bangalore
ಚುನಾವಣೆಗೆ ಸ್ಪರ್ಧಿಸ್ತಾರಾ ಸತ್ಯಜಿತ್ ಸುರತ್ಕಲ್…?
Published
8 months agoon
By
Adminಮಂಗಳೂರು : ಚುನಾವಣೆಯಲ್ಲಿ ತನ್ನ ಮಗನಿಗೆ ಹಾವೇರಿಯಿಂದ ಟಿಕೆಟ್ ಕೊಟ್ಟಿಲ್ಲ ಎಂದು ಆಕ್ರೋಶಗೊಂಡಿರೋ ಕೆ.ಎಸ್.ಈಶ್ವರಪ್ಪ ಪಕ್ಷೇತರರಾಗಿ ಶಿವಮೊಗ್ಗದಿಂದ ಸ್ಪರ್ಧಿಸೋದಿಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ಅವರಿಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್ ವಂಚಿತ ಜಾಗರಣ ವೇದಿಕೆಯ ಸತ್ಯಜಿತ್ ಸುರತ್ಕಲ್ ಅವರು ಬೆಂಬಲ ನೀಡಿದ್ದಾರೆ. ಈಶ್ವರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ ಸತ್ಯಜಿತ್ ಸುರತ್ಕಲ್ ಈಶ್ವರಪ್ಪ ಅವರ ಬೆಂಬಲಕ್ಕೆ ತಾವು ಇರುವುದಾಗಿ ಬರವಸೆ ನೀಡಿದ್ದಾರೆ. ಟಿಕೆಟ್ ಕೈ ತಪ್ಪಿದ್ದಕ್ಕಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಆಕ್ರೋಶಗೊಂಡಿರುವ ಈಶ್ವರಪ್ಪ ಅವರ ಮಗ ಬಿ.ವೈ. ರಾಘವೇಂದ್ರ ಅವರನ್ನು ಸೋಲಿಸುವ ಪಣ ತೊಟ್ಟಿದ್ದಾರೆ.
ಸತ್ಯಜಿತ್ ಅವರಿಗೆ ಟಿಕೆಟ್ ತಪ್ಪಿಸಿದ್ದು ಯಾರು ?
ಸತ್ಯಜಿತ್ ಸುರತ್ಕಲ್ ಒಂದು ಕಾಲದಲ್ಲಿ ಹಿಂದುತ್ವಕ್ಕಾಗಿ ಹೋರಾಟ ನಡೆಸಿ, ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೆ ಇಡೀ ರಾಜ್ಯದಲ್ಲೇ ಹೆಸರು ಗಳಿಸಿದ್ದ ನಾಯಕ. ಇಂದಿಗೂ ಜಾಗರಣ ವೇದಿಕೆಯ ಕಾರ್ಯಕರ್ತರ ಸತ್ಯಣ್ಣನಾಗಿ ಹಿಂದುತ್ವದ ಕೆಲಸದಲ್ಲಿ ತೊಡಗಿಸಿಕೊಂಡವರು. ಆದ್ರೆ ಅವರ ರಾಜಕೀಯ ಎಂಟ್ರಿಗೆ ಅವರದೇ ನಾಯಕರು ಅಡ್ಡಿಯಾಗಿದ್ದಾರೆ ಅನ್ನೋ ಆಕ್ರೋಶ ಅವರಲ್ಲಿದೆ. ಪ್ರಮುಖವಾಗಿ ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಸತ್ಯಜಿತ್ ಸುರತ್ಕಲ್ ಅವರಿಗೆ ಕೋಪ ಇದೆ. 2014 ರಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೊನೆ ತನಕ ಹೆಸರಿದ್ದ ಸತ್ಯಜಿತ್ ಅವರ ಹೆಸರು ತೆಗೆದು, ನಳಿನ್ ಹೆಸರು ಸೂಚಿಸಿದ್ದೇ ಕಲ್ಲಡ್ಕ ಪ್ರಭಾಕರ ಭಟ್ ಅನ್ನೋದು ಸತ್ಯಜಿತ್ ಆರೋಪ. ಬಳಿಕ ಹಲವು ಬಾರಿ ಚುನಾವಣೆಗೆ ಟಿಕೇಟ್ ಆಕಾಂಕ್ಷಿ ಅಂತ ಹೇಳಿದ್ರೂ ಪಕ್ಷ ಇವರನ್ನು ಕಡೆಗಣಿಸಿತ್ತು. ಈ ಬಾರಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ನನಗೆ ಟಿಕೆಟ್ ಕೊಡಬೇಕು ಅಂತ ಬಹಿರಂಗವಾಗಿಯೇ ಬೇಡಿಕೆ ಇಟ್ಟಿದ್ರು. ಆದ್ರೆ ಈ ಬಾರಿಯೂ ಇವರಿಗೆ ಟಿಕೆಟ್ ಕೈ ತಪ್ಪಿದ್ದು, ಸದ್ಯಕ್ಕೆ ಇವರ ಮುಂದಿನ ನಡೆಯ ಬಗ್ಗೆ ಕುತೂಹಲ ಮೂಡಿಸಿದೆ.
