Connect with us

LATEST NEWS

ಧರ್ಮೇಂದ್ರ ಪ್ರಧಾನ್ ಭೇಟಿಯಾಗದಿದ್ದರೆ ರಾಜೀನಾಮೆ ಖಂಡಿತ: ಹಗ್ಗಜಗ್ಗಾಟಕ್ಕೆ ಇಂದು ರಾತ್ರಿಯೇ ತೆರೆ- ಅಂತಿಮ ನಿರ್ಧಾರ ಘೋಷಿಸಿದ ಶೆಟ್ಟರ್..!

Published

on

ಧರ್ಮೇಂದ್ರ ಪ್ರಧಾನ್ ಭೇಟಿಯಾಗದಿದ್ದರೆ ರಾಜೀನಾಮೆಗೆ ಸಿದ್ಧ, ಹಗ್ಗಜಗ್ಗಾಟಕ್ಕೆ ಇಂದು ರಾತ್ರಿಗೆ ತೆರೆ ಬೀಳಲಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್​​ ಘೋಷಣೆ ಮಾಡಿದ್ದಾರೆ.
ಹುಬ್ಬಳ್ಳಿ: ಧರ್ಮೇಂದ್ರ ಪ್ರಧಾನ್ ಭೇಟಿಯಾಗದಿದ್ದರೆ ರಾಜೀನಾಮೆಗೆ ಸಿದ್ಧ, ಹಗ್ಗಜಗ್ಗಾಟಕ್ಕೆ ಇಂದು ರಾತ್ರಿಗೆ ತೆರೆ ಬೀಳಲಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್​​ ಘೋಷಣೆ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ನಾಯಕರ ಜೊತೆ ಇಂದು ನಡೆಯುವ ಚರ್ಚೆಯೇ ಅಂತಿಮ.

17 ಅಥವಾ 18 ರಂದು ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದರು.

ಬೆಳಗ್ಗೆ ಬೆಂಬಲಿಗರ ಸಭೆ ಕರೆದು ಚರ್ಚೆ ನಡೆಸಿದ್ದೆ. ನೀವು ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧರೆಂದು ಹೇಳಿದ್ದಾರೆ.

ಹೀಗಾಗಿ ನಾನು ನಿರ್ಧಾರ ಕೈಗೊಳ್ಳುವ ಹಂತದಲ್ಲಿದ್ದೇನೆ. ನನಗೆ ಅವಕಾಶ ನೀಡಿದ್ರೆ ಸ್ಪರ್ಧಿಸುತ್ತೇನೆ, ಕುಟುಂಬದವರು ಸ್ಪರ್ಧಿಸಲ್ಲ.

ಟಿಕೆಟ್‌ ಹೊರತುಪಡಿಸಿ ಬೇರೆ ಆಫರ್‌ಗೆ ನಾನು ಒಪ್ಪುವುದಿಲ್ಲ. ಕ್ಷೇತ್ರದ ಶಾಸಕನಾಗಿ ಸೇವೆ ಸಲ್ಲಿಸಲು ಅವಕಾಶ ನೀಡಲು ಕೇಳಿದ್ದೇನೆ.

ಬೇರೆ ಪಕ್ಷದವರು ಯಾರೂ ನನ್ನನ್ನು ಸಂಪರ್ಕಿಸಿಲ್ಲ. ಹಗ್ಗಜಗ್ಗಾಟಕ್ಕೆ ಇಂದು ರಾತ್ರಿಗೆ ತೆರೆ ಬೀಳಲಿದೆ ಎಂದು ಸ್ಪಷ್ಟಪಡಿಸಿದರು.

ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಸೇರಿದ 16 ಸದಸ್ಯರು ಹೈಕಮಾಂಡ್ ನಡೆ ಖಂಡಿಸಿ ರಾಜೀನಾಮೆ ಸಲ್ಲಿಸಿದ್ದರು.

ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಟಿಕೆಟ್ ನಿರಾಕರಣೆ ಹಿನ್ನೆಲೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್ ಪಕ್ಷವು ಅವರಿಗೆ ಟಿಕೆಟ್ ಘೋಷಿಸಿದ್ದು, ಅವರ ಗೌರವ ಮತ್ತು ಘನತೆಯನ್ನು ಉಳಿಸಿಕೊಳ್ಳಲಾಗುವುದು ಎಂದು ಭರವಸೆ ನೀಡಿದೆ.

ಬಿಜೆಪಿ ಕಚೇರಿ ಬಳಿ ಅವರ ಪಾರ್ಥಿವ ಶರೀರವನ್ನು ಕೊಂಡೊಯ್ಯದಂತೆ ತಮ್ಮ ಬೆಂಬಲಿಗರಿಗೆ ಹೇಳುವುದಾಗಿ ಸವದಿ ಹೇಳಿದ್ದಾರೆ. ಈ ಬೆಳವಣಿಗೆ ಕರ್ನಾಟಕ ಬಿಜೆಪಿ ಘಟಕಕ್ಕೆ ಹಿನ್ನಡೆಯಾಗಿದೆ.

ಶೆಟ್ಟರ್ ಅವರನ್ನು ಬಿಜೆಪಿ ಕಳೆದುಕೊಂಡರೆ, ಅದು ಪಕ್ಷದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಕಾಂಗ್ರೆಸ್ ಕೂಡ ಈ ಬೆಳವಣಿಗಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ.

LATEST NEWS

ಸಾ*ವಿನಲ್ಲಿ ಒಂದಾದ ತಂದೆ ಮಗ.. ತಂದೆಯ ಅಗಲಿಕೆ ನೋವಲ್ಲೇ ಅಸುನೀಗಿದ ಮಗ..!

