Connect with us

    bangalore

    ಚುನಾವಣೆಗೆ ಸ್ಪರ್ಧಿಸ್ತಾರಾ ಸತ್ಯಜಿತ್ ಸುರತ್ಕಲ್‌…?

    Published

    on

    ಮಂಗಳೂರು  : ಚುನಾವಣೆಯಲ್ಲಿ ತನ್ನ ಮಗನಿಗೆ ಹಾವೇರಿಯಿಂದ ಟಿಕೆಟ್ ಕೊಟ್ಟಿಲ್ಲ ಎಂದು ಆಕ್ರೋಶಗೊಂಡಿರೋ ಕೆ.ಎಸ್‌.ಈಶ್ವರಪ್ಪ ಪಕ್ಷೇತರರಾಗಿ ಶಿವಮೊಗ್ಗದಿಂದ ಸ್ಪರ್ಧಿಸೋದಿಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ಅವರಿಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್ ವಂಚಿತ ಜಾಗರಣ ವೇದಿಕೆಯ ಸತ್ಯಜಿತ್ ಸುರತ್ಕಲ್ ಅವರು ಬೆಂಬಲ ನೀಡಿದ್ದಾರೆ. ಈಶ್ವರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ ಸತ್ಯಜಿತ್ ಸುರತ್ಕಲ್ ಈಶ್ವರಪ್ಪ ಅವರ ಬೆಂಬಲಕ್ಕೆ ತಾವು ಇರುವುದಾಗಿ ಬರವಸೆ ನೀಡಿದ್ದಾರೆ. ಟಿಕೆಟ್ ಕೈ ತಪ್ಪಿದ್ದಕ್ಕಾಗಿ ಮಾಜಿ  ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ವಿರುದ್ಧ ಆಕ್ರೋಶಗೊಂಡಿರುವ ಈಶ್ವರಪ್ಪ ಅವರ ಮಗ ಬಿ.ವೈ. ರಾಘವೇಂದ್ರ ಅವರನ್ನು ಸೋಲಿಸುವ ಪಣ ತೊಟ್ಟಿದ್ದಾರೆ.

    ಸತ್ಯಜಿತ್ ಸುರತ್ಕಲ್

    ಸತ್ಯಜಿತ್‌ ಅವರಿಗೆ ಟಿಕೆಟ್ ತಪ್ಪಿಸಿದ್ದು ಯಾರು ?

    ಸತ್ಯಜಿತ್ ಸುರತ್ಕಲ್ ಒಂದು ಕಾಲದಲ್ಲಿ ಹಿಂದುತ್ವಕ್ಕಾಗಿ ಹೋರಾಟ ನಡೆಸಿ, ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೆ ಇಡೀ ರಾಜ್ಯದಲ್ಲೇ ಹೆಸರು ಗಳಿಸಿದ್ದ ನಾಯಕ. ಇಂದಿಗೂ ಜಾಗರಣ ವೇದಿಕೆಯ ಕಾರ್ಯಕರ್ತರ ಸತ್ಯಣ್ಣನಾಗಿ ಹಿಂದುತ್ವದ ಕೆಲಸದಲ್ಲಿ ತೊಡಗಿಸಿಕೊಂಡವರು. ಆದ್ರೆ ಅವರ ರಾಜಕೀಯ ಎಂಟ್ರಿಗೆ ಅವರದೇ ನಾಯಕರು ಅಡ್ಡಿಯಾಗಿದ್ದಾರೆ ಅನ್ನೋ ಆಕ್ರೋಶ ಅವರಲ್ಲಿದೆ. ಪ್ರಮುಖವಾಗಿ ಕಲ್ಲಡ್ಕ ಪ್ರಭಾಕರ ಭಟ್‌ ಮೇಲೆ ಸತ್ಯಜಿತ್ ಸುರತ್ಕಲ್‌ ಅವರಿಗೆ ಕೋಪ ಇದೆ. 2014 ರಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೊನೆ ತನಕ ಹೆಸರಿದ್ದ ಸತ್ಯಜಿತ್ ಅವರ ಹೆಸರು ತೆಗೆದು, ನಳಿನ್ ಹೆಸರು ಸೂಚಿಸಿದ್ದೇ ಕಲ್ಲಡ್ಕ ಪ್ರಭಾಕರ ಭಟ್ ಅನ್ನೋದು ಸತ್ಯಜಿತ್ ಆರೋಪ. ಬಳಿಕ ಹಲವು ಬಾರಿ ಚುನಾವಣೆಗೆ ಟಿಕೇಟ್ ಆಕಾಂಕ್ಷಿ ಅಂತ ಹೇಳಿದ್ರೂ ಪಕ್ಷ ಇವರನ್ನು ಕಡೆಗಣಿಸಿತ್ತು. ಈ ಬಾರಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ನನಗೆ ಟಿಕೆಟ್ ಕೊಡಬೇಕು ಅಂತ ಬಹಿರಂಗವಾಗಿಯೇ ಬೇಡಿಕೆ ಇಟ್ಟಿದ್ರು. ಆದ್ರೆ ಈ ಬಾರಿಯೂ ಇವರಿಗೆ ಟಿಕೆಟ್ ಕೈ ತಪ್ಪಿದ್ದು, ಸದ್ಯಕ್ಕೆ ಇವರ ಮುಂದಿನ ನಡೆಯ ಬಗ್ಗೆ ಕುತೂಹಲ ಮೂಡಿಸಿದೆ.