ಸಿಕ್ಕ ಅವಕಾಶ ಕೈ ಚೆಲ್ಲಿದ್ದ ಸತ್ಯಜಿತ್ ಸುರತ್ಕಲ್…!
ಹುಬ್ಬಳಿಯ ಈದ್ಗಾ ಮೈದಾನದ ಹೋರಾಟ, ಅಯೋಧ್ಯೆಯ ರಾಮ ಜನ್ಮಭೂಮಿ ಹೋರಾಟ, ಲವ್ ಜಿಹಾದ್ ವಿರುದ್ಧದ ಹೋರಾಟ, ಹೀಗೇ ಹಿಂದುತ್ವಕ್ಕಾಗಿ ದೊಡ್ಡ ಹೋರಾಟವನ್ನು ಕಳೆದ 35 ವರ್ಷದಿಂದ ಮಾಡಿಕೊಂಡು ಬಂದಿದ್ದವರು ಸತ್ಯಜಿತ್ ಸುರತ್ಕಲ್. 1994 ರಲ್ಲಿ ಯುವ ನಾಯಕನಾಗಿದ್ದಾಗ ಸುರತ್ಕಲ್ ( ಇಂದಿನ ಮಂಗಳೂರು ಉತ್ತರ ) ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸೋ ಅವಕಾಶ ಸಿಕ್ಕಿತ್ತಾದ್ರೂ ಅದನ್ನ ನಿರಾಕರಿಸಿ ಸಂಘಟನೆಯಲ್ಲೇ ಸೇವೆ ಸಲ್ಲಿಸೋದಾಗಿ ಹೇಳಿದ್ದರು. ತನ್ನ ಬದಲು ಕುಂಬ್ಳೆ ಸುಂದರ್ ರಾವ್ ಅವರಿಗೆ ಅವಕಾಶ ಕಲ್ಪಿಸಿ ಅವರನ್ನು ಗೆಲ್ಲಿಸಿ ಶಾಸಕರನ್ನಾಗಿ ಮಾಡಿದ್ರು. ಆದ್ರೆ ಆಮೇಲೆ ಅಂತಹ ಅವಕಾಶ ಸತ್ಯಜಿತ್ ಸುರತ್ಕಲ್ ಅವರಿಗೆ ಸಿಕ್ಕಲೇ ಇಲ್ಲ.
ಈ ಬಾರಿಯೂ ಕೈ ತಪ್ಪಿದ ಟಿಕೆಟ್…!
ಈ ಬಾರಿ ಜಿಲ್ಲೆಯಲ್ಲಿ ಓಡಾಡಿ ತನ್ನ ಕಾರ್ಯಕರ್ತರನ್ನು ಸಂಘಟಿಸಿ ಹಲವು ಸಭೆಗಳನ್ನು ನಡೆಸಿದ ಸತ್ಯಜಿತ್ ಸುರತ್ಕಲ್ ಪಕ್ಷದ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು. ತನಗೆ ಪಕ್ಷ ಹಾಗೂ ಸಂಘ ಪರಿವಾರ ಅನ್ಯಾಯ ಮಾಡಿದೆ ಅಂತ ಕಾರ್ಯಕರ್ತರ ಮುಂದೆ ಬೇಸರ ವ್ಯಕ್ತಪಡಿಸಿದ್ದರು. ‘ನನಗೆ ಟಿಕೆಟ್ ಯಾಕೆ ಕೊಡುವುದಿಲ್ಲ ಅಂತ ಕೇಳಿದ ಪ್ರಶ್ನೆಗೆ ನನಗೆ ಈ ವರೆಗೂ ಉತ್ತರ ಸಿಕ್ಕಿಲ್ಲ’ ಎಂದು ಹೇಳುವ ಮೂಲಕ ಈ ಬಾರಿ ಟಿಕೆಟ್ ನನಗೆ ಕೊಡಲೇ ಬೇಕು ಎಂಬ ಬೇಡಿಕೆ ಇಟ್ಟಿದ್ರು. ಆದ್ರೆ ಭಾರತೀಯ ಜನತಾ ಪಕ್ಷ ಇವರ ಯಾವ ಮಾತಿಗೂ ಜಗ್ಗದೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಟಿಕೇಟ್ ನೀಡಿದೆ.
