Connect with us

DAKSHINA KANNADA

ಕೊಡಗಿನಲ್ಲಿ ವಿದ್ಯುತ್‌ ತಂತಿಗೆ ಕಾಡಾನೆ ಸಾವು – ಕೆಪಿಟಿಸಿಎಲ್‌ ವಿರುದ್ದ ಮೊಕದ್ದಮೆಗೆ ಮುಂದಾದ ಅರಣ್ಯ ಇಲಾಖೆ..! ..!  

Published

on

ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಸಮೀಪದ ಎಸ್ಟೇಟ್‌ಗೆ ಆಗಮಿಸಿದ ಸುಮಾರು 30 ವರ್ಷದ ಆನೆ ಮಾರ್ಗದಲ್ಲಿ ಬಿದ್ದಿದ್ದ ವಿದ್ಯುತ್‌ ತಂತಿ ಸಂಪರ್ಕಿಸಿ ಜೀವ ಬಿಟ್ಟಿದೆ.

ಮಡಿಕೇರಿ : ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಸಮೀಪದ ಎಸ್ಟೇಟ್‌ಗೆ ಆಗಮಿಸಿದ ಸುಮಾರು 30 ವರ್ಷದ ಆನೆ ಮಾರ್ಗದಲ್ಲಿ ಬಿದ್ದಿದ್ದ ವಿದ್ಯುತ್‌ ತಂತಿ ಸಂಪರ್ಕಿಸಿ ಜೀವ ಬಿಟ್ಟಿದೆ.

ಮಡಿಕೇರಿ: ಕೊಡಗಿನಲ್ಲಿ ನಾಲ್ಕು ದಿನದ ಕಾಡಾನೆ ಗುಂಡೇಟಿಗೆ ಬಲಿಯಾದ ಘಟನೆ ಮಾಸುವ ಮುನ್ನವೇ ಭಾರೀ ಗಾತ್ರದ ಗಂಡಾನೆ ವಿದ್ಯುತ್‌ ಸಂಪರ್ಕಕ್ಕೆ ಸಿಲುಕಿ ದಾರುಣವಾಗಿ ಮೃತಪಟ್ಟಿದೆ.

ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಸಮೀಪದ ಎಸ್ಟೇಟ್‌ಗೆ ಆಗಮಿಸಿದ ಸುಮಾರು 30 ವರ್ಷದ ಆನೆ ಮಾರ್ಗದಲ್ಲಿ ಬಿದ್ದಿದ್ದ ವಿದ್ಯುತ್‌ ತಂತಿ ಸಂಪರ್ಕಿಸಿ ಜೀವ ಬಿಟ್ಟಿದೆ.

ಆನೆ ಸತ್ತಿರುವ ಮಾಹಿತಿ ತಿಳಿದು ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದು. ವೀರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶರಣಬಸಪ್ಪ ಹಾಗೂ ತಂಡ ಸ್ಥಳಕ್ಕೆ ಧಾವಿಸಿ ಆನೆ ಮಹಜರು ಕೈಗೊಂಡರು.

ವನ್ಯಜೀವಿ ಪಶು ವೈದ್ಯಾಧಿಕಾರಿಗಳ ತಂಡ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಅಂತ್ಯಕ್ರಿಯೆ ನಡೆಸಲಾಯಿತು.

ಗ್ರಾಮದ ಪ್ರವರ್ಧನ್‌ ಪೂಜಾರಿ ಎಂಬುವವರಿಗೆ ಸೇರಿದ ಎಸ್ಟೇಟ್‌ನಲ್ಲಿ ವಿದ್ಯುತ್‌ ತಂತಿ ಕಡಿದು ಬಿದ್ದಿತ್ತು.

ಇದನ್ನು ತೆಗೆದು ಎತ್ತರಿಸುವಂತೆ ಕೆಪಿಟಿಸಿಎಲ್‌ಗೆ ತಿಳಿಸಿದ್ದರೂ ಕ್ರಮ ಆಗಿರಲಿಲ್ಲ. ಈಗ ಆನೆ ಇದಕ್ಕೆ ಬಲಿಯಾಗಿದೆ ಎಂದು ಡಿಎಫ್‌ಒ ಶರಣಬಸಪ್ಪ ತಿಳಿಸಿದ್ದಾರೆ.