    ಸಿಕ್ಕ ಅವಕಾಶ ಕೈ ಚೆಲ್ಲಿದ್ದ ಸತ್ಯಜಿತ್ ಸುರತ್ಕಲ್‌…!

    ಹುಬ್ಬಳಿಯ ಈದ್ಗಾ ಮೈದಾನದ ಹೋರಾಟ, ಅಯೋಧ್ಯೆಯ ರಾಮ ಜನ್ಮಭೂಮಿ ಹೋರಾಟ, ಲವ್‌ ಜಿಹಾದ್ ವಿರುದ್ಧದ ಹೋರಾಟ, ಹೀಗೇ ಹಿಂದುತ್ವಕ್ಕಾಗಿ ದೊಡ್ಡ ಹೋರಾಟವನ್ನು ಕಳೆದ 35 ವರ್ಷದಿಂದ ಮಾಡಿಕೊಂಡು ಬಂದಿದ್ದವರು ಸತ್ಯಜಿತ್ ಸುರತ್ಕಲ್‌. 1994 ರಲ್ಲಿ ಯುವ ನಾಯಕನಾಗಿದ್ದಾಗ ಸುರತ್ಕಲ್ ( ಇಂದಿನ ಮಂಗಳೂರು ಉತ್ತರ ) ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸೋ ಅವಕಾಶ ಸಿಕ್ಕಿತ್ತಾದ್ರೂ ಅದನ್ನ ನಿರಾಕರಿಸಿ ಸಂಘಟನೆಯಲ್ಲೇ ಸೇವೆ ಸಲ್ಲಿಸೋದಾಗಿ ಹೇಳಿದ್ದರು. ತನ್ನ ಬದಲು ಕುಂಬ್ಳೆ ಸುಂದರ್ ರಾವ್ ಅವರಿಗೆ ಅವಕಾಶ ಕಲ್ಪಿಸಿ ಅವರನ್ನು ಗೆಲ್ಲಿಸಿ ಶಾಸಕರನ್ನಾಗಿ ಮಾಡಿದ್ರು. ಆದ್ರೆ ಆಮೇಲೆ ಅಂತಹ ಅವಕಾಶ ಸತ್ಯಜಿತ್ ಸುರತ್ಕಲ್ ಅವರಿಗೆ ಸಿಕ್ಕಲೇ ಇಲ್ಲ.

    ಈ ಬಾರಿಯೂ ಕೈ ತಪ್ಪಿದ ಟಿಕೆಟ್…!