ಈಶ್ವರಪ್ಪ ಭೇಟಿಯಿಂದ ಸತ್ಯಜಿತ್ ಮುಂದಿನ ನಡೆಯ ಬಗ್ಗೆ ಕುತೂಹಲ..!
ಟಿಕೆಟ್ ಕೈತಪ್ಪಿದ ನೋವಿನಲ್ಲಿರುವ ಸತ್ಯಜಿತ್ ಸುರತ್ಕಲ್ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹಾಗಂತ ಅಸಮಾಧಾನವನ್ನು ಶಿವಮೊಗ್ಗದಲ್ಲಿ ಈಶ್ವರಪ್ಪ ಅವರಿಗೆ ಬೆಂಬಲ ಸೂಚಿಸಿ ತೋರಿಸಿದ್ದಾರೆ. ಈಶ್ವರಪ್ಪ ಅಂತಹ ನಾಯಕರನ್ನು ಬಿಜೆಪಿ ತುಳಿಯುತ್ತಿದೆ ಎಂದು ಮಾದ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ. ನನ್ನ ಜೊತೆ ಕಾರ್ಯಕರ್ತ ಪಡೆ ಇದ್ದು ನನ್ನ ಸಹಕಾರ ನಿಮಗೆ ಇದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಬಿಜೆಪಿಗೆ ಸಡ್ಡು ಹೊಡೆದಿದ್ದಾರೆ. ಸತ್ಯಜಿತ್ ಸುರತ್ಕಲ್ ಅವರ ಈ ನಡೆ ಸಾಕಷ್ಟು ಕುತೂಹಲ ಕೆರಳಿಸಿದ್ದು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧೆ ಮಾಡ್ತಾರಾ ಅನ್ನೋ ಸಂಶಯ ಮೂಡಿದೆ.
You may like
bangalore
ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?
Published
14 hours agoon
21/11/2024By
NEWS DESK3ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.
ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.
ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.
bangalore
ಮಂಜುಮ್ಮೆಲ್ ಬಾಯ್ಸ್ ಸಿನಿಮಾ ರೀತಿಯ ಘಟನೆ; ಸೆಲ್ಫಿ ಹುಚ್ಚಿಗೆ ಬಲಿಯಾಗಬೇಕಿದ್ದ ಯುವತಿ ರೋಚಕ ಪಾರು !
Published
4 weeks agoon
28/10/2024ಕೊಚ್ಚಿಯಿಂದ ಹತ್ತು ಜನ ಸ್ನೇಹಿತರು ಕೊಡೈಕೆನಾಲ್‌ಗೆ ಹೋಗುತ್ತಾರೆ. ಕಮಲ್ ಹಾಸನ್ ಅಭಿನಯದ ಗುಣ ಚಿತ್ರದಲ್ಲಿನ ಗುಹೆಗಳನ್ನು ನೋಡಲೆಂದು ತೆರಳುತ್ತಾರೆ. ನಿರ್ಬಂಧಿತ ಪ್ರದೇಶ ಎಂದು ಗೊತ್ತಿದ್ದರೂ ಆಳವಾದ ಗುಹೆಗಳನ್ನು ಪ್ರವೇಶಿಸುತ್ತಾರೆ. ಆದರೆ, ಸ್ನೇಹಿತನೊಬ್ಬ ಆಕಸ್ಮಿಕವಾಗಿ ಆಳವಾದ ಕಣಿವೆಯಲ್ಲಿ ಬೀಳುತ್ತಾನೆ. ಉಳಿದ ಸ್ನೇಹಿತರು ಅವನನ್ನು ಹೇಗೆ ಹೊರಗೆ ಕರೆತಂದರು ಎಂಬುದೇ ಮಂಜುಮ್ಮೆಲ್ ಬಾಯ್ಸ್ ಸಿನಿಮಾದ ಕತೆ.