ಇದೀಗ ಕೆಪಿಟಿಸಿಎಲ್‌ ಅಧಿಕಾರಿಗಳ ವಿರುದ್ದ ಮೊಕದ್ದಮೆ ದಾಖಲಿಸಲು ಅರಣ್ಯ ಇಲಾಖೆ ಮುಂದಾಗಿದ್ದು. ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯಲಾಗುತ್ತಿದೆ ಎಂದು ಡಿಎಫ್‌ಒ ತಿಳಿಸಿದ್ದಾರೆ.

ಕೊಡಗಿನ ಎಸ್ಟೇಟ್‌ಗಳತ್ತ ಆಹಾರ ಅರಸಿ ಬರುವ ಕಾಡಾನೆಗಳು ಜೀವ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ.

ಕುಶಾಲನಗರ ಸಮೀಪದ ಎಸ್ಟೇಟ್‌ನಲ್ಲಿ ಗರ್ಭಿಣಿ ಆನೆಯನ್ನು ಗುಂಡಿಕ್ಕಿ ಕೊಂದಿದ್ದ ಪ್ರಕರಣ ಮೂರು ದಿನದ ಹಿಂದೆ ನಡೆದಿತ್ತು.

ಆ ಪ್ರಕರಣದಲ್ಲಿ ಎಸ್ಟೇಟ್‌ ಮಾಲೀಕರು ತಲೆಮರೆಸಿಕೊಂಡಿದ್ದು ಪತ್ತೆಗೆ ಅರಣ್ಯ ಇಲಾಖೆಯವರು ಕ್ರಮ ಕೈಗೊಂಡಿದ್ದಾರೆ.

ಕರ್ನಾಟಕದಲ್ಲಿ ಕಳೆದ ಹತ್ತು ವರ್ಷದಲ್ಲಿ 93 ಕಾಡಾನೆಗಳು ವಿದ್ಯುತ್‌ ಸಂಪರ್ಕಕ್ಕೆ ಸಿಲುಕಿ ಮೃತಪಟ್ಟಿವೆ ಎಂದು ಅರಣ‍್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

DAKSHINA KANNADA

ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…

Published

on

ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

Continue Reading

DAKSHINA KANNADA

ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!

Published

on

ನ್ಯೂಯಾರ್ಕ್‌ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್‌ಗಳನ್ನು ದಾಟಿ, ಹಂಪ್‌ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್‌ನ ಆನಂದ್ ಜಿಲ್ಲೆಯ ರೇಖಾಬೆನ್‌ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್‌ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.

 

ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.


ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್‌ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.

Continue Reading

DAKSHINA KANNADA

ದೆಹಲಿಯ ರಾಣಾ ಪ್ರತಾಪ್ ನಗರದ ಜಿನ ಬಸದಿ 24ತೀರ್ಥಂಕರ ಪಂಚ ಕಲ್ಯಾಣ; ಮೂಡುಬಿದಿರೆ ಸ್ವಾಮೀಜಿ ಭಾಗಿ

Published

on

ನವದೆಹಲಿ : ದೆಹಲಿಯ ರಾಣಾ ಪ್ರತಾಪ್ ನಗರ ದ ಜಿನ ಬಸದಿ 24ತೀರ್ಥಂಕರ ಪಂಚ ಕಲ್ಯಾಣವು ರಾಷ್ಟ್ರ ಸಂತ 108 ಉಪಾಧ್ಯಾಯ ಗುಪ್ತಿ ಸಾಗರ ಮುನಿ ರಾಜ್ ಮಾರ್ಗದರ್ಶನ ಪಾವನ ಸಾನ್ನಿಧ್ಯ ಸ್ವಸ್ತಿಶ್ರೀ ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯ ವರ್ಯ ಮಹಾ ಸ್ವಾಮೀಜಿ ಗೌರವ ಉಪಸ್ಥಿತಿಯಲ್ಲಿ ಧಾರ್ಮಿಕ ವಿಧಿವಿಧಾನಗಳು ಜರುಗಿತು.

3 ಅಡಿ ಎತ್ತರ ದ ಪಂಚಲೋಹದ ಇಪ್ಪತ್ತನಾಲ್ಕು ತೀರ್ಥಂಕರ ಹಾಗೂ ವಿವಿಧ ಜಿನ ಬಿಂಬಗಳ ಸ್ಥಾಪನೆ ಬೆಳಿಗ್ಗೆ 7.30 ರಿಂದ 9.00ರ ವರೆಗೆ ಮೋಕ್ಷ ಕಲ್ಯಾಣ ಪೂಜೆ, ದೆಹಲಿ ವಿಶ್ವವಿದ್ಯಾಲಯ ಸ್ಪೋರ್ಟ್ಸ್ ಕ್ಲಬ್ ಸಭಾಂಗಣ ಹಾಗೂ ಮೆರವಣಿಗೆ ಮೂಲಕ ಮೂರ್ತಿ 3 ಕಿ.ಮೀ ದೂರದ ಬಸದಿಗೆ ತೆರಳಿ ಬೆಳಿಗ್ಗೆ 11.00ರಿಂದ ಮಧ್ಯಾಹ್ನ 1 ಗಂಟೆ ವರೆಗೂ ಮೂರ್ತಿ ಸ್ಥಾಪನೆ ದೆಹಲಿ ರಾಣಾ ಪತ್ ನಗರ ಬಸದಿಯಲ್ಲಿ ಜರುಗಿತು.