    ಈ ಬಾರಿ ಜಿಲ್ಲೆಯಲ್ಲಿ ಓಡಾಡಿ ತನ್ನ ಕಾರ್ಯಕರ್ತರನ್ನು ಸಂಘಟಿಸಿ ಹಲವು ಸಭೆಗಳನ್ನು ನಡೆಸಿದ ಸತ್ಯಜಿತ್ ಸುರತ್ಕಲ್‌ ಪಕ್ಷದ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು. ತನಗೆ ಪಕ್ಷ ಹಾಗೂ ಸಂಘ ಪರಿವಾರ ಅನ್ಯಾಯ ಮಾಡಿದೆ ಅಂತ ಕಾರ್ಯಕರ್ತರ ಮುಂದೆ ಬೇಸರ ವ್ಯಕ್ತಪಡಿಸಿದ್ದರು. ‘ನನಗೆ ಟಿಕೆಟ್ ಯಾಕೆ ಕೊಡುವುದಿಲ್ಲ ಅಂತ ಕೇಳಿದ ಪ್ರಶ್ನೆಗೆ ನನಗೆ ಈ ವರೆಗೂ ಉತ್ತರ ಸಿಕ್ಕಿಲ್ಲ’ ಎಂದು ಹೇಳುವ ಮೂಲಕ ಈ ಬಾರಿ ಟಿಕೆಟ್ ನನಗೆ ಕೊಡಲೇ ಬೇಕು ಎಂಬ ಬೇಡಿಕೆ ಇಟ್ಟಿದ್ರು. ಆದ್ರೆ ಭಾರತೀಯ ಜನತಾ ಪಕ್ಷ ಇವರ ಯಾವ ಮಾತಿಗೂ ಜಗ್ಗದೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಟಿಕೇಟ್ ನೀಡಿದೆ.

    ಈಶ್ವರಪ್ಪ ಭೇಟಿಯಿಂದ ಸತ್ಯಜಿತ್ ಮುಂದಿನ ನಡೆಯ ಬಗ್ಗೆ ಕುತೂಹಲ..!

    ಟಿಕೆಟ್ ಕೈತಪ್ಪಿದ ನೋವಿನಲ್ಲಿರುವ ಸತ್ಯಜಿತ್ ಸುರತ್ಕಲ್ ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹಾಗಂತ ಅಸಮಾಧಾನವನ್ನು ಶಿವಮೊಗ್ಗದಲ್ಲಿ ಈಶ್ವರಪ್ಪ ಅವರಿಗೆ ಬೆಂಬಲ ಸೂಚಿಸಿ ತೋರಿಸಿದ್ದಾರೆ. ಈಶ್ವರಪ್ಪ ಅಂತಹ ನಾಯಕರನ್ನು ಬಿಜೆಪಿ ತುಳಿಯುತ್ತಿದೆ ಎಂದು ಮಾದ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ. ನನ್ನ ಜೊತೆ ಕಾರ್ಯಕರ್ತ ಪಡೆ ಇದ್ದು ನನ್ನ ಸಹಕಾರ ನಿಮಗೆ ಇದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಬಿಜೆಪಿಗೆ ಸಡ್ಡು ಹೊಡೆದಿದ್ದಾರೆ. ಸತ್ಯಜಿತ್ ಸುರತ್ಕಲ್ ಅವರ ಈ ನಡೆ ಸಾಕಷ್ಟು ಕುತೂಹಲ ಕೆರಳಿಸಿದ್ದು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧೆ ಮಾಡ್ತಾರಾ ಅನ್ನೋ ಸಂಶಯ ಮೂಡಿದೆ.

    bangalore

    ವರದಕ್ಷಿಣೆ ಕಿರುಕುಳ; ನೇ*ಣಿಗೆ ಶರಣಾದ ಟೆಕ್ಕಿ

    Published

    on

    ಮಂಗಳೂರು/ಬೆಂಗಳೂರು : ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಗಂಗಮ್ಮನ ಗುಡಿಯಲ್ಲಿ ನಡೆದಿದೆ. ಪೂಜಾ (22) ಜೀವಾಂತ್ಯಗೊಳಿಸಿದ ವಿವಾಹಿತೆ. ಪೂಜಾ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ.

