Friday, March 24, 2023

PFI ಪರ ಗೋಡೆ ಬರಹ ಬರೆದವರ ಮೇಲೆ ಕಠಿಣ ಕ್ರಮ-CM ಬೊಮ್ಮಾಯಿ

ಬೆಂಗಳೂರು: ಶಿವಮೊಗ್ಗದಲ್ಲಿ ಪಿಎಫ್‌ಐ ಸೇರಿ ಎಂಬ ಪೋಸ್ಟರ್ ಗಳನ್ನು ಅಂಟಿಸಿರುವವರ ವಿರುದ್ಧ ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ. ಪಿಎಫ್ಐ ರದ್ದು ಮಾಡಿದ ನಂತರ ಹತಾಶರಾಗಿ ಈ ರೀತಿ ಗೋಡೆ ಮೇಲೆ ಬರೆಯುವುದು ಮಾಡುವ ಕೆಲಸ ಮಾಡುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.


ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿ ‘ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿರುವುದು ಸರಿಯಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇನ್ನು ಮಹಾರಾಷ್ಟ್ರ ಹಾಗೂ ಕರ್ನಾಟಕ ವಿವಾದದ ಬಗ್ಗೆ ಮಾತನಾಡಿ ‘ಮಹಾರಾಷ್ಟ್ರ ಮಂತ್ರಿಗಳು ಬೆಳಗಾವಿಗೆ ಬರುವುದು ಸೂಕ್ತವಲ್ಲ ಎಂದು ಲಿಖಿತವಾಗಿ ಸೂಚಿಸಿದ್ದರೂ ಬರುತ್ತಿರುವುದು ಸೂಕ್ತವಲ್ಲ. ಯಾರು ಎಲ್ಲಿ ಬೇಕಾದರೂ ಓಡಾಡುವ ಸ್ವಾತಂತ್ರ್ಯವಿದೆ ಎಂದು ನಮಗೂ ತಿಳಿದಿದೆ.

ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸಂಬಂಧಪಟ್ಟ ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ನಮ್ಮ ಸರ್ಕಾರ ಕೆಲವು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.

ಈ ರೀತಿಯ ಕ್ರಮ ಸರಿಯಾದುದಲ್ಲ. ಗಡಿ ವಿವಾದ ಬಗೆಹರಿದಿದ್ದರೂ ಸುಪ್ರೀಂ ಕೋರ್ಟಿನಲ್ಲಿ ವ್ಯಾಜ್ಯ ಹೂಡಿದ್ದಾರೆ. ಕಾನೂನಾತ್ಮಕವಾಗಿ ಇಬ್ಬರೂ ಹೋರಾಡುತ್ತೇವೆ.

ಆದರೆ ಎರಡೂ ರಾಜ್ಯದ ಜನರು ಸಾಮರಸ್ಯದಿಂದಿದ್ದು, ಇಲ್ಲಿ ಕಾನೂನು ಸುವ್ಯವಸ್ಥೆ ಕದಡುವ ಯಾವುದೇ ಕೆಲಸ ಮಾಡಬಾರದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುವುದಾಗಿ ತಿಳಿಸಿದರು.

LEAVE A REPLY

Please enter your comment!
Please enter your name here

Hot Topics