ನಿನ್ನೆ (ಅ.27) ತುಮಕೂರು ನಗರದ ಸಮೀಪದ ಮಂದಾರಗಿರಿ ಬೆಟ್ಟದ ತಪ್ಪಲಿನಲ್ಲಿರುವ ಮೈದಾಳ ಕೆರೆ ಕೋಡಿಯಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋದ ವಿದ್ಯಾರ್ಥಿನಿ ಹಂಸ (20) ಕೆಳಕ್ಕೆ ಬಿದ್ದು ಕಾಣೆಯಾಗಿದ್ದಳು. ಸಂಜೆಯಾದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅಪಾಯಕ್ಕೆ ಸಿಲುಕಿರುವ ಸಾಧ್ಯತೆಯಿದೆ ಎನ್ನಲಾಗಿತ್ತು. ಅಲ್ಲದೆ, ಒಂದು ಹಂತದಲ್ಲಿ ಹಂಸ ಸತ್ತೇ ಹೋಗಿದ್ದಾಳೆ ಎಂದು ಭಾವಿಸಲಾಗಿತ್ತು. ಆದರೆ, ಅದೃಷ್ಟವಶಾತ್ ಹಂಸ ಬದುಕಿದ್ದಾಳೆ. ಪೊಟರೆಯಲ್ಲಿ ಸಿಲುಕಿಕೊಂಡಿದ್ದ ಆಕೆಯನ್ನು ಇದೀಗ ರಕ್ಷಣೆ ಮಾಡಲಾಗಿದೆ.
ಗುಬ್ಬಿ ತಾಲೂಕಿನ ಶಿವಪುರದ ಸೋಮನಾಥ್ ಎಂಬುವವರ ಪುತ್ರಿ ಹಂಸ ಸ್ನೇಹಿತರೊಂದಿಗೆ ಮೈದಾಳ ಕೆರೆ ನೋಡಲು ತೆರಳಿದ್ದರು. ಈ ವೇಳೆ ಕೋಡಿಯಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಕಾಲು ಜಾರಿ ಬಿದ್ದಿದ್ದರು. ನೀರಿನಲ್ಲಿ ಜಾರಿ ಕಲ್ಲಿನ ಪೊಟರೆಯಲ್ಲಿ ಸಿಲುಕಿದ್ದರು.
bangalore
ಅತ್ತಿಗೆ ಮೇಲೆ ಸ್ನೇಹಿತನ ಕಣ್ಣು ; ವಾರ್ನ್ ಮಾಡಿದ್ದಕ್ಕೆ ಬರ್ಬರ ಹ*ತ್ಯೆ
Published
4 weeks agoon
27/10/2024ಮಂಗಳೂರು/ಬೆಂಗಳುರು : ನಿನ್ನೆ (ಅ.26) ತಡರಾತ್ರಿ ಸುಲ್ತಾನ್ ತಿಪ್ಪಸಂದ್ರದ ಅಮ್ಜಾದ್ ಎಂಬಾತ ರೋಹಿದ್ ಅಲಿಯಾಸ್ ಅರ್ಬಾಜ್ನನ್ನು ಕೊ*ಲೆ ಮಾಡಿರುವ ಘಟನೆ ಜಮಾಲ್ ಷಾ ನಗರದಲ್ಲಿ ನಡೆದಿದೆ.
ರೋಹಿದ್ ಅಲಿಯಾಸ್ ಅರ್ಬಾಜ್(26) ಮೃ*ತ ವ್ಯಕ್ತಿ.
ಘಟನೆ ಹಿನ್ನಲೆ :
ರೋಹಿದ್ ಮತ್ತು ಅಮ್ಜಾದ್ ದೂರದ ಸಂಬಂಧಿಗಳು ಮತ್ತು ಸ್ನೇಹಿತರಾಗಿದ್ದರು. ಹೀಗಿರುವಾಗ ಅಮ್ಜಾದ್ ಆಗಾಗ ರೋಹಿದ್ ಮನೆಗೆ ಬರುತ್ತಿದ್ದ. ಈ ವೇಳೆ ರೋಹಿದ್ ಅಣ್ಣನ ಹೆಂಡತಿ ಅಂದರೆ ಅತ್ತಿಗೆ ಮೇಲೆ ಕಣ್ಣು ಹಾಕಿದ್ದಾನೆ. ರೋಹಿದ್‌ಗೆ ತಿಳಿಯದಂತೆ ತನ್ನ ಅತ್ತಿಗೆ ಮೊಬೈಲ್ ನಂಬರ್ ಪಡೆದುಕೊಂಡು ಆಗ್ಗಾಗ ಫೋನ್ ಹಾಗೂ ವಿಡಿಯೋ ಕಾಲ್ ಮಾಡಿ ರೋಹಿದ್ ಅತ್ತಿಗೆಗೆ ಪಿಡಿಸುತ್ತಿದ್ದ ವಿಷಯ ತಿಳಿದ ರೋಹಿದ್ ಮತ್ತು ಸಂಬಂಧಿಕರು ಕಳೆದ ಎರಡು ತಿಂಗಳ ಹಿಂದೆ ಅಮ್ಜಾದ್ ಮನೆ ಬಳಿ ಹೋಗಿ ಗಲಾಟೆ ಮಾಡಿ ಎಚ್ಚರಿಕೆ ಕೊಟ್ಟು ಬಂದಿದ್ದರು.