    ಕಳೆದ ಎರಡು ವರ್ಷಗಳ ಹಿಂದೆ ಸುನೀಲ್ ಎಂಬಾತನನ್ನು ಪೂಜಾ ಮದುವೆಯಾಗಿದ್ದರು. ಮದುವೆಯಾದ ಬಳಿಕ ವರದಕ್ಷಿಣೆಗಾಗಿ ಪತಿ ಪೀಡಿಸುತ್ತಿದ್ದ. ಇದರಿಂದ ಮನನೊಂದು ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ಇದನ್ನೂ ಓದಿ : ಸೀಲ್ಡ್​ ತಂಪು ಪಾನೀಯ ಬಾಟಲ್ ಒಳಗಿತ್ತು ಜೇಡರ ಹುಳ!
    ಮಗಳ ಸಾವಿಗೆ ಪತಿ ಸುನೀಲ್ ಹಾಗೂ ಮೈದುನ ಅನಿಲ್ ಕಾರಣ ಎಂದು ಪೂಜಾ ಪೋಷಕರು ಆರೋಪಿಸಿದ್ದಾರೆ. ಈ ಬಗ್ಗೆ ಗಂಗಮ್ಮನಗುಜಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    bangalore

    ಈ ಪುಣ್ಯಕ್ಷೇತ್ರಕ್ಕೆ ಹೋಗಲು ರಾಜ್ಯ ಸರ್ಕಾರದಿಂದ ಸಹಾಯಧನ ಸಿಗಲಿದೆ..!

    Published

    on

    ಬೆಂಗಳೂರು : ಕರ್ನಾಟಕ ರಾಜ್ಯದಿಂದ ಕೈಲಾಸ ಮಾನಸ ಸರೋವರ ಹಾಘೂ ಚಾರ್‌ಧಾಮ್‌ ಯಾತ್ರಿಗಳಿಗೆ ಅನುದಾನ ನೀಡುವ ಕುರಿತು ಮುಜರಾಯಿ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಮಾನಸ ಸರೋವರ ಯಾತ್ರಿಗಳಿಗೆ ರೂ.30 ಸಾವಿರ, ಚಾರ್‌ಧಾಮ್‌ ಯಾತ್ರಿಗಳಿಗೆ ರೂ.20 ಸಾವಿರ , ಹಾಗೂ ಈಗಾಗಲೇ ಕಾಶಿ ಯಾತ್ರೆ ಕೈಗೊಂಡ 30 ಸಾವಿರ ಯಾತ್ರಿಗಳಿಗೆ ತಲಾ ರೂ.5 ಸಾವಿರ ಸಹಾಯಧನ ನೀಡಲಾಗುತ್ತದೆ.
    ಕೇವಲ ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳು ಮಾತ್ರ ಈ ಸಹಾಯಧನ ಪಡೆಯಲು ಅರ್ಹರಾಗಿದ್ದಾರೆ. ಈಗಾಗಲೇ ಈ ತೀರ್ಥ ಕ್ಷೇತ್ರಗಳಿಗೆ ಹೋಗಿ ಬಂದಿರುವವರು ಸಹಾಯಧನವನ್ನು ಪಡೆಯಲು ಅರ್ಹರಾಗಿದ್ದಾರೆ. ಇದಕ್ಕಾಗಿ ರೂ.25 ಪಾವತಿಸಿ ಸಂಬಂಧಿಸಿದ ವೆಬ್‌ಸೈಟ್ ಅಥವಾ ಮೊಬೈಲ್ ಆಪ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.

    ಚಾರ್‌ಧಾಮ್ ಯಾತ್ರೆಯ ಮಾರ್ಗಸೂಚಿಗಳು

    • ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ಚುನಾವಣಾ ಗುರುತಿನ ಚೀಟಿ ಹಾಗೂ ಆಧಾರ್ ಕಾರ್ಡ್ ಅನ್ನು ಅಪ್‌ಲೋಡ್ ಮಾಡುವುದು.
    • 45 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ಮಾತ್ರ ಈ ಯೋಜನೆಯಡಿ ಸಹಾಯಧನವನ್ನು ಪಡೆಯಲು ಅರ್ಹರಾಗಿರುತ್ತಾರೆ. ಇದಕ್ಕೆ ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಅಪ್‌ಲೋಡ್ ಮಾಡಬೇಕು.
    • ಯಾತ್ರಾರ್ಥಿಗಳು ಸಹಾಯಧನವನ್ನು ಒಂದು ಬಾರಿ ಪಡೆದ ನಂತರದಲ್ಲಿ ಅದೇ ವ್ಯಕ್ತಿಗೆ ಮತ್ತೊಮ್ಮೆ ಅನುದಾನ ನೀಡಲಾಗುವುದಿಲ್ಲ.