ಬಳಿಕ ಧಾರ್ಮಿಕ ಸಭೆಯಲ್ಲಿ ಧರ್ಮೋಪದೇಶ ನೀಡಿದ ಮೂಡುಬಿದಿರೆ ಸ್ವಾಮೀಜಿ, ಜಿನ ಬಿಂಬ ಸ್ಥಾಪನೆಯಿಂದ ಆತ್ಮ ಕಲ್ಯಾಣ ಹಾಗೂ ಪರ ಕಲ್ಯಾಣವಾಗುವುದು ಜನ ಸಂಸ್ಕೃತಿ ಸಂಸ್ಕಾರ ಧರ್ಮದಿಂದ ಸಾಧ್ಯ ಎಂದು ನುಡಿದರು. ಈ ಸಂದರ್ಭ ಸುಂದರ ಜಿನಾಲಯ ಸ್ಥಾಪನೆಗೆ ಕಾರಣರಾದ ದಾನಿಗಳನ್ನು ಗೌರವಿಸಲಾಯಿತು.


ರಾಷ್ಟ್ರ ಸಂತ 108 ಗುಪ್ತಿ ಸಾಗರ ಮುನಿ ರಾಜ್ ಮೂಡು ಬಿದಿರೆ ಶ್ರೀಗಳವರಿಗೆ ಶಾಸ್ತ್ರ ಸ್ಮರಣಿಕೆ ನೀಡಿದರು. ಬಳಿಕ ದೆಹಲಿ ಗ್ರೀನ್ ಪಾರ್ಕ್ ಬಸದಿಯಲ್ಲಿ ಉಪಸ್ಥಿತರಿದ್ದ 108 ರಾಷ್ಟ್ರ ಸಂತ ಆಚಾರ್ಯ ಪ್ರಾಗ್ಯ ಸಾಗರ ಮುನಿಮಹಾರಾಜ್, ಮೂಡುಬಿದಿರೆ ಶ್ರೀಗಳಿಗೆ ಗೌರವಾನ್ವಿತ ಪ್ರಧಾನಮಂತ್ರಿಗಳಿಂದ ಭಗವಾನ್ ಮಹಾವೀರ ಜನ್ಮ ಕಲ್ಯಾಣದಂದು ನಿರ್ವಾಣ ವರ್ಷ 2550ರ ಅಂಗವಾಗಿ ಬಿಡುಗಡೆಗೊಳಿಸಿದ ರೂ. 100 ರ ನಾಣ್ಯ ಹಾಗೂ ಅಂಚೆ ಇಲಾಖೆ ಬಿಡುಗಡೆಗೊಳಿಸಿದ ಪಾವಪುರಿ ಸಿದ್ದ ಕ್ಷೇತ್ರ ಫಸ್ಟ್ ಡೇ ಕವರ್ ನೀಡಿ ಹರಸಿ ಆಶೀರ್ವಾದ ಮಾಡಿದರು.

ಇದನ್ನೂ ಓದಿ : ಖ್ಯಾತ ಕಿರುತೆರೆ ನಟ ಗುರುಚರಣ್ ಸಿಂಗ್ ನಾಪತ್ತೆ!

ಈ ಸಂದರ್ಭ ಮೂಡುಬಿದಿರೆ ಸ್ವಾಮೀಜಿ ಈ ವರ್ಷ ಪೂರ್ತಿ ಆಚಾರ್ಯ ಶಾಂತಿ ಸಾಗರ ಆಚಾರ್ಯ ಶತಾಬ್ದಿ ವರ್ಷ ಹಾಗೂ ಭಗವಾನ್ ಮಹಾವೀರ ಸ್ವಾಮಿ ನಿರ್ವಾಣ ಕಲ್ಯಾಣ ವಿವಿಧೆಡೆ ಆಚರಿಸಲು ಸಂಕಲ್ಪ ಮಾಡಿದರು.

Continue Reading

LATEST NEWS

Trending