ನಿನ್ನೆ (ಅ.26) ಬೆಂಗಳೂರಿಗೆ ಕೆಲಸದ ಮೇಲೆ ಹೋಗಿದ್ದ ರೋಹಿದ್ ರಾತ್ರಿ ವಾಸಪ್ ಬರುತ್ತಿದ್ದಂತೆ ‘ನಿನ್ನ ಜೊತೆಗೆ ಮಾತನಾಡಬೇಕು ಬಾ’ ಎಂದು ಅಮ್ಜಾದ್ ಜಮಾಲ್ ಷಾ ನಗರದ ಹೊರಗೆ ಕರೆದಿದ್ದಾನೆ. ಅಮ್ಜಾದ್ ಕರೆದ ಜಾಗಕ್ಕೆ ರೋಹಿದ್ ಹೋಗಿದ್ದಾನೆ. ಈ ವೇಳೆ ಜಗಳ ತೆಗೆದು ರೋಹಿದ್ ಎದೆಗೆ ಚಾಕು*ವಿನಿಂದ ಇ*ರಿದು ಅಲ್ಲಿಂದ ಅಮ್ಜಾದ್ ಪರಾರಿಯಾಗಿದ್ದಾನೆ.
ಆರೋಪಿ ಬಂಧನ :
ಇನ್ನು ವಿಷಯ ತಿಳಿಯುತ್ತಿದ್ದಂತೆ ಕೋಲಾರ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಕ್ಷಿಪ್ರಕಾರ್ಯಾಚರಣೆ ನಡೆಸಿ ಕೊ*ಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಅಮ್ಜದ್ನನ್ನು ಬಂಧಿಸಿದ್ದಾರೆ. ಹೆಚ್ಚಿನ ಮಾಹಿತಿಯನ್ನು ಕಲೆ*ಹಾಕುತ್ತಿದ್ದಾರೆ. ಇತ್ತ ಮಾಡಿದ ತಪ್ಪನ್ನು ಪ್ರಶ್ನೆ ಮಾಡಿದ್ದಕ್ಕೆ ರೋಹಿದ್ ಕುಟುಂಬ ಇವತ್ತು ಅನಾಥವಾಗಿ ಕಣ್ಣೀಕು ಹಾಕುವಂತಾಗಿದೆ.
LATEST NEWS
‘ಓಲಾ ಎಲೆಕ್ಟ್ರಿಕ್ ಕಂಪನಿ’ಯಿಂದ 500 ಉದ್ಯೋಗಿಗಳು ವಜಾ
ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?
ನೀವು ಹೀಗೆ ಮಾಡಿದ್ರೆ ‘ಗೂಗಲ್ ಪೇ’ನಲ್ಲಿ ಸುಲಭವಾಗಿ 1,000 ರೂಪಾಯಿ ಪಡೆಯಬಹುದು
ತಾಯಂದಿರಿಂಲೇ ಮಕ್ಕಳ ಅ*ಪಹರಣ; ಉದ್ದೇಶ ಕೇಳಿದ್ರೆ ನೀವೆ ಶಾಕ್ ಆಗ್ತೀರ !!
ಯೂಟ್ಯೂಬ್ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ
ಎಕ್ಸ್ಪ್ರೆಸ್ ರೈಲು ಡಿ*ಕ್ಕಿ; ವಿದ್ಯಾರ್ಥಿನಿಯ ದು*ರಂತ ಅಂ*ತ್ಯ
Trending
- LATEST NEWS2 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS5 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LATEST NEWS2 days ago
ಡೇಟಿಂಗ್ಗೆ 11,650 ರೂ. , ಫೋಟೋಗೆ 760 ರೂ. ಕ್ಯಾಶ್ ರಿವಾರ್ಡ್: ಟೆಕ್ ಕಂಪನಿ