಿಂದ ಕೆಳಗಿಳಿದು ಪ್ರಯಾಣಿಕರು ಫೋಟೋ ತೆಗೆಯುತ್ತಿದ್ದ ಈ ವೇಳೆ ಆನೆ ಅಟ್ಟಾಡಿಸಿಕೊಂಡು ಬಂದಿದೆ.

ಓರ್ವ ಪ್ರಯಾಣಿಕ ತನ್ನ ಪ್ರಾಣ ಉಳಿಸಿಕೊಳ್ಳಲು ಎದ್ದು ಬಿದ್ದು ಓಡಿ ಹೋಗಿ ಕಾರನ್ನು ಹತ್ತಿದ್ದಾರೆ. ಈ ದೃಶ್ಯವನ್ನು ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.

ವನ್ಯ ಜೀವಿ ಕಾಯ್ದೆ ಉಲ್ಲಂಘಿಸಿ ಕಾರಿನಿಂದ ಕೆಳಗಿಳಿಯದಂತೆ ಪ್ರಯಾಣಿಕರಿಗೆ ನಿರ್ಬಂಧ ಹೇರಲಾಗಿದೆ. ಕಾರು ನಿಲ್ಲಿಸಿದ ಪ್ರಯಾಣಿಕರಿಗೆ ಅರಣ್ಯ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಹಿಳೆಯರ ಸ್ವಾವಲಂಬಿ ಬದುಕಿಗೆ ಭಾಷ್ಯ ಬರೆದ ಉಡುಪಿಯ ಸವಿತಾ ಶೇಟ್

ಉಡುಪಿ: ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಉಡುಪಿಯ ಮಹಿಳೆಯೊಬ್ಬರು ಪ್ರೇರಣೆಯಾಗಿದ್ದಾರೆ. ಉಡುಪಿಯ ಒಳಕಾಡು ನಿವಾಸಿ ಸವಿತಾ ಶೇಟ್ ಎಂಬವರೇ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸ್ಪೂರ್ತಿದಾಯಕರಾಗಿದ್ದಾರೆ.ಇವರ ಗಂಡ ಉದ್ಯಮಿಯಾಗಿದ್ದು ಹಾಗೂ ಮಗ ಶಿಕ್ಷಕರಾಗಿ ಕೆಲಸ...

ಪುತ್ತೂರಿನಲ್ಲಿ ಸ್ವಿಫ್ಟ್ ಮತ್ತು ಓಮ್ನಿ ಕಾರು ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ

ಪುತ್ತೂರು: ಪುತ್ತೂರಿನ ಮುಂಡೂರು ಗ್ರಾಮದ ಪಂಜಳದಲ್ಲಿ ಸ್ವಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಹಲವು ಮಂದಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.ಗಾಯಗೊಂಡ ಓಮ್ನಿ ಮತ್ತು ಕಾರಿನಲ್ಲಿದ್ದವರನ್ನು ಪುತ್ತೂರಿನ...

ಮುಲ್ಕಿ: ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿರುವ ಕೃಷಿ ಗ್ರಾಮಗಳಿಗೆ DYFI ನಿಯೋಗ ಭೇಟಿ

ಮಂಗಳೂರು: ಭೂಸ್ವಾಧೀನದ ಉದ್ದೇಶ, ಪುನರ್ವಸತಿಯ ಕುರಿತಾಗಿ ಸ್ಪಷ್ಟ ಮಾಹಿತಿ ಒದಗಿಸದೆ ಸಾವಿರ ಎಕರೆ ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿರುವ ಮುಲ್ಕಿ ತಾಲೂಕಿನ ಕೃಷಿ ಪ್ರಧಾನ ಗ್ರಾಮಗಳಾದ ಬಳ್ಕುಂಜೆ, ಐಕಳ, ಕೊಲ್ಲೂರು, ಕರ್ನಿರೆ ಮೊದಲಾದ ಗ್ರಾಮಗಳಿಗೆ...