    ಕಾಶಿ ಯಾತ್ರೆಯ ಮಾರ್ಗಸೂಚಿಗಳು

    • ಕರ್ನಾಟಕ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳು ಆಯಾ ಆರ್ಥಿಕ ವರ್ಷದ ಮೊದಲ ದಿನಕ್ಕೆ ಅನ್ವಯಿಸುವಂತೆ ಏಪ್ರಿಲ್ 1ಕ್ಕೆ 18 ವರ್ಷಗಳ ಮೇಲ್ಪಟ್ಟವರಾಗಿರತಕ್ಕದ್ದು.
    • 18 ವಯಸ್ಸಿನ ಕೆಳಗಿನವರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. 18 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಹಾಜರುಪಡಿಸಬೇಕು.

     

    ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಮಾರ್ಗಸೂಚಿಯನ್ನು ಇಲಾಖೆಯ ಅಧಿಕೃತ ವೆಬ್​ಸೈಟ್​ನಲ್ಲಿ ಪ್ರಕಟಿಸಲಾಗುತ್ತದೆ

    Continue Reading

    bangalore

    ಗೋಬಿ ಮಂಚೂರಿ ಆಯ್ತು..! ಈಗ ಚಿಕನ್‌ ಕಬಾಬ್‌, ಫಿಶ್‌ ಫುಡ್‌ ಮೇಲೆ ಕಣ್ಣು…!

    Published

    on

    ಮಂಗಳೂರು : ಫಿಶ್ ಸೇರಿದಂತೆ ಚಿಕನ್ ಕಬಾಬ್ ಆಹಾರದಲ್ಲಿ ಕೃತಕ ಬಣ್ಣ ಬೆರಸುವುದನ್ನ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ. ಕೆಲವು ಆಹಾರಗಳಲ್ಲಿ ಕೃತಕ ಬಣ್ಣದ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದೆ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆಯನ್ನ ನಿಷೇಧಿಸಲಾಗಿತ್ತು.


    ಇದೀಗ ಆರೋಗ್ಯ ಸಚಿವರ ಸೂಚನೆಯಂತೆ ಪರಿಶೀಲನೆ ನಡೆಸಿದ ಅಧಿಕಾರಿಗಳು ಚಿಕನ್ ಕಬಾಬ್ ಮತ್ತು ಫಿಶ್ ಫುಡ್ ನಲ್ಲಿ ಕಲರಿಂಗ್ ಇರುವುದು ಪತ್ತೆಯಾಗಿದೆ. ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಚಿಕನ್ ಕಬಾಬ್ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದು ಕಂಡುಬಂದಿದೆ. ಈ ಹಿನ್ನಲೆಯಲ್ಲಿ ಹಿನ್ನೆಲೆಯಲ್ಲಿ ಚಿಕನ್ ಕಬಾಬ್, ಫಿಶ್ ಆಹಾರಗಳಲ್ಲಿ ಕೃತಕ ಬಣ್ಣ ಬೆರಸುವಿಕೆಯನ್ನ ನಿಷೇಧಿಸಿ ಆಹಾರ ಸುರಕ್ಷತಾ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಕಾನೂನು ಉಲ್ಲಂಘಿಸಿದ್ರೆ 7 ವರ್ಷದಿಂದ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ವರೆಗಿನ ದಂಡ ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಸಲಾಗಿದೆ.

    ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ಪರೀಕ್ಷಿಸಲಾಗಿದೆ. 08 ಕಬಾಬ್‌ನ ಮಾದರಿಗಳು ಕೃತಕ ಬಣ್ಣದಿಂದ ಕೂಡಿರುವುದರಿಂದ ಅಸುರಕ್ಷಿತ ಎಂದು ವಿಶ್ಲೇಷಣಾ ವರದಿಗಳಲ್ಲಿ ಕಂಡುಬಂದಿದೆ.

    Continue Reading

    LATEST NEWS

    Trending