Published

on

ಕೊಪ್ಪಳ: ಒಂದೇ ದಿನದಲ್ಲಿ ತಂದೆ ಮಗ ಇಬ್ಬರೂ ಸಾವನ್ನಪ್ಪಿದ ಘಟನೆ ಕೊಪ್ಪಳದ ಬಂಡಿಹರ್ಲಾಪುರಾದಲ್ಲಿ ನಡೆದಿದೆ. ತಂದೆಯ ಸಾವಿನ ನೋವಿನಲ್ಲಿ ಮಗ ಕೂಡಾ ಸಾವನ್ನಪ್ಪಿದ್ದಾರೆ. ಮೃ*ತರನ್ನು ರಾಮರೆಡ್ಡಿ (70) ಮತ್ತು ಆದಿನಾರಾಯಣ ರೆಡ್ಡಿ (42) ಎಂದು ಗುರುತಿಸಲಾಗಿದೆ.

death

ಮುಂದೆ ಓದಿ..; ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀರ

ರಾಮರೆಡ್ಡಿ ಅನಾರೋಗ್ಯದಿಂದ ಬಳಲುತ್ತಿದ್ದು, ನಿನ್ನೆ(ಎ.28) ಬೆಳಿಗ್ಗೆ ಮೃತಪಟ್ಟಿದ್ದರು. ಅದೇ ದಿನ ರಾತ್ರಿ 8.30ಕ್ಕೆ ಮಗ ಆದಿನಾರಾಯಣ ರೆಡ್ಡಿ ಕೂಡ ಪ್ರಾಣ ಬಿಟ್ಟಿದ್ದಾರೆ. ಆದಿನಾರಾಯಣ ತಂದೆಯನ್ನು ಬಹಳ ಪ್ರೀತಿಸುತ್ತಿದ್ದು, ತಂದೆಯ ಸಾವಿನ ದುಃಖದಲ್ಲಿ ಕುಳಿತಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಆದಿನಾರಾಯಣ ರೆಡ್ಡಿ, ಪತ್ನಿ ಹಾಗೂ ತನ್ನೆರಡು ಮಕ್ಕಳನ್ನು ಅಗಲಿದ್ದಾರೆ.

Continue Reading

DAKSHINA KANNADA

ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀ*ರ

Published

on

ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್‌ ಹಾನಿಗೊಂಡಿದೆ.

ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

accident

ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.

 

Continue Reading

LATEST NEWS

60ನೇ ವಯಸ್ಸಿಗೆ “ಮಿಸ್ ಯುನಿವರ್ಸ್” ಕಿರೀಟ ಮುಡಿಗೇರಿಸಿಕೊಂಡ ಈಕೆ ಯಾರು ಗೊತ್ತಾ? ಈಕೆಯ ಸೌಂದರ್ಯಕ್ಕೆ ಬೆರಗಾದ್ರು ಜನ..!!

Published

on

ಹೆಚ್ಚಾಗಿ ಮಿಸ್​ ವರ್ಲ್ಡ್​​​, ಮಿಸ್​​ ಯುನಿವರ್ಸ್ ಇನ್ನೂ ಮುಂತಾದ ಸೌಂದರ್ಯ ಸ್ಪರ್ಧೆಯಲ್ಲಿ ಹದಿಹರೆಯದ ಸುಂದರಿಯರೇ ಭಾಗವಹಿಸುತ್ತಾರೆ. ಆದರೆ ಅಲೆಜಾಂಡ್ರಾ ಮಾರಿಸಾ ರೋಡ್ರಿಗಸ್ ಎಂಬ ಮಹಿಳೆ ತನ್ನ 60ನೇ ವಯಸ್ಸಿನಲ್ಲಿ ಮಿಸ್ ಯುನಿವರ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾಳೆ.

ವೃತ್ತಿಯಲ್ಲಿ ವಕೀಲ ಮತ್ತು ಪತ್ರಕರ್ತೆಯಾಗಿರೋ ಅಲೆಜಾಂಡ್ರಾ ಅವರು 60ನೇ ವಯಸ್ಸಿನಲ್ಲಿ ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ ಮೊದಲ ಮಹಿಳೆ ಎಂಬ ದಾಖಲೆ ಪಡೆದುಕೊಂಡಿದ್ದಾರೆ. ಅರ್ಜೆಂಟೀನಾದ ಬ್ಯೂನಸ್ ಐರಿಸ್​​ನ ರಾಜಧಾನಿ ಲಾ ಪ್ಲಾಟಾದಲ್ಲಿ ನಡೆದ 2024ರ ಮಿಸ್‌ ಯೂನಿವರ್ಸ್ ಬ್ಯೂನಸ್ ಐರಿಸ್ ಸ್ಪರ್ಧೆಯಲ್ಲಿ ಗೆದ್ದು ಇಡೀ ಜಗತ್ತೆ ತಿರುಗಿ ನೋಡುವಂತೆ ಮಾಡಿದ್ದಾಳೆ.

ಇನ್ನೂ 60ನೇ ವಯಸ್ಸಿನಲ್ಲಿಯೂ ಈಕೆಯ ಸೌಂದರ್ಯ ಕಂಡು ನೆಟ್ಟಿಗರು ಫುಲ್​ ಶಾಕ್​ ಆಗಿದ್ದಾರೆ. ಅನೇಕರು ಆಕೆ ಮಿಸ್​​ ಯುನಿವರ್ಸ್​​ ಕಿರೀಟ ಪಡೆದುಕೊಂಡಿರೋದಕ್ಕೆ ಶುಭಾಶಯ ತಿಳಿಸುತ್ತಿದ್ದು ಇನ್ನೂ ಕೆಲವರು ಕಮೆಂಟ್ಸ್‌ಗಳನ್ನು ಹಾಕುತ್ತಿದ್ದಾರೆ.

Continue Reading

LATEST NEWS

Trending